ಸುದೀಪ್ ಅವರನ್ನು ಟ್ರೋಲ್ ಮಾಡಲು ಹೋದ್ರೆ ಹುಶಾರ್; ಬೀಳುತ್ತೆ ಕೇಸ್

ಕಿಚ್ಚ ಸುದೀಪ್ ಅವರನ್ನು ಟ್ರೋಲ್ ಮಾಡುತ್ತಿರುವವರ ವಿರುದ್ಧ ಅವರ ಅಭಿಮಾನಿಗಳು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಟ್ರೋಲಿಂಗ್ ಮತ್ತು ಸೆಲೆಬ್ರಿಟಿಗಳ ಮೇಲಿನ ನಿಂದನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ. ಇದೇ ರೀತಿಯ ಘಟನೆಗಳ ಬಗ್ಗೆ ರಮ್ಯಾ ದೂರು ದಾಖಲು ಮಾಡಿದ್ದರು.

ಸುದೀಪ್ ಅವರನ್ನು ಟ್ರೋಲ್ ಮಾಡಲು ಹೋದ್ರೆ ಹುಶಾರ್; ಬೀಳುತ್ತೆ ಕೇಸ್
ನಟ ಕಿಚ್ಚ ಸುದೀಪ್ ಅವರ ಬಹುನಿರೀಕ್ಷಿತ ‘ಮಾರ್ಕ್’ ಸಿನಿಮಾ ಸಖತ್ ಸುದ್ದಿ ಆಗುತ್ತಿದೆ. ಕಿಚ್ಚನ ಹುಟ್ಟುಹಬ್ಬಕ್ಕೆ ಟೈಟಲ್ ಟೀಸರ್ ರಿಲೀಸ್ ಮಾಡಲಾಗಿತ್ತು. ಎಲ್ಲೆಡೆ ಈ ಟೈಟಲ್ ಟೀಸರ್ ದಾಖಲೆ ಬರೆದಿದೆ.

Updated on: Sep 18, 2025 | 10:15 AM

ಕಿಚ್ಚ ಸುದೀಪ್ ಅವರಿಗೆ ಸಾಕಷ್ಟು ಅಭಿಮಾನಿಗಳು ಇದ್ದಾರೆ. ಅದೇ ರೀತಿ ಅವರನ್ನು ದ್ವೇಷಿಸೋ ಒಂದು ವರ್ಗ ಕೂಡ ಇದೆ. ಸೋಶಿಯಲ್ ಮೀಡಿಯಾದಲ್ಲಿ ಅವರ ಬಗ್ಗೆ ಟ್ರೋಲ್​ಗಳನ್ನು ಮಾಡುವ ಕೆಲಸ ಮಾಡಲಾಗುತ್ತಿದೆ. ಹೀಗಿರುವಾಗಲೇ ಸುದೀಪ್ ಅಭಿಮಾನಿಗಳು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸುದೀಪ್ (Sudeep) ಅವರನ್ನು ಟ್ರೋಲ್ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.

ಇತ್ತೀಚೆಗೆ ಸೆಲೆಬ್ರಿಟಿಗಳ ಮೇಲಿನ ಟ್ರೋಲ್ ಹೆಚ್ಚಿದೆ. ಸೋಶಿಯಲ್ ಮೀಡಿಯಾದಲ್ಲಿ ಅವರ ಮಾನವನ್ನು ಹರಣ ಮಾಡುವ ಕೆಲಸ ಆಗುತ್ತಿದೆ. ಬಹುತೇಕ ಸೆಲೆಬ್ರಿಟಿಗಳು ಈ ವಿಚಾರದಲ್ಲಿ ಸೈಲೆಂಟ್ ಆಗಿರುತ್ತಾರೆ. ಆದರೆ, ಇತ್ತೀಚೆಗೆ ಸೆಲೆಬ್ರಿಟಿಗಳು ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುತ್ತಾರೆ. ಟ್ರೋಲ್ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತಿದ್ದಾರೆ.

ಅಖಿಲ ಕರ್ನಾಟಕ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸೇನಾ ಸಮಿತಿಯಿಂದ ದೂರು ನೀಡಲಾಗಿದೆ. ಟ್ವಿಟ್ಟರ್ ಸೇರಿದಂತೆ ಎಲ್ಲಾ ಸೋಶಿಯಲ್ ಮೀಡಿಯಾದಲ್ಲಿ ಸುದೀಪ್ ಅವರಿಗೆ ವಿಕೃತವಾದ, ವೈಯಕ್ತಿಕ ನಿಂದನೆ ಮಾಡುವವರ ವಿರುದ್ಧ ದೂರು ನೀಡಲಾಗಿದೆ. ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ.

ಇದನ್ನೂ ಓದಿ
ವಿಷ್ಣು ನಟನೆಯ ‘ಬಂಧನ’ ಸಿನಿಮಾ ತಡೆಯಲು ನಡೆದ ಪ್ರಯತ್ನಗಳು ಒಂದೆರಡಲ್ಲ
ಇನ್ನೂ ಕಡಿಮೆ ಆಗಿಲ್ಲ ಮಾಲಾಶ್ರೀ ಖದರ್; ಈ ವಿಡಿಯೋನೇ ಸಾಕ್ಷಿ
ವಿಷ್ಣು, ಉಪ್ಪಿ, ಶ್ರುತಿ ಜನ್ಮದಿನ; ಚಿತ್ರರಂಗಕ್ಕೆ ನೀಡಿದ ಕೊಡುಗೆ ಅಪಾರ
ವಿಷ್ಣುವರ್ಧನ್-ರಜನಿಕಾಂತ್  ಒಟ್ಟಾಗಿ ನಟಿಸಿದ್ದ ಸಿನಿಮಾದ ದೃಶ್ಯ ನೆನಪಿದೆಯೇ?

ಸೆಲೆಬ್ರಿಟಿಗಳು ಸಾಮಾನ್ಯವಾಗಿ ಟ್ರೋಲ್​ಗಳ ಬಗ್ಗೆ ಅಷ್ಟಾಗಿ ತಲೆಕೆಡಿಸಿಕೊಳ್ಳುವುದಿಲ್ಲ. ಆದರೆ, ಕೆಲವೊಮ್ಮೆ ಪರಿಸ್ಥಿತಿ ಕೈ ಮೀರಿದಾಗ ಕ್ರಮ ಕೈಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹೀಗಾಗಿ, ಸುದೀಪ್ ಅಭಿಮಾನಿಗಳು ಈ ರೀತಿಯ ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ‘ಬಿಗ್ ಬಾಸ್​ ಕನ್ನಡ ಸೀಸನ್ 12’ ಶೋಗೆ ಫೈನಲ್ ಆದ 18 ಸ್ಪರ್ಧಿಗಳು ಇವರೇ? ಇಲ್ಲಿದೆ ಪಟ್ಟಿ

ಈ ಮೊದಲು ರಮ್ಯಾ ವಿರುದ್ಧ ಅಶ್ಲೀಲ ಕಮೆಂಟ್​ಗಳು ಬಂದಿದ್ದವು. ಸೋಶಿಯಲ್ ಮೀಡಿಯಾದಲ್ಲಿ ಅವರ ಬಗ್ಗೆ ಕೆಟ್ಟದಾಗಿ ಮಾತನಾಡಲಾಗಿತ್ತು. ಇದನ್ನು ಸಹಿಸದ ಅವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.