ಶಾರುಖ್ ಖಾನ್ ಸಿನಿಮಾದಲ್ಲಿ ನನಗೆ ಕಡಿಮೆ ಸಂಬಳ ಕೊಟ್ಟರು: ಸ್ಟಾರ್ ನಟಿ ತಾಪ್ಸಿ

ಬಾಲಿವುಡ್​ ಸ್ಟಾರ್ ನಟಿ ತಾಪ್ಸಿ ಪನ್ನು ಸಂಭಾವನೆ ಅಸಮತೋಲನದ ಬಗ್ಗೆ ಮಾತನಾಡಿದ್ದು, ತಮಗೆ ಶಾರುಖ್ ಖಾನ್ ಸಿನಿಮಾದಲ್ಲಿ ಕಡಿಮೆ ಸಂಬಳ ಕೊಟ್ಟಿದ್ದರು ಎಂದು ಹೇಳಿಕೊಂಡಿದ್ದಾರೆ. ಸ್ಟಾರ್ ನಟರ ಸಿನಿಮಾಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ತಾಪ್ಸಿ ಪನ್ನು.

ಶಾರುಖ್ ಖಾನ್ ಸಿನಿಮಾದಲ್ಲಿ ನನಗೆ ಕಡಿಮೆ ಸಂಬಳ ಕೊಟ್ಟರು: ಸ್ಟಾರ್ ನಟಿ ತಾಪ್ಸಿ
Follow us
ಮಂಜುನಾಥ ಸಿ.
|

Updated on: Nov 03, 2024 | 10:44 AM

ತಾಪ್ಸಿ ಪನ್ನು ಬಾಲಿವುಡ್​ನ ಸ್ಟಾರ್ ನಟಿಯರಲ್ಲಿ ಒಬ್ಬರು. ಇತರೆ ನಟಿಯರಂತೆ ಕೇವಲ ಕಮರ್ಶಿಯಲ್ ಸಿನಿಮಾಗಳಲ್ಲಿ ನಟಿಸದೇ ಗಟ್ಟಿ ಪಾತ್ರಗಳಲ್ಲಿ ಮಾತ್ರವೇ ನಟಿಸುತ್ತಾರೆ ಅವರು. ಒಳ್ಳೆಯ ನಟಿ ಆಗಿರುವ ಜೊತೆಗೆ ಸಾಮಾಜಿಕ ವಿಷಯಗಳ ಬಗ್ಗೆ ದಿಟ್ಟತನದಿಂದ ಮಾತನಾಡುತ್ತಾರೆ. ಈ ಹಿಂದೆ ಕೋಮುದ್ವೇಷ ಇನ್ನಿತರೆ ವಿಷಯಗಳ ಬಗ್ಗೆ ತಮ್ಮ ನಿಲವನ್ನು ವ್ಯಕ್ತಪಡಿಸಿದ್ದರು. ಮಹಿಳಾ ಸುರಕ್ಷತೆ, ಸಮಾನತೆಯ ಬಗ್ಗೆಯೂ ಸಹ ತಾಪ್ಸಿ ಪನ್ನು ಗಟ್ಟಿ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ಇತ್ತೀಚೆಗಷ್ಟೆ ಚಿತ್ರರಂಗದಲ್ಲಿ ಮಹಿಳೆ ಹಾಗೂ ಪುರುಷರ ನಡುವೆ ಇರುವ ಪಾವತಿ ಅಸಮತೋಲನ (ಪೇ ಡಿಫರೆನ್ಸ್)ದ ಬಗ್ಗೆ ತಾಪ್ಸಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಲವಾರು ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ನಟಿಸಿರುವ ತಾಪ್ಸಿ ಪನ್ನು, ತಮಗೆ ಮಹಿಳಾ ಪ್ರಧಾನ ಸಿನಿಮಾಗಳಿಂದಲೇ ಹೆಚ್ಚು ಸಂಭಾವನೆ ಬರುವುದಾಗಿ ಹೇಳಿಕೊಂಡಿದ್ದಾರೆ. ಅಲ್ಲದೆ, ಸೂಪರ್ ಸ್ಟಾರ್ ನಟರು ಇರುವ ಭಾರಿ ಬಜೆಟ್​ನ ಪುರುಷ ಪ್ರಧಾನ ಸಿನಿಮಾಗಳಿಂದ ತಮಗೆ ಕಡಿಮೆ ಸಂಭಾವನೆ ಸಿಕ್ಕಿದೆ ಎಂದಿದ್ದಾರೆ. ಶಾರುಖ್ ಖಾನ್ ನಟನೆಯ ‘ಡಂಕಿ’ ಸಿನಿಮಾದಲ್ಲಿ ನಟಿಸಿದ್ದಕ್ಕೆ ತಮಗೆ ಕಡಿಮೆ ಸಂಭಾವನೆ ಸಿಕ್ಕಿತ್ತು ಎಂದು ಅವರು ಬಹಿರಂಗಪಡಿಸಿದ್ದಾರೆ.

ಇದನ್ನೂ ಓದಿ:ಟಿವಿ ಶೋಗಳಲ್ಲಿ ನಟಿಸಿದ್ದ ಶಾರುಖ್ ಖಾನ್; ಅವುಗಳು ಯಾವವು?

ಅಲ್ಲದೆ, ಸ್ಟಾರ್ ನಟರ ಸಿನಿಮಾಗಳಲ್ಲಿ ನಟಿಸುವಾಗ, ಅವರು (ಚಿತ್ರ ನಿರ್ಮಾಪಕರು) ನಮ್ಮ ಮೇಲೆ ಏನೋ ಕರುಣೆ ತೋರಿಸುತ್ತಿರುವಂತೆ ವರ್ತಿಸುತ್ತಾರೆ. ಈಗಾಗಲೇ ನಮ್ಮ ಬಳಿ ಸ್ಟಾರ್ ನಟ ಇದ್ದಾನೆ, ನಾಯಕಿ ಅವಶ್ಯಕತೆಯೇ ನಮಗೆ ಇಲ್ಲ, ಆದರೆ ಅವರಿಗೆ (ನಾಯಕಿಯರಿಗೆ) ಅನುಕೂಲ ಆಗುತ್ತದೆ, ಅವರ ವೃತ್ತಿಗೆ ಏಳ್ಗೆ ಸಿಗುತ್ತದೆ ಎಂಬ ಕಾರಣಕ್ಕೆ ಅವರನ್ನು ಹಾಕಿಕೊಳ್ಳುತ್ತಿದ್ದೇವೆ ಆ ಮೂಲಕ ನಾಯಕಿಯರಿಗೆ ಸಹಾಯ ಮಾಡುತ್ತಿದ್ದೇವೆ ಎಂಬ ಧೋರಣೆಯನ್ನು ದೊಡ್ಡ ನಿರ್ಮಾಣ ಸಂಸ್ಥೆಗಳು ತೋರಿಸುತ್ತವೆ ಎಂದಿದ್ದಾರೆ ತಾಪ್ಸಿ ಪನ್ನು.

ತಾಪ್ಸಿ ಪನ್ನು ಹೇಳಿಕೊಂಡಿರುವಂತೆ ಅವರಿಗೆ ಪುರುಷ ಪ್ರಧಾನ ಸಿನಿಮಾಗಳಿಗಿಂತಲೂ ಮಹಿಳಾ ಪ್ರಧಾನ ಸಿನಿಮಾಗಳಲ್ಲಿಯೇ ಹೆಚ್ಚು ಸಂಭಾವನೆ ಸಿಗುತ್ತದೆಯಂತೆ. ‘ಹಸೀನ ದಿಲ್​ರುಬಾ’, ‘ದಖ್-ದಖ್’, ‘ದೊಬಾರ’, ‘ಬ್ಲರ್’, ‘ಶಭಾಶ್ ಮಿಥು’, ‘ರಶ್ಮಿ ರಾಕೆಟ್’, ‘ಮನ್​ಮರ್ಜಿಯಾ’ ಇನ್ನೂ ಹಲವು ಮಹಿಳಾ ಪ್ರಧಾನ ಸಿನಿಮಾಗಳಲ್ಲಿ ನಟಿಸಿದ್ದಾರೆ. ಸದ್ಯಕ್ಕೆ ‘ಖೇಲ್ ಖೇಲ್ ಮೆ’ ಹಾಗೂ ‘ವೋಹ್ ಲಡ್ಕಿ ಹೇ ಕಹಾ’ ಸಿನಿಮಾಗಳಲ್ಲಿ ತಾಪ್ಸಿ ಪನ್ನು ನಟಿಸುತ್ತಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ