AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಫೋಟೋದಲ್ಲಿರುವ ಸ್ಟಾರ್ ನಟರು ಯಾರು ಎಂದು ಗುರುತಿಸುತ್ತೀರಾ?

ಕಾರ್ತಿ ಹಾಗೂ ಸೂರ್ಯ ಕಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಇಬ್ಬರಿಗೂ ದೊಡ್ಡ ಅಭಿಮಾನಿ ಬಳಗ ಇದೆ. ವಿವಿಧ ಚಿತ್ರಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿರುವ ಸೂರ್ಯ ಅವರು ಈಗ ಚಿತ್ರರಂಗದಲ್ಲಿ 25 ವರ್ಷ ಪೂರೈಸಿಸಿದ್ದಾರೆ.

ಈ ಫೋಟೋದಲ್ಲಿರುವ ಸ್ಟಾರ್ ನಟರು ಯಾರು ಎಂದು ಗುರುತಿಸುತ್ತೀರಾ?
TV9 Web
| Edited By: |

Updated on:Sep 06, 2022 | 10:43 PM

Share

ಸೆಲೆಬ್ರಿಟಿಗಳು ಫ್ಯಾನ್ಸ್ ಜತೆ ಸಂಪರ್ಕದಲ್ಲಿರೋಕೆ ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಳ್ಳುತ್ತಾರೆ. ಅದರಲ್ಲೂ ಅವರು ಬಾಲ್ಯದ ಫೋಟೋಗಳನ್ನು ಹಂಚಿಕೊಂಡರೆ ಫ್ಯಾನ್ಸ್ ಸಾಕಷ್ಟು ಖುಷಿಪಡುತ್ತಾರೆ. ಆ ರೀತಿಯ ಫೋಟೋಗಳನ್ನು ಸಿಕ್ಕಾಗ ಸೆಲೆಬ್ರಿಟಿಗಳು ಅದನ್ನು ಸೋಶಿಯಲ್ ಮೀಡಿಯಾದಲ್ಲಿ (Social Media) ಹಂಚಿಕೊಳ್ಳುತ್ತಾರೆ. ಈಗ ಸ್ಟಾರ್ ನಟರ ಬಾಲ್ಯದ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅವರು ಬೇರಾರು ಅಲ್ಲ ತಮಿಳು ನಟ ಕಾರ್ತಿ (Karthi) ಹಾಗೂ ಸೂರ್ಯ.

ಕಾರ್ತಿ ಹಾಗೂ ಸೂರ್ಯ ಕಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಇಬ್ಬರಿಗೂ ದೊಡ್ಡ ಅಭಿಮಾನಿ ಬಳಗ ಇದೆ. ವಿವಿಧ ಚಿತ್ರಗಳಲ್ಲಿ ನಟಿಸಿ ಭೇಷ್ ಎನಿಸಿಕೊಂಡಿರುವ ಸೂರ್ಯ ಅವರು ಈಗ ಚಿತ್ರರಂಗದಲ್ಲಿ 25 ವರ್ಷ ಪೂರೈಸಿದ್ದಾರೆ. ಈ ಕಾರಣಕ್ಕೆ ಕಾರ್ತಿ ಅವರು ಸೂರ್ಯ ಜತೆ ನಿಂತಿರುವ ಬಾಲ್ಯದ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿ ಫ್ಯಾನ್ಸ್ ಖುಷಿ ಪಟ್ಟಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾರ್ತಿ, ‘ತನ್ನ ಮೈನಸ್ ವಿಚಾರಗಳನ್ನು ಪ್ಲಸ್ ಆಗಿ ಮಾಡಲು ಸೂರ್ಯ ಹಗಲು-ರಾತ್ರಿ ಶ್ರಮಿಸಿದ್ದಾರೆ. ತಮ್ಮನ್ನು ತಾವು ಮೀರಿಸುವುದರ ಬಗ್ಗೆ ಅವರು ಗಮನ ಹರಿಸಿದರು. ಇವರು ಅನೇಕರಿಗೆ ಸ್ಫೂರ್ತಿ. ಇವರು ನನ್ನ ಸಹೋದರ’ ಎಂದು ಕಾರ್ತಿ ಟ್ವೀಟ್ ಮಾಡಿದ್ದಾರೆ. ಈ ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ.

ಸೂರ್ಯ ಅವರು ನಟನೆಗೆ ಬಂದಿದ್ದು 1997ರಲ್ಲಿ. ‘ನೆರ್ರುಕ್ಕು ನೆರ್’ ಅವರ ಮೊದಲ ಸಿನಿಮಾ. ನಂತರ ಅವರು ಹಲವು ಸಿನಿಮಾಗಳಲ್ಲಿ ನಟಿಸಿದರು. ಇದರ ಜತೆಗೆ ಅವರು ಹಲವು ಸಿನಿಮಾಗಳಲ್ಲಿ ಅತಿಥಿ ಪಾತ್ರ ಮಾಡಿದ್ದಾರೆ.  ‘ಜೈ ಭೀಮ್​’, ‘ಸೂರರೈ ಪೋಟ್ರು’ ಸಿನಿಮಾಗಳು ಗಮನ ಸೆಳೆದವು.

ಇದನ್ನೂ ಓದಿ: Suriya: ನಟ ಸೂರ್ಯ ನಿವಾಸಕ್ಕೆ ಬಿಗಿ ಪೊಲೀಸ್ ಭದ್ರತೆ; ಕಾರಣವೇನು? ಇಲ್ಲಿದೆ ಮಾಹಿತಿ

ಇತ್ತೀಚೆಗೆ ತೆರೆಗೆ ಬಂದ ‘ವಿಕ್ರಮ್’ ಸಿನಿಮಾದಲ್ಲಿ ಸೂರ್ಯ ಅವರು ಅತಿಥಿ ಪಾತ್ರ ಮಾಡಿದ್ದರು. ಅವರ ವಿಲನ್ ಲುಕ್ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದರು. ಈ ಸಿನಿಮಾದ ಸೀಕ್ವೆಲ್​ನಲ್ಲಿ ಕಾರ್ತಿ ಹಾಗೂ ಸೂರ್ಯ ಒಟ್ಟಾಗಿ ನಟಿಸಲಿದ್ದಾರೆ. ಈ ಕಾರಣಕ್ಕೂ ಸಿನಿಮಾ ಸಾಕಷ್ಟು ಕುತೂಹಲ ಮೂಡಿಸಿದೆ.

Published On - 10:33 pm, Tue, 6 September 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ