ರಾಜಕೀಯದಿಂದ ಹಿಂದೆ ಸರಿದ ಬೆನ್ನಲ್ಲೇ ಮಮತಾ ಬ್ಯಾನರ್ಜಿ ರಾಜ್ಯಕ್ಕೆ ತೆರಳಿದ ರಜನಿಕಾಂತ್​

‘ಅಣ್ಣಾಥೆ’ ಸಿನಿಮಾದ ಶೂಟಿಂಗ್​ಗಾಗಿ ರಜನಿಕಾಂತ್ ಕೋಲ್ಕತ್ತಾಗೆ ತೆರಳಿದ್ದಾರೆ. ಕೊನೆಯ ಹಂತದ ಶೂಟಿಂಗ್​ ಬಾಕಿ ಇದ್ದು ಈ ಕಾರಣಕ್ಕೆ ಅವರು ಕೋಲ್ಕತ್ತಾಗೆ ಪ್ರಯಾಣ ಬೆಳೆಸಿದ್ದಾರೆ.

ರಾಜಕೀಯದಿಂದ ಹಿಂದೆ ಸರಿದ ಬೆನ್ನಲ್ಲೇ ಮಮತಾ ಬ್ಯಾನರ್ಜಿ ರಾಜ್ಯಕ್ಕೆ ತೆರಳಿದ ರಜನಿಕಾಂತ್​
ಸೂಪರ್ ಸ್ಟಾರ್ ರಜನಿಕಾಂತ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jul 14, 2021 | 3:47 PM

ನಟ ರಜನಿಕಾಂತ್​ ವೈದ್ಯಕೀಯ ಪರೀಕ್ಷೆಗಾಗಿ ಇತ್ತೀಚೆಗೆ ಏಕಾಏಕಿ ಅಮೆರಿಕಕ್ಕೆ ತೆರಳಿದ್ದರು. ಈಗ ಅವರು ಭಾರತಕ್ಕೆ ವಾಪಾಸಾಗಿದ್ದು, ಅಭಿಮಾನಿಗಳು ನಿಟ್ಟುಸಿರುಬಿಟ್ಟಿದ್ದಾರೆ. ಈ ಬೆನ್ನಲ್ಲೇ ರಜನಿ ಕೋಲ್ಕತ್ತಾಗೆ ತೆರಳಿದ್ದಾರೆ. ವಿಮಾನ ನಿಲ್ದಾಣದಲ್ಲಿ ರಜನಿಕಾಂತ್​ ಕಾಣಿಸಿಕೊಂಡಿದ್ದು, ಅಭಿಮಾನಿಗಳು ಅಚ್ಚರಿಗೊಂಡಿದ್ದಾರೆ. ಅವರು ಪಶ್ಚಿಮ ಬಂಗಾಳದ ರಾಜಧಾನಿಗೆ ತೆರಳಿದ್ದೇಕೆ ಎನ್ನುವ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ.

‘ಅಣ್ಣಾಥೆ’ ಸಿನಿಮಾದ ಶೂಟಿಂಗ್​ಗಾಗಿ ರಜನಿಕಾಂತ್ ಕೋಲ್ಕತ್ತಾಗೆ ತೆರಳಿದ್ದಾರೆ. ಕೊನೆಯ ಹಂತದ ಶೂಟಿಂಗ್​ ಬಾಕಿ ಇದ್ದು ಈ ಕಾರಣಕ್ಕೆ ಅವರು ಕೋಲ್ಕತ್ತಾಗೆ ಪ್ರಯಾಣ ಬೆಳೆಸಿದ್ದಾರೆ. ರಜನಿ ಜತೆಗೆ ಸಿನಿಮಾದ ತಾಂತ್ರಿಕ ವರ್ಗದವರೂ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಶೆಡ್ಯೂಲ್​ನಲ್ಲಿ ಕೆಲ ಮುಖ್ಯ ದೃಶ್ಯಗಳನ್ನು ಶೂಟ್​ ಮಾಡಲಾಗುತ್ತದೆಯಂತೆ.

‘ಅಣ್ಣಾಥೆ’ ಸಿನಿಮಾದ ಶೂಟಿಂಗ್​ಗಾಗಿ ರಜನಿಕಾಂತ್​ ಹೈದರಾಬಾದ್​ಗೆ ತೆರಳಿದ್ದರು. ಒಂದು ತಿಂಗಳ ಕಾಲ ಅಲ್ಲಿಯೇ ಇದ್ದು, ಶೂಟ್​ ಪೂರ್ಣಗೊಳಿಸಿದ್ದಾರೆ. ನಂತರ ಅವರು ಏಕಾಏಕಿ ಅಮೆರಿಕಕ್ಕೆ ತೆರಳಿದ್ದರು. ಅಮೆರಿಕದ ಪ್ರತಿಷ್ಠಿತ ಆಸ್ಪತ್ರೆಯಾದ ಮೆಯೋ ಕ್ಲಿನಿಕ್​ ಎದುರು ರಜನಿಕಾಂತ್​ ನಡೆದುಬರುತ್ತಿರುವ ಫೋಟೋ ವೈರಲ್​ ಆಗಿತ್ತು. ಆಸ್ಪತ್ರೆಗೆ ಭೇಟಿ ನೀಡಿದ ಕಾರಣ ಏನಿರಬಹುದು ಎಂದು ಕೂಡ ಅಭಿಮಾನಿಗಳು ಚಿಂತೆಗೀಡಾಗಿದ್ದರು. ‘ಅಷ್ಟು ತರಾತುರಿಯಲ್ಲಿ ವಿಮಾನ ಹತ್ತಲು ಅವರು ನಿರ್ಧರಿಸಿದ್ದು ಯಾಕೆ? ಕೊವಿಡ್​ ಸಂದರ್ಭದಲ್ಲೂ ವಿದೇಶಕ್ಕೆ ಪ್ರಯಾಣ ಮಾಡುವ ರಿಸ್ಕ್​ ತೆಗೆದುಕೊಳ್ಳುತ್ತಿದ್ದಾರೆ ಎಂದರೆ ಅವರ ಆರೋಗ್ಯದಲ್ಲಿ ಏನೋ ಗಂಭೀರ ಸಮಸ್ಯೆ ಇರಬಹುದು’ ಎಂದು ಕೆಲವು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಆತಂಕ ವ್ಯಕ್ತಪಡಿಸಿದ್ದರು.

‘ಅಣ್ಣಾಥೆ’ ಸಿನಿಮಾಗೆ ‘ವಿಶ್ವಾಸಮ್​’ ಖ್ಯಾತಿಯ ಶಿವ ಅವರು ನಿರ್ದೇಶನ ಮಾಡುತ್ತಿದ್ದಾರೆ. ಕೀರ್ತಿ ಸುರೇಶ್, ನಯನತಾರಾ, ಮೀನಾ, ಪ್ರಕಾಶ್​ ರಾಜ್​ ಮತ್ತು ಖುಷ್ಬೂ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ದೀಪಾವಳಿ ನಿಮಿತ್ತ ನವೆಂಬರ್​ 4ರಂದು ಸಿನಿಮಾ ತೆರೆಗೆ ಬರುತ್ತಿದೆ.

ಇದನ್ನೂ ಓದಿ: ರಾಜಕೀಯದಿಂದ ದೂರವಿರುವ ನಿರ್ಧಾರವನ್ನು ಮರುಪರಿಶೀಲಿಸುತ್ತೇನೆ: ರಜನಿಕಾಂತ್

ಆತಂಕದ ನಡುವೆ ಗುಡ್​ನ್ಯೂಸ್​; ಭಾರತಕ್ಕೆ ಮರಳಿದ ಸೂಪರ್​ ಸ್ಟಾರ್​ ರಜನಿಕಾಂತ್​

ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ