AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಾರಣಾಸಿ’ ಚಿತ್ರಕ್ಕಾಗಿ ಹಾಲಿವುಡ್ ದೃಶ್ಯಗಳ ಕಾಪಿ ಮಾಡಿದ್ರಾ ರಾಜಮೌಳಿ? ಶುರುವಾಗಿದೆ ಚರ್ಚೆ

ರಾಜಮೌಳಿ ಅವರ ಬಹುನಿರೀಕ್ಷಿತ 'ವಾರಣಾಸಿ' ಸಿನಿಮಾದ ಟೀಸರ್ ಕೃತಿ ಚೌರ್ಯದ ಆರೋಪ ಎದುರಿಸುತ್ತಿದೆ. ನೆಟ್ಟಿಗರು ಟೀಸರ್​ನ ದೃಶ್ಯಗಳನ್ನು ಹಾಲಿವುಡ್ ಚಿತ್ರಗಳೊಂದಿಗೆ ಹೋಲಿಕೆ ಮಾಡುತ್ತಿದ್ದಾರೆ. ಇದು ಹಿಂದೆ ಕೂಡ ರಾಜಮೌಳಿ ಎದುರಿಸಿದ ಟೀಕೆಯಾಗಿತ್ತು. ಮಹೇಶ್ ಬಾಬು ಅಭಿನಯದ ಈ ಚಿತ್ರ 2027ಕ್ಕೆ ಬಿಡುಗಡೆಯಾಗಲಿದೆ.

‘ವಾರಣಾಸಿ’ ಚಿತ್ರಕ್ಕಾಗಿ ಹಾಲಿವುಡ್ ದೃಶ್ಯಗಳ ಕಾಪಿ ಮಾಡಿದ್ರಾ ರಾಜಮೌಳಿ? ಶುರುವಾಗಿದೆ ಚರ್ಚೆ
ರಾಜಮೌಳಿ
ರಾಜೇಶ್ ದುಗ್ಗುಮನೆ
|

Updated on: Nov 17, 2025 | 1:08 PM

Share

ಟಾಲಿವುಡ್ ಸ್ಟಾರ್ ನಿರ್ದೇಶಕ ರಾಜಮೌಳಿ (Rajamouli) ಅವರು ಯಾವುದೇ ಪ್ರಾಜೆಕ್ಟ್ ಕೈಗೆತ್ತಿಕೊಂಡರೂ ಅದರಲ್ಲಿ ಒಂದು ವಿಶೇಷತೆ ಇರುತ್ತದೆ. ಸಿನಿಮಾ ಅದ್ದೂರಿಯಾಗಿ ಮೂಡಿ ಬರುತ್ತದೆ. ಸಿನಿಮಾದ ದೃಶ್ಯಗಳನ್ನು ಥಿಯೇಟರ್​ನಲ್ಲಿ ಕುಳಿತು ನೋಡುವಾಗ ಮೈ ರೋಮಾಂಚನ ಆಗುತ್ತದೆ. ಈಗ ಅವರ ಮೇಲೆ ಕೃತಿ ಚೌರ್ಯದ ಆರೋಪ ಕೇಳಿ ಬಂದಿದೆ. ‘ವಾರಣಾಸಿ’ ಟೀಸರ್ ನೋಡಿ ಅನೇಕರು ಇದನ್ನು ಹಾಲಿವುಡ್ ಸಿನಿಮಾ ದೃಶ್ಯಗಳಿಗೆ ಹೋಲಿಕೆ ಮಾಡಿದ್ದಾರೆ.

ರಾಜಮೌಳಿ ಅವರು  ‘ಮಗಧೀರ’, ‘ಈಗ’, ‘ಬಾಹುಬಲಿ’, ‘ಬಾಹುಬಲಿ 2’, ‘ಆರ್​ಆರ್​ಆರ್’ನಂತಹ ಸಿನಿಮಾಗಳನ್ನು ನೀಡಿದ್ದಾರೆ. ಇವೆಲ್ಲವೂ ಫ್ಯಾಂಟಸಿ ಚಿತ್ರಗಳು. ಈ ಸಿನಿಮಾಗಳಲ್ಲಿ ಅವರ ಆಲೋಚನಾ ಶಕ್ತಿ ಪ್ರೇಕ್ಷಕರನ್ನು ವಿಸ್ಮಯಗೊಳಿಸುತ್ತದೆ. ಆದರೆ, ಕೆಲವು ದೃಶ್ಯಗಳು ಬೇರೆ ಬೇರೆ ಸಿನಿಮಾಗಳ ದೃಶ್ಯಗಳಿಗೆ ಹೋಲಿಕೆ ಆಗಿದ್ದು ಇದೆ. ಈ ಸಂದರ್ಭದಲ್ಲಿ ಅವರು ಟೀಕೆ ಎದುರಿಸಿದ್ದರು.

ಈಗ ರಾಜಮೌಳಿ ಅವರ ‘ವಾರಣಾಸಿ’ ಟೀಸರ್​ನ ದೃಶ್ಯಗಳ ಮೇಲೂ ಕೃತಿ ಚೌರ್ಯದ ಆರೋಪ ಎದುರಾಗಿದೆ. ನೆಟ್ಟಿಗರು ಬೇರೆ ಬೇರೆ ಹಾಲಿವುಡ್ ಸಿನಿಮಾಗಳಿಗೆ ‘ವಾರಣಾಸಿ’ ಚಿತ್ರದ ದೃಶ್ಯವನ್ನು ಹೋಲಿಕೆ ಮಾಡುತ್ತಿದ್ದಾರೆ. ಒರಿಜಿನಲ್ ದೃಶ್ಯ ಹಾಗೂ ರಾಜಮೌಳಿ ವರ್ಷನ್ ಎಂದು ಫೋಟೋ ಸಮೇತ ಹಾಕಲಾಗಿದೆ. ಎರಡರ ಮಧ್ಯೆ ಸಾಮ್ಯತೆ ಇದೆ.

ತಮ್ಮ ಸಿನಿಮಾಗಳಲ್ಲಿ ಹಾಲಿವುಡ್​ನ ಸ್ಫೂರ್ತಿ ಇರುತ್ತದೆ ಎಂದು ರಾಜಮೌಳಿ ಹೇಳಿದ್ದಾರೆ. ಆದಾಗ್ಯೂ ರಾಜಮೌಳಿ ಅವರು ಸಾಕಷ್ಟು ಬಾರಿ ಟೀಕೆಗಳನ್ನು ಎದುರಿಸಿದ ಉದಾಹರಣೆ ಇದೆ. ಈಗ ಸಿನಿಮಾದ ಟೀಸರ್ ಅಥವಾ ಟ್ರೇಲರ್ ರಿಲೀಸ್ ಆದ ಬಳಿಕ ಈ ಬಗ್ಗೆ ಮತ್ತಷ್ಟು ಸ್ಪಷ್ಟನೆ ಸಿಗಲಿದೆ.

ಇದನ್ನೂ ಓದಿ: ‘ವಾರಣಾಸಿ’ ಈವೆಂಟ್​ನಲ್ಲಿ ಹಿಂದೂ ದೇವರ ಬಗ್ಗೆ ರಾಜಮೌಳಿ ಟೀಕೆ; ಸಿನಿಮಾ ಬ್ಯಾನ್ ಮಾಡಲು ಆಗ್ರಹ

‘ವಾರಣಾಸಿ’ ಸಿನಿಮಾಗೆ ಮಹೇಶ್ ಬಾಬು ಹೀರೋ. ಪ್ರಿಯಾಂಕಾ ಚೋಪ್ರಾ ನಾಯಕಿ. ಮಲಯಾಳಂನ ಪೃಥ್ವಿರಾಜ್​ ಸುಕುಮಾರನ್ ವಿಲನ್. ಈ ಸಿನಿಮಾ 2027ರ ಸಮ್ಮರ್​ ಅಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು