AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಚಿತ್ರರಂಗದ ಬಗ್ಗೆ ಅಸಮಾಧಾನ ಹೊರಹಾಕಿದ ತಮನ್ನಾ ಭಾಟಿಯಾ?

ತಮನ್ನಾ ಭಾಟಿಯಾ ದಕ್ಷಿಣ ಮತ್ತು ಬಾಲಿವುಡ್ ಚಿತ್ರರಂಗದಲ್ಲಿ ಮಹಿಳಾ ಕಲಾವಿದರ ಪಾತ್ರಗಳನ್ನು ವಿಶ್ಲೇಷಿಸಿದ್ದಾರೆ. ಬಾಲಿವುಡ್ ಹೆಚ್ಚಿನ ಅವಕಾಶ ನೀಡಿದರೆ, ದಕ್ಷಿಣದಲ್ಲಿ ಪಿತೃಪ್ರಧಾನ ಮನಸ್ಥಿತಿ ಮತ್ತು ಐಟಂ ಸಾಂಗ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಹಿಳಾ ಕಲಾವಿದರ ಕಷ್ಟ ಮತ್ತು ಕೊಡುಗೆಯನ್ನು ಪರಿಗಣಿಸದೆ, ಗೌರವಯುತವಾಗಿ ನೋಡದಿರುವುದು ಬೇಸರ ತಂದಿದೆ ಎಂದು ತಮನ್ನಾ ಧ್ವನಿ ಎತ್ತಿದ್ದಾರೆ.

ದಕ್ಷಿಣ ಚಿತ್ರರಂಗದ ಬಗ್ಗೆ ಅಸಮಾಧಾನ ಹೊರಹಾಕಿದ ತಮನ್ನಾ ಭಾಟಿಯಾ?
ತಮನ್ನಾ
ರಾಜೇಶ್ ದುಗ್ಗುಮನೆ
|

Updated on:Jun 24, 2026 | 7:31 AM

Share

ಖ್ಯಾತ ನಟಿ ತಮನ್ನಾ ಭಾಟಿಯಾ ಅವರು (Tamannah Bhatia) ಬಾಲಿವುಡ್ ಹಾಗೂ ದಕ್ಷಿಣ ಭಾರತ ಎರಡರಲ್ಲೂ ಕೆಲಸ ಮಾಡಿದ್ದಾರೆ. ಎರಡೂ ಕಡೆಗಳಲ್ಲಿ ಅವರಿಗೆ ಸಾಕಷ್ಟು ಅನುಭವ ಇದೆ. ಅವರು ಈಗ ಚಲನಚಿತ್ರ ರಂಗಗಳ ನಡುವಿನ ವ್ಯತ್ಯಾಸಗಳು ಮತ್ತು ಸಿನಿಮಾ ರಂಗದಲ್ಲಿ ಮಹಿಳೆಯರು ಎದುರಿಸುತ್ತಿರುವ ಸವಾಲುಗಳ ಕುರಿತು ಮುಕ್ತವಾಗಿ ಮಾತನಾಡಿದ್ದಾರೆ. ತಮ್ಮ ಸುದೀರ್ಘ ಸಿನಿ ಪಯಣದ ಅನುಭವಗಳನ್ನು ಹಂಚಿಕೊಂಡಿರುವ ಅವರು, ದಕ್ಷಿಣ ಚಿತ್ರರಂಗದ ಕೆಲವು ಕಹಿ ಸತ್ಯಗಳನ್ನು ಬಿಚ್ಚಿಟ್ಟಿದ್ದಾರೆ. ಇದರಿಂದ ಅವರಿಗೆ ದಕ್ಷಿಣದ ಬಗ್ಗೆ ಬೇಸರ ಇದೆಯೇ ಎನ್ನುವ ಪ್ರಶ್ನೆ ಮೂಡುತ್ತದೆ.

  • ತಮನ್ನಾ ಭಾಟಿಯಾಗೆ  ಇದೆ ಬೇಸರ
  • ದಕ್ಷಿಣ ಭಾರತದ ಬಗ್ಗೆ ಅಸಮಾಧಾನ
  • ನೇರವಾಗಿಯೇ ಅಸಮಾಧಾನ ಹೊರಹಹಾಕಿದ ನಟಿ

ಹಿಂದಿ, ತಮಿಳು ಹಾಗೂ ತೆಲುಗು ಚಿತ್ರರಂಗದಲ್ಲಿ ದಶಕಗಳಿಗೂ ಹೆಚ್ಚು ಕಾಲ ಸಕ್ರಿಯರಾಗಿರುವ ತಮನ್ನಾ, ಮಹಿಳಾ ಕಲಾವಿದರನ್ನು ಚಿತ್ರರಂಗದಲ್ಲಿ ಬಿಂಬಿಸುವ ಮತ್ತು ನೋಡುವ ವಿಧಾನದ ಬಗ್ಗೆ ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನವನ್ನು ಹಂಚಿಕೊಂಡಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿದ ತಮನ್ನಾ, ‘ಬಾಲಿವುಡ್ ಚಿತ್ರರಂಗವು ಮಹಿಳಾ ಕಲಾವಿದರಿಗೆ ವಿಭಿನ್ನ ರೀತಿಯ ಪಾತ್ರಗಳನ್ನು ಮಾಡಲು ಮುಕ್ತ ಅವಕಾಶ ನೀಡುತ್ತದೆ. ಇಲ್ಲಿ ಕೆಲವು ನಟಿಯರು ಕೇವಲ ನಟನೆಗೆ ಪ್ರಾಮುಖ್ಯತೆ ಇರುವ ಪಾತ್ರಗಳಿಗೆ ಸೀಮಿತವಾದರೆ, ಇನ್ನೂ ಕೆಲವರು ಗ್ಲಾಮರ್ ಮತ್ತು ನಟನೆಯನ್ನು ಸಮನಾಗಿ ನಿಭಾಯಿಸಿಕೊಂಡು ಯಶಸ್ವಿಯಾಗಿದ್ದಾರೆ’ ಎಂದಿದ್ದಾರೆ.

ಆದರೆ, ದಕ್ಷಿಣ ಭಾರತದ ಚಿತ್ರರಂಗದ ಪರಿಸ್ಥಿತಿ ಭಿನ್ನವಾಗಿದೆ ಎಂದಿರುವ ಅವರು, ‘ದಕ್ಷಿಣ ಚಿತ್ರರಂಗದಲ್ಲಿ ಇಂದಿಗೂ ಪಿತೃಪ್ರಧಾನ ಮನಸ್ಥಿತಿ ಹೆಚ್ಚಾಗಿದೆ. ಇಲ್ಲಿ ಮಹಿಳಾ ನಟಿಯರನ್ನು ನೋಡುವ ದೃಷ್ಟಿಕೋನ ಕೆಲವೊಮ್ಮೆ ಗೌರವಯುತವಾಗಿ ಇರುವುದಿಲ್ಲ, ಅದು ಕಲಾವಿದರಿಗೆ ಮುಜುಗರ ಉಂಟುಮಾಡುತ್ತದೆ. ಈ ಐಟಂ ಸಾಂಗ್ ಎನ್ನುವ ಪದವು ಮಹಿಳಾ ನಟಿಯರನ್ನು ಕೇವಲ ಒಂದು ವಸ್ತುವಿನಂತೆ ಬಿಂಬಿಸುತ್ತದೆಯೇ ಹೊರತು, ಒಬ್ಬ ಕಲಾವಿದೆಯಾಗಿ ಅವರ ಕಷ್ಟ ಮತ್ತು ಕೊಡುಗೆಯನ್ನು ಪರಿಗಣಿಸುವುದಿಲ್ಲ. ಇಂತಹ ನೃತ್ಯಗಳನ್ನು ನಾನು ಯಾವಾಗಲೂ ನನ್ನ ಸ್ವಂತ ಇಷ್ಟ ಮತ್ತು ಷರತ್ತುಗಳ ಮೇಲೆಯೇ ಆಯ್ಕೆ ಮಾಡಿಕೊಂಡಿದ್ದೇನೆ. ಇವುಗಳನ್ನು ಕೇವಲ ಮನರಂಜನಾತ್ಮಕ ಪ್ರದರ್ಶನ ಎಂದು ನೋಡಬೇಕೇ ಹೊರತು, ಮಹಿಳೆಯರ ಗೌರವವನ್ನು ಕುಗ್ಗಿಸುವ ಲೇಬಲ್ ಬಳಸಬಾರದು’ ಎಂದಿದ್ದಾರೆ ತಮನ್ನಾ.

ಇದನ್ನೂ ಓದಿ: ಚಿತ್ರರಂಗಕ್ಕೆ ಬಂದು 21 ವರ್ಷ, ಈಗಲೂ ಎಷ್ಟು ಬ್ಯುಸಿ ಗೊತ್ತ ತಮನ್ನಾ

ಸದ್ಯ ಭಾರತೀಯ ಚಿತ್ರರಂಗದಲ್ಲಿ ಮಹಿಳೆಯರ ಸುರಕ್ಷತೆ ಮತ್ತು ಲಿಂಗ ತಾರತಮ್ಯದ ಬಗ್ಗೆ ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಈ ಬೆನ್ನಲ್ಲೇ ತಮನ್ನಾ ಭಾಟಿಯಾ ಅವರು ದಕ್ಷಿಣ ಚಿತ್ರರಂಗದ ಒಳಗಿನ ಪರಿಸ್ಥಿತಿಯ ಬಗ್ಗೆ ಮುಕ್ತವಾಗಿ ಧ್ವನಿ ಎತ್ತಿರುವುದು ಚಿತ್ರರಂಗದಲ್ಲಿ ಸಂಚಲನ ಮೂಡಿಸಿದೆ.ದಕ್ಷಿಣ ಭಾರತದ ಕೆಲಸದ ರೀತಿ ಬಗ್ಗೆ ಅವರಿಗೆ ಅಸಮಾಧಾನ ಇರೋದು ಸ್ಪಷ್ಟವಾವಾಗಿ ಕಾಣಿಸುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:02 am, Wed, 24 June 26

Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು