AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aparna Balamurali: ಎಲ್ಲರ ಎದುರು ನಟಿ ಅಪರ್ಣಾ ಮೇಲೆ ಬಲವಂತವಾಗಿ ಕೈ ಹಾಕಿದ ಯುವಕ; ವಿಡಿಯೋ ವೈರಲ್​

Aparna Balamurali Viral Video: ಅಪರ್ಣಾ ಬಾಲಮುರಳಿ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಯುವಕ ಮುಂದಾಗಿದ್ದಾನೆ. ಅಷ್ಟೇ ಆಗಿದ್ದರೆ ಏನೂ ಸಮಸ್ಯೆ ಆಗುತ್ತಿರಲಿಲ್ಲ. ಆದರೆ ಆತನ ವರ್ತನೆ ಇನ್ನಷ್ಟು ಮಿತಿ ಮೀರಿತು.

Aparna Balamurali: ಎಲ್ಲರ ಎದುರು ನಟಿ ಅಪರ್ಣಾ ಮೇಲೆ ಬಲವಂತವಾಗಿ ಕೈ ಹಾಕಿದ ಯುವಕ; ವಿಡಿಯೋ ವೈರಲ್​
ಅಪರ್ಣಾ ಬಾಲಮುರಳಿ ಜತೆ ಯುವಕನ ಅನುಚಿತ ವರ್ತನೆ
TV9 Web
| Edited By: |

Updated on:Jan 19, 2023 | 8:20 PM

Share

ನಟಿ ಅಪರ್ಣಾ ಬಾಲಮುರಳಿ (Aparna Balamurali) ಅವರಿಗೆ ದಕ್ಷಿಣ ಭಾರತದಲ್ಲಿ ಭಾರಿ ಬೇಡಿಕೆ ಇದೆ. ಸೂರ್ಯ ಜೊತೆ ‘ಸೂರರೈ ಪೋಟ್ರು’ ಸಿನಿಮಾದಲ್ಲಿ ನಟಿಸಿದ ಬಳಿಕ ಅವರ ಖ್ಯಾತಿ ಹೆಚ್ಚಿತು. ಈಗ ಅವರು ನಟಿಸಿರುವ ಮಲಯಾಳಂ ಸಿನಿಮಾ ‘ಥಂಕಂ’ (Thankam Movie) ಬಿಡುಗಡೆಗೆ ಸಿದ್ಧವಾಗಿದೆ. ಈ ಸಿನಿಮಾದ ಪ್ರಮೋಷನ್ ಸಲುವಾಗಿ ಅನೇಕ ಸ್ಥಳಗಳಿಗೆ ಚಿತ್ರತಂಡ ಭೇಟಿ ನೀಡುತ್ತಿದೆ. ಇದರ ನಡುವೆ ಒಂದು ಮುಜುಗರದ ಸಂಗತಿ ನಡೆದಿದೆ. ಅಪರ್ಣಾ ಬಾಲಮುರಳಿ ಅವರ ಜೊತೆ ವಿದ್ಯಾರ್ಥಿಯೊಬ್ಬ ಅನುಚಿತವಾಗಿ ವರ್ತಿಸಿದ್ದಾನೆ. ಈ ಕ್ಷಣದ ವಿಡಿಯೋ ವೈರಲ್​ (Aparna Balamurali Viral Video) ಆಗಿದೆ. ಅದನ್ನು ಕಂಡು ನೆಟ್ಟಿಗರು ಖಾರವಾಗಿ ಕಮೆಂಟ್​ ಮಾಡುತ್ತಿದ್ದಾರೆ. ಇಂಥ ಘಟನೆ ನಡೆದಾಗ ಸುಮ್ಮನೆ ನೋಡುತ್ತಿದ್ದ ಚಿತ್ರತಂಡದ ಇತರೆ ಸದಸ್ಯರ ಬಗ್ಗೆಯೂ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಥಂಕಂ’ ಸಿನಿಮಾ ಜನವರಿ 26ರಂದು ಬಿಡುಗಡೆ ಆಗಲಿದೆ. ಅದರ ಸಲುವಾಗಿ ಕಾಲೇಜೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಪರ್ಣಾ ಬಾಲಮುರಳಿ ಅವರು ಭಾಗಿ ಆಗಿದ್ದರು. ಈ ವೇಳೆ ವೇದಿಕೆಗೆ ಬಂದ ವಿದ್ಯಾರ್ಥಿಯೊಬ್ಬ ಹೂವು ನೀಡಿದ್ದಾನೆ. ಅಷ್ಟೇ ಅಲ್ಲದೇ ಅಪರ್ಣಾ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಂದಾಗಿದ್ದಾನೆ. ಇಷ್ಟೇ ಆಗಿದ್ದರೆ ಏನೂ ಸಮಸ್ಯೆ ಆಗುತ್ತಿರಲಿಲ್ಲ. ಆದರೆ ಆತನ ವರ್ತನೆ ಇನ್ನಷ್ಟು ಮಿತಿ ಮೀರಿತು.

ಇದನ್ನೂ ಓದಿ: Dhoomam: ‘ಹೊಂಬಾಳೆ ಫಿಲ್ಮ್ಸ್​’ ಹೊಸ ಚಿತ್ರ ‘ಧೂಮಂ’; ಫಹಾದ್​ ಫಾಸಿಲ್​-ಪವನ್​ ಕುಮಾರ್​ ಚಿತ್ರದ ಶೀರ್ಷಿಕೆ ಬಹಿರಂಗ

ವಿದ್ಯಾರ್ಥಿ ಜೊತೆ ಫೋಟೋಗೆ ಪೋಸ್​ ನೀಡಲು ಅಪರ್ಣಾ ಬಾಲಮುರಳಿ ಒಪ್ಪಿಕೊಂಡರು. ಆಗ ಅವರ ಮೇಲೆ ಆತ ಕೈ ಹಾಕಿದ. ಇದರಿಂದ ನಟಿಗೆ ತೀವ್ರ ಇರಿಸುಮುರಿಸು ಉಂಟಾಯಿತು. ಕೂಡಲೇ ಅವರು ಪಕ್ಕಕ್ಕೆ ಸರಿದುಕೊಂಡರು. ಈ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿದೆ. ‘ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸರಿಯಾಗಿ ನಡೆದುಕೊಳ್ಳೋದು ಹೇಗೆ ಎಂಬುದನ್ನು ಕಲಿಸಿಕೊಡಬೇಕು’ ಎಂದು ಹಲವರು ಕಮೆಂಟ್​ ಮಾಡಿದ್ದಾರೆ.

ಈ ಘಟನೆಯಿಂದಾಗಿ ಅಪರ್ಣಾ ಬಾಲಮುರಳಿ ಅವರ ಅಭಿಮಾನಿಗಳಿಗೆ ಬೇಸರ ಆಗಿದೆ. ಈ ರೀತಿ ಆದಾಗ ವೇದಿಕೆ ಮೇಲಿದ್ದ ಯಾರೂ ಕೂಡ ನಟಿಯ ಪರವಾಗಿ ನಿಂತುಕೊಳ್ಳಲಿಲ್ಲ ಎಂಬ ಕಾರಣದಿಂದಲೂ ಟೀಕೆ ವ್ಯಕ್ತವಾಗುತ್ತಿದೆ. ಅನೇಕ ಸೆಲೆಬ್ರಿಟಿಗಳು ಕೂಡ ಈ ಘಟನೆಯನ್ನು ಖಂಡಿಸುತ್ತಿದ್ದಾರೆ. ನಟಿಯರಿಗೆ ಇಂಥ ಕಿರುಕುಳ ಆದ ಹಲವು ಉದಾಹರಣೆ ಇದೆ.

2015ರಿಂದಲೂ ಅಪರ್ಣಾ ಬಾಲಮುರಳಿ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ತಮಿಳು ಮತ್ತು ಮಲಯಾಳಂ ಸಿನಿಮಾಗಳ ಮೂಲಕ ಅವರು ಛಾಪು ಮೂಡಿಸಿದ್ದಾರೆ. ‘ಸೂರರೈ ಪೋಟ್ರು’ ಚಿತ್ರದಲ್ಲಿನ ನಟನೆಗಾಗಿ ಅವರಿಗೆ ‘ಅತ್ಯುತ್ತಮ ನಟಿ ರಾಷ್ಟ್ರ ಪ್ರಶಸ್ತಿ’ ಸಿಕ್ಕಿತು. ಪವನ್​ ಕುಮಾರ್​ ನಿರ್ದೇಶಿಸುತ್ತಿರುವ ‘ಧೂಮಂ’ ಚಿತ್ರಕ್ಕೆ ಅವರು ನಾಯಕಿ ಆಗಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:20 pm, Thu, 19 January 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್