AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್ ಗೆದ್ದು ಬಂದ ‘ಗೂಳಿ’ ನಟಿ ಈಗೇನು ಮಾಡುತ್ತಿದ್ದಾರೆ?

Mamta Mohandas: ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ ಸಿನಿಮಾಗಳಲ್ಲಿಯೂ ನಟಿಸಿರುವ ಮಮತಾ ಮೋಹನ್​ದಾಸ್ ಒಂದು ಹಂತದಲ್ಲಿ ಟಾಪ್ ನಟಿಯಾಗಿ ಮೆರೆದಿದ್ದರು. ಅವರ ಜೀವನದಲ್ಲಿ ಏನಾಯ್ತು? ಈಗ ಅವರು ಏನು ಮಾಡುತ್ತಿದ್ದಾರೆ.

ಕ್ಯಾನ್ಸರ್ ಗೆದ್ದು ಬಂದ ‘ಗೂಳಿ’ ನಟಿ ಈಗೇನು ಮಾಡುತ್ತಿದ್ದಾರೆ?
ಸುದೀಪ್, ಮಮತಾ ಮೋಹನ್​ದಾಸ್
 ಶ್ರೀಲಕ್ಷ್ಮೀ ಎಚ್
| Edited By: |

Updated on:Nov 24, 2024 | 3:37 PM

Share

ಮಮತಾ ಮೋಹನ್ ದಾಸ್ ದಕ್ಷಿಣದ ಪ್ರೇಕ್ಷಕರಿಗೆ ಗೊತ್ತು. ‘ಗೂಳಿ’ ಸಿನಿಮಾದಲ್ಲಿ ಅವರು ನಟಿಸಿದ್ದರು. ಅವರು ಈ ಚಿತ್ರದಲ್ಲಿ ಸುದೀಪ್ಗೆ ಜೊತೆಯಾಗಿದ್ದರು. ಅವರು ತೆಲುಗು ಹಾಗೂ ಮಲಯಾಳಂ ಸಿನಿಮಾಗಳಲ್ಲಿ ಹೆಚ್ಚು ನಟಿಸಿದ್ದಾರೆ. ಮಮತಾ ಮೋಹನ್ ದಾಸ್ ನಟಿ ಮಾತ್ರವಲ್ಲ ಗಾಯಕಿಯೂ ಹೌದು. ಆದರೆ ನಟಿಯಾಗಿ ಬ್ಯುಸಿಯಾಗಿದ್ದಾಗ ಅವರಿಗೆ ಕ್ಯಾನ್ಸರ್ ಬಂದಿತ್ತು. ಆ ಮಹಾಮಾರಿಯನ್ನು ಎದುರಿಸಿ ಮತ್ತೊಮ್ಮೆ ಬೆಳ್ಳಿತೆರೆಯಲ್ಲಿ ಸದ್ದು ಮಾಡಿದ್ದರು. ಇತ್ತೀಚೆಗೆ ಮಮತಾ 40ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡರು. ಈಗ ಅವರೇನು ಮಾಡುತ್ತಿದ್ದಾರೆ ಎಂಬ ಬಗ್ಗೆ ಇಲ್ಲಿದೆ ವಿವರ.

ಮಮತಾ ಮೋಹನದಾಸ್ ಅವರು 1984ರಂದು ಬಹ್ರೇನ್‌ನಲ್ಲಿ ಅಂಬಲಪಟ್ ಮೋಹನ್‌ದಾಸ್ ಮತ್ತು ಗಂಗಾ ದಂಪತಿಗೆ ಜನಿಸಿದರು. ಮಮತಾ ತನ್ನ ಬಾಲ್ಯವನ್ನು ಬಹ್ರೇನ್‌ನಲ್ಲಿ ಕಳೆದರು. ಅಲ್ಲಿ ಅವರು ಭಾರತೀಯ ಶಾಲೆಯಲ್ಲಿ 12ನೇ ತರಗತಿಯನ್ನು ಪೂರ್ಣಗೊಳಿಸಿದರು ಮತ್ತು ನಂತರ ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಪದವಿ ಪಡೆದರು. ಆ ನಂತರ ಐಬಿಎಂ ಮತ್ತು ಕಲ್ಯಾಣ್ ಕೇಂದ್ರದಂತಹ ಕಂಪನಿಗಳ ಜಾಹೀರಾತುಗಳಿಗೆ ಮಾಡೆಲ್ ಆಗಿ ಕೆಲಸ ಮಾಡಿದರು. ಅದೇ ಸಮಯದಲ್ಲಿ, ಅವರು ಮಲಯಾಳಂ ಚಿತ್ರರಂಗಕ್ಕೆ ಪ್ರವೇಶಿಸಿದರು. ಮಮತಾ ಈಗ ಸಿನಿಮಾದಲ್ಲಿ ಇದ್ದುಕೊಂಡು ಸಾಕಷ್ಟು ಹಣ ಮಾಡಿದ್ದಾರೆ.

ಇದನ್ನೂ ಓದಿ:ಹನುಮಂತು-ಧನರಾಜ್ ಒಟ್ಟಿಗೆ ಸ್ನಾನ, ಸಲಹೆ ಕೊಟ್ಟ ಸುದೀಪ್

ಕೊಚ್ಚಿ ಮತ್ತು ದುಬೈನಲ್ಲಿ ಮಮತಾ ಫ್ಲಾಟ್ ಹೊಂದಿದ್ದು, ಕೋಟಿಗಟ್ಟಲೆ ಆಸ್ತಿ ಹೊಂದಿದ್ದಾರೆ ಎಂದು ವರದಿಯಾಗಿದೆ. ತಂದೆ-ತಾಯಿಯರಿಬ್ಬರೂ ಸಾಕಷ್ಟು ಆಸ್ತಿ ಸಂಪಾದಿಸಿದ್ದರೂ ಮಮತಾ ಸ್ವಂತ ಆಸ್ತಿಯನ್ನು ಕೂಡಿಟ್ಟಿದ್ದಾರೆ. ಕ್ಯಾನ್ಸರ್ ನಿಂದಾಗಿ ವರ್ಷಗಳ ಕಾಲ ನಟನೆಯಿಂದ ದೂರ ಉಳಿದಿದ್ದ ಮಮತಾ ಈಗ ರೀ ಎಂಟ್ರಿ ಕೊಟ್ಟಿದ್ದಾರೆ. ಅವರು ಇತ್ತೀಚೆಗೆ ಜಗಪತಿ ಬಾಬು ಅಭಿನಯದ ರುದ್ರಂಗಿ ಚಿತ್ರದಲ್ಲಿ ಕಾಣಿಸಿಕೊಂಡರು. ಅವರ ಅತ್ಯುತ್ತಮ ಅಭಿನಯಕ್ಕಾಗಿ ಅವರು ನಟಿಯಾಗಿ ಪ್ರಶಂಸೆಯನ್ನು ಪಡೆದರು. ‘ಮಹರಾಜ’ ಸಿನಿಮಾದಲ್ಲೂ ಅವರು ಬಣ್ಣ ಹಚ್ಚಿದ್ದರು.

ಸದ್ಯ ನಿವಿನ್ ಪೋಳಿ ನಟನೆಯ ‘ಐಡೆಂಟಿಟಿ’ ಹೆಸರಿನ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಈ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ಇದೆ. ಈ ಸಿನಿಮಾಗಾಗಿ ಫ್ಯಾನ್ಸ್ ಕಾದಿದ್ದಾರೆ. ಈ ಚಿತ್ರದ ಶೂಟಿಂಗ್ ಸದ್ಯ ಚಾಲ್ತಿಯಲ್ಲಿ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:20 pm, Sun, 24 November 24

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು