ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

ಮೈಕ್ ಹಿಡಿದು ಥಿಯೇಟರ್​ನಿಂದ ಹೊರ ಬರುವ ಪ್ರೇಕ್ಷಕರಿಗೆ ಪ್ರಶ್ನೆ ಮಾಡುತ್ತಿದ್ದಾರೆ. ಪ್ರೇಕ್ಷಕರು ತಮಗೆ ಅನಿಸಿದ್ದನ್ನು ಹೇಳುತ್ತಾರೆ. ಇದು ಸಿನಿಮಾ ಕಲೆಕ್ಷನ್ ಮೇಲೆ ಪ್ರಭಾವ ಬೀರುತ್ತಿದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.  

ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ
ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on: Nov 21, 2024 | 10:19 AM

ಇತ್ತೀಚೆಗೆ ರಿಲೀಸ್ ಆದ ‘ಕಂಗುವ’ ಹಾಗೂ ‘ವೆಟ್ಟೈಯಾನ್’ ಸಿನಿಮಾಗಳು ಬಾಕ್ಸ್ ಆಫೀಸ್​ನಲ್ಲಿ ಉತ್ತಮ ಪ್ರದರ್ಶನ ನೀಡಿಲ್ಲ. ಈ ಚಿತ್ರಗಳಿಗೆ ಕೆಟ್ಟ ವಿಮರ್ಶೆ ಸಿಕ್ಕವು. ‘ಕಂಗುವ’ ಸಿನಿಮಾ ನೋಡಿ ಬಂದ ಎಲ್ಲರೂ ಸಾಕಷ್ಟು ಟೀಕೆ ವ್ಯಕ್ತಪಡಿಸಿದರು. ಸಿನಿಮಾ ನೋಡುತ್ತೇನೆ ಎಂದು ಹೊರಡಬೇಕು ಎಂದುಕೊಂಡಿದ್ದವರಿಗೆ ಈ ವಿಮರ್ಶೆಯಿಂದ ಹಿನ್ನಡೆ ಆಯಿತು. ಇದನ್ನು ಗಮನದಲ್ಲಿ ಇಟ್ಟುಕೊಂಡು ತಮಿಳುನಾಡು ನಿರ್ಮಾಪಕರ ಸಂಘ ಪ್ರಮುಖ ನಿರ್ಧಾರ ತೆಗೆದುಕೊಂಡಿದೆ.

ಇತ್ತೀಚೆಗೆ ಯೂಟ್ಯೂಬರ್​​ಗಳ ಸಂಖ್ಯೆ ಹೆಚ್ಚಿದೆ. ಎಲ್ಲರೂ ಯೂಟ್ಯೂಬ್ ಮಾಡಿಕೊಂಡು, ಸಿನಿಮಾ ವಿಮರ್ಶೆ ಮಾಡುತ್ತಿದ್ದಾರೆ. ಇದರ ಜೊತೆಗೆ ಮೈಕ್ ಹಿಡಿದು ಥಿಯೇಟರ್​ನಿಂದ ಹೊರ ಬರುವ ಪ್ರೇಕ್ಷಕರಿಗೆ ಪ್ರಶ್ನೆ ಮಾಡುತ್ತಿದ್ದಾರೆ. ಪ್ರೇಕ್ಷಕರು ತಮಗೆ ಅನಿಸಿದ್ದನ್ನು ಹೇಳುತ್ತಾರೆ. ಇದು ಸಿನಿಮಾ ಕಲೆಕ್ಷನ್ ಮೇಲೆ ಪ್ರಭಾವ ಬೀರುತ್ತಿದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ.

ವಿಮರ್ಶೆ ಎಂದರೆ ಸಿನಿಮಾ ಬಗ್ಗೆ ಸಂಪೂರ್ಣ ವಿವರ ಇರಬೇಕು. ಆದರೆ, ಇಲ್ಲಿ ಆ ರೀತಿ ಆಗುವುದಿಲ್ಲ. ಸಿನಿಮಾ ಚೆನ್ನಾಗಿದೆ ಅಥವಾ ಚೆನ್ನಾಗಿಲ್ಲ ಎಂದಷ್ಟೇ ಹೇಳಲಾಗುತ್ತದೆ. ಈ ರೀತಿಯ ವಿಮರ್ಶೆಗಳಿಂದಲೇ ‘ಕಂಗುವ’ ಹಾಗೂ ‘ವೆಟ್ಟೈಯಾನ್’ ಸಿನಿಮಾ ಹಿನ್ನಡೆ ಅನುಭವಿಸಿತು ಎಂದು ಕೆಲವರು ಅಭಿಪ್ರಾಯ ಹೊರಹಾಕಿದ್ದಾರೆ. ಈ ಕಾರಣಕ್ಕೆ ತಮಿಳು ನಿರ್ಮಾಪಕರ ಸಂಘದವರು ಥಿಯೇಟರ್​ ಮುಂಭಾಗದಲ್ಲಿ ಸಿನಿಮಾ ವಿಮರ್ಶೆ ಮಾಡೋದನ್ನು ಬ್ಯಾನ್ ಮಾಡಿದ್ದಾರೆ. ಇದರ ಪ್ರಕಾರ ಯಾರೂ ಥಿಯೇಟರ್ ಬಳಿ ಮೈಕ್ ಹಿಡಿದು ಬರುವಂತಿಲ್ಲ.

‘ಈ ರೀತಿಯ ವಿಮರ್ಶೆಗಳು ಸಿನಿಮಾಗೆ ತೊಂದರೆ ಮಾಡುತ್ತವೆ. ಈ ಕಾರಣಕ್ಕೆ ಬ್ಯಾನ್ ಮಾಡಲಾಗಿದೆ’ ಎನ್ನುವ ಅಭಿಪ್ರಾಯವನ್ನು ನಿರ್ಮಾಪಕರ ಕೌನ್ಸಿಲ್ ನೀಡಿದೆ. ಇದಕ್ಕೆ ಯೂಟ್ಯೂಬರ್​ಗಳು ವಿರೋಧ ಹೊರಹಾಕಿದ್ದಾರೆ.

ಇದನ್ನೂ ಓದಿ: ‘ಕಂಗುವ’ ಚಿತ್ರಕ್ಕೆ ಇದೆಂಥಾ ಸ್ಥಿತಿ; ವಾರದ ದಿನಗಳಲ್ಲಿ ಮತ್ತಷ್ಟು ಹೀನಾಯವಾಯಿತು ಗಳಿಕೆ

‘ಪ್ರೇಕ್ಷಕರು ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಾರೆ. ಇದನ್ನು ನಾವು ಜನರಿಗೆ ತಲುಪಿಸುತ್ತೇವೆ. ಇದರಲ್ಲಿ ತಪ್ಪೇನಿದೆ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ‘ಕಂಗುವ’ ಹಾಗೂ ‘ವೆಟ್ಟೈಯಾನ್’ ಈ ರೀತಿಯ ವಿಮರ್ಶೆಗಳಿಂದಲೇ ಸೋತಿತು ಎಂಬುದಕ್ಕೆ ಯಾವುದೇ ಅರ್ಥವಿಲ್ಲ. ಈ ಸಿನಿಮಾಗಳು ಉತ್ತಮವಾಗಿರಲಿಲ್ಲ ಎಂಬ ಕಾರಣಕ್ಕೆ ಸೋತಿವೆ ಎಂದು ಅನೇಕರು ಹೇಳಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಪ್ರಧಾನಿ ಮೋದಿಗೆ ಗಾಯಾನಾದ ಅತ್ಯುನ್ನತ ನಾಗರಿಕ ಪ್ರಶಸ್ತಿ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಮಧು ಅಸ್ತ್ರ
ಮೈಸೂರು: ಮುಡಾದಲ್ಲಿ 5 ಸಾವಿರ ಕೋಟಿ ರೂ. ಹಗರಣ, ಗಂಗರಾಜು ಗಂಭೀರ ಆರೋಪ
ಮೈಸೂರು: ಮುಡಾದಲ್ಲಿ 5 ಸಾವಿರ ಕೋಟಿ ರೂ. ಹಗರಣ, ಗಂಗರಾಜು ಗಂಭೀರ ಆರೋಪ
ಗಣೇಶನಿಗೆ ತುಳಸಿಯನ್ನು ಯಾಕೆ ಅರ್ಪಿಸಬಾರದು? ತಿಳಿಯಲು ಈ ವಿಡಿಯೋ ನೋಡಿ
ಗಣೇಶನಿಗೆ ತುಳಸಿಯನ್ನು ಯಾಕೆ ಅರ್ಪಿಸಬಾರದು? ತಿಳಿಯಲು ಈ ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಗೆ ಇಂದು ವ್ಯಾಪಾರದಲ್ಲಿ ಶುಭವಾಗಲಿದೆ
Nithya Bhavishya: ಈ ರಾಶಿಯವರಿಗೆ ಇಂದು ವ್ಯಾಪಾರದಲ್ಲಿ ಶುಭವಾಗಲಿದೆ
ಕೆಲಸಕ್ಕೆ ಮುಸ್ಲಿಂ ಯುವತಿಯನ್ನು ಕರೆ ತಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ!
ಕೆಲಸಕ್ಕೆ ಮುಸ್ಲಿಂ ಯುವತಿಯನ್ನು ಕರೆ ತಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ!
ಪೋಷಕರೇ ಎಚ್ಚರ! ಆಟವಾಡುವಾಗ ಗೇಟ್ ಬಿದ್ದು ಒಂದೂವರೆ ವರ್ಷದ ಮಗು ಸಾವು
ಪೋಷಕರೇ ಎಚ್ಚರ! ಆಟವಾಡುವಾಗ ಗೇಟ್ ಬಿದ್ದು ಒಂದೂವರೆ ವರ್ಷದ ಮಗು ಸಾವು
ಭಕ್ತನಂತೆ ದೇವಸ್ಥಾನಕ್ಕೆ ಬಂದು ದೇವರ ವಿಗ್ರಹವನ್ನೇ ಕದ್ದ ಖತರ್ನಾಕ್ ಕಳ್ಳ
ಭಕ್ತನಂತೆ ದೇವಸ್ಥಾನಕ್ಕೆ ಬಂದು ದೇವರ ವಿಗ್ರಹವನ್ನೇ ಕದ್ದ ಖತರ್ನಾಕ್ ಕಳ್ಳ
ಥಾರ್​ ಖರೀದಿಸಿದ ಖುಷಿಗೆ ಮಹೀಂದ್ರಾ ಶೋರೂಂನಲ್ಲಿ ಗುಂಡು ಹಾರಿಸಿದ ಯುವಕ!
ಥಾರ್​ ಖರೀದಿಸಿದ ಖುಷಿಗೆ ಮಹೀಂದ್ರಾ ಶೋರೂಂನಲ್ಲಿ ಗುಂಡು ಹಾರಿಸಿದ ಯುವಕ!
ಚೈತ್ರಾ ಕುಂದಾಪುರ ಎಷ್ಟು ಚಾಲಾಕಿ ಅಂತ ತಿಳಿಯೋಕೆ ಈ ವಿಡಿಯೋ ನೋಡಿ..
ಚೈತ್ರಾ ಕುಂದಾಪುರ ಎಷ್ಟು ಚಾಲಾಕಿ ಅಂತ ತಿಳಿಯೋಕೆ ಈ ವಿಡಿಯೋ ನೋಡಿ..