AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಮಿಳುನಾಡು ಚುನಾವಣೆಯಲ್ಲಿ ಪಿಎಂ ಮೋದಿಯ ಧುರಂಧರ್ ದಳಪತಿ ವಿಜಯ್? ಶುರುವಾಗಿದೆ ಚರ್ಚೆ

ತಮಿಳುನಾಡು ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಟಿವಿಕೆ ಮುನ್ನಡೆ ಸಾಧಿಸಿದೆ. ಇದರ ಬೆನ್ನಲ್ಲೇ ನಟ ವಿಜಯ್ ರಾಜಕೀಯ ಪ್ರವೇಶದ ಕುರಿತು ದೊಡ್ಡ ಚರ್ಚೆ ಶುರುವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರೇ ವಿಜಯ್ ಅವರನ್ನು ದ್ರಾವಿಡ ಪಕ್ಷಗಳ ಭದ್ರಕೋಟೆಯನ್ನು ಭೇದಿಸಲು ಕಣಕ್ಕಿಳಿಸಿದ್ದಾರೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. 2014ರಲ್ಲಿ ಮೋದಿ-ವಿಜಯ್ ಭೇಟಿ ಪ್ರಸ್ತುತ ಸನ್ನಿವೇಶದಲ್ಲಿ ಮಹತ್ವ ಪಡೆದಿದೆ.

ತಮಿಳುನಾಡು ಚುನಾವಣೆಯಲ್ಲಿ ಪಿಎಂ ಮೋದಿಯ ಧುರಂಧರ್ ದಳಪತಿ ವಿಜಯ್? ಶುರುವಾಗಿದೆ ಚರ್ಚೆ
ವಿಜಯ್-ಮೋದಿ
ರಾಜೇಶ್ ದುಗ್ಗುಮನೆ
|

Updated on: May 04, 2026 | 12:33 PM

Share

ತಮಿಳುನಾಡು ಚುನಾವಣಾ ಫಲಿತಾಂಶ ಹೊರ ಬಂದಿದೆ. ಟಿವಿಕೆ ಮುನ್ನಡೆ ಸಾಧಿಸುವ ಮೂಲಕ ಡಿಎಂಕೆ ಹಾಗೂ ಎಐಎಡಿಎಂಕೆ ಪಕ್ಷವನ್ನು ಹಿಂದಿಕ್ಕಿದೆ. ಹೀಗಿರುವಾಗಲೇ ಸೋಶಿಯಲ್ ಮೀಡಿಯಾದಲ್ಲಿ ಒಂದು ದೊಡ್ಡ ಚರ್ಚೆ ಶುರುವಾಗಿದೆ. ‘ತಮಿಳುನಾಡಿನಲ್ಲಿ ದಳಪತಿ ವಿಜಯ್ ಕಣಕ್ಕಿಳಿಸಿದ್ದು ಪ್ರಧಾನಿ ನರೇಂದ್ರ ಮೋದಿಯೇ? ವಿಜಯ್ ಅವರು ಮೋದಿಯ ಧುರಂಧರ್’ ಎಂದೆಲ್ಲ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ.

‘ಧುರಂಧರ್’ ಸಿನಿಮಾದಲ್ಲಿ ಜಸ್ಕಿರತ್ ಸಿಂಗ್ ಅವರು ಹಮ್ಜಾ ಅಲಿ ಮಜಾರಿ ಎಂಬ ಹೆಸರಿನಲ್ಲಿ ಪಾಕಿಸ್ತಾನಕ್ಕೆ ತೆರಳಿ ಅಲ್ಲಿನ ಉಗ್ರ ಜಾಲವನ್ನು ನಾಶ ಮಾಡುತ್ತಾರೆ. ಅವರನ್ನು ಭಾರತದ ‘ಧುರಂಧರ್’ ಎಂದು ಕರೆಯಲಾಗುತ್ತದೆ. ಅದೇ ರೀತಿ, ತಮಿಳುನಾಡಿನ ದ್ರಾವಿಡ ಪಕ್ಷಗಳ ಭದ್ರಕೋಟೆಯನ್ನು ಭೇದಿಸಲು ವಿಜಯ್ ಅವರನ್ನು ಕಣಕ್ಕಿಳಿಸಿದ್ದು ಮೋದಿಯೇ ಎಂಬ ಮಾತುಗಳು ಕೇಳಿಬರುತ್ತಿವೆ.

ಅದು 2014ರ ಸಮಯ. ಆ ವರ್ಷ ಏಪ್ರಿಲ್ 16ರಂದು ಕೊಯಮತ್ತೂರಿನಲ್ಲಿ ನಟ ವಿಜಯ್ ಅವರು ಅಂದಿನ ಗುಜರಾತ್ ಮುಖ್ಯಮಂತ್ರಿ ಮತ್ತು ಬಿಜೆಪಿಯ ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿದ್ದ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದರು. ಈ ಫೋಟೋವನ್ನು ಮೋದಿ ಹಂಚಿಕೊಂಡಿದ್ದರು. ಈ ಭೇಟಿ ರಾಜಕೀಯೇತರ ಎಂದು ವಿವರಿಸಲಾಗಿತ್ತು. ಇಬ್ಬರೂ ಪರಸ್ಪರ ಲೋಕಾರೂಢ ವಿಷಯಗಳ ಬಗ್ಗೆ ಮಾತನಾಡಿದ್ದರು ಎನ್ನಲಾಗಿದೆ. ಆ ಸಮಯದಲ್ಲಿ ತಮಿಳುನಾಡಿನಲ್ಲಿ ರಜನಿಕಾಂತ್ ಅವರನ್ನೂ ಭೇಟಿ ಮಾಡಿದ್ದ ಮೋದಿ ಅವರು, ರಾಜ್ಯದ ಪ್ರಭಾವಿ ತಾರೆಗಳ ಮೂಲಕ ಮತದಾರರನ್ನು ತಲುಪುವ ಪ್ರಯತ್ನ ಮಾಡಿದ್ದರು. ಆ ಸಮಯದಲ್ಲಿ ಈ ಭೇಟಿ ದೊಡ್ಡ ಸಂಚಲನ ಮೂಡಿಸಿತ್ತಾದರೂ, ವಿಜಯ್ ಅವರು ಆಗ ಯಾವುದೇ ರಾಜಕೀಯ ಪಕ್ಷ ಸೇರದೆ ದೂರ ಉಳಿದಿದ್ದರು. ಅಂದು ಮೋದಿ ಹಂಚಿಕೊಂಡಿದ್ದ ಫೋಟೋವನ್ನು ರೀಟ್ವೀಟ್ ಮಾಡಲಾಗುತ್ತಿದೆ.

ಇದನ್ನೂ ಓದಿ: ‘ಧುರಂಧರ್’ ನಿರ್ದೇಶಕನ ಮೇಲೆ ಕತೆ ಕದ್ದ ಆರೋಪ: ಕರ್ನಾಟಕ ಹೈಕೋರ್ಟ್ ಹೇಳಿದ್ದೇನು?

‘ಸಾಮಾನ್ಯವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮನ್ನು ಭೇಟಿ ಮಾಡಲು ಬರುವ ಅತಿಥಿಗಳನ್ನು ಎದುರುಬದುರಿನ ಆಸನಗಳಲ್ಲಿ ಕೂರಿಸುತ್ತಾರೆ. ಆದರೆ 2014ರಲ್ಲಿ ನಟ ವಿಜಯ್ ಅವರನ್ನು ಭೇಟಿ ಮಾಡಿದಾಗ, ಅವರನ್ನು ತಮ್ಮ ಪಕ್ಕದಲ್ಲೇ ಕೂರಿಸಿಕೊಂಡಿದ್ದರು. ಆಗ ಅರ್ಥವಾಗುತ್ತಿರಲಿಲ್ಲ, ಈಗ ಅರ್ಥವಾಗುತ್ತಿದೆ’ ಎಂದು ಕೆಲವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಬಾಗಲಕೋಟೆ ಜೋಡೆತ್ತುಗಳ ಕಮಾಲ್‌.. 10 ಗಂಟೆಗಳಲ್ಲಿ 20 ಎಕರೆ ಬಿತ್ತನೆ!
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಮಹಿಳೆಯ ಸಾಲು ಸಾಲು ಕಷ್ಟ ಕೇಳಿ ಕಣ್ಣೀರಿಟ್ಟ ಸಂಸದ ಶ್ರೇಯಸ್ ಪಟೇಲ್
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಇಂಡಸ್ಟ್ರಿಗೆ ಅಪ್ಪ ಆಗಿ ಬಿಟ್ಟಿದ್ದಾರಂಂತೆ ರಂಗಾಯಣ ರಘು: ವಿಡಿಯೋ ನೋಡಿ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ಹೆಣ್ಮಕ್ಕಳು ಬೇಕು ಸರ್.. ಸಿಎಂ ಮುಂದೆ ಅಳಲು ತೋಡಿಕೊಂಡ ಯುವಕ
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ನಟಿಸೋದು ಇಷ್ಟ, ಡ್ಯಾನ್ಸ್ ಮಾಡೋದು ಕಷ್ಟ: ಹಿರಿಯ ನಟ ಅನಂತ್ ನಾಗ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದ ದಿನಗಳ ನೆನಪಿಸಿಕೊಂಡ ಅನಂತ್
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
‘ದಾದಾ ಸಾಹೇಬ್ ಫಾಲ್ಕೆ’ ಘೋಷಣೆಯಾದ ದಿನ ಮಾಡಿದ್ದೇನು? ಅನಂತ್ ನಾಗ್ ಉತ್ತರ
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ರಂಗಭೂಮಿ ಹಾಗೂ ಬದುಕಿನ ಪಯಣ ಬಿಚ್ಚಿಟ್ಟ ಅನಂತ್ ನಾಗ್
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಬದಲಾಗುತ್ತಿರುವ ಇಂದಿನ ರಾಜಕೀಯ ವ್ಯವಸ್ಥೆ ಬಗ್ಗೆ ಅನಂತ್ ನಾಗ್ ನೇರ ಮಾತು
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ
ಸಿಗಂದೂರು ರಸ್ತೆಯಲ್ಲಿ ನಿಗೂಢ ಪೂಜೆ, ಮಾಟಮಂತ್ರದಿಂದ ಬೆಚ್ಚಿಬಿದ್ದ ಜನ