AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮನ್ನಾ ಭಾಟಿಯಾಗೆ ಇಡಿ ವಿಚಾರಣೆ

ಖ್ಯಾತಿ ನಟಿ ತಮನ್ನಾ ಭಾಟಿಯಾ ಅವರಿಗೆ ಹೊಸ ತಲೆನೋವು ಶುರುವಾಗಿದೆ. ಹೆಚ್​ಪಿಝಡ್ ಆ್ಯಪ್ ಪ್ರಚಾರ ಮಾಡಿದ್ದರಿಂದ ಅವರ ಮೇಲೆ ಇಡಿ ಅಧಿಕಾರಿಗಳು ಕಣ್ಣು ಇಟ್ಟಿದ್ದಾರೆ. ಆ್ಯಪ್​ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಕೇಸ್​ನಲ್ಲಿ ತಮನ್ನಾ ಅವರನ್ನು ಪ್ರಶ್ನಿಸಲಾಗಿದೆ. ಗುಹವಾಟಿಯಲ್ಲಿ ತಮನ್ನಾ ಭಾಟಿಯಾ ಅವರ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲಾಗಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮನ್ನಾ ಭಾಟಿಯಾಗೆ ಇಡಿ ವಿಚಾರಣೆ
ತಮನ್ನಾ ಭಾಟಿಯಾ
ಮದನ್​ ಕುಮಾರ್​
|

Updated on: Oct 17, 2024 | 11:02 PM

Share

ನಟಿ ತಮನ್ನಾ ಭಾಟಿಯಾ ಅವರನ್ನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ತನಿಖೆಗೆ ಒಳಪಡಿಸಿದ್ದಾರೆ. ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಹೆಚ್​ಪಿಝಡ್ ಆ್ಯಪ್ ಹಗರಣದಲ್ಲಿ ತಮನ್ನಾ ಭಾಟಿಯಾ ಅವರ ಹೆಸರು ತಣುಕುಹಾಕಿಕೊಂಡಿದೆ. ಈ ಕೇಸ್​ನಲ್ಲಿ ತಮನ್ನಾ ಅವರನ್ನು ಆರೋಪಿಯಾಗಿ ವಿಚಾರಣೆ ನಡೆಸಿಲ್ಲ. ಬದಲಿಗೆ, ಅವರು ಈ ಆ್ಯಪ್ ಪ್ರಚಾರ ಮಾಡಿದ್ದಕ್ಕಾಗಿ ತನಿಖೆ ಎದುರಿಸುವಂತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಜಾರಿಯಲ್ಲಿದೆ. ತನಿಖಾಧಿಕಾರಿಗಳ ಮುಂದೆ ಹಾಜರಾಗಲು ತಮನ್ನಾ ಭಾಟಿಯಾ ಅವರು ತಾಯಿಯ ಜೊತೆ ಗುಹವಾಟಿಗೆ ಬಂದಿದ್ದಾರೆ.

ತಮನ್ನಾ ಭಾಟಿಯಾ ಅವರು ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಿದ್ದು ಇದೇ ಮೊದಲೇನೂ ಅಲ್ಲ. ಈ ಮೊದಲು ಮಹದೇವ್ ಬೆಟ್ಟಿಂಗ್ ಆ್ಯಪ್​ಗೆ ಸಂಬಂಧಿಸಿದಂತೆ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಏಪ್ರಿಲ್ ತಿಂಗಳಲ್ಲಿ ಅವರು ವಿಚಾರಣೆ ಎದುರಿಸಿದ್ದರು. ಈಗ ಅವರು ಹೆಚ್​ಪಿಝಡ್ ಆ್ಯಪ್ ಹಗರಣದಲ್ಲಿ ಕಾನೂನಿನ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಇದನ್ನೂ ಓದಿ:  ‘ಸುಳ್ಳು ಹೇಳುವವರ ಜೊತೆ ಜೀವನ ಮಾಡಲು ಸಾಧ್ಯವಿಲ್ಲ’; ತಮನ್ನಾಗೆ ಏನಾಯ್ತು?

ಹೆಚ್​ಪಿಝಡ್ ಆ್ಯಪ್ ಮೂಲಕ ದೊಡ್ಡ ಹಗರಣ ನಡೆದಿದೆ. ಪ್ರತಿ ದಿನ 4 ಸಾವಿರ ರೂಪಾಯಿ ಲಾಭ ನೀಡುವುದಾಗಿ ನಂಬಿಸಿ ಪ್ರತಿಯೊಬ್ಬರಿಂದ 57 ಸಾವಿರ ರೂಪಾಯಿ ಪಡೆದುಕೊಂಡು ವಂಚಿಸಲಾಗಿದೆ. ನಕಲಿ ಬ್ಯಾಂಕ್ ಖಾತೆಗಳನ್ನು ಬಳಸಿ ಅಕ್ರಮ ಹಣ ವರ್ಗಾವಣೆ ಮಾಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಅಂದಾಜು 497.20 ಕೋಟಿ ರೂಪಾಯಿ ಮೌಲ್ಯದ ಆಸ್ತಿ ವಶಕ್ಕೆ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಸಂಭಾವನೆ ಹೆಚ್ಚಿಸಿಕೊಂಡ ತಮನ್ನಾ ಭಾಟಿ, ಒಂದು ಹಾಡಿಗೆ ಎಷ್ಟು?

ಕೋಟ್ಯಂತರ ರೂಪಾಯಿ ಹಗರಣಕ್ಕೆ ಕಾರಣ ಆಗಿರುವ ಹೆಚ್​ಪಿಝಡ್ ಆ್ಯಪ್​ಗೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ತಮನ್ನಾ ಭಾಟಿಯಾ ಅವರು ಭಾಗಿ ಆಗಿದ್ದರು. ಅದಕ್ಕಾಗಿ ಸಂಭಾವನೆ ರೂಪದಲ್ಲಿ ತಮನ್ನಾ ಅವರಿಗೆ ಹಣ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಇಡಿ ತನಿಖೆಯ ತಲೆ ನೋವು ಶುರುವಾಗಿದೆ. ಒಂದು ವೇಳೆ ತಮನ್ನಾ ಅವರು ತಪ್ಪು ಮಾಡಿದರೆ ಸಾಬೀತಾದರೆ ಶಿಕ್ಷೆ ಎದುರಿಸಬೇಕಾಗುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು