ಸುಶಾಂತ್​ ಸಾವಿನಲ್ಲಿ ದುಡ್ಡು ಮಾಡಿಕೊಳ್ಳುತ್ತಿರುವ ನೀಚರು; 3 ಮುಖ್ಯ ವಿಷಯ ತೆರೆದಿಟ್ಟ ಸಹೋದರಿ

SSR: ಸುಶಾಂತ್​ ಸಿಂಗ್​ ರಜಪೂತ್ ಹೆಸರಿನಲ್ಲಿ ಹಣ ಸಂಗ್ರಹಿಸಲಾಗುತ್ತಿದೆ ಎಂಬುದು ಅವರ ಸಹೋದರಿ ಮೀತೂ ಸಿಂಗ್ ಗಮನಕ್ಕೆ ಬಂದಿದೆ. ಈ ಬಗ್ಗೆ ಅವರು ಎಲ್ಲರಿಗೂ ಎಚ್ಚರಿಕೆ ನೀಡಿದ್ದಾರೆ.

ಸುಶಾಂತ್​ ಸಾವಿನಲ್ಲಿ ದುಡ್ಡು ಮಾಡಿಕೊಳ್ಳುತ್ತಿರುವ ನೀಚರು; 3 ಮುಖ್ಯ ವಿಷಯ ತೆರೆದಿಟ್ಟ ಸಹೋದರಿ
ಸುಶಾಂತ್​ ಸಿಂಗ್​ ರಜಪೂತ್​
Follow us
ಮದನ್​ ಕುಮಾರ್​
|

Updated on: Jun 05, 2021 | 9:46 AM

ನಟ ಸುಶಾಂತ್​ ಸಿಂಗ್​ ರಜಪೂತ್​ ನಿಧನರಾಗಿ ಒಂದು ವರ್ಷ ಕಳೆಯುತ್ತಿದೆ. ಅವರ ಸಾವಿನ ನಂತರ ಬಾಲಿವುಡ್​ನಲ್ಲಿ ಹಲವು ಘಟನೆಗಳು ನಡೆದವು. ಸುಶಾಂತ್​ ಸಾವಿಗೆ ನ್ಯಾಯ ಸಿಗಬೇಕು ಎಂದು ಇಂದಿಗೂ ಅವರ ಅಭಿಮಾನಿಗಳು ಹೋರಾಡುತ್ತಲೇ ಇದ್ದಾರೆ. ಕುಟುಂಬದವರು ಕೂಡ ನ್ಯಾಯದ ನಿರೀಕ್ಷೆಯಲ್ಲಿದ್ದಾರೆ. ಆದರೆ ಈ ನಡುವೆಯೇ ಕೆಲವರು ಅಮಾನವೀಯ ಕೃತ್ಯ ಮಾಡುತ್ತಿದ್ದಾರೆ. ಸುಶಾಂತ್ ಸಿಂಗ್​ ರಜಪೂತ್​ ಹೆಸರು ಹೇಳಿಕೊಂಡು ದುಡ್ಡು ಮಾಡುವ ಕೆಲಸಕ್ಕೆ ಕಿಡಿಗೇಡಿಗಳು ಕೈ ಹಾಕಿದ್ದಾರೆ. ಈ ಬಗ್ಗೆ ಸುಶಾಂತ್​ ಸಹೋದರಿ ಮೀತೂ ಸಿಂಗ್​ ಎಚ್ಚರಿಕೆ ನೀಡಿದ್ದಾರೆ.

ಸುಶಾಂತ್​ ಸಿಂಗ್​ ರಜಪೂತ್ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸಲಾಗುತ್ತಿದೆ ಎಂಬುದು ಮೀತೂ ಸಿಂಗ್ ಗಮನಕ್ಕೆ ಬಂದಿದೆ. ಈ ಬಗ್ಗೆ ಅವರು ಟ್ವೀಟ್​ ಮಾಡಿದ್ದು, ಎಲ್ಲರಿಗೂ ಎಚ್ಚರಿಕೆ ನೀಡಿದ್ದಾರೆ. ‘ಕೆಲವರು ಸುಶಾಂತ್​ ಸಾವನ್ನು ತಮ್ಮ ಲಾಭಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಅದು ತೀರಾ ಅಮಾನವೀಯ ಕೆಲಸ. ಆ ವ್ಯಕ್ತಿಗಳು ಕೂಡಲೇ ಇಂಥ ಕೃತ್ಯದಿಂದ ಹಿಂದೆ ಸರಿಯಬೇಕು’ ಎಂದು ಮೀತೂ ಸಿಂಗ್​ ಹೇಳಿದ್ದಾರೆ.

‘ಸುಶಾಂತ್​ ಹೆಸರಿನಲ್ಲಿ ದೇಣಿಗೆ ಸಂಗ್ರಹಿಸಲು ನಾವು ಯಾರಿಗೂ ಅಧಿಕಾರ ನೀಡಿಲ್ಲ. ಸುಶಾಂತ್​ ಜೀವನವನ್ನು ಆಧರಿಸಿ ಪುಸ್ತಕ ಬರೆಯಲು ಯಾರಿಗೂ ನಾವು ಅನುಮತಿ ಕೊಟ್ಟಿಲ್ಲ. ಸಿನಿಮಾ ಮಾಡಲು ಕೂಡ ಯಾರೂ ನಮ್ಮಿಂದ ಸಮ್ಮತಿ ಪಡೆದುಕೊಂಡಿಲ್ಲ’ ಎಂದು ಈ ಮೂರು ವಿಷಯಗಳನ್ನು ಮೀತೂ ಸಿಂಗ್​ ಸ್ಪಷ್ಟಪಡಿಸಿದ್ದಾರೆ. ಸುಶಾಂತ್​ ಅವರ ದುರಂತ ಅಂತ್ಯವನ್ನು ಲಾಭಕ್ಕಾಗಿ ಬಳಸಿಕೊಳ್ಳಲು ನಮ್ಮ ಕುಟುಂಬದವರು ಮುಂದಾಗುವುದಿಲ್ಲ. ಬೇರೆಯವರಿಗೂ ಅಂಥ ಕೆಲಸ ಮಾಡಲು ಬಿಡುವುದಿಲ್ಲ ಎಂದು ಅವರು ಹೇಳಿದ್ದಾರೆ.

2020ರ ಜೂನ್​ 14ರಂದು ಸುಶಾಂತ್​ ಅವರ ಮೃತದೇಹವು ಬಾಂದ್ರಾ ಅಪಾರ್ಟ್​ಮೆಂಟ್​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ ಆಗಿತ್ತು. ಅವರು ಆತ್ಮಹತ್ಯೆ ಮಾಡಿಕೊಳ್ಳುವಂತಹ ವ್ಯಕ್ತಿ ಆಗಿರಲಿಲ್ಲ ಎಂಬುದು ಹಲವರ ವಾದ. ಪ್ರಕರಣದ ಕುರಿತಂತೆ ಸಿಬಿಐ, ಎನ್​ಸಿಬಿ ಮತ್ತು ಜಾರಿ ನಿರ್ದೇಶನಾಲಯ ಮೂರು ಆಯಾಮಗಳಿಂದ ತನಿಖೆ ನಡೆಸುತ್ತಿವೆ. ಸುಶಾಂತ್​ ಸಾವಿಗೆ ನ್ಯಾಯ ಸಿಗಬೇಕು ಎಂದು ಅವರ ಅಭಿಮಾನಿಗಳು ಮತ್ತು ಕುಟುಂಬದವರು ಸೋಶಿಯಲ್​ ಮೀಡಿಯಾದಲ್ಲಿ ಇಂದಿಗೂ ಹ್ಯಾಶ್​​ಟ್ಯಾಗ್​ಗಳ ಮೂಲಕ ಅಭಿಯಾನ ನಡೆಸುತ್ತಿದ್ದಾರೆ.

ಇದನ್ನೂ ಓದಿ:

ಸುಶಾಂತ್​ ಸಿಂಗ್​ ರಜಪೂತ್​ ಮನೆ ಕೆಲಸದವರಿಗೆ ಗೊತ್ತಿದೆಯಾ ಡ್ರಗ್ಸ್​ ಸತ್ಯ? ಎನ್​ಸಿಬಿಯಿಂದ ವಿಚಾರಣೆ

ಬಿಗ್​ ಬಾಸ್​ ಮನೆ ಒಳಗೆ ಹೋಗಲಿದ್ದಾರೆ ಸುಶಾಂತ್​ ಸಿಂಗ್​ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ?

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ