ಹೀರೋ ಆದವರು ನೆಗೆಟಿವ್ ರೋಲ್ ಮಾಡಿ ಸಾಕಷ್ಟು ಪ್ರಭಾವ ಬೀರಿದವರು ಇವರೇ ನೋಡಿ

ಅನೇಕ ಹೀರೋಗಳು ವಿಲನ್ ಪಾತ್ರಗಳನ್ನು ಮಾಡಿ ಗಮನ ಸೆಳೆದಿದ್ದನ್ನು ನಾವು ನೋಡಬಹುದು. ಈ ಸಾಲಿನಲ್ಲಿ ಕಿಚ್ಚ ಸುದೀಪ್, ಸೂರ್ಯ ಸೇರಿದಂತೆ ಅನೇಕ ಹೀರೋಗಳು ಇದ್ದಾರೆ. ಅವರ ಬಗ್ಗೆ ಹಾಗೂ ಅವರು ಮಾಡಿದ ಸಿನಿಮಾಗಳ ಬಗ್ಗೆ ಈ ಸ್ಟೋರಿಯಲ್ಲಿ ಮಾಹಿತಿ ಕೊಡುತ್ತೇವೆ.

ಹೀರೋ ಆದವರು ನೆಗೆಟಿವ್ ರೋಲ್ ಮಾಡಿ ಸಾಕಷ್ಟು ಪ್ರಭಾವ ಬೀರಿದವರು ಇವರೇ ನೋಡಿ
ಹೀರೋ ಆದವರು ನೆಗೆಟಿವ್ ರೋಲ್ ಮಾಡಿ ಸಾಕಷ್ಟು ಪ್ರಭಾವ ಬೀರಿದವರು ಇವರೇ ನೋಡಿ
Follow us
| Updated By: ಮಂಜುನಾಥ ಸಿ.

Updated on: Oct 01, 2024 | 6:30 PM

ಹೀರೋ ಆದವರು ಹೀರೋ ಪಾತ್ರಗಳಲ್ಲಿ ಮಾತ್ರ ಮುಂದುವರಿಯುತ್ತಿದ್ದ ಕಾಲ ಒಂದಿತ್ತು. ಆದರೆ, ಸಿನಿಮಾ ರಂಗ ಹಾಗೂ ಪ್ರೇಕ್ಷಕರ ಅಭಿರುಚಿ ಬದಲಾದಂತೆ ಹೀರೋಗಳು ವಿಲನ್ ಪಾತ್ರಗಳನ್ನು ಮಾಡಿ ಗಮನ ಸೆಳೆಯೋಕೆ ಆರಂಭಿಸಿದರು. ಅನೇಕ ಹೀರೋಗಳು ವಿಲನ್ ಪಾತ್ರಗಳನ್ನು ಮಾಡಿ ಗಮನ ಸೆಳೆದಿದ್ದನ್ನು ನಾವು ನೋಡಬಹುದು. ಈ ಸಾಲಿನಲ್ಲಿ ಕಿಚ್ಚ ಸುದೀಪ್, ಸೂರ್ಯ ಸೇರಿದಂತೆ ಅನೇಕ ಹೀರೋಗಳು ಇದ್ದಾರೆ. ಅವರ ಬಗ್ಗೆ ಹಾಗೂ ಅವರು ಮಾಡಿದ ಸಿನಿಮಾಗಳ ಬಗ್ಗೆ ಈ ಸ್ಟೋರಿಯಲ್ಲಿ ಮಾಹಿತಿ ಕೊಡುತ್ತೇವೆ.

ಈಗ

ಎಸ್​ಎಸ್​ ರಾಜಮೌಳಿ ನಿರ್ದೇಶನದ ‘ಈಗ’ ಸಿನಿಮಾ ತೆಲುಗು ಭಾಷೆಯ ಚಿತ್ರ. ಇದು 2012ರಲ್ಲಿ ಬಂದ ಸಿನಿಮಾ. ಈ ಚಿತ್ರದಲ್ಲಿ ನಾನಿ, ಸಮಂತಾ, ಸುದೀಪ್ ಮೊದಲಾದವರು ಅಭಿನಯಿಸಿದ್ದರು. ಅಲ್ಲಿಯವರೆಗೆ ಸುದೀಪ್ ಅವರು ನಟಿಸುತ್ತಾ ಬಂದಿದ್ದು ಹೀರೋ ಆಗಿ ಮಾತ್ರ. ‘ಈಗ’ ಸಿನಿಮಾದಲ್ಲಿ ಅವರು ವಿಲನ್ ಪಾತ್ರ ಮಾಡಿದರು. ಈ ಮೂಲಕ ಎಲ್ಲರ ಗಮನ ಸೆಳೆದರು. ಅವರು ಮಾಡಿದ ಈ ವಿಲನ್ ಪಾತ್ರ ಸಾಕಷ್ಟು ಗಮನ ಸೆಳೆಯಿತು.

ಸೂರ್ಯ

ಸೂರ್ಯ ಅವರು ಹೀರೋ ಆಗಿ ಮಿಂಚಿದವರು. ಅವರು ‘ವಿಕ್ರಮ್’ ಸಿನಿಮಾದ ಕ್ಲೈಮ್ಯಾಕ್ಸ್​ನಲ್ಲಿ ಕೆಲವೇ ನಿಮಿಷ ಬರುತ್ತಾರೆ. ಆದಾಗ್ಯೂ ಅವರ ಪಾತ್ರ ಸಾಕಷ್ಟು ಪ್ರಭಾವ ಬೀರಿದೆ. ಅವರು ವಿಲನ್ ಆಗಿ ಗಮನ ಸೆಳೆದಿದ್ದಾರೆ. ‘ವಿಕ್ರಮ್’ ಚಿತ್ರದ ಸೀಕ್ವೆಲ್​ನಲ್ಲಿ ಅವರು ವಿಲನ್ ಪಾತ್ರದ ಮೂಲಕ ಹೈಲೈಟ್ ಆಗುವ ನಿರೀಕ್ಷೆ ಇದೆ. ‘ವಿಕ್ರಮ್’ ಸಿನಿಮಾದಲ್ಲಿ ಕಮಲ್ ಹಾಸನ್ ನಟಿಸಿದ್ದರು.

ಫಹಾದ್ ಫಾಸಿಲ್

‘ಪುಷ್ಪ’ ಚಿತ್ರದಲ್ಲಿ ಹೈಲೈಟ್ ಆಗಿದ್ದು ಫಹಾದ್ ಫಾಸಿಲ್ ಪಾತ್ರ. ಇಡೀ ಸಿನಿಮಾಗೆ ಅವರೇ ವಿಲನ್. ಅವರು ಪೊಲೀಸ್ ಪಾತ್ರ ಮಾಡಿದರೂ, ಇಲ್ಲಿ ನೆಗೆಟಿವ್ ಶೇಡ್ ಎದ್ದು ಕಾಣುತ್ತದೆ. ಈ ಮೂಲಕ ಅವರು ಗಮನ ಸೆಳೆದಿದ್ದಾರೆ. ‘ಪುಷ್ಪ 2’ ಚಿತ್ರ ಡಿಸೆಂಬರ್​ನಲ್ಲಿ ರಿಲೀಸ್ ಆಗಲಿದೆ. ಈ ಚಿತ್ರದಲ್ಲಿಯೂ ವಿಲನ್ ಆಗಿ ಮುಂದುವರಿದಿದ್ದಾರೆ.

ಇದನ್ನೂ ಓದಿ: ನೆಟ್​ಫ್ಲಿಕ್ಸ್​ನಲ್ಲಿ ದಾಖಲೆ ಬರೆದ ವಿಜಯ್ ಸೇತುಪತಿಯ ‘ಮಹಾರಾಜ’

ವಿಜಯ್ ಸೇತುಪತಿ

ವಿಜಯ್ ಸೇತುಪತಿ ಹೀರೋ ಆಗಿ ಎಲ್ಲರ ಮೆಚ್ಚುಗೆ ಪಡೆದಿದ್ದಾರೆ. ದಳಪತಿ ವಿಜಯ್ ನಟನೆಯ ‘ಮಾಸ್ಟರ್’ ಸಿನಿಮಾದಲ್ಲಿ ಅವರು ಭವಾನಿ ಹೆಸರಿನ ವಿಲನ್ ಪಾತ್ರ ಮಾಡಿ ಗಮನ ಸೆಳೆದರು. ಈ ಚಿತ್ರದಲ್ಲಿ ಅವರ ಪಾತ್ರ ಮೆಚ್ಚುಗೆ ಪಡೆಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು