AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suriya in Vikram: ಹೊಸ ಟ್ವಿಸ್ಟ್​​ ನೀಡಿದ ‘ವಿಕ್ರಮ್’ ಚಿತ್ರತಂಡ; ಕಮಲ್, ವಿಜಯ್ ಸೇತುಪತಿ​, ಫಹಾದ್​ ಜತೆ ಕಾಣಿಸಿಕೊಳ್ಳಲಿದ್ದಾರೆ ಈ ಸ್ಟಾರ್ ನಟ 

Kamal Haasan | Vikram Movie: ಲೋಕೇಶ್ ಕನಗರಾಜ್ ನಿರ್ದೇಶನದ ‘ವಿಕ್ರಮ್’ ಮೊದಲಿನಿಂದಲೂ ತಾರಾಗಣದ ಕಾರಣದಿಂದ ತೀವ್ರ ಕುತೂಹಲ ಮೂಡಿಸಿತ್ತು. ಕಮಲ್​ ಹಾಸನ್​ ಜತೆಗೆ ವಿಜಯ್​ ಸೇತುಪತಿ ಹಾಗೂ ಫಹಾದ್​ ಫಾಸಿಲ್ ಕೂಡ ಬಣ್ಣಹಚ್ಚಿದ್ದಾರೆ. ಇದೀಗ ಚಿತ್ರದ ಬಗ್ಗೆ ಹೊಸ ಅಪ್ಡೇಟ್ ನೀಡಲಾಗಿದೆ. ಕಾಲಿವುಡ್​ನ ಮತ್ತೋರ್ವ ಸ್ಟಾರ್ ಚಿತ್ರದಲ್ಲಿ ನಟಿಸಿದ್ದಾರೆ.

Suriya in Vikram: ಹೊಸ ಟ್ವಿಸ್ಟ್​​ ನೀಡಿದ ‘ವಿಕ್ರಮ್’ ಚಿತ್ರತಂಡ; ಕಮಲ್, ವಿಜಯ್ ಸೇತುಪತಿ​, ಫಹಾದ್​ ಜತೆ ಕಾಣಿಸಿಕೊಳ್ಳಲಿದ್ದಾರೆ ಈ ಸ್ಟಾರ್ ನಟ 
‘ವಿಕ್ರಮ್’ ಚಿತ್ರದಲ್ಲಿ ಸೂರ್ಯ
TV9 Web
| Edited By: |

Updated on:Jun 01, 2022 | 3:18 PM

Share

ಕಮಲ್ ಹಾಸನ್ (Kamal Haasan) ನಟನೆಯ ‘ವಿಕ್ರಮ್​’ (Vikram Movie) ಈಗಾಗಲೇ ಈಗಾಗಲೇ ತೀವ್ರ ನಿರೀಕ್ಷೆ ಮೂಡಿಸಿದೆ. ಜೂನ್ 3ರಂದು ಅಂದರೆ ಈ ವಾರ ವಿಶ್ವಾದ್ಯಂತ ಚಿತ್ರ ತೆರೆಗೆ ಬರುತ್ತಿದೆ. ಲೋಕೇಶ್ ಕನಗರಾಜ್ ನಿರ್ದೇಶನದ ಈ ಚಿತ್ರ ಮೊದಲಿನಿಂದಲೂ ತಾರಾಗಣದ ಕಾರಣದಿಂದ ತೀವ್ರ ಕುತೂಹಲ ಮೂಡಿಸಿತ್ತು. ಕಮಲ್​ ಹಾಸನ್​ ಜತೆಗೆ ತಮ್ಮ ಸಹಜ ಅಭಿನಯದಿಂದ ಅಪಾರ ಅಭಿಮಾನಿ ಬಳಗ ಸೃಷ್ಟಿಸಿಕೊಂಡಿರುವ ಕಾಲಿವುಡ್​ನ ಮತ್ತೋರ್ವ ಸ್ಟಾರ್ ವಿಜಯ್​ ಸೇತುಪತಿ ಬಣ್ಣ ಹಚ್ಚಿದ್ದಾರೆ.  ಇವರಲ್ಲದೇ ಮಲಯಾಳಂನ ಖ್ಯಾತ ನಟ ಫಹಾದ್​ ಫಾಸಿಲ್ ಕೂಡ ಕಾಣಿಸಿಕೊಳ್ಳುತ್ತಿದ್ದಾರೆ. ಇದೀಗ ಚಿತ್ರದ ಹೊಸ ಅಪ್ಡೇಟ್ ನೀಡಲಾಗಿದೆ. ಕಾಲಿವುಡ್​ನ ಮತ್ತೋರ್ವ ನಟ ಸೂರ್ಯ (Suriya) ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದನ್ನು ಚಿತ್ರತಂಡ ರಿವೀಲ್ ಮಾಡಿದೆ. ಜತೆಗೆ ಹೊಸ ಪೋಸ್ಟರ್​ ಕೂಡ ರಿಲೀಸ್ ಮಾಡಿದೆ.

ಈ ಹಿಂದೆ ನಿರ್ದೇಶಕ ಲೋಕೇಶ್ ಕನಗರಾಜ್​ ಚಿತ್ರದಲ್ಲಿ ಸೂರ್ಯ ಅವರು ಕಾಣಿಸಿಕೊಂಡಿರುವುದನ್ನು ಖಚಿತಪಡಿಸಿದ್ದರು. ಆದರೆ ಟ್ರೇಲರ್​ನಲ್ಲಿ ಸೂರ್ಯ ಅವರ ಮುಖ ನೇರವಾಗಿ ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ಫ್ಯಾನ್ಸ್​​ ಸೂರ್ಯ ಅವರ ಪಾತ್ರದ ಸುಳಿವು ಟ್ರೇಲರ್​ನಲ್ಲಿ ಸಿಗಬಹುದೇ ಎಂದು ಹುಡುಕಾಡಿದ್ದರು. ಮತ್ತು ಅದರಲ್ಲಿ ಯಶಸ್ವಿಯಾಗಿದ್ದರು ಕೂಡ.

ಇದನ್ನೂ ಓದಿ
Image
ಹಾಲಿವುಡ್​ನ ಚಾಕೊಲೇಟ್​ ತಂದು ಬಾಲಿವುಡ್​ನಲ್ಲಿ ಗೋಲ್​ಗಪ್ಪ ಮಾಡಿದ ಆಮಿರ್​ ಖಾನ್​; ಸಖತ್​ ಟ್ರೋಲ್​
Image
Vikram Movie on Burj Khalifa: ಕಿಚ್ಚ ಸುದೀಪ್​ ಹಾದಿಯಲ್ಲಿ ಸಾಗ್ತಿದ್ದಾರೆ ಕಮಲ್​ ಹಾಸನ್​; ಕನ್ನಡದ ಟ್ರೆಂಡ್​ ಫಾಲೋ ಮಾಡ್ತಿದೆ ‘ವಿಕ್ರಮ್​’ ಚಿತ್ರ
Image
KK Death: ಸಾವಿಗಿಂತ ಕೆಲವೇ ನಿಮಿಷಗಳ ಮುನ್ನ ವೇದಿಕೆ ತೊರೆದಿದ್ದ ಗಾಯಕ ಕೆಕೆ; ಇಲ್ಲಿದೆ ವೈರಲ್​ ವಿಡಿಯೋ
Image
ಸಾರ್ವಜನಿಕ ಸ್ಥಳದಲ್ಲಿ ನಟಿಯ ಬೆತ್ತಲೆ ಫೋಟೋಶೂಟ್​ ಕೇಸ್​; ಪೂನಂ ಪಾಂಡೆ ವಿರುದ್ಧ ಚಾರ್ಜ್​ಶೀಟ್​ ಸಲ್ಲಿಕೆ

ಇದೀಗ ಚಿತ್ರತಂಡವೇ ಅಧಿಕೃತವಾಗಿ ಪೋಸ್ಟರ್ ಬಿಡುಗಡೆ ಮಾಡಿದೆ. ಸೂರ್ಯ ಕೂಡ ‘ವಿಕ್ರಮ್​’ನಲ್ಲಿ ಕಾಣಿಸಿಕೊಳ್ಳುತ್ತಿರುವುದು ಚಿತ್ರದ ಮೈಲೇಜ್​ ಹೆಚ್ಚಿಸಿದೆ. ಬಾಕ್ಸಾಫೀಸ್​ನಲ್ಲಿ ಚಿತ್ರವು ದಾಖಲೆ ಬರೆಯಬಹುದೇ ಎಂಬ ಕುತೂಹಲ ಮೂಡಿದೆ.

ನಿರ್ದೇಶಕ ಲೋಕೇಶ್ ಕನಗರಾಜ್ ಹಂಚಿಕೊಂಡ ಟ್ವೀಟ್:

ಇದನ್ನೂ ಓದಿ: ಕಿಚ್ಚ ಸುದೀಪ್​ ಹಾದಿಯಲ್ಲಿ ಸಾಗ್ತಿದ್ದಾರೆ ಕಮಲ್​ ಹಾಸನ್​; ಕನ್ನಡದ ಟ್ರೆಂಡ್​ ಫಾಲೋ ಮಾಡ್ತಿದೆ ‘ವಿಕ್ರಮ್​’ 

ಇತ್ತೀಚೆಗೆ ಸಂದರ್ಶನವೊಂದರಲ್ಲಿ ಮಾತನಾಡುತ್ತಾ ಕಮಲ್​ ಹಾಸನ್ ಸೂರ್ಯ ಚಿತ್ರದಲ್ಲಿ ನಟಿಸಿದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಸೂರ್ಯ ಅವರೊಂದಿಗೆ ಚಿತ್ರ ಮಾಡಬೇಕು ಎನ್ನುವುದು ಬಹಳ ಹಿಂದಿನ ಯೋಜನೆಯಾಗಿತ್ತು. ‘ವಿಕ್ರಮ್’ ಚಿತ್ರಕ್ಕೆ ಸೂರ್ಯ ಅವರನ್ನು ಕೇಳಿದಾಗ ತಕ್ಷಣವೇ ಅವರು ಒಪ್ಪಿಕೊಂಡರು. ಎಲ್ಲವೂ ಒಂದು ಫೋನ್​ ಕರೆಯಿಂದಲೇ ಆಯಿತು ಎಂದಿದ್ದರು ಕಮಲ್​ ಹಾಸನ್​.

‘ವಿಕ್ರಮ್’ ಚಿತ್ರದಲ್ಲಿ ಸೂರ್ಯ ಕಾಣಿಸಿಕೊಂಡಿರುವುದು ಚಿತ್ರಕ್ಕೆ ದೊಡ್ಡ ಪ್ಲಸ್ ಆಗಿದೆ ಎಂದು ಸ್ವತಃ ಕಮಲ್ ಹಾಸನ್ ಹೇಳಿಕೊಂಡಿದ್ದಾರೆ. ತಮಿಳುನಾಡಿನಲ್ಲಿ ಸ್ಟಾರ್ ನಟರಿಗೆ ದೊಡ್ಡ ಅಭಿಮಾನಿ ಬಳಗವಿರುತ್ತದೆ. ಇದೀಗ ‘ವಿಕ್ರಮ್’ ಚಿತ್ರದಲ್ಲಿ ಮೂವರು ತಾರೆಯರು ಬಣ್ಣಹಚ್ಚುತ್ತಿರುವುದು ಹಾಗೂ ಮಲಯಾಳಂನ ಮತ್ತೋರ್ವ ನಟ ಕಾಣಿಸಿಕೊಂಡಿರುವ ನಿರೀಕ್ಷೆ ಹೆಚ್ಚಾಗಲು ಕಾರಣವಾಗಿದೆ.

‘ರಾಜ್​ ಕಮಲ್​ ಫಿಲ್ಮ್ಸ್​’ ಬ್ಯಾನರ್​ನಲ್ಲಿ ಕಮಲ್ ಹಾಸನ್ ಹಾಗೂ ಆರ್​.ಮಹೇಂದ್ರನ್ ‘ವಿಕ್ರಮ್’ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಅನಿರುದ್ಧ್​ ರವಿಚಂದರ್​ ಸಂಗೀತ ನೀಡಿದ್ದು, ಗಿರೀಶ್ ಗಂಗಾಧರನ್ ಛಾಯಾಗ್ರಹಣ ಮಾಡಿದ್ದಾರೆ. ಜೂನ್​ 3ರಂದು ವಿಶ್ವಾದ್ಯಂತ ‘ವಿಕ್ರಮ್’ ತೆರೆಕಾಣಲಿದೆ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:16 pm, Wed, 1 June 22

ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ವಾರಾಣಸಿ-ಲಕ್ನೋ ರೈಲಿನೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಗಾಯಗೊಂಡಿದ್ದ ಚಾಲಕ ಮೊಹಮ್ಮದ್ ರಫೀಕ್ ಸಾವು, ಗೋಳಾಡಿದ ಪತ್ನಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಉಡುಪಿ ಕೃಷ್ಣನಿಗಾಗಿ ಸಿದ್ಧವಾಯ್ತು ಚೆಂದದ ಚಿನ್ನದ ರಥ! ಹೇಗಿದೆ ನೋಡಿ
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಚಿತ್ರದುರ್ಗ ಬಸ್ ಅಪಘಾತದಲ್ಲಿ ಗಾಯಗೊಂಡಿದ್ದ ಚಾಲಕ ಸಾವು
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
ಮೃತರ ಕುಟುಂಬಗಳಿಗೆ ಶಾಸಕ ಪ್ರದೀಪ್ ಈಶ್ವರ್ ನೆರವಿನ ಭರವಸೆ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
2026 ಗುರು ಗ್ರಹದ ಸಂಚಾರದಿಂದ ಮಕರ ರಾಶಿಯವರಿಗೆ ಗುರುಬಲ ಮತ್ತು ಅದೃಷ್ಟ
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್