AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ರವಿ ಮೋಹನ್ ಮನೆಯಲ್ಲಿ ಕಳ್ಳತನ: ಕಾರು ಚಾಲಕನ ಬಂಧನ; ವಜ್ರದ ಸರಕ್ಕಾಗಿ ಹುಡುಕಾಟ

ನಟ ರವಿ ಮೋಹನ್ ಅವರ ಮನೆಯಲ್ಲಿ ಕಳ್ಳತನ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರು ಚಾಲಕನನ್ನು ಬಂಧಿಸಲಾಗಿದೆ. ಹಣ ಕದ್ದಿರುವುದನ್ನು ಆತ ಒಪ್ಪಿಕೊಂಡಿದ್ದಾನೆ. ಆದರೆ ಕಾಣೆಯಾಗಿರುವ 10 ಲಕ್ಷ ರೂಪಾಯಿ ಮೌಲ್ಯದ ವಜ್ರದ ಹಾರದ ಪತ್ತೆಗಾಗಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

ನಟ ರವಿ ಮೋಹನ್ ಮನೆಯಲ್ಲಿ ಕಳ್ಳತನ: ಕಾರು ಚಾಲಕನ ಬಂಧನ; ವಜ್ರದ ಸರಕ್ಕಾಗಿ ಹುಡುಕಾಟ
Ravi Mohan
ಮದನ್​ ಕುಮಾರ್​
|

Updated on: Jul 03, 2026 | 3:46 PM

Share

ಮುಖ್ಯಾಂಶಗಳು

  • ಜಯಂ ರವಿ ನಿವಾಸದಲ್ಲಿ ಲಕ್ಷಾಂತರ ರೂಪಾಯಿ ಕಳ್ಳತನ ಆಗಿದೆ.
  • 2.5 ಲಕ್ಷ ರೂಪಾಯಿ ಕದ್ದಿದ್ದ ಕಾರು ಚಾಲಕನನ್ನು ಬಂಧಿಸಲಾಗಿದೆ.
  • ಆದರೆ 10 ಲಕ್ಷ ರೂಪಾಯಿ ಮೌಲ್ಯದ ವಜ್ರದ ಹಾರ ಇನ್ನೂ ಸಿಕ್ಕಿಲ್ಲ.

ಚೆನ್ನೈ: ಖ್ಯಾತ ತಮಿಳು ನಟ ರವಿ ಮೋಹನ್ (ಜಯಂ ರವಿ) ಅವರ ಚೆನ್ನೈನ ನಿವಾಸದಲ್ಲಿ ನಡೆದಿದ್ದ ಕಳ್ಳತನ (Theft) ಪ್ರಕರಣಕ್ಕೆ ಸಂಬಂಧಿಸಿದಂತೆ ರವಿ ಮೋಹನ್ (Ravi Mohan) ಅವರ ಕಾರು ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 2.5 ಲಕ್ಷ ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದ್ದು, ನಾಪತ್ತೆಯಾಗಿರುವ 10 ಲಕ್ಷ ರೂಪಾಯಿ ಮೌಲ್ಯದ ವಜ್ರದ ಹಾರಕ್ಕಾಗಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.

ಚೆನ್ನೈನ ಇಂಜಂಬಾಕ್ಕಂನಲ್ಲಿರುವ ನಟ ರವಿ ಮೋಹನ್ ಅವರ ನಿವಾಸದಲ್ಲಿ ಜೂನ್ 22ರಂದು ಬೆಲೆಬಾಳುವ ವಸ್ತುಗಳು ನಾಪತ್ತೆಯಾಗಿದ್ದವು. ಈ ಕುರಿತು ನಟನ ಮ್ಯಾನೇಜರ್ ನೀಲಾಂಕರೈ ಪೊಲೀಸ್ ಠಾಣೆಗೆ ಅಧಿಕೃತ ದೂರು ನೀಡಿದ್ದರು. ಇದಕ್ಕೂ ಮುನ್ನ, ಮನೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಕಳ್ಳತನ ಮಾಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿತ್ತು.

ನಟನ ಮನೆಗೆ ಧಾವಿಸಿದ್ದ ಪೊಲೀಸರು:

ಮನೆ ಕೆಲಸದವರ ಮೇಲೆ ಶಂಕೆ ಇದ್ದರಿಂದ ಅವರನ್ನು ಜಯಂ ರವಿ ನಿವಾಸದಲ್ಲೇ ತಡೆದುಹಿಡಿದು ವಿಚಾರಣೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಪೊಲೀಸ್ ನಿಯಂತ್ರಣ ಕೊಠಡಿಗೆ ತಲುಪಿತ್ತು. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು, ಮನೆಯಲ್ಲಿದ್ದ ಇಬ್ಬರು ಮಹಿಳಾ ಕೆಲಸಗಾರರು ಮತ್ತು ಒಬ್ಬ ಬಾಲಕನನ್ನು ಮುಕ್ತಗೊಳಿಸಿದರು. ಅಲ್ಲದೆ, ಯಾವುದೇ ಕಳ್ಳತನದ ಆರೋಪವಿದ್ದರೂ ಕಾನೂನುಬದ್ಧವಾಗಿ ದೂರು ದಾಖಲಿಸಬೇಕೇ ವಿನಃ ಖಾಸಗಿಯಾಗಿ ಯಾರನ್ನೂ ಬಂಧಿಸಿ ವಿಚಾರಣೆ ನಡೆಸಬಾರದು ಎಂದು ತಿಳಿಸಿದ್ದರು. ಇದರ ಬೆನ್ನಲ್ಲೇ ಮ್ಯಾನೇಜರ್ ಮೂಲಕ 10 ಲಕ್ಷ ರೂಪಾಯಿ ಮೌಲ್ಯದ ವಜ್ರದ ಹಾರ ಮತ್ತು ನಗದು ಕಳವಾಗಿರುವ ಬಗ್ಗೆ ದೂರು ದಾಖಲಿಸಲಾಯಿತು.

ಜಯಂ ರವಿ ಕಾರು ಚಾಲಕನಿಂದಲೇ ಕೃತ್ಯ:

ದೂರಿನ ಅನ್ವಯ ತನಿಖೆ ಕೈಗೆತ್ತಿಕೊಂಡ ಪೊಲೀಸರು, ಮನೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ಹಾಗೂ ಚಾಲಕರನ್ನು ಪ್ರತ್ಯೇಕವಾಗಿ ವಿಚಾರಣೆಗೆ ಒಳಪಡಿಸಿದರು. ಈ ವೇಳೆ ಕಳೆದ ಆರು ತಿಂಗಳಿನಿಂದ ರವಿ ಮೋಹನ್ ಅವರ ಬಳಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ರಾಜೇಶ್ ಎಂಬಾತನ ಮೇಲೆ ಪೊಲೀಸರಿಗೆ ಬಲವಾದ ಶಂಕೆ ವ್ಯಕ್ತವಾಗಿದೆ. ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ, ತಾನೇ ಲಾಕರ್ ಓಪನ್ ಮಾಡಿ ಹಣ ಕದ್ದಿರುವುದಾಗಿ ಆರೋಪಿ ಚಾಲಕ ಒಪ್ಪಿಕೊಂಡಿದ್ದಾನೆ.

ಇದನ್ನೂ ಓದಿ: ಮನೆ ಕೆಲಸದ ಮಹಿಳೆಯರನ್ನು ಕೂಡಿಹಾಕಿದ ನಟ ರವಿ ಮೋಹನ್? ಹೊಸ ವಿವಾದ

ವಜ್ರದ ಹಾರಕ್ಕಾಗಿ ಮುಂದುವರಿದ ಹುಡುಕಾಟ:

ಸದ್ಯ ಆರೋಪಿಯಿಂದ ಕದಿಯಲಾಗಿದ್ದ ಹಣವನ್ನು ರಿಕವರಿ ಮಾಡಲಾಗಿದ್ದು, ಅದನ್ನು ನಟನಿಗೆ ಹಸ್ತಾಂತರಿಸಲಾಗಿದೆ. ಆದರೆ, ದೂರಿನಲ್ಲಿ ಉಲ್ಲೇಖಿಸಲಾಗಿರುವ 10 ಲಕ್ಷ ರೂಪಾಯಿ ಮೌಲ್ಯದ ವಜ್ರದ ನೆಕ್ಲೇಸ್ ಇನ್ನೂ ಪತ್ತೆಯಾಗಿಲ್ಲ. ಆರೋಪಿ ರಾಜೇಶ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯಲ್ಲಿ ಮಹತ್ವದ ಬದಲಾವಣೆ
ಜುಲೈ ತಿಂಗಳ ವಿದ್ಯುತ್ ಬಿಲ್ ವಿತರಣೆಯಲ್ಲಿ ಮಹತ್ವದ ಬದಲಾವಣೆ
ಬೆಳಗಾವಿಯಲ್ಲಿ ಭೀಕರ ಬರದ ಛಾಯೆ: ಬರಿದಾದ ಹಿಡಕಲ್ ಡ್ಯಾಂ
ಬೆಳಗಾವಿಯಲ್ಲಿ ಭೀಕರ ಬರದ ಛಾಯೆ: ಬರಿದಾದ ಹಿಡಕಲ್ ಡ್ಯಾಂ
ಕೋಲಾರದ ಕುರುಬರಪೇಟೆಯಲ್ಲಿ ದೇಗುಲದ ಆವರಣದಲ್ಲಿ ಎಸ್​ಐಆರ್​​ ಪ್ರಕ್ರಿಯೆ!
ಕೋಲಾರದ ಕುರುಬರಪೇಟೆಯಲ್ಲಿ ದೇಗುಲದ ಆವರಣದಲ್ಲಿ ಎಸ್​ಐಆರ್​​ ಪ್ರಕ್ರಿಯೆ!
ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ
ಕೊಪ್ಪಳದ ಅಂಜನಾದ್ರಿ ದೇಗುಲಕ್ಕೆ ರಾಹುಲ್​​ ದ್ರಾವಿಡ್​​ ದಂಪತಿ ಭೇಟಿ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ಪತ್ನಿ, ತಮ್ಮನ ಜತೆ ಮಾಜಿ ಸಿಎಂ ಸಿದ್ದರಾಮಯ್ಯ ಮನೆಗೆ ತೆರಳಿ ಡಿಕೆಶಿ ಮಾತುಕತೆ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ರಾಮನಗರದ ಕಲ್ಯಾಣ ಮಂಟಪದಲ್ಲಿ SIR ಆರೋಪಕ್ಕೆ ಗೃಹ ಸಚಿವ ಖರ್ಗೆ ಏನಂದ್ರು ನೋಡಿ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಮಳೆಗಾಗಿ ವಿಭಿನ್ನ ಹರಕೆ: ದೇವಿ ದೇಗುಲದಲ್ಲಿ ರಾತ್ರಿಪೂರ್ತಿ ಭಜನೆ
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹಜ್ಯೋತಿ ಪರಿಷ್ಕರಣೆ ಅಲ್ಲ; ಇದು ಮಾಹಿತಿ ಸಂಗ್ರಹ ಅಷ್ಟೇ ಎಂದ ಚೆಸ್ಕಾಂ MD
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಗೃಹ ಸಚಿವರ ತವರಲ್ಲೇ ಪೊಲೀಸ್ ಠಾಣೆಯಿಂದಲೇ ಪೋಕ್ಸೋ ಕೇಸ್ ಆರೋಪಿ ಪರಾರಿ!
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್