‘ಪುಷ್ಪ 2’ ಕ್ಲೈಮ್ಯಾಕ್ಸ್​ನಲ್ಲಿ ಸ್ಟಾರ್ ಹೀರೋ ಎಂಟ್ರಿ; ಮೂರನೇ ಭಾಗ ಯಾವಾಗ?

ಅಲ್ಲು ಅರ್ಜುನ್​, ರಶ್ಮಿಕಾ ಮಂದಣ್ಣ, ಡಾಲಿ ಧನಂಜಯ್​, ಫಹಾದ್​ ಫಾಸಿಲ್​ ಮುಂತಾದ ಕಲಾವಿದರು ನಟಿಸುತ್ತಿರುವ ‘ಪುಷ್ಪ 2’ ಸಿನಿಮಾದ ಮೇಲೆ ಅಭಿಮಾನಿಗಳಿಗೆ ಬಹಳ ನಿರೀಕ್ಷೆ ಇದೆ. ಆ ನಿರೀಕ್ಷೆಗೆ ತಕ್ಕಂತೆ ನಿರ್ದೇಶಕ ಸುಕುಮಾರ್​ ಅವರು ಸಿನಿಮಾವನ್ನು ಕಟ್ಟಿಕೊಡುತ್ತಿದ್ದಾರೆ.

‘ಪುಷ್ಪ 2’ ಕ್ಲೈಮ್ಯಾಕ್ಸ್​ನಲ್ಲಿ ಸ್ಟಾರ್ ಹೀರೋ ಎಂಟ್ರಿ; ಮೂರನೇ ಭಾಗ ಯಾವಾಗ?
ಅಲ್ಲು ಅರ್ಜುನ್
Follow us
| Updated By: ರಾಜೇಶ್ ದುಗ್ಗುಮನೆ

Updated on: Oct 01, 2024 | 8:17 AM

‘ಪುಷ್ಪ 2’ ಚಿತ್ರದ ರಿಲೀಸ್ ದಿನಾಂಕ ಪದೇ ಪದೇ ಮುಂದಕ್ಕೆ ಹೋಗುತ್ತಿದೆ. ಇದು ಅವರ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ. ಆದಾಗ್ಯೂ ಅವರ ಅಭಿಮಾನಿಗಳು ಭಕ್ತಿಯಿಂದ ಚಿತ್ರಕ್ಕಾಗಿ ಕಾಯುತ್ತಾ ಇದ್ದಾರೆ. ‘ಪುಷ್ಪ 2’ ಸಿನಿಮಾದಲ್ಲಿ ದೊಡ್ಡ ಪಾತ್ರವರ್ಗ ಇರಲಿದೆ. ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ, ಫಹಾದ್ ಫಾಸಿಲ್, ಕನ್ನಡದ ಡಾಲಿ ಧನಂಜಯ್ ಅವರು ಈ ಚಿತ್ರದಲ್ಲಿ ಅಭಿನಯ ಮಾಡುತ್ತಾ ಇದ್ದಾರೆ. ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿ ಮೂರನೇ ಪಾರ್ಟ್​ಗೆ ಲಿಂಕ್ ಕೊಡುವ ಕೆಲಸ ಆಗಿದೆಯಂತೆ.

ಈಗಾಗಲೇ ‘ಕೆಜಿಎಫ್ 2’ ಸಿನಿಮಾದಲ್ಲಿ ಕಥೆಯನ್ನು ಪರ್ಫೆಕ್ಟ್ ಆಗಿ ಕೊನೆಗೊಳಿಸಲಾಗಿದೆ. ಇಷ್ಟೇ ಅಲ್ಲ, ‘ಕೆಜಿಎಫ್ 3’ ಬರಲಿದೆ ಎನ್ನುವ ಸೂಚನೆ ನೀಡಲಾಗಿದೆ. ಅದೇ ರೀತಿ ‘ಪುಷ್ಪ 2’ ಚಿತ್ರದ ಕಥೆಯನ್ನು ಪರ್ಫೆಕ್ಟ್ ಆಗಿ ಕೊನೆಗೊಳಿಸುವ ಆಲೋಚನೆ ಸುಕುಮಾರ್​ಗೆ ಇದೆ. ಅದೇ ರೀತಿ ‘ಪುಷ್ಪ 3’ ಚಿತ್ರಕ್ಕೆ ಲಿಂಕ್ ಕೊಡುವ ಕೆಲಸ ಕೂಡ ಆಗಲಿದೆ.

‘ಪುಷ್ಪ 2’ ಕೊನೆಯಲ್ಲಿ ಸ್ಟಾರ್ ಹೀರೋನ ಪರಿಚಯಿಸುವ ಆಲೋಚನೆ ಇದೆ. ಹೀಗಾದಲ್ಲಿ ಮೂರನೇ ಭಾಗದ ಬಗ್ಗೆ ಜನರಿಗೆ ನಿರೀಕ್ಷೆ ಇರುತ್ತದೆ. ಇನ್ನು, ಕೆಲವು ವರ್ಷ ಬಿಟ್ಟು ಈ ಪ್ರಾಜೆಕ್ಟ್​ ಕೈಗೆತ್ತಿಕೊಂಡರೂ ಜನರು ಅದಕ್ಕಾಗಿ ಕಾಯುವಂತೆ ಇರಬೇಕು. ಆ ರೀತಿಯಲ್ಲಿ ಕ್ಲೈಮ್ಯಾಕ್ಸ್​ ರಚಿಸಲು ಆಲೋಚಿಸಲಾಗಿದೆ.

ಇದನ್ನೂ ಓದಿ: ‘ಪುಷ್ಪ 2’ ಸಿನಿಮಾದ ಶೂಟಿಂಗ್​ ಸೆಟ್​ಗೆ ಭೇಟಿ ಕೊಟ್ಟ ಸ್ಟಾರ್​ ನಿರ್ದೇಶಕ ರಾಜಮೌಳಿ

‘ಪುಷ್ಪ 3’ ಸಿನಿಮಾ ಸದ್ಯಕ್ಕೆ ಬರೋದಿಲ್ಲ ಎಂದು ಅಲ್ಲು ಅರ್ಜುನ್ ಈ ಮೊದಲೇ ಘೋಷಣೆ ಮಾಡಿದ್ದಾರೆ. ಆದರೆ, ಇಂದಲ್ಲ ನಾಳೆ ಸಿನಿಮಾ ಮಾಡೇ ಮಾಡುತ್ತೇವೆ ಎನ್ನುವ ಭರವಸೆಯನ್ನು ಅವರು ನೀಡಿದ್ದಾರೆ. ಅಲ್ಲು ಅರ್ಜುನ್ ಅವರ ನಟನೆಯ ‘ಅಲಾ ವೈಂಕುಂಟಪುರಮುಲೋ’ 2020ರಲ್ಲಿ ರಿಲೀಸ್ ಆಯಿತು. ಇದಾದ ಬಳಿಕ ರಿಲೀಸ್ ಆಗಿದ್ದು ‘ಪುಷ್ಪ’ ಸಿನಿಮಾ ಮಾತ್ರ. ಸದ್ಯ ಅವರು ‘ಪುಷ್ಪ 2’ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ನಿರೀಕ್ಷೆ ಸೃಷ್ಟಿ ಆಗಿದೆ. ಸುಕುಮಾರ್ ನಿರ್ದೇಶನದ ಈ ಚಿತ್ರಕ್ಕೆ ಮೈತ್ರಿ ಮೂವೀ ಮೇಕರ್ಸ್ ಬಂಡವಾಳ ಹೂಡುತ್ತಿದೆ. ಡಿಸೆಂಬರ್ 6ರಂದು ಸಿನಿಮಾ ರಿಲೀಸ್ ಆಗಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?