AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಕ್ಷದ ಶಾಸಕನ ಅಂತಿಮ ಯಾತ್ರೆಗೆ ಹೆಗಲು ಕೊಟ್ಟ ದಳಪತಿ ವಿಜಯ್

ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ನಿಧನರಾದ ತಮ್ಮ ಪಕ್ಷದ ಶಾಸಕ ವಿ.ಎಸ್. ಬಾಬು ಅವರ ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟು ಅಂತಿಮ ಗೌರವ ಸಲ್ಲಿಸಿದರು. ಚೆನ್ನೈನ ಪೆರಂಬೂರಿನಿಂದ ವಿದ್ಯುತ್ ಚಿತಾಗಾರದವರೆಗೂ ಶವವಾಹನದ ಜೊತೆ ನಡೆದುಕೊಂಡೇ ಸಾಗುವ ಮೂಲಕ ತಮ್ಮ ಆಪ್ತ ಶಾಸಕನಿಗೆ ಭಾವುಕ ವಿದಾಯ ಹೇಳಿದರು.

ಪಕ್ಷದ ಶಾಸಕನ ಅಂತಿಮ ಯಾತ್ರೆಗೆ ಹೆಗಲು ಕೊಟ್ಟ ದಳಪತಿ ವಿಜಯ್
ವಿಜಯ್
ರಾಜೇಶ್ ದುಗ್ಗುಮನೆ
|

Updated on: Nov 20, 2026 | 9:45 PM

Share

ಮುಖ್ಯಾಂಶಗಳು

  • ಶಾಸಕ ವಿ.ಎಸ್. ಬಾಬು ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟ ಸಿಎಂ ವಿಜಯ್
  • ಶವವಾಹನದ ಜೊತೆ ಚಿತಾಗಾರದವರೆಗೂ ನಡೆದುಕೊಂಡೇ ಸಾಗಿದ ಮುಖ್ಯಮಂತ್ರಿ
  • ಹೃದಯಾಘಾತದಿಂದ ನಿಧನರಾಗಿದ್ದ ಕೊಲತ್ತೂರು ಕ್ಷೇತ್ರದ ಟಿವಿಕೆ ಶಾಸಕ

ತಮಿಳುನಾಡು ಮುಖ್ಯಮಂತ್ರಿ ಹಾಗೂ ಟಿವಿಕೆ ಪಕ್ಷದ ಮುಖ್ಯಸ್ಥ ದಳಪತಿ ವಿಜಯ್ ಅವರು ಶುಕ್ರವಾರ ತಮ್ಮ ಪಕ್ಷದ ಶಾಸಕ ವಿ.ಎಸ್. ಬಾಬು ಅವರ ಅಂತಿಮ ಯಾತ್ರೆಯಲ್ಲಿ ಭಾಗವಹಿಸಿ ಭಾವುಕರಾದರು. ಕೊಲತ್ತೂರು ಕ್ಷೇತ್ರದ ಶಾಸಕರಾಗಿದ್ದ ಬಾಬು ಅವರ ಪಾರ್ಥಿವ ಶರೀರಕ್ಕೆ ವಿಜಯ್ ಸ್ವತಃ ಹೆಗಲು ಕೊಟ್ಟರು. ಚೆನ್ನೈನ ಪೆರಂಬೂರಿನಲ್ಲಿರುವ ಬಾಬು ಅವರ ನಿವಾಸದಿಂದ ಅಂತಿಮ ಯಾತ್ರೆ ಆರಂಭವಾದಾಗ ಈ ಭಾವುಕ ಕ್ಷಣ ಕಂಡುಬಂತು.

ಶೋಕತಪ್ತರಾಗಿದ್ದ ಮುಖ್ಯಮಂತ್ರಿ ವಿಜಯ್ ಅವರು ಮನೆಯಿಂದ ಪಾರ್ಥಿವ ಶರೀರವನ್ನು ಹೆಗಲ ಮೇಲೆ ಹೊತ್ತು ತಂದು ವಾಹನದಲ್ಲಿ ಇರಿಸಿದರು. ಬಳಿಕ ತಿರು ವಿ ಕಾ ನಗರದ ವಿದ್ಯುತ್ ಚಿತಾಗಾರದವರೆಗೂ ಸಾಗಿದ ಅಂತಿಮ ಯಾತ್ರೆಯಲ್ಲಿ ಅವರು ನಡೆದುಕೊಂಡೇ ಸಾಗಿದರು. ದಾರಿಯುದ್ದಕ್ಕೂ ಶವವಾಹನವನ್ನು ಒಂದು ಕೈಯಲ್ಲಿ ಹಿಡಿದುಕೊಂಡು ಹೆಜ್ಜೆ ಹಾಕುವ ಮೂಲಕ ತಮ್ಮ ಆಪ್ತ ಶಾಸಕನಿಗೆ ಗೌರವ ಸಲ್ಲಿಸಿದರು.

ಈ ಅಂತಿಮ ಯಾತ್ರೆಯಲ್ಲಿ ಎಂಡಿಎಂಕೆ ಪ್ರಧಾನ ಕಾರ್ಯದರ್ಶಿ , ರಾಜ್ಯ ಸಚಿವರು ಹಾಗೂ ಟಿವಿಕೆ ಪಕ್ಷದ ಶಾಸಕರು ಪಾಲ್ಗೊಂಡಿದ್ದರು. ಪಕ್ಷದ ಹಿರಿಯ ಪದಾಧಿಕಾರಿಗಳು ಮತ್ತು ಸಾವಿರಾರು ಕಾರ್ಯಕರ್ತರು ಮುಖ್ಯಮಂತ್ರಿಗಳ ಜೊತೆ ಹೆಜ್ಜೆ ಹಾಕಿದರು. ತಮ್ಮ ನೆಚ್ಚಿನ ನಾಯಕನನ್ನು ಕಳೆದುಕೊಂಡ ದುಃಖದಲ್ಲಿ ಕಾರ್ಯಕರ್ತರು ಕಣ್ಣೀರು ಹಾಕಿದರು.

ಕೊಲತ್ತೂರು ಶಾಸಕ ವಿ.ಎಸ್. ಬಾಬು ಅವರು ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ದೀರ್ಘಕಾಲದ ಚಿಕಿತ್ಸೆ ಪಡೆಯುತ್ತಿದ್ದ ಅವರಿಗೆ ಗುರುವಾರ ಹೃದಯಾಘಾತ ಸಂಭವಿಸಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದರು.

ಇದನ್ನೂ ಓದಿ: ದಳಪತಿ ವಿಜಯ್ ಭೇಟಿ ಮಾಡಿದ ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ

ಗುರುವಾರ ಪಾರ್ಥಿವ ಶರೀರವನ್ನು ಮನೆಗೆ ತಂದ ತಕ್ಷಣವೇ ಸಿಎಂ ವಿಜಯ್ ಅವರು ಬಾಬು ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದರು. ವಿವಿಧ ರಾಜಕೀಯ ಪಕ್ಷಗಳ ಗಣ್ಯರು ಕೂಡ ಅಗಲಿದ ಶಾಸಕನಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ
ಹಾಸನ: 32 ಕಾಡಾನೆಗಳ ಹಿಂಡು ಪತ್ತೆ, ಡ್ರೋನ್​​ ಕ್ಯಾಮರಾದಲ್ಲಿ ದೃಶ್ಯ ಸೆರೆ
ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ
ದನದ ಶೆಡ್ ಬಿಲ್ ಬಾಕಿ:ಪಂಚಾಯ್ತಿ ಮುಂದೆ ಎಮ್ಮೆ ಕರು ಕಟ್ಟಿದ ಫಲಾನುಭವಿ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಹೆಚ್​​​ಡಿಕೆ-ಡಿಕೆಶಿ ಜಟಾಪಟಿ:ಕುಮಾರಸ್ವಾಮಿ ನಡೆಗೆ ಸ್ವಾಮೀಜಿ ಅಸಮಾಧಾನ
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಲಕ್ಷ್ಮೀಪುತ್ರ ಟ್ರೇಲರ್‌ಗೆ ಶಿವಣ್ಣ ಫಿದಾ; ಚಿಕ್ಕಣ್ಣ ಭವಿಷ್ಯದ ಸ್ಟಾರ್
ಚಿನ್ನ ಗ್ರಾಂಗೆ 10 ಸಾವಿರದ ಒಳಗೆ ಬರುತ್ತಾ? ಹೂಡಿಕೆ ತಜ್ಞರು ಹೇಳಿದ್ದೇನು?
ಚಿನ್ನ ಗ್ರಾಂಗೆ 10 ಸಾವಿರದ ಒಳಗೆ ಬರುತ್ತಾ? ಹೂಡಿಕೆ ತಜ್ಞರು ಹೇಳಿದ್ದೇನು?
ಸಚಿವ ಸ್ಥಾನ ವಂಚಿತ ಹೆಬ್ಬಾಳ್ಕರ್, ಮಹದೇವಪ್ಪಗೆ ಪ್ರಮುಖ ಹುದ್ದೆ ಸಾಧ್ಯತೆ
ಸಚಿವ ಸ್ಥಾನ ವಂಚಿತ ಹೆಬ್ಬಾಳ್ಕರ್, ಮಹದೇವಪ್ಪಗೆ ಪ್ರಮುಖ ಹುದ್ದೆ ಸಾಧ್ಯತೆ
ಚಿನ್ನದ ಬೆಲೆ ದಿಢೀರ್​​ ಕುಸಿತ ಕಂಡಿದ್ದೇಕೆ? ಇಲ್ಲಿದೆ ತಜ್ಞರ ವಿವರಣೆ
ಚಿನ್ನದ ಬೆಲೆ ದಿಢೀರ್​​ ಕುಸಿತ ಕಂಡಿದ್ದೇಕೆ? ಇಲ್ಲಿದೆ ತಜ್ಞರ ವಿವರಣೆ
ದೆಹಲಿಗೆ ತೆರಳಿದ ಹರಿಪ್ರಸಾದ್​​: KPCC ಕಾರ್ಯಾಧ್ಯಕ್ಷರ ನೇಮಕ ಬಗ್ಗೆ ಚರ್ಚೆ?
ದೆಹಲಿಗೆ ತೆರಳಿದ ಹರಿಪ್ರಸಾದ್​​: KPCC ಕಾರ್ಯಾಧ್ಯಕ್ಷರ ನೇಮಕ ಬಗ್ಗೆ ಚರ್ಚೆ?
ಹಿರಿಯೂರು ಟಿಕೆಟ್ ಫೈಟ್: ಅಮಿತ್ ಶಾ ಭೇಟಿ ಬೆನ್ನಲ್ಲೇ ಕುಮಾರಸ್ವಾಮಿ ಹೇಳಿಕೆ
ಹಿರಿಯೂರು ಟಿಕೆಟ್ ಫೈಟ್: ಅಮಿತ್ ಶಾ ಭೇಟಿ ಬೆನ್ನಲ್ಲೇ ಕುಮಾರಸ್ವಾಮಿ ಹೇಳಿಕೆ
ಬಡವರಿಗೆ ವಿತರಿಸಬೇಕಿದ್ದ ಸರ್ಕಾರಿ ಆಸ್ಪತ್ರೆ ಔಷಧಿಗಳು ನದಿಯಲ್ಲಿ ಪತ್ತೆ!
ಬಡವರಿಗೆ ವಿತರಿಸಬೇಕಿದ್ದ ಸರ್ಕಾರಿ ಆಸ್ಪತ್ರೆ ಔಷಧಿಗಳು ನದಿಯಲ್ಲಿ ಪತ್ತೆ!