AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

3 ತಿಂಗಳಲ್ಲಿ 2 ಬ್ಲಾಕ್‌ಬಸ್ಟರ್: ನಟ ಸೂರ್ಯನ ದೊಡ್ಡ ಕಂಬ್ಯಾಕ್ 

ಸೂಪರ್ ಸ್ಟಾರ್ ಸೂರ್ಯ ಕೇವಲ ಮೂರು ತಿಂಗಳ ಅವಧಿಯಲ್ಲಿ ಎರಡು ಬ್ಲಾಕ್‌ಬಸ್ಟರ್ ಸಿನಿಮಾಗಳನ್ನು ನೀಡಿ ಭರ್ಜರಿ ಕಂಬ್ಯಾಕ್ ಮಾಡಿದ್ದಾರೆ. 'ಕರುಪ್ಪು' ಸಿನಿಮಾದ ದೊಡ್ಡ ಯಶಸ್ಸಿನ ನಂತರ ಈಗ 'ವಿಶ್ವನಾಥ್ ಆ್ಯಂಡ್ ಸನ್ಸ್' ಸಿನಿಮಾ ಕೂಡ ತಮಿಳು ಹಾಗೂ ತೆಲುಗು ಭಾಷೆಗಳಲ್ಲಿ ಬಾಕ್ಸ್ ಆಫೀಸ್ ಸೂಪರ್ ಹಿಟ್ ಹಾದಿಯಲ್ಲಿದೆ.

3 ತಿಂಗಳಲ್ಲಿ 2 ಬ್ಲಾಕ್‌ಬಸ್ಟರ್: ನಟ ಸೂರ್ಯನ ದೊಡ್ಡ ಕಂಬ್ಯಾಕ್ 
ಸೂರ್ಯ
ರಾಜೇಶ್ ದುಗ್ಗುಮನೆ
|

Updated on: Aug 15, 2026 | 2:52 PM

Share

ಮುಖ್ಯಾಂಶಗಳು

  • ಮೂರು ತಿಂಗಳಲ್ಲಿ 2 ಬ್ಲಾಕ್‌ಬಸ್ಟರ್; ಸೂರ್ಯ ಸೈಲೆಂಟ್ ಕಂಬ್ಯಾಕ್
  • ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದ 'ವಿಶ್ವನಾಥ್ ಆ್ಯಂಡ್ ಸನ್ಸ್'
  • 200 ಕೋಟಿ ಕ್ಲಬ್‌ನತ್ತ ನಟ ಸೂರ್ಯ ಹೊಸ ಸಿನಿಮಾ

ದಕ್ಷಿಣ ಭಾರತದ ಸೂಪರ್ ಸ್ಟಾರ್ ಸೂರ್ಯ ಅಪಾರ ಜನಪ್ರಿಯತೆ ಹೊಂದಿದ್ದಾರೆ. ರಜನಿಕಾಂತ್ ಹಾಗೂ ಕಮಲ್ ಹಾಸನ್ ಅವರಂತೆ ಸೂರ್ಯ ಕೂಡ ಬೇರೆ ಭಾಷೆಗಳಲ್ಲಿ ದೊಡ್ಡ ಅಭಿಮಾನಿ ಬಳಗ ಸಂಪಾದಿಸಿದ್ದಾರೆ. ಆದರೆ ಕಳೆದ ಕೆಲವು ವರ್ಷಗಳಲ್ಲಿ ಅವರ ಕೆಲವು ಸಿನಿಮಾಗಳು ಬಾಕ್ಸ್ ಆಫೀಸ್‌ನಲ್ಲಿ ನಿರೀಕ್ಷಿತ ಯಶಸ್ಸು ಕಾಣಲಿಲ್ಲ. ಇದರಿಂದಾಗಿ ಅಭಿಮಾನಿಗಳು ಹಾಗೂ ವಿತರಕರಿಗೆ ತೀವ್ರ ನಿರಾಸೆಯಾಗಿತ್ತು. ಆದರೆ, ಈಗ ಬ್ಯಾಕ್​ ಟು ಬ್ಯಾಕ್ ಹಿಟ್ ಕೊಟ್ಟಿದ್ದಾರೆ.

ಸತತ ಮೂರು ಸಿನಿಮಾ ಸೋತರೆ ಕರಿಯರ್ ಮುಗಿಯಿತು ಎಂದು ಭಾವಿಸಲಾಗುತ್ತದೆ. ಸೂರ್ಯ ಅವರ ವೃತ್ತು ಜೀವನ ಕೂಡ ಮುಗಿಯಿತು ಎಂದೇ ವಿಶ್ಲೇಷಿಸಲಾಗಿತ್ತು. ಆದರೆ ಸೂರ್ಯ ಈಗ ಕೇವಲ ಮೂರು ತಿಂಗಳ ಅವಧಿಯಲ್ಲಿ ಎರಡು ಬ್ಲಾಕ್‌ಬಸ್ಟರ್ ಸಿನಿಮಾಗಳನ್ನು ನೀಡಿ ಅದ್ಭುತ ಕಂಬ್ಯಾಕ್ ಮಾಡಿದ್ದಾರೆ.

ಅವರ ನಟನೆಯ ‘ಕರುಪ್ಪು’ ಸಿನಿಮಾ ಎಲ್ಲರ ನಿರೀಕ್ಷೆ ಮೀರಿ ಬ್ಲಾಕ್‌ಬಸ್ಟರ್ ಹಿಟ್ ಆಯಿತು. ಈ ಗೆಲುವಿನ ಬೆನ್ನಲ್ಲೇ ತೆರೆಕಂಡ ‘ವಿಶ್ವನಾಥ್ ಆ್ಯಂಡ್ ಸನ್ಸ್’ ಸಿನಿಮಾ ಕೂಡ ಗೆಲುವಿನ ಹಾದಿಯಲ್ಲಿದೆ. ಈ ಚಿತ್ರಕ್ಕೆ ಎಲ್ಲೆಡೆ ಉತ್ತಮ ವಿಮರ್ಶೆ ಹಾಗೂ ಸಾರ್ವಜನಿಕ ಮೆಚ್ಚುಗೆ ವ್ಯಕ್ತವಾಗಿದೆ. ಈ ಸಿನಿಮಾ ಮೊದಲ ದಿನವೇ 31.51 ಕೋಟಿ ರೂಪಾಯಿ ಗಳಿಸಿದೆ. ತಮಿಳು ಮತ್ತು ತೆಲುಗು ಎರಡೂ ಭಾಷೆಗಳಲ್ಲಿ ‘ವಿಶ್ವನಾಥ್ ಆ್ಯಂಡ್ ಸನ್ಸ್’ ಅತ್ಯುತ್ತಮ ಓಪನಿಂಗ್ ಪಡೆದುಕೊಂಡಿದೆ. ಈ ಸಿನಿಮಾ ದೊಡ್ಡ ಮಟ್ಟದ ಯಶಸ್ಸು ಕಾಣಲಿದೆ ಎಂಬುದು ತಜ್ಞರ ಅಭಿಪ್ರಾಯ.

ಇದನ್ನೂ ಓದಿ:;ನನ್ನ ಹೇಳಿಕೆಯನ್ನು ತಪ್ಪಾಗಿ ಬಿಂಬಿಸಲಾಗಿದೆ ಕಾಕ್ರೋಚ್ ವಿವಾದಕ್ಕೆ ಸಿಜೆಐ ಸೂರ್ಯಕಾಂತ್ ಬೇಸರ

‘ವಿಶ್ವನಾಥ್ ಆ್ಯಂಡ್ ಸನ್ಸ್’ ಪ್ರಪಂಚದಾದ್ಯಂತ ಸುಮಾರು 200 ಕೋಟಿ ರೂಪಾಯಿ ಗಳಿಕೆಯ ಗುರಿ ಹೊಂದಿದೆ. ಪ್ರಸ್ತುತ ಚಿತ್ರಮಂದಿರಗಳಲ್ಲಿ ಈ ಸಿನಿಮಾಗೆ ಯಾವುದೇ ದೊಡ್ಡ ಪೈಪೋಟಿ ಇಲ್ಲ. ‘ಟಾಕ್ಸಿಕ್’ ಚಿತ್ರ ಬರುವವರೆಗೆ ಇದಕ್ಕೆ ಪೈಪೋಟಿ ಇಲ್ಲ. ಪ್ರೇಕ್ಷಕರ ಬೆಂಬಲ ಇದ್ದರೆ ಸಿನಿಮಾ ಸುಲಭವಾಗಿ ಈ ಮೈಲಿಗಲ್ಲು ತಲುಪಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
ಭೀಕರ ಜಲ ಸಂಕಷ್ಟ: ರಾಯಚೂರು, ಕಲಬುರಗಿ, ಬೀದರಲ್ಲಿ ಕುಡಿಯುವ ನೀರಿಗಾಗಿ ಪರದಾಟ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
RSS ಪಥಸಂಚಲನಕ್ಕೆ ಸಿದ್ಧತೆ: ಕೆಲವೆಡೆ ಷರತ್ತುಬದ್ಧ ಅನುಮತಿ; ಕೆಲವೆಡೆ ನಕಾರ
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ದೊಡ್ಡಬಳ್ಳಾಪುರ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಲಘು ಭೂಕಂಪನ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ಸುದೀಪ್ ಮಾತಿಗೆ ಕಣ್ಣೀರಿಟ್ಟ ತಾಂಡವ್, ಕುಣಿದಾಡಿದ ಸೌಂದರ್ಯಾ: ವಿಡಿಯೋ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ದೊಡ್ಡಬಳ್ಳಾಪುರ ತಾಲೂಕಿನ ಹಲವೆಡೆ ಮತ್ತೆ ಭೂಕಂಪನ; ಸ್ಥಳೀಯರಲ್ಲಿ ಆತಂಕ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ಭೀಕರ ಬರದಿಂದ ಬತ್ತಿದ ಭತ್ತದ ನಾಡು: ಇಡೀ ರಾಜ್ಯಕ್ಕೆ ಅಕ್ಕಿ ದರ ಏರಿಕೆಯ ಬಿಸಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ರೆಸ್ಯೂಮ್​​ನಲ್ಲಿ ಕನ್ನಡ ಇದ್ರೆ ರಿಜೆಕ್ಟ್​: ಅಳಲು ತೋಡಿಕೊಂಡ ಯುವತಿ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
ಹಿಂಗಾರು ಮಳೆ ಅಬ್ಬರಕ್ಕೆ ಹಚ್ಚ ಹಸಿರಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
2 ವರ್ಷ 10 ತಿಂಗಳ ಕಂದನಿಂದ ತಬಲಾ ವಾದನ
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್
40 ದಿನ ನಂತರ ಪತ್ತೆಯಾದ ಕೆಆರ್‌ಐಡಿಎಲ್ ಎಇಇ ಪರ್ವೀಜ್​ಗೆ ಈಗ ಪೊಲೀಸರ ಗ್ರಿಲ್