SSR Case: ಸಾಯುವುದಕ್ಕೂ ಮುನ್ನ ನಟನೆ ತೊರೆಯುವ ನಿರ್ಧಾರಕ್ಕೆ ಬಂದಿದ್ದ ಸುಶಾಂತ್; ಅವರು ಯೋಚಿಸಿದ್ದೇನು?

Sushant Singh Rajput Death Anniversary: ಸುಶಾಂತ್ ಯಾವುದೇ ಹಿನ್ನೆಲೆ ಇಲ್ಲದೆ ಚಿತ್ರರಂಗಕ್ಕೆ ಕಾಲಿಟ್ಟವರು. ಅವರಿಗೆ ಸಿನಿಮಾ ರಂಗದಲ್ಲಿ ಯಶಸ್ಸು ಕೂಡ ಸಿಕ್ಕಿತ್ತು. ಅದ್ಭುತ ನಟನೆ ಮೂಲಕ ಅವರು ಎಲ್ಲರ ಗಮನ ಸೆಳೆದಿದ್ದರು.

SSR Case: ಸಾಯುವುದಕ್ಕೂ ಮುನ್ನ ನಟನೆ ತೊರೆಯುವ ನಿರ್ಧಾರಕ್ಕೆ ಬಂದಿದ್ದ ಸುಶಾಂತ್; ಅವರು ಯೋಚಿಸಿದ್ದೇನು?
ಸುಶಾಂತ್​ ಸಿಂಗ್​ ರಜಪೂತ್​
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: Jun 13, 2021 | 7:28 AM

ಸುಶಾಂತ್ ಸಿಂಗ್ ರಜಪೂತ್ ನಿಧನರಾಗಿ ಮೇ 14ಕ್ಕೆ ಒಂದು ವರ್ಷ ಆಗಲಿದೆ. ಅವರದು ಆತ್ಮಹತ್ಯೆಯೋ ಅಥವಾ ಸಾವಿಗೆ ಬೇರೆ ಏನಾದರೂ ಕಾರಣ ಇದೆಯೋ ಎನ್ನುವ ಬಗ್ಗೆ ತನಿಖೆ ನಡೆಯುತ್ತಿದೆ. ಅಚ್ಚರಿ ಎಂದರೆ, ಸಾಯುವುದಕ್ಕೂ ಮೊದಲೇ ಸುಶಾಂತ್ ನಟನೆ ತೊರೆಯುವ ನಿರ್ಧಾರಕ್ಕೆ ಬಂದಿದ್ದರಂತೆ. ಈ ವಿಚಾರ ಈಗ ಹೊರಬಿದ್ದಿದೆ. ಸುಶಾಂತ್ ಯಾವುದೇ ಹಿನ್ನೆಲೆ ಇಲ್ಲದೆ ಚಿತ್ರರಂಗಕ್ಕೆ ಕಾಲಿಟ್ಟವರು. ಅವರಿಗೆ ಸಿನಿಮಾ ರಂಗದಲ್ಲಿ ಯಶಸ್ಸು ಕೂಡ ಸಿಕ್ಕಿತ್ತು. ಅದ್ಭುತ ನಟನೆ ಮೂಲಕ ಅವರು ಎಲ್ಲರ ಗಮನ ಸೆಳೆದಿದ್ದರು. ಒಂದು ಹಂತದಲ್ಲಿ ಅವರು ನಟನೆ ತೊರೆಯಬೇಕು ಎನ್ನುವ ನಿರ್ಧಾರಕ್ಕೆ ಬಂದಿದ್ದರಂತೆ. ಇದಕ್ಕೆ ಕಾರಣವೂ ಇದೆ.

ಸುಶಾಂತ್ ವಿಜ್ಞಾನಿ ಆಗಬೇಕೆಂದು ಕನಸು ಕಂಡಿದ್ದರಂತೆ. ನಿರ್ದೇಶಕ ರುಮಿ ಜಫ್ರಾ ಅವರು ಈ ಬಗ್ಗೆ ಹೇಳಿಕೊಂಡಿದ್ದಾರೆ. ‘ಸುಶಾಂತ್ ವಿಜ್ಞಾನಿ ಆಗಬೇಕು ಎಂದುಕೊಂಡಿದ್ದರು. ಒಂದಷ್ಟು ಹಣವನ್ನು ಅದಕ್ಕೆ ಹೂಡಿಕೆ ಮಾಡಿ ಲೋನಾವಾಲಾದಲ್ಲಿರುವ ಅವರ ಮನೆಗೆ ತೆರಳಿ ಒಬ್ಬಂಟಿಯಾಗಿರುವ ಉದ್ದೇಶ ಅವರದ್ದಾಗಿತ್ತು’ ಎಂದಿದ್ದಾರೆ ಅವರು.

‘ಸುಶಾಂತ್ ನನ್ನ ಬಳಿ ಖಿನ್ನತೆ ಬಗ್ಗೆ ಹೇಳಿಕೊಂಡಿದ್ದರು. ಆದರೆ, ನಾನು ಎಂದಿಗೂ ಅದರ ಹಿಂದಿನ ಕಾರಣ ಕೇಳಿಲ್ಲ. ಅವರನ್ನು ಚಿಯರಪ್ ಮಾಡೋಕೆ ಪ್ರಯತ್ನಿಸುತ್ತಿದ್ದೆ. ಆದರೆ, ಅವರು ನಿಧನರಾದರು. ನನ್ನ ಮುಂದಿನ ಸಿನಿಮಾದಲ್ಲಿ ಸುಶಾಂತ್ ಹಾಗೂ ರಿಯಾ ಒಟ್ಟಾಗಿ ನಟಿಸಬೇಕಿತ್ತು. ಆದರೆ, ಅದು ಸಾಧ್ಯವಾಗಿಲ್ಲ’ ಎಂದಿದ್ದಾರೆ.

ಸುಶಾಂತ್ ಸಿಂಗ್ ‘ಕೈ ಪೊ ಚೆ’ ಸಿನಿಮಾ ಮೂಲಕ ಬಾಲಿವುಡ್​ಗೆ ಕಾಲಿಟ್ಟರು. ‘ಪಿಕೆ’, ‘ಎಂ.ಎಸ್ ಧೋನಿ: ದಿ ಅನ್ಟೋಲ್ಡ್ ಸ್ಟೋರಿ’ ಅಂತಹ ಹಿಟ್ ಚಿತ್ರಗಳಲ್ಲಿ ಸುಶಾಂತ್ ನಟಿಸಿದ್ದರು. ‘ದಿಲ್ ಬೇಚಾರಾ’ ಅವರ ನಟನೆಯ ಕೊನೆಯ ಸಿನಿಮಾ. ಸುಶಾಂತ್ ಸಾವಿನ ನಂತರದಲ್ಲಿ ಒಟಿಟಿಯಲ್ಲಿ ರಿಲೀಸ್ ಆದ ಈ ಚಿತ್ರ ಮೆಚ್ಚುಗೆ ಪಡೆದುಕೊಂಡಿತ್ತು. ಸುಶಾಂತ್ ಕಳೆದ ಜೂನ್ 14ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಫ್ಲ್ಯಾಟ್​ನಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಸುಶಾಂತ್ ಶವ ಸಿಕ್ಕಿತ್ತು. ಸದ್ಯ, ಸಿಬಿಐ ಈ ಪ್ರಕರಣದ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ:

ಸುಶಾಂತ್​ ಸಾವಿನ ಘಟನೆ ಆಧಾರಿತ ಸಿನಿಮಾ ಟ್ರೇಲರ್ ರಿಲೀಸ್​​; ಅಭಿಮಾನಿಗಳಿಗೆ ಶಾಕ್​ ನೀಡಿದ ಡೈಲಾಗ್​​ಗಳು 

ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ