Manobala: 450ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದ ಹಿರಿಯ ಕಲಾವಿದ ಮನೋಬಾಲ ನಿಧನ
Manobala Death: 35 ವರ್ಷಗಳಿಗೂ ಹೆಚ್ಚು ಕಾಲ ಬಣ್ಣದ ಲೋಕದಲ್ಲಿ ಮನೋಬಾಲ ಅವರು ಸಕ್ರಿಯರಾಗಿದ್ದರು. ಅನಾರೋಗ್ಯದಿಂದ ಅವರು ಮೃತಪಟ್ಟಿದ್ದಾರೆ.
ತಮಿಳು ಚಿತ್ರರಂಗಕ್ಕೆ ಕಹಿ ಸುದ್ದಿ ಕೇಳಿಬಂದಿದೆ. ಕಾಲಿವುಡ್ನಲ್ಲಿ ಫೇಮಸ್ ಆಗಿದ್ದ ಹಿರಿಯ ನಟ, ನಿರ್ದೇಶಕ ಮನೋಬಾಲ (Manobala) ಅವರು ಇಹಲೋಕ ತ್ಯಹಿಸಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಕೆಲವು ತಿಂಗಳಿಂದ ಅವರು ಅನಾರೋಗ್ಯಕ್ಕೆ ಒಳಗಾಗಿದ್ದರು. ಲಿವರ್ ಸಂಬಂಧಿತ ಸಮಸ್ಯೆಯಿಂದ (Liver Problem) ಬಳಲುತ್ತಿದ್ದ ಮನೋಬಾಲ ಅವರು ಇಂದು (ಮೇ 3) ಕೊನೆಯುಸಿರು ಎಳೆದಿದ್ದಾರೆ. ಅವರ ನಿಧನಕ್ಕೆ (Manobala Death) ತಮಿಳು ಚಿತ್ರರಂಗದ ಅನೇಕರು ಕಂಬನಿ ಮಿಡಿದಿದ್ದಾರೆ. ಮೂರೂವರೆ ದಶಕಕ್ಕೂ ಹೆಚ್ಚು ಕಾಲ ಬಣ್ಣದ ಲೋಕದಲ್ಲಿ ಮನೋಬಾಲ ಅವರು ಸಕ್ರಿಯರಾಗಿದ್ದರು. ಈ ಸುದೀರ್ಘ ಪಯಣದಲ್ಲಿ ಅವರು 450ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು. ಪ್ರತಿಭಾವಂತ ಕಲಾವಿದನನ್ನು ಕಳೆದುಕೊಂಡು ಕಾಲಿವುಡ್ ಬಡವಾಗಿದೆ. ಅಭಿಮಾನಿಗಳ ಜೊತೆಯಲ್ಲಿ ಅನೇಕ ಸೆಲೆಬ್ರಿಟಿಗಳು ಕೂಡ ಮನೋಬಾಲ ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
ಚೆನ್ನೈನ ತಮ್ಮ ನಿವಾಸದಲ್ಲಿ ಮನೋಬಾಲ ಅವರು ನಿಧನರಾದರು. ಎಲ್ವಿ ಪ್ರಸಾದ್ ರಸ್ತೆಯ ಸಾಲಿಗ್ರಾಮಂನಲ್ಲಿ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ. ಮನೋಬಾಲ ಅವರು ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದರು. ಅವರ ಟ್ವಿಟರ್ ಖಾತೆಯನ್ನು 15 ಲಕ್ಷಕ್ಕೂ ಅಧಿಕ ಜನರು ಫಾಲೋ ಮಾಡುತ್ತಿದ್ದಾರೆ.
#BREAKING : Actor / Director #Manobala has passed away sometime back..
Shocking!
RIP! pic.twitter.com/SLA2McczXY
— Ramesh Bala (@rameshlaus) May 3, 2023
Heartbreaking to hear that Director/Actor #Manobala sir is no longer with us. Was a true pleasure to work with you sir! You will be surely missed! ? Condolences to family, friends and loved ones…#RIPManobala pic.twitter.com/Ou2QBGsYLs
— Gautham Karthik (@Gautham_Karthik) May 3, 2023
1979ರಲ್ಲಿ ಮನೋಬಾಲ ಅವರು ನಟನೆ ಆರಂಭಿಸಿದರು. ಹಲವು ಪೋಷಕ ಪಾತ್ರಗಳಲ್ಲಿ ನಟಿಸುವ ಮೂಲಕ ಅವರು ಫೇಮಸ್ ಆದರು. ಅವರು ಮಾಡುತ್ತಿದ್ದ ಕಾಮಿಡಿ ಪಾತ್ರಗಳು ಪ್ರೇಕ್ಷಕರಿಗೆ ಹೆಚ್ಚು ಇಷ್ಟವಾದವು. ನಟನೆ ಜೊತೆಗೆ ನಿರ್ದೇಶನದಲ್ಲೂ ಅವರು ಆಸಕ್ತಿ ಬೆಳೆಸಿಕೊಂಡರು. 25ಕ್ಕೂ ಅಧಿಕ ಸಿನಿಮಾಗಳಿಗೆ ಅವರು ನಿರ್ದೇಶನ ಮಾಡಿದರು. ಮನೋಬಾಲ ಅವರು ಕೊನೆಯದಾಗಿ ಕಾಣಿಸಿಕೊಂಡಿದ್ದು ಕಾಜಲ್ ಅಗರ್ವಾಲ್ ನಟನೆಯ ‘ಘೋಸ್ಟಿ’ ಸಿನಿಮಾದಲ್ಲಿ.
ಇದನ್ನೂ ಓದಿ: ಮಲಯಾಳಂ ಚಿತ್ರರಂಗದ ಹಿರಿಯ ನಟ ಮಾಮುಕೋಯಾ ನಿಧನ
ಸಿನಿಮಾ ಮಾತ್ರವಲ್ಲದೇ ಕಿರುತೆರೆಯಲ್ಲೂ ಮನೋಬಾಲ ಅವರು ಫೇಮಸ್ ಆಗಿದ್ದರು. ನಟನೆಯ ಜೊತೆಗೆ ಕೆಲವು ಧಾರಾವಾಹಿಗಳಿಗೆ ಅವರು ನಿರ್ದೇಶನ ಮಾಡಿದ್ದರು. ‘ಕುಕು ವಿತ್ ಕೋಮಾಲಿ’ ಶೋನಲ್ಲಿ ಅವರು ಸ್ಪರ್ಧಿಸಿದ್ದರು. ಇಷ್ಟೆಲ್ಲ ಆ್ಯಕ್ಟೀವ್ ಆಗಿದ್ದ ಮನೋಬಾಲ ಅವರಿಗೆ ಆರೋಗ್ಯ ಸಮಸ್ಯೆ ಉಂಟಾಗಿದ್ದು ನೋವಿನ ಸಂಗತಿ. ಹಲವು ತಿಂಗಳ ಬಳಿಕ ಚಿಕಿತ್ಸೆ ಫಲಕಾರಿ ಆಗದೇ ಅವರು ಇಹಲೋಕ ತ್ಯಜಿಸಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 2:33 pm, Wed, 3 May 23