AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳು ಸಿನಿಮಾ ನಿರ್ಮಾಪಕರ ಸಂಘದಿಂದ ಫಿಲಂ ಚೇಂಬರ್​ಗೆ ಪತ್ರ

Kamal Haasan: ಕಮಲ್ ಹಾಸನ್ ನಟನೆಯ ‘ಥಗ್ ಲೈಫ್’ ಸಿನಿಮಾ ಅನ್ನು ಕರ್ನಾಟಕದಲ್ಲಿ ಬಿಡುಗಡೆ ಮಾಡಲು ತೀವ್ರ ವಿರೋಧ ವ್ಯಕ್ತವಾಗಿದೆ. ಕಮಲ್ ಹಾಸನ್ ಈ ಕುರಿತಾಗಿ ಈಗಾಗಲೇ ಫಿಲಂ ಚೇಂಬರ್​ಗೆ ಪತ್ರ ಬರೆದಿದ್ದಾರೆ. ಇದೀಗ ತಮಿಳು ಚಿತ್ರರಂಗದ ಸಕ್ರಿಯ ನಿರ್ಮಾಪಕರ ಸಂಘ, ಫಿಲಂ ಚೇಂಬರ್​ಗೆ ಪತ್ರ ಬರೆದಿದೆ.

ತಮಿಳು ಸಿನಿಮಾ ನಿರ್ಮಾಪಕರ ಸಂಘದಿಂದ ಫಿಲಂ ಚೇಂಬರ್​ಗೆ ಪತ್ರ
Kamal Haasan
ಮಂಜುನಾಥ ಸಿ.
|

Updated on: Jun 04, 2025 | 1:30 PM

Share

ಕಮಲ್ ಹಾಸನ್ ಅವರು ಕನ್ನಡ ಭಾಷೆಯ ಉಗಮದ ಬಗ್ಗೆ ನೀಡಿರುವ ಹೇಳಿಕೆ ವಿವಾದ ಎಬ್ಬಿಸಿದ್ದು, ಇದರಿಂದಾಗಿ ಅವರ ನಟನೆಯ ‘ಥಗ್ ಲೈಫ್’ ಸಿನಿಮಾ ಸಂಕಷ್ಟಕ್ಕೆ ಸಿಲುಕಿದೆ. ಕಮಲ್ ಹಾಸನ್ ಕ್ಷಮೆ ಕೇಳದ ಹೊರತು ‘ಥಗ್ ಲೈಫ್’ ಸಿನಿಮಾ ಬಿಡುಗಡೆ ಮಾಡುವುದಿಲ್ಲ ಎಂದು ಕನ್ನಡಪರ ಸಂಘಟನೆಗಳು ಪಟ್ಟು ಹಿಡಿದಿವೆ. ಸ್ವತಃ ಕಮಲ್ ಹಾಸನ್, ಫಿಲಂ ಚೇಂಬರ್​ಗೆ ಈಗಾಗಲೇ ಪತ್ರ ಬರೆದಿದ್ದಾರೆ. ಆದರೆ ಅದರಿಂದ ಯಾವುದೇ ಉಪಯೋಗವಾಗಿಲ್ಲ. ಇದೀಗ ತಮಿಳು ಸಿನಿಮಾ ನಿರ್ಮಾಪಕರ ಸಂಘ, ಫಿಲಂ ಚೇಂಬರ್​ಗೆ ಪತ್ರ ಬರೆದಿದ್ದಾರೆ.

ಕಮಲ್ ಹಾಸನ್ ಅವರ ಹೇಳಿಕೆ ಹಾಗೂ ಅದರ ಬೆನ್ನಲ್ಲೆ ‘ಥಗ್ ಲೈಫ್’ ಸಿನಿಮಾದ ಬಿಡುಗಡೆ ಮೇಲೆ ಹೇರಲಾಗಿರುವ ನಿಷೇಧದ ಕುರಿತು ಪತ್ರದಲ್ಲಿ ಉಲ್ಲೇಖಿಸಲಾಗಿದ್ದು, ‘ಥಗ್ ಲೈಫ್’ ಸಿನಿಮಾದ ಬಿಡುಗಡೆಗೆ ಅವಕಾಶ ಮಾಡಿಕೊಡಬೇಕು ಎಂದು ನಿರ್ಮಾಪಕರ ಸಂಘ ಪತ್ರದಲ್ಲಿ ಮನವಿ ಮಾಡಿದೆ. ‘ಕಮಲ್ ಹಾಸನ್ ಅವರ ಹೇಳಿಕೆ ಪ್ರೀತಿಯಿಂದ ಆಡಿದ ಮಾತಾಗಿತ್ತು, ಕನ್ನಡ ಭಾಷೆಯ ಗೌರವವನ್ನು ಕಡಿಮೆ ಮಾಡುವುದು ಅವರ ಉದ್ದೇಶ ಆಗಿರಲಿಲ್ಲ’ ಎಂದು ಪತ್ರದಲ್ಲಿ ಹೇಳಲಾಗಿದೆ.

ತಮಿಳು ಹಾಗೂ ಕನ್ನಡ ಸಿನಿಮಾ ರಂಗಗಳ ನಡುವೆ ಒಳ್ಳೆಯ ಬಾಂಧವ್ಯ ಇದೆ. ಸುದೀಪ್, ಶಿವರಾಜ್ ಕುಮಾರ್, ಕಿಶೋರ್, ದುನಿಯಾ ವಿಜಯ್, ಅಚ್ಯುತ್ ಕುಮಾರ್ ಇನ್ನೂ ಹಲವು ಕನ್ನಡದ ನಟರು ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ. ಯಾವುದೇ ಕಠಿಣವಾದ ನಿರ್ಧಾರವು ಎರಡು ಚಿತ್ರರಂಗಗಳ ನಡುವೆ ಇರುವ ಬಾಂಧವ್ಯವನ್ನು ಹಾಳು ಮಾಡಲಿದೆ. ಬಾಂಧವ್ಯ ಹಾಳು ಮಾಡುವ ಯಾವುದೇ ಸಂದರ್ಭಗಳನ್ನು ನಿವಾರಿಸಿ, ‘ಥಗ್ ಲೈಫ್’ ಸಿನಿಮಾದ ಬಿಡುಗಡೆಗೆ ಅವಕಾಶ ಮಾಡಿಕೊಡಬೇಕು’ ಎಂದು ಸಕ್ರಿಯ ತಮಿಳು ಸಿನಿಮಾ ನಿರ್ಮಾಪಕರ ಸಂಘ ಹೇಳಿದೆ.

ಇದನ್ನೂ ಓದಿ:ಕಮಲ್ ಹಾಸನ್ ಮುಂದಿನ ವಿಚಾರಣೆ ಯಾವಾಗ? ಅಲ್ಲಿಯವರೆಗೆ ‘ಥಗ್ ಲೈಫ್’ ಚಿತ್ರದ ಗತಿ ಏನು?

ಪತ್ರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ನೆರೆಯ ರಾಜ್ಯಗಳ ಬಗ್ಗೆ ನೀಡಿರುವ ಹೇಳಿಕೆ ಹಾಗೂ ಇತ್ತೀಚೆಗೆ ಬೂಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ ಅವರು ಕನ್ನಡದ ಭಾಷಾ ಸಹಿಷ್ಣುತೆಯ ಬಗ್ಗೆ ನೀಡಿರುವ ಹೇಳಿಕೆಯನ್ನು ಪ್ರಸ್ತಾಪಿಸಿದ್ದು, ಕನ್ನಡಿಗರು ಸಹಿಷ್ಣುಗಳು, ಕಮಲ್ ಹಾಸನ್ ಸಹ ಕನ್ನಡ ಭಾಷೆಯ ಬಗ್ಗೆ ಅಪಾರ ಗೌರವ ಹೊಂದಿದ್ದಾರೆ. ಅವರು ಗೌರವದಿಂದಲೇ ಹೇಳಿರುವ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ’ ಎಂದಿದ್ದಾರೆ.

ಕನ್ನಡ ಭಾಷೆಯು ತಮಿಳು ಭಾಷೆಯಿಂದ ಹುಟ್ಟಿದೆ ಎಂದು ಕಮಲ್ ಹಾಸನ್ ಹೇಳಿದ್ದರು. ಇದು ವಿವಾದ ಎಬ್ಬಿಸಿದೆ. ಕಮಲ್ ನಟಿಸಿ, ಸಹ ನಿರ್ಮಾಣ ಮಾಡಿರುವ ‘ಥಗ್ ಲೈಫ್’ ಸಿನಿಮಾ ಅನ್ನು ಬಿಡುಗಡೆ ಮಾಡದಿರಲು ಕನ್ನಡಪರ ಸಂಘಟನೆಗಳು ಒತ್ತಾಯಿಸಿವೆ. ಫಿಲಂ ಚೇಂಬರ್ ಸಹ ಅವರಿಗೆ ಬೆಂಬಲ ಘೋಷಿಸಿದೆ. ಕಮಲ್ ಹಾಸನ್ ಇದೀಗ ರಾಜ್ಯ ಹೈಕೋರ್ಟ್ ಮೊರೆ ಹೋಗಿದ್ದು, ಅಲ್ಲಿಯೂ ಸಹ ಕಮಲ್ ಪರ ವಕೀಲರು, ನಿರ್ಮಾಪಕರು ಈಗ ಕರ್ನಾಟಕದಲ್ಲಿ ‘ಥಗ್ ಲೈಫ್’ ಸಿನಿಮಾ ಬಿಡುಗಡೆ ಮಾಡುವುದಿಲ್ಲ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ