AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಹೆಚ್ಚಿದ ಕೊವಿಡ್​ ಭಯ; ಖ್ಯಾತ ಹಾಸ್ಯನಟ ಆಸ್ಪತ್ರೆಗೆ ದಾಖಲು

ವಡಿವೇಲು ಅವರು ಖಾಸಗಿ ಕಾರ್ಯಕ್ರಮದ ನಿಮಿತ್ತ ಲಂಡನ್​ಗೆ ತೆರಳಿದ್ದರು. ಗುರುವಾರ ಅವರು ಚೆನ್ನೈಗೆ ಆಗಮಿಸಿದ್ದರು. ಅವರು ಆಗಮಿಸಿದ ನಂತರದಲ್ಲಿ ಅನಾರೋಗ್ಯ ಕಾಡಿತ್ತು. ಪರೀಕ್ಷೆಗೆ ಒಳಪಡಿಸಿದ ನಂತರದಲ್ಲಿ ಅವರಿಗೆ ಕೊವಿಡ್​ ಇರುವ ವಿಚಾರ ತಿಳಿದು ಬಂದಿತ್ತು.

ಮತ್ತೆ ಹೆಚ್ಚಿದ ಕೊವಿಡ್​ ಭಯ; ಖ್ಯಾತ ಹಾಸ್ಯನಟ ಆಸ್ಪತ್ರೆಗೆ ದಾಖಲು
ವಡಿವೇಲು
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Dec 25, 2021 | 8:19 PM

ಕೊರೊನಾ ಪ್ರಕರಣಗಳು ನಿಧಾನವಾಗಿ ಹೆಚ್ಚುತ್ತಿದೆ. ಕೊರೊನಾದಿಂದಾಗಿ ದೇಶದಲ್ಲಿ ಸಾವು-ನೋವು ಹೆಚ್ಚುವ ಭಯ ಮತ್ತೆ ಆವರಿಸಿದೆ. ಒಮಿಕ್ರಾನ್​ ರೂಪಾಂತರಿ ಪ್ರಕರಣಗಳಂತೂ ನಿತ್ಯವೂ ಹೆಚ್ಚುತ್ತಲೇ ಇದ್ದು ಇದರಿಂದ ಜನರಲ್ಲಿ ಮತ್ತೆ ಆತಂಕ ಮೂಡಿದೆ. ಈಗಾಗಲೇ ಅನೇಕ ರಾಜ್ಯಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಗೆ ಬಂದಿದೆ. ಈ ಮಧ್ಯೆ ಚಿತ್ರರಂಗದಲ್ಲಿರುವ ಅನೇಕರಿಗೆ ಕೊವಿಡ್​ ಕಾಣಿಸಿಕೊಳ್ಳುತ್ತಿದೆ. ತಮಿಳಿನ ಖ್ಯಾತ ಹಾಸ್ಯ ನಟ ವಡಿವೇಲು ಅವರಿಗೂ ಕೊರೊನಾ ಪಾಸಿಟಿವ್​ ಆಗಿದೆ. ಈ ಕಾರಣಕ್ಕೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಡಿವೇಲು ಅವರು ಖಾಸಗಿ ಕಾರ್ಯಕ್ರಮದ ನಿಮಿತ್ತ ಲಂಡನ್​ಗೆ ತೆರಳಿದ್ದರು. ಗುರುವಾರ ಅವರು ಚೆನ್ನೈಗೆ ಆಗಮಿಸಿದ್ದರು. ಅವರು ಆಗಮಿಸಿದ ನಂತರದಲ್ಲಿ ಅನಾರೋಗ್ಯ ಕಾಡಿತ್ತು. ಪರೀಕ್ಷೆಗೆ ಒಳಪಡಿಸಿದ ನಂತರದಲ್ಲಿ ಅವರಿಗೆ ಕೊವಿಡ್​ ಇರುವ ವಿಚಾರ ತಿಳಿದು ಬಂದಿತ್ತು. ಇದು ಸಾಮಾನ್ಯ ಕೊರೊನಾ ಪ್ರಕರಣ ಆಗಿದ್ದು, ಒಮಿಕ್ರಾನ್​ ಅಲ್ಲ ಎಂದು ವೈದ್ಯರು ದೃಢಪಡಿಸಿದ್ದಾರೆ. ಸದ್ಯ, ವಡಿವೇಲು ಅವರನ್ನು ಆಸ್ಪತ್ರೆಯಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿರವಾಗಿದೆ. ಅವರು ವೇಗವಾಗಿ ಗುಣಮುಖರಾಗುತ್ತಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಇತ್ತೀಚೆಗೆ ಅನೇಕ ಸೆಲೆಬ್ರಿಟಿಗಳು ಕೊವಿಡ್​ಗೆ ತುತ್ತಾಗಿದ್ದಾರೆ. ಕರೀನಾ ಕಪೂರ್​ ಖಾನ್​, ಅಮೃತಾ ಅರೋರಾ, ನಕುಲ್​ ಮೆಹ್ತಾ, ಶಯಾನಾ ಕಪೂರ್​, ಮಹೀಪ್​ ಕಪೈರ್​ ಮತ್ತು ಸೀಮಾ ಖಾನ್​ ಮೊದಲಾದವರು ಕೊವಿಡ್​ಗೆ ತುತ್ತಾಗಿದ್ದರು. ಇತ್ತೀಚೆಗೆ ಕರೀನಾ ಕೊವಿಡ್​ಗೆ ತುತ್ತಾಗಿದ್ದರು. ಈಗ ಅವರು ಮತ್ತೆ ಪರೀಕ್ಷೆಗೆ ಒಳಪಟ್ಟಿದ್ದು, ಪರೀಕ್ಷೆಯಲ್ಲಿ ನೆಗೆಟಿವ್​ ಬಂದಿದೆ.

ಕೊವಿಡ್​ ಪ್ರಕರಣಗಳು ನಿಧಾನವಾಗಿ ಹೆಚ್ಚುತ್ತಿರುವುದು ಎಲ್ಲರಲ್ಲೂ ಆತಂಕ ಮೂಡಿಸಿದೆ. ಇಂಗ್ಲೆಂಡ್​ನಲ್ಲಿ ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಭಾರತದಲ್ಲೂ ದಿನ ಕಳೆದಂತೆ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ. ಮುಂದಿನ ದಿನಗಳಲ್ಲಿ ಪ್ರಕರಣಗಳ ಸಂಖ್ಯೆ ಕೈಮೀರಿದರೂ ಅಚ್ಚರಿ ಏನಿಲ್ಲ.

ಇದನ್ನೂ ಓದಿ: ಕೊವಿಡ್​ 19 ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ; ಮಹಾರಾಷ್ಟ್ರದಲ್ಲಿ ಮತ್ತೆ ಶೇ.50ರ ನಿಯಮ ಜಾರಿ, ರಾತ್ರಿ ಗುಂಪುಗೂಡುವುದು ನಿಷೇಧ

ಈ ಏಳು ಸ್ಟಾರ್​ ನಟರ ಬಳಿ ಇದೆ ಪ್ರೈವೇಟ್​ ಜೆಟ್​; ಯಾರ್ಯಾರು? ಇಲ್ಲಿದೆ ಮಾಹಿತಿ

Published On - 6:59 pm, Sat, 25 December 21

ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ