AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖ್ಯಾತ ನಟ ಕಾರ್ತಿ ಮೇಲೆ ಸೈಬರ್ ಕಳ್ಳರ ಕಣ್ಣು; ಬೇಸರ ತೋಡಿಕೊಂಡ ಹೀರೋ

ಕಾರ್ತಿ ಅವರ ಫೇಸ್​ಬುಕ್ ಖಾತೆಯಿಂದ ಲೈವ್ ಬರಲಾಗಿದೆ. ಇದು ಕಾರ್ತಿ ಅಲ್ಲ ಎಂಬುದು ಅಭಿಮಾನಿಗಳಿಗೆ ಗೊತ್ತಾಗಿದೆ. ಆನ್​ಲೈನ್ ಗೇಮ್​ ಒಂದನ್ನು ಲೈವ್ ಮಾಡಲಾಗಿದೆ.

ಖ್ಯಾತ ನಟ ಕಾರ್ತಿ ಮೇಲೆ ಸೈಬರ್ ಕಳ್ಳರ ಕಣ್ಣು; ಬೇಸರ ತೋಡಿಕೊಂಡ ಹೀರೋ
ಕಾರ್ತಿ
TV9 Web
| Edited By: |

Updated on: Nov 14, 2022 | 2:34 PM

Share

ಇತ್ತೀಚೆಗೆ ಸೈಬರ್ ಅಪರಾಧಗಳ (Cyber Crime) ಸಂಖ್ಯೆ ಹೆಚ್ಚುತ್ತಿದೆ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳ ವರೆಗೆ ಎಲ್ಲರೂ ಸೈಬರ್ ಕ್ರೈಮ್​ನ ಸಂತ್ರಸ್ತರಾಗುತ್ತಿದ್ದಾರೆ. ಈಗ ತಮಿಳಿನ ಖ್ಯಾತ ನಟ ಕಾರ್ತಿ (Karthi) ಅವರ ಮೇಲೆ ಸೈಬರ್ ಕಳ್ಳರು ಕಣ್ಣು ಹಾಕಿದ್ದಾರೆ. ಇದರಿಂದ ಅವರಿಗೆ ತೊಂದರೆ ಆಗಿದೆ. ಸೋಶಿಯಲ್ ಮೀಡಿಯಾ ಖಾತೆಗೆ ಕನ್ನ ಹಾಕಿರುವ ವಿಚಾರದ ಬಗ್ಗೆ ಕಾರ್ತಿ ಮಾಹಿತಿ ನೀಡಿದ್ದಾರೆ. ಸದ್ಯ ಕಾರ್ತಿ ಅವರ ಟೀಂ ಫೇಸ್​​ಬುಕ್ ಖಾತೆಯನ್ನು ಮರಳಿ ಪಡೆಯಲು ಪ್ರಯತ್ನಿಸುತ್ತಿದೆ.

ಕಾರ್ತಿ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ತಮ್ಮ ಸಿನಿಮಾಗಳ ಬಗ್ಗೆ ಅಪ್​ಡೇಟ್​ ನೀಡಲು ಫೇಸ್​ಬುಕ್​, ಟ್ವಿಟರ್ ಮೊದಲಾದ ಸೋಶಿಯಲ್ ಮೀಡಿಯಾ ಖಾತೆಯನ್ನು ಅವರು ಬಳಕೆ ಮಾಡುತ್ತಾರೆ. ಆದರೆ, ಈಗ ಅವರ ಫೇಸ್​ಬುಕ್ ಖಾತೆಗೆ ಸೈಬರ್ ಕಳ್ಳರು ಕನ್ನ ಹಾಕಿದ್ದಾರೆ. ಇದು ಅವರ ಗಮನಕ್ಕೆ ಬಂದಿದ್ದು, ಈ ಬಗ್ಗೆ ತಕ್ಷಣಕ್ಕೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ
Image
‘ಮೊದಲು ನನ್ನ ಸಾಲ ತೀರಿಸುತ್ತೇನೆ’; ‘ವಿಕ್ರಮ್​’ ಯಶಸ್ಸಿನ ಬಗ್ಗೆ ನಟ ಕಮಲ್ ಹಾಸನ್ ಮಾತು
Image
Kamal Haasan: ವಿಶ್ವಾದ್ಯಂತ 200 ಕೋಟಿ ರೂ. ಬಾಚಿಕೊಂಡ ‘ವಿಕ್ರಮ್​’ ಸಿನಿಮಾ; ಗೆಲುವಿನ ಖುಷಿಯಲ್ಲಿ ಕಮಲ್​ ಹಾಸನ್​
Image
‘ರಜಿನಿಕಾಂತ್​- ನಾನು ಒಳ್ಳೆಯ ಫ್ರೆಂಡ್ಸ್​, ಆದರೆ ಒಂದು ವಿಚಾರದ ಹೊರತಾಗಿ’ ಎಂದ ಕಮಲ್​ ಹಾಸನ್​; ಏನದು?
Image
ಕಮಲ್​ ಹಾಸನ್​ ಮಾಜಿ ಪತ್ನಿ ಸಾರಿಕಾಗೆ ಆರ್ಥಿಕ ಸಂಕಷ್ಟ; 3 ಸಾವಿರ ರೂಪಾಯಿಗಾಗಿ ಕಷ್ಟಪಟ್ಟ ಖ್ಯಾತ ನಟಿ

ಕಾರ್ತಿ ಅವರ ಫೇಸ್​ಬುಕ್ ಖಾತೆಯಿಂದ ಲೈವ್ ಬರಲಾಗಿದೆ. ಇದು ಕಾರ್ತಿ ಅಲ್ಲ ಎಂಬುದು ಅಭಿಮಾನಿಗಳಿಗೆ ಗೊತ್ತಾಗಿದೆ. ಆನ್​ಲೈನ್ ಗೇಮ್​ ಒಂದನ್ನು ಲೈವ್ ಮಾಡಲಾಗಿದೆ. ಈ ಲೈವ್ ಸುಮಾರು 3 ಗಂಟೆಗಳಿಗೂ ಅಧಿಕ ಕಾಲ ಇತ್ತು. ಸದ್ಯ (ನವೆಂಬರ್ 14, ಮಧ್ಯಾಹ್ನ 2.15) ಫೇಸ್​ಬುಕ್ ಖಾತೆ ಹ್ಯಾಕರ್ಸ್​​ ಕೈಯಲ್ಲೇ ಇದೆ. ಈ ಬಗ್ಗೆ ಕಾರ್ತಿ ಅವರು ಟ್ವಿಟರ್ ಮೂಲಕ ಮಾಹಿತಿ ನೀಡಿದ್ದಾರೆ.

‘ನನ್ನ ಫೇಸ್​ಬುಕ್ ಖಾತೆ ಹ್ಯಾಕ್ ಆಗಿದೆ. ನಾವು ಖಾತೆಯನ್ನು ಸರಿ ಮಾಡಲು ಪ್ರಯತ್ನಿಸುತ್ತಿದ್ದೇವೆ’ ಎಂದು ಕಾರ್ತಿ ಬರೆದುಕೊಂಡಿದ್ದಾರೆ. ಕಾರ್ತಿ ಅವರ ಫೇಸ್​​ಬುಕ್​ ಖಾತೆಗೆ ಯಾವುದೇ ತೊಂದರೆ ಆಗದಿರಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

ಇದನ್ನೂ ಓದಿ: ಕಿರುತೆರೆ ವೀಕ್ಷಕರಿಂದ ರಿಜೆಕ್ಟ್ ಆದ ‘ವಿಕ್ರಮ್’; ದಳಪತಿ ವಿಜಯ್​​ ನಟನೆಯ ‘ಬೀಸ್ಟ್​’ಗೆ ಭಾರೀ ಸ್ವಾಗತ

ಕಾರ್ತಿ ಪಾಲಿಗೆ 2022 ವಿಶೇಷವಾಗಿದೆ. ಅವರ ನಟನೆಯ ‘ವಿರುಮಾನ್​​’ ಸಿನಿಮಾ ಸೂಪರ್ ಹಿಟ್ ಆಯಿತು. ‘ಪೊನ್ನಿಯಿನ್ ಸೆಲ್ವನ್​: ಪಾರ್ಟ್​ 1’ ಹಾಗೂ ‘ಸರ್ದಾರ್’ ಚಿತ್ರಗಳು ಮೆಚ್ಚುಗೆ ಪಡೆದವು. ‘ಪೊನ್ನಿಯಿನ್ ಸೆಲ್ವನ್’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ ಅಬ್ಬರಿಸಿದೆ. ಮಣಿರತ್ನಂ ಸಿನಿಮಾ ಎಂಬ ಕಾರಣದಿಂದಲೂ ಈ ಚಿತ್ರದ ಬಗ್ಗೆ ಸಾಕಷ್ಟು ಹೈಪ್ ಪಡೆದಿತ್ತು.

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ
ಅಜಿತ್ ಪವಾರ್ ಅಂತ್ಯಕ್ರಿಯೆ; ಮಕ್ಕಳಿಂದ ಅಪ್ಪನ ಚಿತೆಗೆ ಅಗ್ನಿಸ್ಪರ್ಶ