ಕೊರೊನಾ ಪ್ರಕರಣಗಳು ನಿಧಾನವಾಗಿ ಹೆಚ್ಚುತ್ತಿದೆ. ಕೊರೊನಾದಿಂದಾಗಿ ದೇಶದಲ್ಲಿ ಸಾವು-ನೋವು ಹೆಚ್ಚುವ ಭಯ ಮತ್ತೆ ಆವರಿಸಿದೆ. ಒಮಿಕ್ರಾನ್ ರೂಪಾಂತರಿ ಪ್ರಕರಣಗಳಂತೂ ನಿತ್ಯವೂ ಹೆಚ್ಚುತ್ತಲೇ ಇದ್ದು ಇದರಿಂದ ಜನರಲ್ಲಿ ಮತ್ತೆ ಆತಂಕ ಮೂಡಿದೆ. ಈಗಾಗಲೇ ಅನೇಕ ರಾಜ್ಯಗಳಲ್ಲಿ ರಾತ್ರಿ ಕರ್ಫ್ಯೂ ಜಾರಿಗೆ ಬಂದಿದೆ. ಈ ಮಧ್ಯೆ ಚಿತ್ರರಂಗದಲ್ಲಿರುವ ಅನೇಕರಿಗೆ ಕೊವಿಡ್ ಕಾಣಿಸಿಕೊಳ್ಳುತ್ತಿದೆ. ತಮಿಳಿನ ಖ್ಯಾತ ಹಾಸ್ಯ ನಟ ವಡಿವೇಲು ಅವರಿಗೂ ಕೊರೊನಾ ಪಾಸಿಟಿವ್ ಆಗಿದೆ. ಈ ಕಾರಣಕ್ಕೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಡಿವೇಲು ಅವರು ಖಾಸಗಿ ಕಾರ್ಯಕ್ರಮದ ನಿಮಿತ್ತ ಲಂಡನ್ಗೆ ತೆರಳಿದ್ದರು. ಗುರುವಾರ ಅವರು ಚೆನ್ನೈಗೆ ಆಗಮಿಸಿದ್ದರು. ಅವರು ಆಗಮಿಸಿದ ನಂತರದಲ್ಲಿ ಅನಾರೋಗ್ಯ ಕಾಡಿತ್ತು. ಪರೀಕ್ಷೆಗೆ ಒಳಪಡಿಸಿದ ನಂತರದಲ್ಲಿ ಅವರಿಗೆ ಕೊವಿಡ್ ಇರುವ ವಿಚಾರ ತಿಳಿದು ಬಂದಿತ್ತು. ಇದು ಸಾಮಾನ್ಯ ಕೊರೊನಾ ಪ್ರಕರಣ ಆಗಿದ್ದು, ಒಮಿಕ್ರಾನ್ ಅಲ್ಲ ಎಂದು ವೈದ್ಯರು ದೃಢಪಡಿಸಿದ್ದಾರೆ. ಸದ್ಯ, ವಡಿವೇಲು ಅವರನ್ನು ಆಸ್ಪತ್ರೆಯಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿರವಾಗಿದೆ. ಅವರು ವೇಗವಾಗಿ ಗುಣಮುಖರಾಗುತ್ತಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.
ಇತ್ತೀಚೆಗೆ ಅನೇಕ ಸೆಲೆಬ್ರಿಟಿಗಳು ಕೊವಿಡ್ಗೆ ತುತ್ತಾಗಿದ್ದಾರೆ. ಕರೀನಾ ಕಪೂರ್ ಖಾನ್, ಅಮೃತಾ ಅರೋರಾ, ನಕುಲ್ ಮೆಹ್ತಾ, ಶಯಾನಾ ಕಪೂರ್, ಮಹೀಪ್ ಕಪೈರ್ ಮತ್ತು ಸೀಮಾ ಖಾನ್ ಮೊದಲಾದವರು ಕೊವಿಡ್ಗೆ ತುತ್ತಾಗಿದ್ದರು. ಇತ್ತೀಚೆಗೆ ಕರೀನಾ ಕೊವಿಡ್ಗೆ ತುತ್ತಾಗಿದ್ದರು. ಈಗ ಅವರು ಮತ್ತೆ ಪರೀಕ್ಷೆಗೆ ಒಳಪಟ್ಟಿದ್ದು, ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ.
ಕೊವಿಡ್ ಪ್ರಕರಣಗಳು ನಿಧಾನವಾಗಿ ಹೆಚ್ಚುತ್ತಿರುವುದು ಎಲ್ಲರಲ್ಲೂ ಆತಂಕ ಮೂಡಿಸಿದೆ. ಇಂಗ್ಲೆಂಡ್ನಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಭಾರತದಲ್ಲೂ ದಿನ ಕಳೆದಂತೆ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕ ಮೂಡಿಸಿದೆ. ಮುಂದಿನ ದಿನಗಳಲ್ಲಿ ಪ್ರಕರಣಗಳ ಸಂಖ್ಯೆ ಕೈಮೀರಿದರೂ ಅಚ್ಚರಿ ಏನಿಲ್ಲ.
ಇದನ್ನೂ ಓದಿ: ಕೊವಿಡ್ 19 ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ; ಮಹಾರಾಷ್ಟ್ರದಲ್ಲಿ ಮತ್ತೆ ಶೇ.50ರ ನಿಯಮ ಜಾರಿ, ರಾತ್ರಿ ಗುಂಪುಗೂಡುವುದು ನಿಷೇಧ
ಈ ಏಳು ಸ್ಟಾರ್ ನಟರ ಬಳಿ ಇದೆ ಪ್ರೈವೇಟ್ ಜೆಟ್; ಯಾರ್ಯಾರು? ಇಲ್ಲಿದೆ ಮಾಹಿತಿ
Published On - 6:59 pm, Sat, 25 December 21