ಬರುತ್ತಿದೆ ಸಿಎಂ ವಿಜಯ್ ಪುತ್ರನ ಮೊದಲ ಸಿನಿಮಾ, ಬಿಡುಗಡೆ ದಿನಾಂಕ ಘೋಷಣೆ
Thalapathy Vijay: ತಮಿಳು ಚಿತ್ರರಂಗದ ಸ್ಟಾರ್ ನಟ ದಳಪತಿ ವಿಜಯ್ ಈಗ ಸಿಎಂ ಆಗಿದ್ದಾರೆ. ಚಿತ್ರರಂಗಕ್ಕೆ ವಿದಾಯ ಹೇಳಿದ್ದಾರೆ. ವಿಜಯ್ ಅವರ ಸ್ಥಾನವನ್ನು ತುಂಬಬಲ್ಲ ನಟ ಯಾರು ಎಂಬ ಚರ್ಚೆ ಶುರುವಾಗಿದೆ. ಇದೆಲ್ಲದರ ನಡುವೆ ಸಿಎಂ ವಿಜಯ್ ಅವರ ಪುತ್ರನ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು, ಸಿನಿಮಾದ ಬಿಡುಗಡೆ ದಿನಾಂಕವನ್ನು ಸಹ ಘೋಷಣೆ ಮಾಡಲಾಗಿದೆ. ಕೂಡಲೇ ಸಿನಿಮಾದ ಟ್ರೈಲರ್ ಸಹ ಬಿಡುಗಡೆ ಆಗಲಿದೆ.

ತಮಿಳು ಚಿತ್ರರಂಗದ ಸ್ಟಾರ್ ನಟ ದಳಪತಿ ವಿಜಯ್ (Thalapathy Vijay) ಈಗ ಸಿಎಂ ಆಗಿದ್ದಾರೆ. ಚಿತ್ರರಂಗಕ್ಕೆ ವಿದಾಯ ಹೇಳಿದ್ದಾರೆ. ವಿಜಯ್ ಅವರ ಸ್ಥಾನವನ್ನು ತುಂಬಬಲ್ಲ ನಟ ಯಾರು ಎಂಬ ಚರ್ಚೆ ಶುರುವಾಗಿದೆ. ಇದೆಲ್ಲದರ ನಡುವೆ ಸಿಎಂ ವಿಜಯ್ ಅವರ ಪುತ್ರನ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು, ಸಿನಿಮಾದ ಬಿಡುಗಡೆ ದಿನಾಂಕವನ್ನು ಸಹ ಘೋಷಣೆ ಮಾಡಲಾಗಿದೆ. ಕೂಡಲೇ ಸಿನಿಮಾದ ಟ್ರೈಲರ್ ಸಹ ಬಿಡುಗಡೆ ಆಗಲಿದೆ.
ವಿಜಯ್ ಅವರ ಪುತ್ರ ಜೇಸನ್ ಸಂಜಯ್ ತಮಿಳು ಚಿತ್ರರಂಗದ ಪ್ರವೇಶಿಸಿದ್ದಾರೆ ಆದರೆ ನಟನಾಗಿ ಅಲ್ಲ ಬದಲಿಗೆ ನಿರ್ದೇಶಕನಾಗಿ. ಜೇಸನ್ ಸಂಜಯ್ ನಿರ್ದೇಶನ ಮಾಡಿರುವ ಮೊದಲ ಸಿನಿಮಾ ಇದೀಗ ಬಿಡುಗಡೆಗೆ ರೆಡಿಯಾಗಿದೆ. ಜೇಸನ್ ಅವರು ಸಂದೀಪ್ ಕೃಷ್ಣ ಅವರನ್ನು ನಾಯಕನನ್ನಾಗಿ ಹಾಕಿಕೊಂಡು ‘ಸಿಗ್ಮ’ ಹೆಸರಿನ ಸಿನಿಮಾ ನಿರ್ದೇಶಿಸಿದ್ದಾರೆ. ಇದೊಂದು ಯೂತ್ಫುಲ್ ಆಕ್ಷನ್ ಸಿನಿಮಾ ಆಗಿದ್ದು, ಸಿನಿಮಾ ಜುಲೈ31ಕ್ಕೆ ಬಿಡುಗಡೆ ಆಗಲಿದೆ.
ವಿಜಯ್ ಪುತ್ರನ ಮೊದಲ ಸಿನಿಮಾಕ್ಕೆ ದೊಡ್ಡ ನಿರ್ಮಾಣ ಸಂಸ್ಥೆ ಆಗಿರುವ ಲೈಕಾ ಪ್ರೊಡಕ್ಷನ್ಸ್ ಬಂಡವಾಳ ಹೂಡಿದೆ. ಈ ಸಿನಿಮಾನಲ್ಲಿ ನಟಿ ಫಾರಿಯಾ ಅಬ್ದುಲ್ಲಾ ನಾಯಕಿ. ಕನ್ನಡಿಗ ಸಂಪತ್ ರಾಜ್ ಸಹ ಈ ಸಿನಿಮಾದ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾದ ಟೀಸರ್ ಈಗಾಗಲೇ ಬಿಡುಗಡೆ ಆಗಿದ್ದು, ಭಿನ್ನವಾಗಿ, ಫ್ರೆಶ್ ಆಗಿ ಸಿನಿಮಾವನ್ನು ಜೇಸನ್ ಸಂಜಯ್ ನಿರ್ದೇಶಿಸಿದಂತಿದ್ದಾರೆ. ಸಿನಿಮಾಕ್ಕೆ ಎಸ್ ತಮನ್ ಅವರು ಸಂಗೀತ ನೀಡಿದ್ದಾರೆ.
ಇದನ್ನೂ ಓದಿ:ವಿಜಯ್ ಕೊನೆಯ ಸಿನಿಮಾ ಆಗಬೇಕಿದ್ದಿದ್ದು ‘ಜನ ನಾಯಗನ್’ ಅಲ್ಲ, ಮತ್ಯಾವುದು?
ಜೇಸನ್ ವಿಜಯ್ ಅವರಿಗೆ ಇದು ಮೊದಲ ಸಿನಿಮಾ ಆಗಿದೆ. ಜೇಸನ್ ವಿಜಯ್, ನಾಯಕನಾಗಿ ಎಂಟ್ರಿ ಕೊಡಲಿದ್ದಾರೆ ಎಂಬ ಸುದ್ದಿಗಳು ಹರಡಿದ್ದವು ಆದರೆ ಅವರು ನಿರ್ದೇಶಕನಾಗಿ ತಮಿಳು ಚಿತ್ರರಂಗಕ್ಕೆ ಎಂಟ್ರಿ ನೀಡಿದ್ದಾರೆ. ಸಿನಿಮಾ ಆರಂಭಕ್ಕೂ ಮುನ್ನ ಕತೆಯನ್ನು ವಿಜಯ್ ಅವರಿಗೆ ಹೇಳಿ ಒಪ್ಪಿಗೆಯನ್ನು ಸಂಜಯ್ ಪಡೆದುಕೊಂಡಿದ್ದರಂತೆ.
ಕೆಲ ತಿಂಗಳುಗಳಲ್ಲಿ ವಿಜಯ್ ಖಾಸಗಿ ಬದುಕಿನಲ್ಲಿ ಸಾಕಷ್ಟು ವ್ಯತ್ಯಾಸಗಳು ನಡೆದಿವೆ. ವಿಜಯ್ ಪತ್ನಿ ಸಂಗೀತ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ವಿಜಯ್ ಸಹ ತಮ್ಮ ತ್ರಿಷಾ ಜೊತೆಗಿನ ಸಂಬಂಧವನ್ನು ಬಹಿರಂಗಪಡಿಸಿದ್ದಾರೆ. ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಬಳಿಕ ವಿಜಯ್ ಪುತ್ರ ಸಂಜಯ್, ಸಾಮಾಜಿಕ ಜಾಲತಾಣದಲ್ಲಿ ತಮ್ಮ ಹೆಸರಿನ ಜೊತೆಗೆ ಇದ್ದ ವಿಜಯ್ ಹೆಸರನ್ನು ತೆಗೆದು ಹಾಕಿದ್ದಾರೆ. ಈಗ ಮಗನ ಮೊದಲ ಸಿನಿಮಾ ಬಿಡುಗಡೆ ಸಂದರ್ಭದಲ್ಲಿ ವಿಜಯ್ ಬೆಂಬಲ ನೀಡುತ್ತಾರಾ ಅಥವಾ ದೂರವೇ ನಿಲ್ಲುತ್ತಾರಾ? ಎಂಬುದು ಕುತೂಹಲ ಕೆರಳಿಸಿದೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ





