AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪರಾಶಕ್ತಿ’ ತಂಡದವರು ಸಂಭಾವನೆ ನೀಡಿಲ್ಲ; ಕೋರ್ಟ್ ಮೆಟ್ಟಿಲೇರಿದ ನಿರ್ದೇಶಕಿ ಸುಧಾ ಕೊಂಗರ

ನಿರ್ದೇಶಕಿ ಸುಧಾ ಕೊಂಗರ ಅವರು 'ಪರಾಶಕ್ತಿ' ಸಿನಿಮಾದ ಬಾಕಿ 8.39 ಕೋಟಿ ರೂಪಾಯಿ ಸಂಭಾವನೆಗಾಗಿ 'ಡಾನ್ ಪಿಕ್ಚರ್ಸ್' ವಿರುದ್ಧ ಕಾನೂನು ಹೋರಾಟ ಆರಂಭಿಸಿದ್ದಾರೆ. ಈ ವಿವಾದ ಮದ್ರಾಸ್ ಹೈಕೋರ್ಟ್ ತಲುಪಿದ್ದು, ಡಾನ್ ಪಿಕ್ಚರ್ಸ್‌ನ 'ಹೃದಯಂ ಮುರಳಿ' ಬಿಡುಗಡೆಗೂ ತಡೆ ನೀಡಲು ಸುಧಾ ಕೊಂಗರ ಕೋರಿದ್ದಾರೆ. 'ಪರಾಶಕ್ತಿ' ಚಿತ್ರವು ಬಾಕ್ಸ್ ಆಫೀಸ್‌ನಲ್ಲಿ ವಿಫಲವಾದ ನಂತರ ಈ ಘಟನೆ ತಮಿಳು ಚಿತ್ರರಂಗದಲ್ಲಿ ಚರ್ಚೆಗೆ ಕಾರಣವಾಗಿದೆ.

‘ಪರಾಶಕ್ತಿ’ ತಂಡದವರು ಸಂಭಾವನೆ ನೀಡಿಲ್ಲ; ಕೋರ್ಟ್ ಮೆಟ್ಟಿಲೇರಿದ ನಿರ್ದೇಶಕಿ ಸುಧಾ ಕೊಂಗರ
ಸುಧಾ ಕೊಂಗರ
ರಾಜೇಶ್ ದುಗ್ಗುಮನೆ
|

Updated on: Jun 30, 2026 | 1:06 PM

Share

ಮುಖ್ಯಾಂಶಗಳು

  • ಡಾನ್ ಪಿಕ್ಚರ್ಸ್ ವಿರುದ್ಧ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ಸುಧಾ ಕೊಂಗರ
  • ಬರೋಬ್ಬರಿ 8.39 ಕೋಟಿ ರೂ. ಸಂಭಾವನೆ ಬಾಕಿ
  • 'ಹೃದಯಂ ಮುರಳಿ' ಚಿತ್ರದ ಪ್ರದರ್ಶನಕ್ಕೂ ತಡೆ ಕೋರಿ ನಿರ್ದೇಶಕಿಯ ಅರ್ಜಿ

ಖ್ಯಾತ ನಿರ್ದೇಶಕಿ ಸುಧಾ ಕೊಂಗರ ಅವರು ‘ಡಾನ್ ಪಿಕ್ಚರ್ಸ್’ (Dawn Pictures) ನಿರ್ಮಾಣ ಸಂಸ್ಥೆಯ ವಿರುದ್ಧ ಕಾನೂನು ಹೋರಾಟ ಆರಂಭಿಸಿದ್ದಾರೆ. ‘ಪರಾಶಕ್ತಿ’ ಸಿನಿಮಾದಲ್ಲಿ ತಮಗೆ ಮೋಸವಾಗಿದೆ ಎಂದು ಅವರು ಹೇಳಿದ್ದಾರೆ. ತಮಗೆ ಬರಬೇಕಾದ ಸಂಭಾವನೆ ವಿಚಾರವಾಗಿ ಅವರು ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಇದರಿಂದಾಗಿ ಡಾನ್ ಪಿಕ್ಚರ್ಸ್ ಸಂಸ್ಥೆಗೆ ದೊಡ್ಡ ತಲೆನೋವು ಶುರುವಾಗಿದೆ.

ಶಿವಕಾರ್ತಿಕೇಯನ್ ನಟನೆಯ ‘ಪರಾಶಕ್ತಿ’ ಸಿನಿಮಾವನ್ನು ಡಾನ್ ಪಿಕ್ಚರ್ಸ್ ಸಂಸ್ಥೆ ನಿರ್ಮಿಸಿದೆ. ಈ ಚಿತ್ರಕ್ಕೆ ಸುಧಾ ಕೊಂಗರ ಅವರು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಜನವರಿಯಲ್ಲಿ ತೆರೆಗೆ ಬಂತು. ಆದರೆ ತಮಗೆ ಬರಬೇಕಾದ ಬರೋಬ್ಬರಿ 8.39 ಕೋಟಿ ರೂಪಾಯಿ ಸಂಭಾವನೆಯನ್ನು ಇನ್ನು ನೀಡಿಲ್ಲ ಎಂದು ಸುಧಾ ಕೊಂಗರ ಕೋರ್ಟ್‌ನಲ್ಲಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಜುಲೈ 8ರವರೆಗೆ ಚಿತ್ರವನ್ನು ದೂರದರ್ಶನದಲ್ಲಿ ಬಿಡುಗಡೆ ಮಾಡಬಾರದು ಎಂದು ಹೈಕೋರ್ಟ್ ಸೂಚನೆ ನೀಡಿದೆ.

‘ಹೃದಯಂ ಮುರಳಿ’ ಚಿತ್ರದ ರಿಲೀಸ್‌ಗೆ ಬ್ರೇಕ್?

ಸುಧಾ ಕೊಂಗರ ಅವರ ಈ ಕಾನೂನು ಹೋರಾಟ ಡಾನ್ ಪಿಕ್ಚರ್ಸ್‌ನ ಮತ್ತೊಂದು ಸಿನಿಮಾ ಮೇಲೂ ಪ್ರಭಾವ ಬೀರಿದೆ. ಆಕಾಶ್ ಭಾಸ್ಕರನ್ ನಿರ್ದೇಶನ ಹಾಗೂ ನಿರ್ಮಾಣದ ‘ಹೃದಯಂ ಮುರಳಿ’ ಸಿನಿಮಾ ಜುಲೈ 10ರಂದು ಬಿಡುಗಡೆಯಾಗಬೇಕಿತ್ತು. ಅಥರ್ವ ಮುರಳಿ, ಫಹಾದ್ ಫಾಸಿಲ್, ಪ್ರೀತಿ ಮುಕುಂಧನ್ ಮತ್ತು ಕಯಾದಯ ಲೋಹರ್ ನಟಿಸಿರುವ ಈ ರೋಮ್ಯಾಂಟಿಕ್ ಸಿನಿಮಾದ ಬಿಡುಗಡೆಗೆ ತಡೆ ನೀಡಬೇಕೆಂದು ಸುಧಾ ಕೊಂಗರ ಕೋರಿದ್ದಾರೆ. ಈ ಚಿತ್ರಕ್ಕೆ ತಮನ್ ಸಂಗೀತ ನೀಡಿದ್ದು, ಅವರು ನಟನಾಗಿಯೂ ಕಾಣಿಸಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನಿಹಾರಿಕಾ ಎನ್‌ಎಮ್ ಕೂಡ ಪ್ರಮುಖ ಪಾತ್ರದಲ್ಲಿದ್ದಾರೆ.

ಬಾಕ್ಸ್ ಆಫೀಸ್‌ನಲ್ಲಿ ಸಿನಿಮಾ ಹಿಟ್ ಆಗಿಲ್ಲ

ಇಷ್ಟೆಲ್ಲಾ ವಿವಾದಗಳಿಗೆ ಕಾರಣವಾಗಿರುವ ಶಿವಕಾರ್ತಿಕೇಯನ್ ಅಭಿನಯದ ‘ಪರಾಶಕ್ತಿ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಮಟ್ಟದ ಯಶಸ್ಸು ಗಳಿಸಿಲ್ಲ. ಚಿತ್ರವು ಪ್ರೇಕ್ಷಕರನ್ನು ಸೆಳೆಯುವಲ್ಲಿ ವಿಫಲವಾಗಿದ್ದು, ಹಿಟ್ ಲಿಸ್ಟ್ ಸೇರಿಲ್ಲ. 150 ಕೋಟಿ ರೂಪಾಯಿ ಬಜೆಟ್ ಇದಕ್ಕೆ ಖರ್ಚಾಗಿದ್ದು, ಅರ್ಧದಷ್ಟು ಹಣ ಮರಳಿಲ್ಲ. ಈಗ ಸಿನಿಮಾ ಯಶಸ್ವಿಯಾಗದ ಬೆನ್ನಲ್ಲೇ ಈಗ ನಿರ್ದೇಶಕಿ ಮತ್ತು ನಿರ್ಮಾಪಕರ ನಡುವಿನ ಸಂಭಾವನೆ ಜಗಳ ಕೋರ್ಟ್ ಮೆಟ್ಟಿಲೇರಿರುವುದು ತಮಿಳು ಚಿತ್ರರಂಗದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್​​ಐಟಿಯಿಂದ ಹೈವೋಲ್ಟೇಜ್ ಸಭೆ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಸುದೀಪ್ ಅನ್ನೇ ಎಳೆದಾಡಲು ಅಭಿಮಾನಿಗಳು: ವಿಡಿಯೋ ನೋಡಿ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ಗಮನಸೆಳೆದ ಮೈ ಹೋಮ್ ವ್ಯೋಮ: ಅಪಾರ್ಟ್​​​ಮೆಂಟ್​​ ಖರೀದಿಗೆ ಮುಗಿಬಿದ್ದ ಜನ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ತುಮಕೂರು ಯುವ ದಸರಾ: ಮಕ್ಕಳ ಪ್ರತಿಭೆಗೆ ಅದ್ದೂರಿ ವೇದಿಕೆ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಹಾಸನಾಂಬೆ ಉತ್ಸವದಲ್ಲಿ ಕೋಟಿ ಕೋಟಿ ಅವ್ಯವಹಾರ ಆರೋಪ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಕಬ್ಬು ಬೆಳೆಗಾರರ ಪ್ರತಿಭಟನೆ: ಹಿರೇಬಾಗೇವಾಡಿ ಟೋಲ್​​ ಬಂದ್ ಮಾಡಿ ಆಕ್ರೋಶ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಹಿರಿಯ IPS ಅಧಿಕಾರಿ ಎಸ್.ರವಿ ರಾಜೀನಾಮೆ: ಕಾರಣ ಇಲ್ಲಿದೆ
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಗಜೇಂದ್ರಗಡ: ಹೈಟೆಕ್ ಅಗ್ನಿಶಾಮಕ ಠಾಣೆ ಇದ್ದರೂ ಸಿಬ್ಬಂದಿ ಇಲ್ಲದೆ ವ್ಯರ್ಥ!
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ
ಭಾರತ ಪ್ರಜಾತಂತ್ರದ ತಾಯಿ: ಬ್ಲೂಮ್​ಬರ್ಗ್ ಫೋರಂನಲ್ಲಿ ನರೇಂದ್ರ ಮೋದಿ