‘ಅಪ್ಪು’ ನಿರ್ದೇಶಕ ಪುರಿ ಜಗನ್ನಾಥ್ ಹೊಸ ಚಿತ್ರಕ್ಕೆ ಎಂಟ್ರಿ ಕೊಟ್ಟ ಬಾಲಿವುಡ್ ನಟಿ ತಬು

ಪುರಿ ಜಗನ್ನಾಥ್ ಅವರು ವಿಜಯ್ ಸೇತುಪತಿ ಮತ್ತು ಬಾಲಿವುಡ್ ನಟಿ ತಬು ಅವರೊಂದಿಗೆ ಹೊಸ ಪ್ಯಾನ್ ಇಂಡಿಯಾ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಇದು ಅವರಿಗೆ ದೊಡ್ಡ ಗೆಲುವು ತಂದುಕೊಡುವ ನಿರೀಕ್ಷೆಯಲ್ಲಿದೆ. ಚಿತ್ರದ ಪ್ರೀ-ಪ್ರೊಡಕ್ಷನ್ ಕೆಲಸಗಳು ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ಚಿತ್ರೀಕರಣ ಆರಂಭವಾಗಲಿದೆ. ಈ ಚಿತ್ರದ ಮೂಲಕ ಪುರಿ ಜಗನ್ನಾಥ್ ತಮ್ಮ ನಿರ್ದೇಶನದ ಯಶಸ್ಸನ್ನು ಮರುಪಡೆಯಲು ಪ್ರಯತ್ನಿಸುತ್ತಿದ್ದಾರೆ.

‘ಅಪ್ಪು’ ನಿರ್ದೇಶಕ ಪುರಿ ಜಗನ್ನಾಥ್ ಹೊಸ ಚಿತ್ರಕ್ಕೆ ಎಂಟ್ರಿ ಕೊಟ್ಟ ಬಾಲಿವುಡ್ ನಟಿ ತಬು
‘ಅಪ್ಪು’ ನಿರ್ದೇಶಕನ ಹೊಸ ಚಿತ್ರಕ್ಕೆ ಎಂಟ್ರಿ ಕೊಟ್ಟ ಬಾಲಿವುಡ್ ನಟಿ ತಬು

Updated on: Apr 11, 2025 | 10:07 AM

ನಿರ್ದೇಶಕ ಪುರಿ ಜಗನ್ನಾಥ್ (Puri Jagannadh) ಅವರು ಸಾಲು ಸಾಲು ಸೋಲು ಕಂಡ ಕಂಗೆಟ್ಟಿದ್ದಾರೆ. ಅವರಿಗೆ ಈಗ ಒಂದು ದೊಡ್ಡ ಗೆಲುವಿನ ಅವಶ್ಯಕತೆ ಇದೆ. ಇದಕ್ಕಾಗಿ ಅವರು ಸಾಕಷ್ಟು ಪ್ರಯತ್ನಿಸುತ್ತಿದ್ದಾರೆ. ಈಗ ಪುರಿ ಜಗನ್ನಾಥ್ ಅವರು ವಿಜಯ್ ಸೇತುಪತಿ ಜೊತೆ ಪ್ಯಾನ್ ಇಂಡಿಯಾ ಸಿನಿಮಾ ಮಾಡುತ್ತಿದ್ದಾರೆ. ಈ ಚಿತ್ರದಿಂದ ಅವರು ಗೆಲ್ಲುವ ಕನಸು ಕಾಣುತ್ತಾ ಇದ್ದಾರೆ. ಈ ಚಿತ್ರಕ್ಕೆ ಬಾಲಿವುಡ್ ನಟಿ ತಬು ಅವರು ನಾಯಕಿ ಆಗಿ ಎಂಟ್ರಿ ಕೊಟ್ಟಿದ್ದಾರೆ.

ಪುರಿ ಜಗನ್ನಾಥ್ ಹಾಗೂ ಚಾರ್ಮಿ ಕೌರ್ ಅವರು ‘ಪುರಿ ಕನೆಕ್ಟ್’ ಮೂಲಕ ಹೊಸ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರ ರೆಡಿ ಆಗಲಿದೆ. ಇದಕ್ಕಾಗಿ ದೊಡ್ಡ ಬಜೆಟ್​ನ ಹೂಡಲು ತಂಡ ರೆಡಿ ಆಗಿದೆ. ಬಾಲಿವುಡ್ ಮಂದಿಯನ್ನು ಸೆಳೆದುಕೊಳ್ಳಲು ಚಿತ್ರಕ್ಕೆ ತಬು ಆಯ್ಕೆ ಮಾಡಲಾಗಿದೆ. ತಬು ಜೊತೆ ಪುರಿ ಹಾಗೂ ಚಾರ್ಮಿ ಕುಳಿತಿರೋ ಫೋಟೋ ಗಮನ ಸೆಳೆದಿದೆ.

ಇದನ್ನೂ ಓದಿ
‘ನೀವು ಬಿಡಿ ದುಬಾರಿ ನಟಿ’ ಎಂದವರಿಗೆ ರಶ್ಮಿಕಾ ಮಂದಣ್ಣ ಕೊಟ್ಟ ಉತ್ತರವೇನು?
Agnyathavasi Review: ಕೊಲೆಯ ಮಧ್ಯೆ ‘ಅಜ್ಞಾತದ’ ಕಥೆ; ಬಗೆದಷ್ಟು ವಿಶೇಷತೆ
ದೇಶಭಕ್ತಿ ಸಿನಿಮಾಗೆ ‘ಎ’ ಪ್ರಮಾಣ ಪತ್ರ ನೀಡಿದ ಸೆನ್ಸಾರ್ ಮಂಡಳಿ; ಕಾರಣ ಏನು?
ಕಂಗನಾ ಮನೆಗೆ 1 ಲಕ್ಷ ರೂ. ಕರೆಂಟ್ ಬಿಲ್ ಬಂದಿದ್ದು ನಿಜವೇ? ಕಳ್ಳಾಟ ಬಯಲು

ಪುರಿ ಜಗನ್ನಾಥ್ ತೆಲುಗಿನವರು. ವಿಜಯ್ ಸೇತುಪತಿ ತಮಿಳಿನವರು. ತಬು ಬಾಲಿವುಡ್​ನವರು. ಹೀಗಾಗಿ, ಮೂರು ಭಾಷೆಗಳಲ್ಲಿ ಚಿತ್ರಕ್ಕೆ ದೊಡ್ಡ ಮಾರುಕಟ್ಟೆ ಸೃಷ್ಟಿ ಆಗಲಿದೆ. ಈ ಮೊದಲು ತಬು ‘ಅತ್ತಾರೆಂಟಿಕಿ ದಾರಿದಿ’ ರೀತಿಯ ಸಿನಿಮಾಗಳನ್ನು ಮಾಡಿದ್ದಾರೆ. ಅವರು ಇದೇ ಮೊದಲ ಬಾರಿಗೆ ಪುರಿ ಜಗನ್ನಾಥ್ ಹಾಗೂ ವಿಜಯ್ ಸೇತುಪತಿ ಜೊತೆ ಕೈ ಜೋಡಿಸುತ್ತಿದ್ದಾರೆ. ಅವರು ಕೊನೆಯದಾಗಿ ತೆಲುಗಿನಲ್ಲಿ ಕಾಣಿಸಿಕೊಂಡಿದ್ದು, ‘ಅಲಾ ವೈಕುಂಟಪುರಮುಲೋ’ ಸಿನಿಮಾದಲ್ಲಿ.

ಹಾಗಾದರೆ ಪುರಿ ಜಗನ್ನಾಥ್ ಅವರ ಸಿನಿಮಾ ಸೆಟ್ಟೇರೋದು ಯಾವಾಗ? ಇದಕ್ಕೂ ಉತ್ತರ ಇದೆ. ಸದ್ಯ ತಂಡದವರು ಪ್ರೀ ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇನ್ನು ಕೆಲವೇ ತಿಂಗಳಲ್ಲಿ ಸಿನಿಮಾ ಸೆಟ್ಟೇರಲಿದೆ. ಪಾತ್ರವರ್ಗ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಇನ್ನಷ್ಟೇ ಮಾಹಿತಿ ರಿವೀಲ್ ಆಗಬೇಕಿದೆ.

ಇದನ್ನೂ ಓದಿ: ಸತತ ಸೋಲು, ತಮಿಳು ಹೀರೋ ಕೈಹಿಡಿದ ಪುರಿ ಜಗನ್ನಾಥ್, ಶೈಲಿಯೂ ಬದಲು

ಪುರಿ ಜಗನ್ನಾಥ್ ಅವರು ‘ಅಪ್ಪು’ ರೀತಿಯ ಸಿನಿಮಾಗಳನ್ನು ನೀಡಿದವರು. ಈಗ ಅವರಿಗೆ ನಿರ್ದೇಶನದ ಮೇಲಿನ ಹಿಡಿತ ಹೋಗಿದೆ. ‘ಲೈಗರ್’ ರೀತಿಯ ಚಿತ್ರವನ್ನು ಕೊಟ್ಟು ಅವರ ಚಿತ್ರಕ್ಕೆ ಯಾವುದೇ ನಿರ್ಮಾಪಕರು ಸಿಗದಿರುವ ಪರಿಸ್ಥಿತಿ ನಿರ್ಮಾಣ ಆಗಿದೆ. ಹೀಗಾಗಿ, ತಮ್ಮ ಚಿತ್ರವನ್ನು ತಾವೇ ನಿರ್ಮಾಣ ಮಾಡಿಕೊಳ್ಳುವ ಪರಿಸ್ಥಿತಿ ಅವರಿಗೆ ಒದಗಿ ಬಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:06 am, Fri, 11 April 25

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us