ವಿಜಯ್​ ಸೇತುಪತಿ ಮೇಲೆ ಹಲ್ಲೆ ಮಾಡಿದವರಿಗೆ ನಗದು ಬಹುಮಾನ ಘೋಷಿಸಿದ ರಾಜಕಾರಣಿ

ವಿಮಾನ ಇಳಿದು ಏರ್​​ಪೋಟ್​​​ನಿಂದ ಹೊರ ಬರುತ್ತಿದ್ದ ವೇಳೆ ವಿಜಯ್ ಸೇತುಪತಿ ಮತ್ತು ಅವರ ಪಿಎ ಮೇಲೆ ಹಿಂದಿನಿಂದ ಬಂದು ಸಹ ಪ್ರಯಾಣಿಕ ಹಲ್ಲೆಗೆ ಯತ್ನಿಸಿದ್ದ. ಈ ವಿಡಿಯೋ ವೈರಲ್​ ಆಗಿತ್ತು.

ವಿಜಯ್​ ಸೇತುಪತಿ ಮೇಲೆ ಹಲ್ಲೆ ಮಾಡಿದವರಿಗೆ ನಗದು ಬಹುಮಾನ ಘೋಷಿಸಿದ ರಾಜಕಾರಣಿ
ವಿಜಯ್​ ಮೇಲೆ ಹಲ್ಲೆ ಆದ ದೃಶ್ಯ ಮತ್ತು ಅರ್ಜುನ್​ ಸಂಪತ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Nov 08, 2021 | 4:07 PM

ವಿಜಯ್​ ಸೇತುಪತಿ (Vijay Sethupathi) ಮೇಲೆ ಬೆಂಗಳೂರು ವಿಮಾನ ನಿಲ್ದಾಣದಲ್ಲಿ(Kempegowda International Airport Bengaluru)  ಹಲ್ಲೆ ಮಾಡಿದ ಪ್ರಕರಣ ದೊಡ್ಡ ಮಟ್ಟದಲ್ಲಿ ಹೈಪ್​ ಪಡೆದುಕೊಂಡಿತ್ತು. ಇದಕ್ಕೆ ಸಾಕಷ್ಟು ಜನರು ವಿರೋಧ ವ್ಯಕ್ತಪಡಿಸಿದ್ದರು. ಹಲ್ಲೆ ಮಾಡಿದ ವ್ಯಕ್ತಿಗೆ ಶಿಕ್ಷೆ ಆಗಬೇಕು ಎಂದು ಕೆಲವರು ಆಗ್ರಹಿಸಿದ್ದರು. ‘ಈ ಪ್ರಕರಣವನ್ನು ಇಷ್ಟೊಂದು ದೊಡ್ಡದು ಮಾಡುವ ಅವಶ್ಯಕತೆಯೇ ಇರಲಿಲ್ಲ. ಹಲ್ಲೆ ಮಾಡಿದ ವ್ಯಕ್ತಿ ​ಕುಡಿದಿದ್ದ ಅಷ್ಟೇ’ ಎಂದು ವಿಜಯ್​ ಸೇತುಪತಿ ಸ್ಪಷ್ಟಪಡಿಸಿದ್ದರು. ಈ ಬೆನ್ನಲ್ಲೇ ವಿಜಯ್​ ಸೇತುಪತಿ ಮೇಲೆ ಹಲ್ಲೆ ಮಾಡಿದರೆ ನಗದು ಬಹುಮಾನ ನೀಡುವುದಾಗಿ ರಾಜಕಾರಣಿ ಒಬ್ಬರು ಘೋಷಿಸಿದ್ದಾರೆ. ಈ ಮೂಲಕ ವಿವಾದ ಹುಟ್ಟುಹಾಕಿದ್ದಾರೆ. ಈ ಹೇಳಿಕೆ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ರಾಜಕಾರಣಿ ಬಗ್ಗೆ ಎಲ್ಲರೂ ದ್ವೇಷ ಕಾರುತ್ತಿದ್ದಾರೆ.

ನವೆಂಬರ್​ 2 ರಾತ್ರಿ ನಟ ವಿಜಯ್​ ಸೇತು ಪತಿ ಬೆಂಗಳೂರಿಗೆ ಬಂದಿದ್ದರು. ವಿಮಾನದಲ್ಲಿ ಬರುವ ವೇಳೆ ಸಹಪ್ರಯಾಣಿಕನ ಜೊತೆ ವಾಗ್ವಾದ ಏರ್ಪಟ್ಟಿತ್ತು. ವಿಮಾನ ಇಳಿದು ಏರ್​​ಪೋಟ್​​​ನಿಂದ ಹೊರ ಬರುತ್ತಿದ್ದ ವೇಳೆ ವಿಜಯ್ ಸೇತುಪತಿ ಮತ್ತು ಅವರ ಪಿಎ ಮೇಲೆ ಹಿಂದಿನಿಂದ ಬಂದು ಸಹ ಪ್ರಯಾಣಿಕ ಹಲ್ಲೆಗೆ ಯತ್ನಿಸಿದ್ದ. ಈ ವಿಡಿಯೋ ವೈರಲ್​ ಆಗಿತ್ತು. ಇದಕ್ಕೆ ಸಂಬಂಧಿಸಿ ಸ್ಪಷ್ಟನೆ ನೀಡಿದ್ದ ವಿಜಯ್​ ಸೇತುಪತಿ, ‘ನಮ್ಮ ಮೇಲೆ ಹಲ್ಲೆಗೆ ಪ್ರಯತ್ನಿಸಿದ ವ್ಯಕ್ತಿ ನನ್ನ ಅಭಿಮಾನಿ ಅಲ್ಲ. ವಿಮಾನದಲ್ಲಿ ಆತ ಸಹ-ಪ್ರಯಾಣಿಕ ಆಗಿದ್ದ. ಪ್ರಯಾಣದ ವೇಳೆ ನಮ್ಮೊಂದಿಗೆ ವಾಗ್ವಾದ ಮಾಡುತ್ತಲೇ ಇದ್ದ. ಆತ ಕುಡಿದಿದ್ದ’ ಎಂದು ವಿಜಯ್​ ಸೇತುಪತಿ ಹೇಳಿದ್ದರು.

ಹಲ್ಲೆ ಮಾಡಿದ ವ್ಯಕ್ತಿ ಹೆಸರು ಮಹಾ ಗಾಂಧಿ. ಹಲ್ಲೆ ಬೆನ್ನಲ್ಲೇ ಅವರು ಗಂಭೀರ ಆರೋಪವೊಂದನ್ನು ಮಾಡಿದ್ದರು. ‘ಸ್ವಾತಂತ್ರ್ಯ ಹೋರಾಟಗಾರ ಮುತ್ತುರಾಮಲಿಂಗ ತೇವರ್​ಗೆ ವಿಜಯ್​ ಸೇತುಪತಿ ಅವಮಾನ ಮಾಡಿದ್ದಾರೆ. ಆ ಕಾರಣಕ್ಕೆ ನಾನು ಹಲ್ಲೆ ಮಾಡಿದ್ದೆ’ ಎಂದು ಮಹಾ ಹೇಳಿಕೊಂಡಿದ್ದಾರೆ. ಇದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.  ಆದರೆ, ಇದನ್ನು ವಿಜಯ್​ ಒಪ್ಪಿಕೊಂಡಿಲ್ಲ.

ತಮಿಳುನಾಡಿನ ವಿವಾದಾತ್ಮಕ ರಾಜಕಾರಣಿ ಅರ್ಜುನ್​ ಸಂಪತ್​ ಅವರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ‘ವಿಜಯ್​ ಸೇತುಪತಿ ಅವರು ಮುತ್ತುರಾಮಲಿಂಗ ತೇವರ್​​ಗೆ ಅವಮಾನ ಮಾಡಿದ ಬಗ್ಗೆ ಕ್ಷಮೆ ಕೇಳಬೇಕು. ಅವರು ಕ್ಷಮೆ ಕೇಳುವವರೆಗೂ ನಾವು ಬಿಡುವುದಿಲ್ಲ. ಯಾರು ಅವರಿಗೆ ಹೋಗಿ ಒದೆಯುತ್ತಾರೋ, ಪ್ರತಿ ಒದೆತಕ್ಕೆ 1 ಸಾವಿರ ರೂಪಾಯಿ ನೀಡುತ್ತೇವೆ’ ಎಂದಿದ್ದಾರೆ.

ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಮಿಳು ನಟ ವಿಜಯ್​ ಸೇತುಪತಿ ಮೇಲೆ ಹಲ್ಲೆಗೆ ಯತ್ನ, ವಿಡಿಯೋ ವೈರಲ್

‘ಬೆಂಗಳೂರಿನ ಹಲ್ಲೆ ಘಟನೆಯನ್ನು ಅನವಶ್ಯಕ ದೊಡ್ಡದು ಮಾಡಲಾಯ್ತು’: ನಟ ವಿಜಯ್​ ಸೇತುಪತಿ

Published On - 4:05 pm, Mon, 8 November 21

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್