Dilli Babu: ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತ ನಿರ್ಮಾಪಕನ ಹಠಾತ್ ನಿಧನ

ದಿಲ್ಲಿ ಬಾಬು ಅವರ ಸಾವು ಚಿತ್ರರಂಗಕ್ಕೆ ದೊಡ್ಡ ಮಟ್ಟದ ಶಾಕ್ ತಂದಿದೆ. ತಮಿಳು ಫಿಲ್ಮ್​ ಇಂಡಸ್ಟ್ರಿಯಲ್ಲಿ ಅವರು ‘ರಾಕ್ಷಸನ್’, ‘ಓ ಮೈ ಕಡವಲೆ’, ‘ಬ್ಯಾಚುಲರ್’ ಸೇರಿ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ. ಅನೇಕರು ದಿಲ್ಲಿ ಬಾಬು ಸಾವಿಗೆ ಸಂತಾಪ ಸೂಚಿಸಿದ್ದಾರೆ.

Dilli Babu: ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಖ್ಯಾತ ನಿರ್ಮಾಪಕನ ಹಠಾತ್ ನಿಧನ
ದಿಲ್ಲಿ ಬಾಬು
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Sep 09, 2024 | 12:34 PM

ತಮಿಳು ನಿರ್ಮಾಪಕ ದಿಲ್ಲಿ ಬಾಬು ಅವರು ಇಂದು (ಸೆಪ್ಟೆಂಬರ್ 9) ನಿಧನ ಹೊಂದಿದ್ದಾರೆ. ಅವರಿಗೆ ಕೇವಲ 50 ವರ್ಷ ವಯಸ್ಸಾಗಿತ್ತು. ಸಿನಿಮಾ ನಿರ್ಮಾಣ ಮಾಡಿ ಚಿತ್ರರಂಗದಲ್ಲಿ ಇನ್ನಷ್ಟು ವರ್ಷ ಇರಬೇಕಿದ್ದ ಅವರು ಈಗ ಇಲ್ಲವಾಗಿದ್ದಾರೆ. ಮಧ್ಯರಾತ್ರಿ 12:30ರ ಸಮಯಕ್ಕೆ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ. ಇಂದೇ ಅವರ ಅಂತ್ಯಕ್ರಿಯೆ ನೆರವೇರಲಿದೆ. ಅವರು ತಮಿಳು ಚಿತ್ರರಂಗದಲ್ಲಿ ಹಲವು ಹಿಟ್​ ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ.

ದಿಲ್ಲಿ ಬಾಬು ಅವರ ಸಾವು ಚಿತ್ರರಂಗಕ್ಕೆ ದೊಡ್ಡ ಮಟ್ಟದ ಶಾಕ್ ತಂದಿದೆ. ತಮಿಳು ಫಿಲ್ಮ್​ ಇಂಡಸ್ಟ್ರಿಯ ಅನೇಕರು ದಿಲ್ಲಿ ಬಾಬು ಸಾವಿಗೆ ಸಂತಾಪ ಸೂಚಿಸಿದ್ದಾರೆ. ಅವರು ಕಳೆದ ಕೆಲವು ಸಮಯದಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು. ಹೀಗಾಗಿ, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರನ್ನು ಉಳಿಸಿಕೊಳ್ಳೋಕೆ ಸಾಧ್ಯವಾಗಲಿಲ್ಲ.

ಚೆನ್ನೈನ ಪೆರಂಗಳದೂರ್​ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಳಿಗ್ಗೆ 10.30ರ ವೇಳೆಗೆ ಅವರ ಶವವನ್ನು ಮನೆಗೆ ತರಲಾಗಿದೆ. ಅವರ ಸಾವಿನ ಸುದ್ದಿ ಕೇಳುತ್ತಿದ್ದಂತೆ ಚಿತ್ರರಂಗದ ಅನೇಕರು ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ನಿರ್ಮಾಪಕ ಎಸ್​ಆರ್ ಪ್ರಭು ಅವರು ಟ್ವೀಟ್ ಮಾಡಿದ್ದಾರೆ. ‘ದಿಲ್ಲಿ ಬಾಬು ನಿಧನ ವಾರ್ತೆ ಶಾಕಿಂಗ್ ತಂದಿದೆ. ಅನೇಕ ಯುವ ಟ್ಯಾಲೆಂಟ್​ಗಳಿಗೆ ಇವರು ಬೆಂಬಲ ನೀಡಿದ್ದರು. ಅವರ ಆಪ್ತರು ಹಾಗೂ ಕುಟುಂಬದವರಿಗೆ ನನ್ನ ಸಂತಾಪ’ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ‘ಪುಷ್ಪ 2’ ಬಗ್ಗೆ ಅಪ್ಡೇಟ್ ಕೊಟ್ಟ ನಿರ್ಮಾಪಕ: ರಿಲೀಸ್ ಯಾವಾಗ?

ಚಿತ್ರರಂಗದ ನಿರ್ದೇಶಕರು, ನಿರ್ಮಾಪಕರು ಅವರ ಸಾವಿಗೆ ಸಂತಾಪ ಸೂಚಿಸುತ್ತಿದ್ದಾರೆ. ದಿಲ್ಲಿ ಬಾಬು ಅವರು ‘Axess Film Factory’ ಹೆಸರಿನ ನಿರ್ಮಾಣ ಸಂಸ್ಥೆ ಹೊಂದಿದ್ದರು. ‘ರಾಕ್ಷಸನ್’, ‘ಓ ಮೈ ಕಡವಲೆ’, ‘ಬ್ಯಾಚುಲರ್’ ಸೇರಿ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ಅವರು ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ
ನಾಳೆ ದೆಹಲಿಗೆ ತೆರಳುವ ಮೊದಲು ಎಲ್ಲವನ್ನೂ ಮಾತಾಡುವೆ: ಕುಮಾರಸ್ವಾಮಿ