ತಮಿಳಿನ ಖ್ಯಾತ ನಟ ಸಿಂಬು ಅವರು ಡಿಸೆಂಬರ್ 11ರಂದು ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿರುವ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ವೈರಲ್ ಇನ್ಫೆಕ್ಷನ್ ಆಗಿದೆ ಎಂದು ವೈದ್ಯರು ತಿಳಿಸಿದ್ದರು. ಅವರ ಆರೋಗ್ಯದ ಬಗ್ಗೆ ಈಗ ಹೊಸ ಅಪ್ಡೇಟ್ ಸಿಕ್ಕಿದೆ. ಈ ಬಗ್ಗೆ ಖುದ್ದು ಸಿಂಬು ಅವರೇ ಮಾಹಿತಿ ನೀಡಿದ್ದಾರೆ. ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದು, ಮನೆಗೆ ಮರಳಿರುವುದಾಗಿ ಮಾಹಿತಿ ಹಂಚಿಕೊಂಡಿದ್ದಾರೆ.
ಸಿಂಬು ಅವರಿಗೆ ಡಿಸೆಂಬರ್ 11ರಂದು ಅನಾರೋಗ್ಯ ಕಾಡಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕೊವಿಡ್ ಕಾಣಿಸಿಕೊಂಡಿರಬಹುದು ಎಂದು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ ವರದಿ ನೆಗೆಟಿವ್ ಬಂದಿತ್ತು. ಆ ಬಳಿಕ ಅವರಿಗೆ ವೈರಲ್ ಇನ್ಫೆಕ್ಷನ್ ಆಗಿರುವ ವಿಚಾರ ಬೆಳಕಿಗೆ ಬಂದಿತ್ತು. ಅವರು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಕೋರಿದ್ದರು. ಈ ಪ್ರಾರ್ಥನೆ ಈಗ ಫಲಿಸಿದೆ. ಸಿಂಬು ಅವರು ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು ಮನೆಗೆ ಮರಳಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ನಿಮ್ಮೆಲ್ಲರ ಆಶೀರ್ವಾದಕ್ಕೆ ಧನ್ಯವಾದಗಳು. ನಾನು ಮನೆಗೆ ಮರಳಿದ್ದೇನೆ ಮತ್ತು ಚೇತರಿಸಿಕೊಳ್ಳುತ್ತಿದ್ದೇನೆ’ ಎಂದು ಬರೆದುಕೊಂಡಿದ್ದಾರೆ. ಇದನ್ನು ನೋಡಿದ ನಂತರದಲ್ಲಿ ಅವರ ಅಭಿಮಾನಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಆದಷ್ಟು ಬೇಗ ಸಂಪೂರ್ಣ ಗುಣಮುಖರಾಗಿ ಎಂದು ಹಾರೈಸಿದ್ದಾರೆ.
Thanks for all your blessings I am back home & recovering ??#NeengailaamaNaanilla ❤️
— Silambarasan TR (@SilambarasanTR_) December 12, 2021
ಕಣ್ಣೀರು ಹಾಕಿದ್ದ ಸಿಂಬು..
ಇತ್ತೀಚೆಗೆ ‘ಮಾನಾಡು’ ಸಿನಿಮಾ ರಿಲೀಸ್ ಆಗಿತ್ತು. ಇದಕ್ಕೆ ಮೆಚ್ಚುಗೆ ವ್ಯಕ್ತವಾಗಿತ್ತು. ಸಿನಿಮಾ ರಿಲೀಸ್ ಆಗುವುದಕ್ಕೂ ಮೊದಲೇ ಅವರು ಕಣ್ಣೀರು ಹಾಕಿದ್ದರು. ವೇದಿಕೆಯಲ್ಲಿ ಮಾತು ಆರಂಭಿಸುವಾಗಲೇ ಸಿಂಬು ಎಮೋಷನಲ್ ಆಗಿದ್ದರು. ‘ನಾನು ತುಂಬ ಸಮಸ್ಯೆ ಎದುರಿಸಿದ್ದೇನೆ. ಅವರು ತೊಂದರೆ ಕೊಡುತ್ತಲೇ ಇದ್ದಾರೆ. ಅವೆಲ್ಲವನ್ನೂ ನಾನು ಪರಿಹರಿಸಿಕೊಳ್ಳುತ್ತೇನೆ. ನೀವು ನನ್ನ ಕಾಳಜಿ ವಹಿಸಿ’ ಎಂದು ಅಭಿಮಾನಿಗಳಲ್ಲಿ ಸಿಂಬು ಮನವಿ ಮಾಡಿಕೊಂಡಿದ್ದರು.
ಸಿಂಬು ನಟಿಸಿರುವ ‘ಮಾನಾಡು’ ಚಿತ್ರದಲ್ಲಿ ಟೈಮ್ ಟ್ರಾವೆಲಿಂಗ್ ಕಥೆ ಇದೆ. ಜೊತೆಗೆ ಇಂದಿನ ಕಾಲಘಟ್ಟದ ಸಾಮಾಜಿಕ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಪ್ರಯತ್ನ ಕೂಡ ಈ ಚಿತ್ರದಲ್ಲಿ ಆಗಿದೆ ಎಂದು ಚಿತ್ರತಂಡ ಹೇಳಿಕೊಂಡಿತ್ತು. ಕಲ್ಯಾಣಿ ಪ್ರಿಯದರ್ಶನ್, ಎಸ್.ಜೆ. ಸೂರ್ಯ ಮುಂತಾದವರು ಕೂಡ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ.
ಇದನ್ನೂ ಓದಿ: Trisha Krishnan Birthday: 38ನೇ ವಸಂತಕ್ಕೆ ಕಾಲಿಟ್ಟ ತ್ರಿಶಾ; ದಕ್ಷಿಣದ ಸ್ಟಾರ್ ನಟಿಯ 5 ದಿ ಬೆಸ್ಟ್ ಪಾತ್ರಗಳು ಇಲ್ಲಿವೆ