AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಮಂತಾ, ನಿಹಾರಿಕಾ ಬಳಿಕ ಮತ್ತೊಂದು ನಟಿಯ ವಿಚ್ಛೇದನ? ಮತ್ತದೇ ಪ್ಯಾಟರ್ನ್​

ಯಾವುದೇ ಸ್ಟಾರ್ ಸೆಲೆಬ್ರಿಟಿಗಳು ತಮ್ಮ ವೈವಾಹಿಕ ಸಂಬಂಧವನ್ನು ಕೊನೆಗಾಣಿಸಲು ಬಯಸಿದರೆ ಅವರು ಮೊದಲು ಮಾಡೋದು ಫೋಟೋ ಡಿಲೀಟ್ ಮಾಡುವ ಕೆಲಸ. ಸ್ವಾತಿ ರೆಡ್ಡಿ ಕೂಡ ಇದನ್ನೇ ಮಾಡಿದ್ದಾರೆ.

ಸಮಂತಾ, ನಿಹಾರಿಕಾ ಬಳಿಕ ಮತ್ತೊಂದು ನಟಿಯ ವಿಚ್ಛೇದನ? ಮತ್ತದೇ ಪ್ಯಾಟರ್ನ್​
ವಿಕಾಸ್-ಸ್ವಾತಿ
ರಾಜೇಶ್ ದುಗ್ಗುಮನೆ
|

Updated on: Jul 18, 2023 | 12:36 PM

Share

ಕ್ರೈಮ್ ಥ್ರಿಲ್ಲರ್ ಸಿನಿಮಾಗಳಿಗೆ ಬರ ಇಲ್ಲ. ಬಹುತೇಕ ಕ್ರೈಮ್ ಥ್ರಿಲ್ಲರ್ ಸಿನಿಮಾಗಳಲ್ಲಿ ಕೊಲೆಗಾರ ಮಾಡುವ ಹತ್ಯೆಯ ಪ್ಯಾಟರ್ನ್ ಆಧರಿಸಿ ಇದೆಲ್ಲವನ್ನೂ ಮಾಡುತ್ತಿರುವುದು ಒಬ್ಬನೇ ವ್ಯಕ್ತಿ ಎಂಬುದನ್ನು ಕಂಡು ಹಿಡಿಯಲಾಗುತ್ತಿದೆ. ಅದೇ ರೀತಿ ಇತ್ತೀಚೆಗೆ ವಿಚ್ಛೇದನ ಪಡೆಯಲಿರುವ ಸೆಲೆಬ್ರಿಟಿಗಳು ಕೂಡ ಒಂದು ಪ್ಯಾಟರ್ನ್ ಫಾಲೋ ಮಾಡುತ್ತಿದ್ದಾರೆ. ಸೋಶಿಯಲ್ ಮೀಡಿಯಾದಿಂದ ಮೊದಲು ಪತಿ ಜೊತೆ ಇರೋ ಫೋಟೋ ಡಿಲೀಟ್ ಮಾಡುವುದು, ಆ ಬಳಿಕ ವಿಚ್ಛೇದನದ ಬಗ್ಗೆ ಘೋಷಣೆ ಮಾಡುವುದು. ಈ ಸಾಲಿಗೆ ಈಗ ಟಾಲಿವುಡ್​ನ ನಟಿಯೊಬ್ಬರು ಸೇರ್ಪಡೆ ಆಗುತ್ತಿದ್ದಾರೆ. ಅವರು ಬೇರಾರೂ ಅಲ್ಲ ಸ್ವಾತಿ ರೆಡ್ಡಿ (Swathi Reddy).

ತೆಲುಗು, ಮಲಯಾಳಂ, ತಮಿಳು ಸಿನಿಮಾಗಳಲ್ಲಿ ನಟಿಸಿ ಸ್ವಾತಿ ಫೇಮಸ್ ಆಗಿದ್ದಾರೆ. 2014ರಲ್ಲಿ ರಿಲೀಸ್ ಆದ ‘ಕಾರ್ತಿಕೇಯ’ ಸಿನಿಮಾದಲ್ಲಿ ಅವರು ನಟಿಸಿದ್ದರು. 2018ರಲ್ಲಿ ಅವರು ವಿಕಾಸ್ ವಾಸು ಅವರನ್ನು ಮದುವೆ ಆದರು. ವಿವಾಹದ ಬಳಿಕ ಸ್ವಾತಿ ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ಮದುವೆ ಆಗಿ 5 ವರ್ಷಗಳು ಕಳೆದಿವೆ. ಈಗ ಅವರು ಸೋಶಿಯಲ್ ಮೀಡಿಯಾದಲ್ಲಿ ಪತಿ ಜೊತೆ ಇರುವ ಫೋಟೋ ಡಿಲೀಟ್ ಮಾಡಿಕೊಂಡಿದ್ದಾರೆ. ಇದನ್ನು ನೋಡಿದ ಅನೇಕರು ವಿಚ್ಛೇದನದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಯಾವುದೇ ಸ್ಟಾರ್ ಸೆಲೆಬ್ರಿಟಿಗಳು ತಮ್ಮ ವೈವಾಹಿಕ ಸಂಬಂಧವನ್ನು ಕೊನೆಗಾಣಿಸಲು ಬಯಸಿದರೆ ಅವರು ಮೊದಲು ಮಾಡೋದು ಫೋಟೋ ಡಿಲೀಟ್ ಮಾಡುವ ಕೆಲಸ. ಸಮಂತಾ-ನಾಗ ಚೈತನ್ಯ ಮತ್ತು ನಿಹಾರಿಕಾ-ಚೈತನ್ಯ ಜೊನ್ನಲಗಡ್ಡ ವಿಚ್ಛೇದನಕ್ಕೂ ಮೊದಲು ಮಾಡಿದ್ದು ಇದನ್ನೇ. ಈಗ ಸ್ವಾತಿ ರೆಡ್ಡಿ ವಿಚಾರದಲ್ಲೂ ಹಾಗೆಯೇ ಆಗುತ್ತದೆ ಎಂದು ಕೆಲವರು ಊಹಿಸುತ್ತಿದ್ದಾರೆ.

ಇದನ್ನೂ ಓದಿ: Niharika Konidela: ಚಿರಂಜೀವಿ ಮನೆ ಮಗಳು ನಿಹಾರಿಕಾ ವಿಚ್ಛೇದನಕ್ಕೆ ಇದುವೇ ಕಾರಣ..

ಸ್ವಾತಿ ವಿಚ್ಛೇದನದ ಬಗ್ಗೆ ಈ ರೀತಿ ಸುದ್ದಿ ಹರಿದಾಡಿದ್ದು ಇದೇ ಮೊದಲಲ್ಲ. ಎರಡು ವರ್ಷಗಳ ಹಿಂದೆಯೂ ಸ್ವಾತಿ ವಿಚ್ಛೇದನ ಪಡೆಯಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಈ ವೇಳೆ ಅವರು ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಹಂಚಿಕೊಂಡು ಸ್ಪಷ್ಟನೆ ನೀಡಿದ್ದರು. ಈಗ ಮತ್ತದೇ ವಿಚಾರಕ್ಕೆ ಅವರು ಸುದ್ದಿ ಆಗುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಇಂಡಿ ಮೈತ್ರಿಕೂಟದಿಂದ ಸುಪ್ರೀಂ ಚಲೋ ಮೆರವಣಿಗೆ
ಇಂಡಿ ಮೈತ್ರಿಕೂಟದಿಂದ ಸುಪ್ರೀಂ ಚಲೋ ಮೆರವಣಿಗೆ
ಅಜ್ಜಿಯ ಅಂತ್ಯಕ್ರಿಯೆಗೂ ಬಿಡಲಿಲ್ಲ ಎಂದ ಸಿಜೆಪಿ ನಾಯಕರಿಗೆ ವಿಡಿಯೋ ತಿರುಗೇಟು
ಅಜ್ಜಿಯ ಅಂತ್ಯಕ್ರಿಯೆಗೂ ಬಿಡಲಿಲ್ಲ ಎಂದ ಸಿಜೆಪಿ ನಾಯಕರಿಗೆ ವಿಡಿಯೋ ತಿರುಗೇಟು
ನಾಡಹಬ್ಬ ಮೈಸೂರು ದಸರಾದಲ್ಲಿ ಪ್ಲಾಸ್ಟಿಕ್, ಫ್ಲೆಕ್ಸ್​ಗೆ ಸಂಪೂರ್ಣ ಕಡಿವಾಣ
ನಾಡಹಬ್ಬ ಮೈಸೂರು ದಸರಾದಲ್ಲಿ ಪ್ಲಾಸ್ಟಿಕ್, ಫ್ಲೆಕ್ಸ್​ಗೆ ಸಂಪೂರ್ಣ ಕಡಿವಾಣ
ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ
ಇಂಡಿಗೋ ವಿಮಾನದಲ್ಲಿ ಪವರ್ ಬ್ಯಾಂಕ್ ಸ್ಪೋಟ
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ಸಿಎಂ ಡಿಕೆ ಶಿವಕುಮಾರ್ ಉಡುಪಿ, ಮಂಗಳೂರು ಪ್ರವಾಸ ರದ್ದು
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ಇಂದು ನವರಾತ್ರಿಯ ಎರಡನೇ ದಿನ; ಬ್ರಹ್ಮಚಾರಿಣಿ ದೇವಿಯ ಪೂಜೆಯಿಂದ ಶುಭಫಲ
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ದಸರಾ ಅಂದವನ್ನು ಇಮ್ಮಡಿಗೊಳಿಸಿದ ಗೋಲ್ಡನ್‌ ಟೆಂಪಲ್‌ ಮಂಟಪ!
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ಉತ್ತರ ಪ್ರದೇಶ ಕಾಂಗ್ರೆಸ್ ರಾಜ್ಯಾಧ್ಯಕ್ಷ ಅಜಯ್ ರೈ ಮೇಲೆ ಶೂ ಅಟ್ಯಾಕ್
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ