ಮಹೇಶ್ ಬಾಬು-ರಾಜಮೌಳಿ ಬಗ್ಗೆ ಅಪ್ಸೆಟ್ ಆದ ಅಭಿಮಾನಿಗಳು; ಕಾರಣ ಏನು?
ಮಹೇಶ್ ಬಾಬು ಮತ್ತು ಎಸ್.ಎಸ್. ರಾಜಮೌಳಿ ಅವರ ಮುಂಬರುವ ಚಲನಚಿತ್ರ ‘SSMB29’ ಕುರಿತು ಅಭಿಮಾನಿಗಳಲ್ಲಿ ಬಹಳ ನಿರೀಕ್ಷೆ ಇದೆ. ಚಿತ್ರದ ಶೂಟಿಂಗ್ ಪ್ರಾರಂಭವಾಗಿದ್ದರೂ, ಅಧಿಕೃತ ಮಾಹಿತಿಯ ಕೊರತೆಯಿಂದ ಅಭಿಮಾನಿಗಳು ನಿರಾಶರಾಗಿದ್ದಾರೆ. ಚಿತ್ರದ ಬಜೆಟ್ 1000 ಕೋಟಿ ರೂಪಾಯಿಗಳನ್ನು ಮೀರಲಿದೆ ಎಂದು ವರದಿಯಾಗಿದೆ. 2027ರಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಮಹೇಶ್ ಬಾಬು ಹಾಗೂ ನಿರ್ದೇಶಕ ಎಸ್ಎಸ್ ರಾಜಮೌಳಿ ಹೊಸ ಸಿನಿಮಾ ‘SSMB29’ ಬಗ್ಗೆ ಪ್ರೇಕ್ಷರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾದ ಕೆಲಸ ಆರಂಭ ಆಗಿ ಹಲವು ದಿನಗಳು ಆಗಿವೆ. ಸದ್ದಿಲ್ಲದೆ ಚಿತ್ರಕ್ಕೆ ಪೂಜೆ ಮಾಡಲಾಗಿತ್ತು. ಆದರೆ, ಈ ಬಗ್ಗೆ ಯಾವುದೇ ಅಪ್ಡೇಟ್ ಕೊಟ್ಟಿಲ್ಲ. ಈ ವಿಚಾರವನ್ನು ಹೈಡ್ ಮಾಡಿ ಇಡಲಾಗಿದೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಫ್ಯಾನ್ಸ್ ಕೂಡ ಈ ಬಗ್ಗೆ ಅಪ್ಸೆಟ್ ಆಗಿದ್ದಾರೆ.
ಮಹೇಶ್ ಬಾಬು ನಟನೆಯ ‘ಗುಂಟೂರು ಖಾರಂ’ ಸಿನಿಮಾ ಅಂದುಕೊಂಡಂತೆ ಯಶಸ್ಸು ಕಾಣಲಿಲ್ಲ. ಈ ಚಿತ್ರದವರೆಗೆ ಮಹೇಶ್ ಬಾಬು ಪ್ಯಾನ್ ಇಂಡಿಯಾ ಸಿನಿಮಾ ಮಾಡಿಲ್ಲ. ಈಗ ಅವರು ಮೊದಲ ಬಾರಿಗೆ ಪ್ಯಾನ್ ಇಂಡಿಯಾ ಸಿನಿಮಾ ಘೋಷಣೆ ಮಾಡಿದ್ದಾರೆ. ಆದರೆ, ಈ ಸಿನಿಮಾ ಬಗ್ಗೆ ಯಾವುದೇ ಅಧಿಕೃತ ಘೋಷಣೆ ಮಾಡಿಲ್ಲ.
ಸದ್ಯ ಮಹೇಶ್ ಬಾಬು ಅಭಿಮಾನಿಗಳು ಅಪ್ಸೆಟ್ ಆಗಿದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಬಗ್ಗೆ, ಸಿನಿಮಾ ಪಾತ್ರವರ್ಗದ ಬಗ್ಗೆ ಅಪ್ಡೇಟ್ ಕೊಡುವಂತೆ ಕೇಳುತ್ತಿದ್ದಾರೆ. ಆದರೆ, ಇದಕ್ಕೆ ಮಹೇಶ್ ಬಾಬು ಅವರು ಸೊಪ್ಪು ಹಾಕುವ ಕೆಲಸ ಮಾಡುತ್ತಿಲ್ಲ. ಅವರು ಅಂದುಕೊಂಡ ದಿನಾಂಕದಂದೇ ಸಿನಿಮಾ ಬಗ್ಗೆ ಅಧಿಕೃತ ಘೋಷಣೆ ಮಾಡುವ ಆಲೋಚನೆಯಲ್ಲಿ ಇದ್ದಾರೆ.
ರಾಜಮೌಳಿ ಅವರು ಸಾಮಾನ್ಯವಾಗಿ ಸುದ್ದಿಗೋಷ್ಠಿ ನಡೆಸಿ ಸಿನಿಮಾ ಬಗ್ಗೆ ಮಾಹಿತಿ ನೀಡುತ್ತಿದ್ದರು. ಇದು ನಡೆದುಕೊಂಡು ಬಂದ ಪದ್ಧತಿ. ಆದರೆ, ಈ ಬಾರಿ ಮಹೇಶ್ ಬಾಬು ಅವರು ಇದಕ್ಕೆ ಬ್ರೇಕ್ ಹಾಕಿದರೇ ಎನ್ನುವ ಪ್ರಶ್ನೆ ಮೂಡಿದೆ. ಸುದ್ದಿಗೋಷ್ಠಿಯಲ್ಲಿ ಕೆಲವರು ಪ್ರಶ್ನೆಗಳನ್ನು ಕೇಳಿ ಸಿನಿಮಾ ಬಗ್ಗೆ ಮಾಹಿತಿ ರಿವೀಲ್ ಆಗಿಬಿಟ್ಟರೆ ಎನ್ನುವ ಅನುಮಾನ ಹುಟ್ಟುಹಾಕುವಂತೆ ಆಗಿದೆ.
ಇದನ್ನೂ ಓದಿ: ರಾಜಮೌಳಿ, ಮಹೇಶ್ ಬಾಬು ಸಿನಿಮಾಕ್ಕೆ ಪ್ರಿಯಾಂಕಾ ಚೋಪ್ರಾ ಸಂಭಾವನೆ ಎಷ್ಟು?
ಸದ್ಯದ ಮಾಹಿತಿ ಪ್ರಕಾರ ಸಿನಿಮಾದ ಶೂಟಿಂಗ್ ಮೊದಲ ಹಂತದ ಶೂಟಿಂಗ್ ಬಳಿಕ ನಡೆಸಲು ಸಿದ್ಧತೆ ಮಾಡಲಾಗಿದೆ. ಮಾರ್ಚ್ ಹಾಗೂ ಏಪ್ರಿಲ್ನಲ್ಲಿ ಮೊದಲ ಹಂತದ ಶೂಟ್ ಪೂರ್ಣಗೊಳ್ಳುವ ಸಾಧ್ಯತೆ ಇದಾಗಿದೆ. ಕೆಲವು ವರದಿಗಳ ಪ್ರಕಾರ ಈ ಚಿತ್ರದ ಬಜೆಟ್ 1000 ಕೋಟಿ ರೂಪಾಯಿ ಮೀರಲಿದೆ. ಆಫ್ರಿಕಾ ಜಂಗಲ್ನಲ್ಲಿ ಸಿನಿಮಾ ಶೂಟ್ ನಡೆಯಲಿದೆ. 2027ರಲ್ಲಿ ಸಿನಿಮಾ ರಿಲೀಸ್ ಆಗುವ ಸಾಧ್ಯತೆ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published On - 10:53 am, Mon, 24 February 25