ಬೆಂಗಳೂರಲ್ಲಿ ಜೊತೆಯಾಗಿ ಏನು ಮಾಡ್ತಿದ್ದಾರೆ ತಮನ್ನಾ-ವಿಜಯ್​ ಸೇತುಪತಿ? ಇದು ಸಿನಿಮಾ ಸಮಾಚಾರ ಅಲ್ಲವೇ ಅಲ್ಲ

Tamannaah Bhatia: ತಮನ್ನಾ ಹಂಚಿಕೊಂಡಿರುವ ಫೋಟೋದಲ್ಲಿ ವಿಜಯ್​ ಸೇತುಪತಿ ಅವರ ಲುಕ್​ ಗಮನ ಸೆಳೆಯುತ್ತಿದೆ. ಸಾಲ್ಟ್​ ಆ್ಯಂಡ್​ ಪೆಪ್ಪರ್​ ಹೇರ್​ ಸ್ಪೈಲ್​ನಲ್ಲಿ ಅವರು ಮಿಂಚುತ್ತಿದ್ದಾರೆ.

ಬೆಂಗಳೂರಲ್ಲಿ ಜೊತೆಯಾಗಿ ಏನು ಮಾಡ್ತಿದ್ದಾರೆ ತಮನ್ನಾ-ವಿಜಯ್​ ಸೇತುಪತಿ? ಇದು ಸಿನಿಮಾ ಸಮಾಚಾರ ಅಲ್ಲವೇ ಅಲ್ಲ
ವಿಜಯ್​ ಸೇತುಪತಿ, ತಮನ್ನಾ ಭಾಟಿಯಾ
Follow us
TV9 Web
| Updated By: ಮದನ್​ ಕುಮಾರ್​

Updated on: Jun 28, 2021 | 2:30 PM

ದಕ್ಷಿಣ ಭಾರತದ ಸ್ಟಾರ್​ ಕಲಾವಿದರಾದ ತಮನ್ನಾ ಭಾಟಿಯಾ ಮತ್ತು ವಿಜಯ್​ ಸೇತುಪತಿ ಬಹುಭಾಷೆಯಲ್ಲಿ ಫೇಮಸ್​. ಅವರ ಕೈಯಲ್ಲಿ ಸಿಕ್ಕಾಪಟ್ಟೆ ಆಫರ್​ಗಳಿವೆ. ಹಲವಾರು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಇಷ್ಟೆಲ್ಲ ಬ್ಯುಸಿ ಇರುವಾಗಲೇ ಅವರು ಸಿನಿಮಾ ಹೊರತಾದ ಒಂದು ಕೆಲಸಕ್ಕೆ ಕೈ ಹಾಕಿದ್ದಾರೆ. ಆ ಕೆಲಸದ ಕಾರಣದಿಂದಲೇ ಬೆಂಗಳೂರಿನಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಏನು ಈ ಜೋಡಿಯ ಪ್ಲ್ಯಾನ್? ಅಡುಗೆ ಮಾಡೋದು!

ಹೌದು, ದಕ್ಷಿಣ ಭಾರತದ ಎಲ್ಲ ಭಾಷೆಯ ಕಿರುತೆರೆಯಲ್ಲಿ ಆರಂಭ ಆಗಲಿರುವ ‘ಮಾಸ್ಟರ್​ ಶೆಫ್​’ ಅಡುಗೆ ಕಾರ್ಯಕ್ರಮವನ್ನು ನಡೆಸಿಕೊಡಲು ತಮನ್ನಾ ಭಾಟಿಯಾ ಮತ್ತು ವಿಜಯ್​ ಸೇತುಪತಿ ಒಪ್ಪಿಕೊಂಡಿದ್ದಾರೆ. ತೆಲುಗಿನಲ್ಲಿ ತಮನ್ನಾ ಹಾಗೂ ತಮಿಳಿನಲ್ಲಿ ವಿಜಯ್​ ಸೇತುಪತಿ ಈ ಶೋ ನಿರೂಪಿಸಲಿದ್ದಾರೆ. ಶೀಘ್ರದಲ್ಲೇ ‘ಮಾಸ್ಟರ್​ ಶೆಫ್​’ ಕಾರ್ಯಕ್ರಮ ಪ್ರಸಾರ ಆಗಲಿದ್ದು, ಅದರ ಶೂಟಿಂಗ್​ ಈಗಾಗಲೇ ಶುರುವಾಗಿದೆ.

ಬೆಂಗಳೂರಿನ ಸ್ಟುಡಿಯೋವೊಂದರಲ್ಲಿ ಈ ಕಾರ್ಯಕ್ರಮದ ಪ್ರೋಮೋ ಶೂಟಿಂಗ್​ ನಡೆಯುತ್ತಿದೆ. ಅದಕ್ಕಾಗಿ ತಮನ್ನಾ ಭಾಟಿಯಾ ಮತ್ತು ವಿಜಯ್​ ಸೇತುಪತಿ ಒಟ್ಟಿಗೆ ಆಗಮಿಸಿದ್ದಾರೆ. ಒಂದೇ ಸ್ಥಳದಲ್ಲಿ ಚಿತ್ರೀಕರಣ ನಡೆಯುತ್ತಿದ್ದು, ಇಬ್ಬರೂ ಜೊತೆಯಾಗಿ ಫೋಟೋಗೆ ಪೋಸ್ ನೀಡಿದ್ದಾರೆ. ಆ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಶೇರ್​ ಮಾಡಿಕೊಂಡಿರುವ ತಮನ್ನಾ ಅವರು ಸಂಭ್ರಮಿಸಿದ್ದಾರೆ.

ಅಂದಹಾಗೆ, ತಮನ್ನಾ ಹಂಚಿಕೊಂಡಿರುವ ಫೋಟೋದಲ್ಲಿ ವಿಜಯ್​ ಸೇತುಪತಿ ಅವರ ಲುಕ್​ ಗಮನ ಸೆಳೆಯುತ್ತಿದೆ. ಸಾಲ್ಟ್​ ಆ್ಯಂಡ್​ ಪೆಪ್ಪರ್​ ಹೇರ್​ ಸ್ಪೈಲ್​ನಲ್ಲಿ ಅವರು ಮಿಂಚುತ್ತಿದ್ದಾರೆ. ಈ ಫೋಟೋ ನೋಡಿದ ಬಳಿಕ ಅವರ ಅಭಿಮಾನಿಗಳಲ್ಲಿ ಮಾಸ್ಟರ್​ ಶೆಫ್​ ಕಾರ್ಯಕ್ರಮದ ಬಗ್ಗೆ ಭಾರಿ ನಿರೀಕ್ಷೆ ಸೃಷ್ಟಿ ಆಗಿದೆ. 6.8 ಲಕ್ಷಕ್ಕೂ ಅಧಿಕ ಮಂದಿ ಈ ಫೋಟೋವನ್ನು ಲೈಕ್​ ಮಾಡಿದ್ದಾರೆ. ತಮನ್ನಾ ಇದೇ ಮೊದಲ ಬಾರಿಗೆ ಈ ಶೋ ಮೂಲಕ ಕಿರುತೆರೆಗೆ ಕಾಲಿಡುತ್ತಿದ್ದಾರೆ.

ತಮಿಳು, ತೆಲುಗು ಮಾತ್ರವಲ್ಲದೆ ಕನ್ನಡ ಮತ್ತು ಮಲಯಾಳಂನಲ್ಲಿಯೂ ‘ಮಾಸ್ಟರ್​ ಶೆಫ್​’ ಶೋ ಆರಂಭ ಆಗಲಿದೆ. ಮಲಯಾಳಂನಲ್ಲಿ ಪೃಥ್ವಿರಾಜ್​ ಸುಕುಮಾರನ್​ ಹಾಗೂ ಕನ್ನಡದಲ್ಲಿ ಕಿಚ್ಚ ಸುದೀಪ್​ ಈ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂಬ ಗುಸುಗುಸು ಹರಿದಾಡುತ್ತಿದೆ. ಇನ್ನಷ್ಟೇ ಅಧಿಕೃತ ಸುದ್ದಿ ಹೊರಬೀಳಬೇಕಿದೆ.

ಈ ಹಿಂದೆ ತಮನ್ನಾ ಮತ್ತು ವಿಜಯ್​ ಸೇತುಪತಿ ‘ಧರ್ಮ ದುರೈ’ ಚಿತ್ರದಲ್ಲಿ ಜೊತೆಯಾಗಿ ನಟಿಸಿದ್ದರು. 2016ರಲ್ಲಿ ಬಿಡುಗಡೆ ಆದ ಆ ಚಿತ್ರ ಸೂಪರ್​ ಹಿಟ್​ ಆಗಿತ್ತು. ಆ ಬಳಿಕ ಈಗ ಒಂದೇ ಶೋನಲ್ಲಿ ಜೊತೆಯಾಗಿ ಕೆಲಸ ಮಾಡಲು ಅವರಿಗೆ ಅವಕಾಶ ಸಿಕ್ಕಿದೆ.

ಇದನ್ನೂ ಓದಿ:

ವಿಜಯ್​ ಸೇತುಪತಿ ಮೇಲೆ ಕಣ್ಣಿಟ್ಟ ‘ದಿ ಫ್ಯಾಮಿಲಿ ಮ್ಯಾನ್​’ ತಂಡ; 3ನೇ ಸೀಸನ್​ನಲ್ಲಿ ಬಿಗ್​ ಸರ್ಪ್ರೈಸ್​?​

ಮುಖಕ್ಕೆ ತನ್ನದೇ ಎಂಜಲು ಹಚ್ಚಿಕೊಳ್ಳುವ ತಮನ್ನಾ ಭಾಟಿಯಾ! ವಿಚಿತ್ರ ವರ್ತನೆಗೆ ಕಾರಣ ಏನು?

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ