ಯುಎಸ್​ಗೆ ಹೋದ ರಜನೀಕಾಂತ್​ ಈಗ ಏನು ಮಾಡ್ತಿದ್ದಾರೆ? ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗ್ತಿವೆ ಸೂಪರ್​ಸ್ಟಾರ್ ಸೂಪರ್​ ಫೋಟೋಗಳು

Rajinikanth: ರಜನೀಕಾಂತ್​ ಹಾಗೂ ಪತ್ನಿ ಲತಾ, ಮಗಳು ಐಶ್ವರ್ಯಾ ಮತ್ತು ಅಳಿಯ ಧನುಷ್ ಹಾಗೂ ಈ ದಂಪತಿಯ ಪುತ್ರರು​ ಜೂ.19ರಂದು ಚೆನ್ನೈ ಏರ್​ಪೋರ್ಟ್​​ನಲ್ಲಿ ಕಾಣಿಸಿಕೊಂಡಿದ್ದರು. ಅಂದು ದುಬೈ ಮೂಲಕ ಯುಎಸ್​ಗೆ ತೆರಳಿದ್ದಾರೆ. ಇನ್ನೂ ಕೆಲವು ತಿಂಗಳಗಳ ಕಾಲ ಈ ಕುಟುಂಬ ಯುಎಸ್​​ನಲ್ಲಿಯೇ ಇರಲಿದೆ.

ಯುಎಸ್​ಗೆ ಹೋದ ರಜನೀಕಾಂತ್​ ಈಗ ಏನು ಮಾಡ್ತಿದ್ದಾರೆ? ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗ್ತಿವೆ ಸೂಪರ್​ಸ್ಟಾರ್ ಸೂಪರ್​ ಫೋಟೋಗಳು
ಅಮೆರಿಕದಲ್ಲಿ ನಟ ರಜನಿಕಾಂತ್​
Follow us
TV9 Web
| Updated By: Lakshmi Hegde

Updated on:Jun 30, 2021 | 3:16 PM

ಸೂಪರ್​ಸ್ಟಾರ್​ ರಜನೀಕಾಂತ್ ಆರೋಗ್ಯ ತಪಾಸಣೆಗೆಂದು ಕುಟುಂಬದವರೊಂದಿಗೆ ಯುಎಸ್​ಗೆ ತೆರಳಿದ್ದಾರೆ. 2016ರಲ್ಲಿ ಅವರು ಅಮೆರಿಕದಲ್ಲಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಅದಾದ ಬಳಿಕ ಆಗಾಗ ತಪಾಸಣೆಗೆಂದು ಯುಎಸ್​ಗೆ ತೆರಳುತ್ತಿರುತ್ತಾರೆ. ಹಾಗೇ ಈ ಬಾರಿಯೂ ಅಮೆರಿಕಕ್ಕೆ ಹೋಗಿರುವ ಅವರ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್ ಆಗಿದೆ. ರಜನೀಕಾಂತ್​ ಅವರು ಯುಎಸ್​​ನ ಪಶ್ಚಿಮ ವರ್ಜೀನಿಯಾದಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಇರುವ ಫೋಟೋ ಇದು.

ರಜನೀಕಾಂತ್​ ಹಾಗೂ ಪತ್ನಿ ಲತಾ, ಮಗಳು ಐಶ್ವರ್ಯಾ ಮತ್ತು ಅಳಿಯ ಧನುಷ್ ಹಾಗೂ ಈ ದಂಪತಿಯ ಪುತ್ರರು​ ಜೂ.19ರಂದು ಚೆನ್ನೈ ಏರ್​ಪೋರ್ಟ್​​ನಲ್ಲಿ ಕಾಣಿಸಿಕೊಂಡಿದ್ದರು. ಅಂದು ದುಬೈ ಮೂಲಕ ಯುಎಸ್​ಗೆ ತೆರಳಿದ್ದಾರೆ. ಇನ್ನೂ ಕೆಲವು ತಿಂಗಳಗಳ ಕಾಲ ಈ ಕುಟುಂಬ ಯುಎಸ್​​ನಲ್ಲಿಯೇ ಇರಲಿದೆ. ಪದೇಪದೇ ಅಮೆರಿಕಕ್ಕೆ ಹೋಗುವ ರಜನೀಕಾಂತ್​ಗೆ ಅಲ್ಲಿಯೂ ಕೂಡ ದೊಡ್ಡ ಅಭಿಮಾನಿ ಬಳಗವಿದೆ. ಈ ಬಾರಿ ಹೋದಾಗ ರಜನೀಕಾಂತ್​ ಪಶ್ಚಿಮ ವರ್ಜೀನಿಯಾಕ್ಕೆ ಭೇಟಿ ಕೊಟ್ಟು ಅಲ್ಲಿರುವ ತಮ್ಮ ಅಭಿಮಾನಿಗಳೊಟ್ಟಿಗೆ ಮಾತುಕತೆ ನಡೆಸಿದ್ದಾರೆ. ಫೋಟೋಕ್ಕೆ ಪೋಸ್​ ಕೊಟ್ಟಿದ್ದಾರೆ.

Rajinikanth

ಅಭಿಮಾನಿಗಳೊಂದಿಗೆ ನಟ ರಜನಿಕಾಂತ್​

ಖ್ಯಾತ ಗೀತರಚನೆಕಾರ ವೈರಮುತ್ತು ರಜನೀಕಾಂತ್​ಗೆ ಫೋನ್​ ಮಾಡಿ ಆರೋಗ್ಯ ವಿಚಾರಿಸಿದ್ದಾಗಿ ಟ್ವಿಟರ್​ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ರಜನೀಕಾಂತ್​ ಅವರ ಆರೋಗ್ಯ ತಪಾಸಣೆ ನಡೆಯುತ್ತಿದೆ. ಅವರು ಇನ್ನೇನು ಕೆಲವೇ ದಿನಗಳಲ್ಲಿ ಭಾರತಕ್ಕೆ ವಾಪಸ್ ಆಗುತ್ತಾರೆ ಎಂದೂ ತಿಳಿಸಿದ್ದಾರೆ. ರಜನೀಕಾಂತ್​ ಅಮೆರಿಕದಿಂದ ವಾಪಸ್​ ಆಗುತ್ತಿದ್ದಂತೆ ಮತ್ತೆ ತಮ್ಮ ಮುಂದಿನ ಸಿನಿಮಾ ಅಣ್ಣಾತೆ ತಂಡವನ್ನು ಸೇರಿಕೊಳ್ಳಲಿದ್ದಾರೆ. ಈ ಸಿನಿಮಾವನ್ನು ಸಿರುಥೈ ಸಿವಾ ನಿರ್ದೇಶನ ಮಾಡುತ್ತಿದ್ದು, ನಯನತಾರಾ, ಕೀರ್ತಿ ಸುರೇಶ್​, ಖುಷ್ಬು, ಮೀನಾ, ಪ್ರಕಾಶ್​ ರಾಜ್​ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ.

ಇದನ್ನೂ ಓದಿ: ‘ಮೊದಲಿನಂತೆ ಇರೋಕೆ ಸಾಧ್ಯವಿಲ್ಲ, ನನ್ನ ಬಳಿ ಮಾತನಾಡಬೇಡ’; ದಿವ್ಯಾಗೆ ಕಟು ಮಾತಿನಿಂದ ಎಚ್ಚರಿಕೆ ನೀಡಿದ ಮಂಜು

Superstar Rajinikanths latest Photos with fans from West Virginia goes Viral in Social Media

Published On - 3:15 pm, Wed, 30 June 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ