AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಬಣ್ಣ ಹಚ್ಚಲಿದ್ದಾರೆ ತಮಿಳುನಾಡು ಸಿಎಂ ವಿಜಯ್; ಆದರೆ ಇಲ್ಲಿದೆ ಒಂದು ಟ್ವಿಸ್ಟ್

ನಟ ದಳಪತಿ ವಿಜಯ್ ಅವರು ಬಣ್ಣದ ಲೋಕದಿಂದ ಅಂತರ ಕಾಯ್ದುಕೊಂಡಿದ್ದಾರೆ. ಸಿಎಂ ಆದ ಬಳಿಕ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. ಆದರೆ ಅವರು ಮತ್ತೆ ಬಣ್ಣ ಹಚ್ಚಲು ಸಜ್ಜಾಗಿದ್ದಾರೆ. ಹಾಗಂತ ಅವರು ಸಿನಿಮಾದಲ್ಲಿ ನಟಿಸಲ್ಲ. ಸರ್ಕಾರಿ ಯೋಜನೆಗಳ ಪ್ರಚಾರಕ್ಕಾಗಿ ನಟಿಸಲು ಮನಸ್ಸು ಮಾಡಿದ್ದಾರೆ.

ಮತ್ತೆ ಬಣ್ಣ ಹಚ್ಚಲಿದ್ದಾರೆ ತಮಿಳುನಾಡು ಸಿಎಂ ವಿಜಯ್; ಆದರೆ ಇಲ್ಲಿದೆ ಒಂದು ಟ್ವಿಸ್ಟ್
Thalapathy Vijay Image Credit source: PTI
ಮದನ್​ ಕುಮಾರ್​
|

Updated on: Nov 05, 2026 | 9:07 PM

Share

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಖ್ಯಾತ ನಟ ದಳಪತಿ ವಿಜಯ್ ಅವರು ಪ್ರಸ್ತುತ ರಾಜ್ಯದ ಆಡಳಿತಾತ್ಮಕ ಕೆಲಸಗಳಲ್ಲಿ ಸಂಪೂರ್ಣವಾಗಿ ನಿರತರಾಗಿದ್ದಾರೆ. ರಾಜಕೀಯ ಪ್ರವೇಶದ ವೇಳೆಯೇ ಸಿನಿಮಾಗಳಿಂದ ನಿವೃತ್ತಿ ಘೋಷಿಸಿದ್ದ ವಿಜಯ್, ಮತ್ತೆ ಬಣ್ಣ ಹಚ್ಚುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಆದರೆ, ಅವರ ಅಭಿಮಾನಿಗಳಿಗೆ ಹಾಗೂ ತಮಿಳುನಾಡಿನ ಜನತೆಗೆ ಈಗೊಂದು ಅಚ್ಚರಿಯ ಸುದ್ದಿ ಹೊರಬಿದ್ದಿದ್ದು, ವಿಜಯ್ ಮತ್ತೆ ಕ್ಯಾಮೆರಾ ಮುಂದೆ ಬರಲು ಸಜ್ಜಾಗಿದ್ದಾರೆ! ಹೌದು, ಸಿಎಂ ವಿಜಯ್ ಅವರು ಮತ್ತೆ ನಟಿಸಲು ನಿರ್ಧರಿಸಿದ್ದಾರೆ. ಆದರೆ ಇದು ಯಾವುದೇ ವಾಣಿಜ್ಯ ಸಿನಿಮಾಗಾಗಿ ಅಲ್ಲ. ಬದಲಾಗಿ ತಮಿಳುನಾಡು ಸರ್ಕಾರ ಪ್ರಾಯೋಜಿತ ಜಾಹೀರಾತಿನಲ್ಲಿ.

ಸಾಮಾನ್ಯವಾಗಿ ಸರ್ಕಾರಗಳು ತಮ್ಮ ಜನಕಲ್ಯಾಣ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸಲು ಬ್ರಾಂಡ್ ಅಂಬಾಸಿಡರ್‌ಗಳನ್ನು ಅಥವಾ ಪ್ರಸಿದ್ಧ ಸಿನಿಮಾ ನಟರನ್ನು ಬಳಸಿಕೊಳ್ಳುತ್ತವೆ. ಇದರಿಂದ ಸರ್ಕಾರಿ ಯೋಜನೆಗಳಿಗೆ ವ್ಯಾಪಕ ಪ್ರಚಾರ ಸಿಗುತ್ತದೆ. ಆದರೆ, ತಮಿಳುನಾಡಿನಲ್ಲಿ ಸ್ವತಃ ಮುಖ್ಯಮಂತ್ರಿ ವಿಜಯ್ ಅವರಿಗಿಂತ ದೊಡ್ಡ ಜನಪ್ರಿಯ ಮುಖ ಮತ್ತೊಂದಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರದ ಯೋಜನೆಗಳ ಜಾಗೃತಿಗಾಗಿ ತಾವೇ ಜಾಹೀರಾತಿನಲ್ಲಿ ನಟಿಸಲು ವಿಜಯ್ ನಿರ್ಧರಿಸಿದ್ದಾರೆ.

ಸಾಮಾನ್ಯವಾಗಿ ಸರ್ಕಾರಿ ಜಾಹೀರಾತುಗಳಿಗೆ ಸಣ್ಣ ಮಟ್ಟದ ಬಜೆಟ್ ಇರುತ್ತದೆ. ಆದರೆ, ಈ ಜಾಹೀರಾತನ್ನು ಬೃಹತ್ ವೆಚ್ಚದಲ್ಲಿ, ಬಿಗ್ ಸ್ಕೇಲ್‌ನಲ್ಲಿ ಸಿನಿಮಾ ಮಾದರಿಯಲ್ಲೇ ನಿರ್ಮಿಸಲು ಯೋಜಿಸಲಾಗಿದೆ. ವಿಶೇಷವೆಂದರೆ, ಈ ಜಾಹೀರಾತನ್ನು ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ಗೌತಮ್ ವಾಸುದೇವ್ ಮೆನನ್ ನಿರ್ದೇಶಿಸಲಿದ್ದಾರೆ ಎಂದು ವರದಿಯಾಗಿದೆ. ಅವರ ಜೊತೆಗೆ ಚಿತ್ರರಂಗದ ಅನುಭವಿ ತಾಂತ್ರಿಕ ವರ್ಗವೂ ಈ ಪ್ರಾಜೆಕ್ಟ್‌ನಲ್ಲಿ ಭಾಗಿಯಾಗಲಿದೆ.

ಇದನ್ನೂ ಓದಿ: ಅಪರೂಪದ ಅವಕಾಶ ಮಿಸ್ ಮಾಡಿಕೊಂಡ ದಳಪತಿ ವಿಜಯ್; ಕಾರಣವೇನು?

ಈ ಜಾಹೀರಾತಿನ ಚಿತ್ರೀಕರಣಕ್ಕಾಗಿ ಮುಖ್ಯಮಂತ್ರಿ ವಿಜಯ್ ಅವರು ಒಟ್ಟು ಎರಡು ದಿನಗಳ ಕಾಲ್‌ಶೀಟ್ ನೀಡಿದ್ದಾರೆ ಎನ್ನಲಾಗಿದೆ. ತಮಿಳುನಾಡಿನ 5 ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆ ಮುಗಿದ ತಕ್ಷಣವೇ ಈ ಜಾಹೀರಾತಿನ ಶೂಟಿಂಗ್ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ. ಚಿತ್ರರಂಗಕ್ಕೆ ವಿದಾಯ ಹೇಳಿದ್ದ ತಮ್ಮ ನೆಚ್ಚಿನ ನಟ ಮತ್ತೆ ಬಣ್ಣ ಹಚ್ಚುವುದನ್ನು ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಚಿಕ್ಕಮಗಳೂರು: ನಕಲಿ ಜೇನುತುಪ್ಪ ತಯಾರಿಸುತ್ತಿದ್ದ ಅಸ್ಸಾಂ ಗ್ಯಾಂಗ್ ಲಾಕ್
ಚಿಕ್ಕಮಗಳೂರು: ನಕಲಿ ಜೇನುತುಪ್ಪ ತಯಾರಿಸುತ್ತಿದ್ದ ಅಸ್ಸಾಂ ಗ್ಯಾಂಗ್ ಲಾಕ್
ಹುಬ್ಬಳ್ಳಿ-ಧಾರವಾಡ ಪೊಲೀಸರ ಬಿಗ್ ಆಪರೇಷನ್
ಹುಬ್ಬಳ್ಳಿ-ಧಾರವಾಡ ಪೊಲೀಸರ ಬಿಗ್ ಆಪರೇಷನ್
'ಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ'
'ಎಸ್​​ಐಆರ್​​ ಇಲ್ಲದಿದ್ದರೆ ಅವರಪ್ಪನ ಆಣೆ ಬಿಜೆಪಿ ಗೆಲ್ಲಲ್ಲ'
ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರು: ಬರಿದಾಗುತ್ತಿರುವ KRS!
ತಮಿಳುನಾಡಿಗೆ ಹರಿಯುತ್ತಿರುವ ಕಾವೇರಿ ನೀರು: ಬರಿದಾಗುತ್ತಿರುವ KRS!
ಎಳೆದಾಡಿದ ಪೊಲೀಸ್ರು: ಅಂಗಿ ಬಿಚ್ಚಿ ಗಾಯ ತೋರಿಸಿದ ರವಿಕುಮಾರ್
ಎಳೆದಾಡಿದ ಪೊಲೀಸ್ರು: ಅಂಗಿ ಬಿಚ್ಚಿ ಗಾಯ ತೋರಿಸಿದ ರವಿಕುಮಾರ್
ಅಣ್ಣನ ಆರೋಗ್ಯ ವಿಚಾರಿಸಲು ಬೆಂಗಳೂರಿಗೆ ಬಂದ ರಜನೀಕಾಂತ್
ಅಣ್ಣನ ಆರೋಗ್ಯ ವಿಚಾರಿಸಲು ಬೆಂಗಳೂರಿಗೆ ಬಂದ ರಜನೀಕಾಂತ್
ಬಸ್ ದರ ಏರಿಕೆ ಖಂಡಿಸಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಿಜೆಪಿ ಪ್ರತಿಭಟನೆ
ಬಸ್ ದರ ಏರಿಕೆ ಖಂಡಿಸಿ ಬೆಂಗಳೂರಿನ ಮೆಜೆಸ್ಟಿಕ್‌ನಲ್ಲಿ ಬಿಜೆಪಿ ಪ್ರತಿಭಟನೆ
‘ಎಲ್ಲರೂ ನೋಡಲೇಬೇಕಾದ ಸಿನಿಮಾ’; ರಾಮಾಯಣ ನೋಡಿ ವಿಮರ್ಶೆ ಕೊಟ್ಟ ಫ್ಯಾನ್ಸ್
‘ಎಲ್ಲರೂ ನೋಡಲೇಬೇಕಾದ ಸಿನಿಮಾ’; ರಾಮಾಯಣ ನೋಡಿ ವಿಮರ್ಶೆ ಕೊಟ್ಟ ಫ್ಯಾನ್ಸ್
ಚನ್ನಪಟ್ಟಣ: ಸುಳ್ಳೇರಿ ಗ್ರಾಮದಲ್ಲಿ ಮನೆ ಬಳಿಗೇ ಬರುತ್ತಿದೆ ಚಿರತೆ!
ಚನ್ನಪಟ್ಟಣ: ಸುಳ್ಳೇರಿ ಗ್ರಾಮದಲ್ಲಿ ಮನೆ ಬಳಿಗೇ ಬರುತ್ತಿದೆ ಚಿರತೆ!
ಹಣ ಹಾಕಿದ್ರೆ ದೀಪಾವಳಿ ಹಬ್ಬ ಜೋರಾಗಿ ಮಾಡುತ್ತೇವೆ: ಗೃಹಲಕ್ಷ್ಮೀಯರು
ಹಣ ಹಾಕಿದ್ರೆ ದೀಪಾವಳಿ ಹಬ್ಬ ಜೋರಾಗಿ ಮಾಡುತ್ತೇವೆ: ಗೃಹಲಕ್ಷ್ಮೀಯರು