ಬಾಯ್​ಫ್ರೆಂಡ್​ ರಾಹುಲ್​ ಜತೆ ಫೋಟೋ ಹಂಚಿಕೊಂಡ ಆಥಿಯಾ; ಇದು ನಿಜ ಎಂದ ಸುನೀಲ್​ ಶೆಟ್ಟಿ

ರಾಹುಲ್​ ಮತ್ತು ಆಥಿಯಾ ಡೇಟಿಂಗ್​ ನಡೆಸುತ್ತಿದ್ದಾರೆ. ಕೆಲವು ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲೂ ಹಂಚಿಕೊಂಡಿದ್ದಾರೆ.

ಬಾಯ್​ಫ್ರೆಂಡ್​ ರಾಹುಲ್​ ಜತೆ ಫೋಟೋ ಹಂಚಿಕೊಂಡ ಆಥಿಯಾ; ಇದು ನಿಜ ಎಂದ ಸುನೀಲ್​ ಶೆಟ್ಟಿ
ರಾಹುಲ್​ ಜತೆ ಆಥಿಯಾ

Updated on: Apr 19, 2021 | 4:15 PM

ನಟಿ ಆಥಿಯಾ ಶೆಟ್ಟಿ ಹಾಗೂ ಕ್ರಿಕೆಟಿಗ ಕೆ.ಎಲ್​. ರಾಹುಲ್​ ಪರಸ್ಪರ ಪ್ರೀತಿಸುತ್ತಿದ್ದಾರೆ ಎನ್ನುವ ಗುಸುಗುಸು ಸಾಮಾಜಿಕ ಜಾಲತಾಣದಲ್ಲಿ ಈ ಮೊದಲಿನಿಂದಲೂ ಹರಿದಾಡುತ್ತಿದೆ. ಆದರೆ, ಇದಕ್ಕೆ ಯಾರಿಂದಲೂ  ಉತ್ತರ ಸಿಕ್ಕಿಲ್ಲ. ಈಗ ರಾಹುಲ್​ ಜನ್ಮದಿನಕ್ಕೆ ಆಥಿಯಾ ಹಂಚಿಕೊಂಡ ಫೋಟೋ ಒಂದು ಸಾಕಷ್ಟು ವೈರಲ್​ ಆಗಿದೆ. ಇದರ ಜತೆಗೆ ಆಥಿಯಾ ತಂದೆ ಹಾಗೂ ನಟ ಸುನೀಲ್​ ಶೆಟ್ಟಿ ಇದಕ್ಕೆ ಹಾಕಿರುವ ಕಮೆಂಟ್​ ಕೂಡ ಎಲ್ಲರ ಗಮನಸೆಳೆಯುತ್ತಿದೆ.

ರಾಹುಲ್​ ಮತ್ತು ಆಥಿಯಾ ಡೇಟಿಂಗ್​ ನಡೆಸುತ್ತಿದ್ದಾರೆ. ಕೆಲವು ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲೂ ಹಂಚಿಕೊಂಡಿದ್ದಾರೆ. ಆದರೆ, ಎಲ್ಲಿಯೂ ಇಬ್ಬರೂ ಪ್ರೀತಿಸುತ್ತಿರುವ ವಿಚಾರ ಈವರೆಗೆ ಅಧಿಕೃತ ಮಾಡಿಲ್ಲ.

ಏಪ್ರಿಲ್​ 18ರಂದು ರಾಹುಲ್​ ಜನ್ಮದಿನ. ಈ ವಿಶೇಷ ದಿನದಂದು ಆಥಿಯಾ ಶೆಟ್ಟಿ ರಾಹುಲ್​ ಜತೆ ಇರುವ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಕನ್ನಡಿ ಎದುರು ಇಬ್ಬರೂ ನಿಂತಿದ್ದಾರೆ. ಈ ಫೋಟೋ ನೋಡಿ ‘ನಿನಗೆ ಕೃತಜ್ಞನಾಗಿದ್ದೇನೆ. ಜನ್ಮದಿನದ ಶುಭಾಶಯಗಳು’ ಎಂದು ​ ಬರೆದುಕೊಂಡಿದ್ದಾರೆ. ಇದಕ್ಕೆ ಆಥಿಯಾ ತಂದೆ ಸುನೀಲ್​ ಶೆಟ್ಟಿ ಕಮೆಂಟ್​ ಮಾಡಿದ್ದು, ‘ನಿಜ’ ಎಂದಿದ್ದಾರೆ.

ಈ ಫೋಟೋ ನೋಡಿದ ಕ್ರಿಕೆಟಿಗರು ಕೂಡ ಸಾಕಷ್ಟು ಕಮೆಂಟ್​ ಮಾಡಿದ್ದಾರೆ. ಹಾರ್ದಿಕ್​ ಪಾಂಡ್ಯ ಮೈ ಕ್ಯೂಟೀಸ್​ ಎಂದು ಬರೆದುಕೊಂಡಿದ್ದಾರೆ. ಅಭಿಮಾನಿಗಳು ಕೂಡ ಈ ಜೋಡಿ ಸಖತ್​ ಆಗಿದೆ ಎಂದು ಉತ್ತರಿಸಿದ್ದಾರೆ.

ರಾಹುಲ್​ ಸದ್ಯ ಐಪಿಎಲ್​ 14ನೇ ಸೀಸನ್​ನಲ್ಲಿ ಪಂಜಾಬ್​ ತಂಡವನ್ನು ಮುನ್ನಡೆಸುತ್ತಿದ್ದಾರೆ. ಆಡಿದ ಮೂರು ಪಂದ್ಯಗಳ ಪೈಕಿ ಎರಡು ಪಂದ್ಯದಲ್ಲಿ ಸೋಲು ಕಂಡು ಒಂದು ಪಂದ್ಯ ಗೆದ್ದು ಅಂಕಪಟ್ಟಿಯಲ್ಲಿ ಏಳನೇ ಸ್ಥಾನದಲ್ಲಿದೆ.

ಇದನ್ನೂ ಓದಿ: Kichcha Sudeep: ಸುದೀಪ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಪತ್ನಿ ಪ್ರಿಯಾ; ಈಗ ಹೇಗಿದ್ದಾರೆ ಕಿಚ್ಚ?

KL Rahul Birthday : ಪ್ರಿಯತಮೆ ಆಥಿಯಾ ಶೆಟ್ಟಿ ಜೊತೆ ಕೆ.ಎಲ್. ರಾಹುಲ್ ಕಾಣಿಸಿಕೊಂಡ 5 ಅಪರೂಪದ ಫೋಟೋಗಳು

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us