KV Anand Death: ಖ್ಯಾತ ನಿರ್ದೇಶಕ ಕೆ.ವಿ. ಆನಂದ್​ ನಿಧನ; ಕಾಲಿವುಡ್​ಗೆ ಮತ್ತೊಂದು ಆಘಾತ

KV Anand Heart Attack: ಕೆಲವೇ ದಿನಗಳ ಹಿಂದೆ ಖ್ಯಾತ ನಟ ವಿವೇಕ್​ ಅವರನ್ನು ಕಾಲಿವುಡ್​ ಕಳೆದುಕೊಂಡಿತ್ತು. ಆ ನೋವು ಮಾಸುವ ಮುನ್ನವೇ ಕೆ.ವಿ. ಆನಂದ್​​ ನಿಧನರಾಗಿರುವುದು ದುಃಖದ ಸಂಗತಿ.

KV Anand Death: ಖ್ಯಾತ ನಿರ್ದೇಶಕ ಕೆ.ವಿ. ಆನಂದ್​ ನಿಧನ; ಕಾಲಿವುಡ್​ಗೆ ಮತ್ತೊಂದು ಆಘಾತ
ನಿರ್ದೇಶಕ ಕೆ.ವಿ. ಆನಂದ್
Follow us
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ

Updated on:Apr 30, 2021 | 2:45 PM

ತಮಿಳು ಚಿತ್ರರಂಗದ ಜನಪ್ರಿಯ ನಿರ್ದೇಶಕ ಕೆ.ವಿ. ಆನಂದ್​ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಶುಕ್ರವಾರ (ಏ.30) ನಸುಕಿನ 3 ಗಂಟೆ ಸುಮಾರಿಗೆ ಅವರಿಗೆ ತೀವ್ರ ಹೃದಯಾಘಾತ ಆಯಿತು. ಅವರ ನಿಧನದ ಸುದ್ದಿ ಕೇಳಿ ಇಡೀ ತಮಿಳು ಚಿತ್ರರಂಗಕ್ಕೆ ಆಘಾತ ಆಗಿದೆ. ಕೆಲವೇ ದಿನಗಳ ಹಿಂದೆ ಖ್ಯಾತ ನಟ ವಿವೇಕ್​ ಅವರನ್ನು ಕಾಲಿವುಡ್​ ಕಳೆದುಕೊಂಡಿತ್ತು. ವಿವೇಕ್​ ಕೂಡ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದರು. ಆ ನೋವು ಮಾಸುವ ಮುನ್ನವೇ ಕೆ.ವಿ. ಆನಂದ್​​ ನಿಧನರಾಗಿರುವುದು ದುಃಖದ ಸಂಗತಿ.

ಕೆ.ವಿ. ಆನಂದ್ ಅವರಿಗೆ 54 ವರ್ಷ ವಯಸ್ಸಾಗಿತ್ತು. ಅವರ​ ನಿಧನಕ್ಕೆ ಅಭಿಮಾನಿಗಳು ಮತ್ತು ಸೆಲೆಬ್ರಿಟಿಗಳು ಕಂಬನಿ ಮಿಡಿಯುತ್ತಿದ್ದಾರೆ. ಸೂರ್ಯ ನಟನೆಯ ಅಯನ್​, ಕಾಪ್ಪನ್​, ಮಾಟ್ರಾನ್, ಧನುಶ್​ ನಟನೆಯ ಅನೇಗನ್​, ವಿಜಯ್ ಸೇತುಪತಿ ಅಭಿನಯದ ಕವನ್​ ಮುಂತಾದ ಸಿನಿಮಾಗಳಿಗೆ ಕೆ.ವಿ. ಆನಂದ್​ ನಿರ್ದೇಶನ ಮಾಡಿದ್ದರು. ಮೂಲತಃ ಛಾಯಾಗ್ರಾಹಕರಾಗಿದ್ದ ಅವರು ಮುದಲ್ವನ್​, ಶಿವಾಜಿ: ದ ಬಾಸ್​ ಮುಂತಾದ ಹಿಟ್​ ಸಿನಿಮಾಗಳಿಗೆ ಕೆಲಸ ಮಾಡಿದ್ದರು.

ಕೆ.ವಿ. ಆನಂದ್​ ಅವರು ಮೊದಲು ತಮ್ಮ ವೃತ್ತಿಜೀವನವನ್ನು ಫೋಟೋ ಜರ್ನಲಿಸ್ಟ್​ ಆಗಿ ಆರಂಭಿಸಿದರು. ಸಿನಿಮಾಗಳಿಗೆ ಕ್ಯಾಮರಾಮ್ಯಾನ್​ ಆಗಬೇಕು ಎಂಬ ಆಸೆ ಅವರಲ್ಲಿತ್ತು. ಛಾಯಾಗ್ರಾಹಕ ಪಿಸಿ ಶ್ರೀರಾಮ್​ ಬಳಿ ತಮ್ಮ ಹಂಬಲವನ್ನು ತೋಡಿಕೊಂಡರು. ನಂತರ ಶ್ರೀರಾಮ್​ ಜೊತೆ ಅನೇಕ ಸಿನಿಮಾಗಳಿಗೆ ಸಹಾಯಕನಾಗಿ ಕೆಲಸ ಮಾಡಿದರು.

1994ರಲ್ಲಿ ಪ್ರಿಯದರ್ಶನ್​ ನಿರ್ದೇಶನದ ಮಲಯಾಳಂನ ‘ತೆನ್​ಮಾವಿನ್​ ಕೊಂಬತ್’ ಚಿತ್ರದ ಮೂಲಕ ಕೆ.ವಿ. ಆನಂದ್​ ಸ್ವತಂತ್ರ ಛಾಯಾಗ್ರಾಹಕರಾಗಿ ಬಡ್ತಿ ಪಡೆದುಕೊಂಡರು. ಆ ಚಿತ್ರಕ್ಕೆ ಅವರಿಗೆ ಅತ್ಯುತ್ತಮ ಛಾಯಾಗ್ರಹಣ ರಾಷ್ಟ್ರ ಪ್ರಶಸ್ತಿ ಸಿಕ್ಕಿತು. 1996ರಲ್ಲಿ ಕಾದಲ್​ ದೇಸಂ ಮೂಲಕ ಅವರು ತಮಿಳು ಚಿತ್ರರಂಗಕ್ಕೆ ಕಾಲಿಟ್ಟರು. ಛಾಯಾಗ್ರಾಹಕನಾಗಿ ದಶಕಗಳ ಕಾಲ ಕೆಲಸ ಮಾಡಿದ ಅನುಭವವನ್ನೇ ಇಟ್ಟುಕೊಂಡು 2005ರಲ್ಲಿ ಸಿನಿಮಾ ನಿರ್ದೇಶನ ಆರಂಭಿಸಿದರು.

ಇದನ್ನೂ ಓದಿ: Ramu Kanagal: ಪುಟ್ಟಣ್ಣ ಕಣಗಾಲ್ ಪುತ್ರ ರಾಮು ಕಣಗಾಲ್ ಕೊರೊನಾದಿಂದ ನಿಧನ

Koti Ramu Death : ನಟಿ ಮಾಲಾಶ್ರೀ ಗಂಡ, ನಿರ್ಮಾಪಕ ರಾಮು ನಿಧನಕ್ಕೆ ಸ್ಯಾಂಡಲ್‌ವುಡ್‌ ಕಂಬನಿ

Published On - 8:54 am, Fri, 30 April 21

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ