AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 8 ತಿಂಗಳಲ್ಲಿ 42 ಕೆಜಿ ತೂಕ ಕಡಿಮೆ ಮಾಡಿಕೊಂಡ ನಟ ಅಜಿತ್ ಕುಮಾರ್

ಈ ಮೊದಲು ಅಜಿತ್ ಕುಮಾರ್ ಅವರು ಬಹಳ ದಪ್ಪ ಇದ್ದರು. ಆದರೆ ಈಗ ಬದಲಾಗಿದ್ದಾರೆ. ಕೆಲವೇ ತಿಂಗಳುಗಳಲ್ಲಿ ಅವರು ಬರೋಬ್ಬರಿ 42 ಕೆಜಿ ಸ್ಲಿಮ್ ಆಗಿದ್ದಾರೆ. ಫಿಟ್ನೆಸ್ ಬಗ್ಗೆ ಕಾಳಜಿ ವಹಿಸಿದ್ದಾರೆ. ಸಿನಿಮಾ, ರೇಸಿಂಗ್ ಜೊತೆಗೆ ಅವರು ಫಿಟ್ನೆಸ್​ ಅನ್ನು ಕೂಡ ಬಹಳ ಗಂಭೀರವಾಗಿ ಪರಿಗಣಿಸಿದ್ದಾರೆ. ಅವರ ಜೀವನ ಶೈಲಿ ಬದಲಾಗಿದೆ.

ಕೇವಲ 8 ತಿಂಗಳಲ್ಲಿ 42 ಕೆಜಿ ತೂಕ ಕಡಿಮೆ ಮಾಡಿಕೊಂಡ ನಟ ಅಜಿತ್ ಕುಮಾರ್
Ajith Kumar
ಮದನ್​ ಕುಮಾರ್​
|

Updated on: May 16, 2025 | 8:47 PM

Share

ಖ್ಯಾತ ನಟ ಅಜಿತ್ ಕುಮಾರ್ (Ajith Kumar) ಅವರನ್ನು ನೋಡಿ ಅಭಿಮಾನಿಗಳಿಗೆ ಅಚ್ಚರಿ ಆಗುತ್ತಿದೆ. ಕೆಲವೇ ತಿಂಗಳಲ್ಲಿ ಅವರು ಆ ಪರಿ ಬದಲಾಗಿದ್ದಾರೆ. ಅಗತ್ಯಕ್ಕಿಂತಲೂ ಅಧಿಕ ತೂಕ ಹೊಂದಿದ್ದ ಅವರು ಬಹಳ ಶಿಸ್ತಿನ ಜೀವನ ನಡೆಸುವ ಮೂಲಕ ಸ್ಲಿಮ್ ಆಗಿದ್ದಾರೆ. ಅಚ್ಚರಿ ಏನೆಂದರೆ, ಕೇವಲ 8 ತಿಂಗಳುಗಳಲ್ಲಿ ಬರೋಬ್ಬರಿ 42 ಕೆಜಿ ದೇಹದ ತೂಕ ಕಡಿಮೆ (Weight Loss) ಮಾಡಿಕೊಂಡಿದ್ದಾರೆ. ಇಷ್ಟು ಕಡಿಮೆ ಅವಧಿಯಲ್ಲಿ 42 ಕೆಜಿ ಕಡಿಮೆ ಆಗುವುದು ಎಂದರೆ ತಮಾಷೆಯ ಮಾತಲ್ಲ. ಈ ಮೂಲಕ ಅಜಿತ್ ಕುಮಾರ್ ಅವರು ಅಭಿಮಾನಿಗಳಿಗೂ ಸ್ಫೂರ್ತಿ ತುಂಬಿದ್ದಾರೆ.

ಈ ಮೊದಲು ಅಜಿತ್ ಕುಮಾರ್ ಅವರು ಫಿಟ್ನೆಸ್ ಬಗ್ಗೆ ಹೆಚ್ಚು ಗಮನ ನೀಡುತ್ತಿರಲಿಲ್ಲ. ವರ್ಷದಿಂದ ವರ್ಷಕ್ಕೆ ಅವರ ದೇಹದ ತೂಕ ಹೆಚ್ಚುತ್ತಲೇ ಇತ್ತು. ಅಭಿಮಾನಿಗಳು ಕೂಡ ಈ ಬಗ್ಗೆ ಟೀಕೆ ಮಾಡಿದ್ದರು. ಅಜಿತ್ ಅವರು ಫಿಟ್ನೆಸ್ ಮತ್ತು ಸಿನಿಮಾ ಬಗ್ಗೆ ಹೆಚ್ಚು ಗಮನ ಹರಿಸಬೇಕು ಎಂದು ಫ್ಯಾನ್ಸ್ ಸಲಹೆ ನೀಡಿದ್ದರು. ಈಗ ಅಜಿತ್ ಸೂಪರ್ ಫಿಟ್ ಆಗಿದ್ದಾರೆ.

ಅಜಿತ್ ಅವರಿಗೆ 42 ಕೆಜಿ ದೇಹದ ತೂಕ ಕಡಿಮೆ ಮಾಡಿಕೊಳ್ಳುವ ಪ್ರಕ್ರಿಯೆ ಸುಲಭವಾಗಿ ಇರಲಿಲ್ಲ. ಅದಕ್ಕಾಗಿ ಅವರು ಸಾಕಷ್ಟು ಬದ್ಧತೆ ತೋರಿಸಿದ್ದಾರೆ. ಕಳೆದ ವರ್​ಷ ಆಗಸ್ಟ್ ತಿಂಗಳಿಂದ ಅವರು ಡಯೆಟ್ ಮತ್ತು ವ್ಯಾಯಾಮ ಶುರು ಮಾಡಿದರು. ಬಹಳ ಮುಖ್ಯವಾಗಿ, ಅಜಿತ್ ಅವರು ಮದ್ಯಪಾನ ತ್ಯಜಿಸಿದ್ದಾರೆ. ಅಲ್ಲದೇ ಮಾಂಸಾಹಾರ ಕೂಡ ನಿಲ್ಲಿಸಿದ್ದಾರೆ. ಅದರ ಫಲವಾಗಿ ಅವರು ದಿನದಿಂದ ದಿನಕ್ಕೆ ದೇಹದ ತೂಕ ಕಡಿಮೆ ಮಾಡಿಕೊಳ್ಳುತ್ತ ಬಂದರು.

ಇದನ್ನೂ ಓದಿ
Image
ಅಜಿತ್ ಕಾರು ಮತ್ತೊಮ್ಮೆ ಪಲ್ಟಿ, ತಿಂಗಳಲ್ಲಿ ಎರಡನೇ ಅಪಘಾತ
Image
ವಿದಾಮುಯರ್ಚಿ: ಚಿತ್ರಮಂದಿರದ ಒಳಗೆ ಪಟಾಕಿ ಸಿಡಿಸಿದ ಅಜಿತ್ ಕುಮಾರ್ ಫ್ಯಾನ್ಸ್
Image
ನಟನಾಗುವುದಕ್ಕೂ ಮೊದಲು ಗ್ಯಾರೆಜ್​ನಲ್ಲಿ ಕೆಲಸ ಮಾಡಿದ್ದ ಅಜಿತ್
Image
180 ಕಿಮೀ ವೇಗದಲ್ಲಿ ಅಜಿತ್ ಕಾರು ಅಪಘಾತ; ವಿಡಿಯೋ ವೈರಲ್

‘ತುಂಬ ಫಿಟ್ ಆಗಿರಲು ಬೇಕಾದ ಎಲ್ಲ ಕ್ರಮಗಳನ್ನು ನಾನು ಕೈಗೊಳ್ಳುತ್ತಿದ್ದೇನೆ. ರೇಸಿಂಗ್​ನಲ್ಲಿ ಇದು ಬಹಳ ಮುಖ್ಯ. ರೇಸಿಂಗ್​ಗಾಗಿ ನಾನು ಪೂರ್ತಿ ಶ್ರಮ ಹಾಕಬೇಕು. ಅದನ್ನೇ ನಾನೀಗ ಮಾಡುತ್ತಿದ್ದೇನೆ’ ಎಂದು ಮಾಧ್ಯಮವೊಂದಕ್ಕೆ ಅಜಿತ್ ಕುಮಾರ್ ಅವರು ಹೇಳಿದ್ದಾರೆ. ಇತ್ತೀಚೆಗೆ ಅಜಿತ್ ಅವರು ಸಿನಿಮಾಗಿಂತಲೂ ರೇಸಿಂಗ್ ಕಡೆಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ.

ಇದನ್ನೂ ಓದಿ: ಆಸ್ಪತ್ರೆಗೆ ದಾಖಲಾದ ಅಜಿತ್ ಕುಮಾರ್; ಈ ಪರಿಸ್ಥಿತಿ ಬರಲು ಅಭಿಮಾನಿಗಳೇ ಕಾರಣ

ಅಜಿತ್ ಕುಮಾರ್ ಅವರಿಗೆ ಇತ್ತೀಚೆಗೆ ಪದ್ಮ ಭೂಷಣ ಪ್ರಶಸ್ತಿ ನೀಡಲಾಯಿತು. ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದ ಅವರು ಬಹಳ ಸ್ಲಿಮ್ ಆಗಿ ಕಾಣುತ್ತಿದ್ದರು. ಅವರ ಹಳೇ ಫೋಟೋ ಜೊತೆ ಹೊಸ ಫೋಟೋವನ್ನು ಇಟ್ಟು ನೋಡಿದರೆ ಎಷ್ಟು ಬದಲಾಗಿದ್ದಾರೆ ಎಂಬುದು ಸ್ಪಷ್ಟವಾಗಿ ಕಾಣುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್