AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಆಗಿ ಐದು ವರ್ಷಗಳ ಬಳಿಕ ದೂರ ಆದ ಖ್ಯಾತ ಕಿರುತೆರೆ ದಂಪತಿ

ಖ್ಯಾತ ನಟಿ ತನ್ವಿ ಠಕ್ಕರ್ ಮತ್ತು ಪತಿ ಆದಿತ್ಯ ಕಪಾಡಿಯಾ ಐದು ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ್ದಾರೆ. 'ಘುಮ್ ಹೈ ಕಿಸಿಕೇ ಪ್ಯಾರ್ ಮೇಯಿನ್' ಖ್ಯಾತಿಯ ನಟಿ, ಇದು ಕಠಿಣ ನಿರ್ಧಾರವಾದರೂ ಪರಸ್ಪರ ಗೌರವದಿಂದ ಬೇರ್ಪಟ್ಟಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಘೋಷಿಸಿದ್ದಾರೆ. ಯಾವುದೇ ವೈಮನಸ್ಸಿಲ್ಲದೆ, ಕುಟುಂಬಗಳ ಹಿತದೃಷ್ಟಿಯಿಂದ ಈ ಹೆಜ್ಜೆ ಇಡಲಾಗಿದೆ. ಮಾಧ್ಯಮಗಳು ಮತ್ತು ಅಭಿಮಾನಿಗಳು ಖಾಸಗಿತನವನ್ನು ಗೌರವಿಸಬೇಕೆಂದು ಮನವಿ ಮಾಡಿದ್ದಾರೆ.

ಮದುವೆ ಆಗಿ ಐದು ವರ್ಷಗಳ ಬಳಿಕ ದೂರ ಆದ  ಖ್ಯಾತ ಕಿರುತೆರೆ ದಂಪತಿ
ಆದಿತ್ಯ ಕಪಾಡಿಯಾ-ತನ್ವಿ ಠಕ್ಕರ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Jul 06, 2026 | 8:07 AM

Share

ಮುಖ್ಯಾಂಶಗಳು

  • ನಟಿ ತನ್ವಿ ಠಕ್ಕರ್-ಆದಿತ್ಯ ಕಪಾಡಿಯಾ ವಿಚ್ಛೇದನ ಘೋಷಣೆ
  • 5 ವರ್ಷಗಳ ದಾಂಪತ್ಯ ಜೀವನಕ್ಕೆ ಮುಕ್ತಾಯ ಹಾಡಿದ ಕಿರುತೆರೆ ಜೋಡಿ
  • ಸೋಷಿಯಲ್ ಮೀಡಿಯಾದಲ್ಲಿ ತನ್ವಿ ಭಾವನಾತ್ಮಕ ಪೋಸ್ಟ್

ಸೆಲೆಬ್ರಿಟಿಗಳ ವಲಯದಲ್ಲಿ ಸಾಕಷ್ಟು ವಿಚ್ಛೇದನಗಳು ನಡೆಯುತ್ತಿವೆ. ಅದಕ್ಕೆ ಈಗ ಒಂದು ಹೊಸ ಸೇರ್ಪಡೆ ಆಗಿದೆ ಎಂದೇ ಹೇಳಬಹುದು. ಪ್ರಸಿದ್ಧ ಹಿಂದಿ ಧಾರಾವಾಹಿ ‘ಘುಮ್ ಹೈ ಕಿಸಿಕೇ ಪ್ಯಾರ್ ಮೇಯಿನ್’ ಖ್ಯಾತಿಯ ನಟಿ ತನ್ವಿ ಠಕ್ಕರ್ ತಮ್ಮ ವೈವಾಹಿಕ ಜೀವನಕ್ಕೆ ಮುಕ್ತಾಯ ಹಾಡಿದ್ದಾರೆ. ಪತಿ ಆದಿತ್ಯ ಕಪಾಡಿಯಾ ಅವರಿಂದ ದೂರವಾಗುತ್ತಿರುವುದಾಗಿ ಅವರು ಅಧಿಕೃತವಾಗಿ ಘೋಷಿಸಿದ್ದಾರೆ. ಐದು ವರ್ಷಗಳ ದಾಂಪತ್ಯ ಜೀವನದ ಬಳಿಕ ಈ ಜೋಡಿ ಬೇರ್ಪಡುತ್ತಿದೆ.

ಸೋಷಿಯಲ್ ಮೀಡಿಯಾದಲ್ಲಿ ಬೇಸರದ ಸುದ್ದಿ

ನಟಿ ತನ್ವಿ ಠಕ್ಕರ್ ಸಾಮಾಜಿಕ ಜಾಲತಾಣದಲ್ಲಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ತಮ್ಮ ವೈಯಕ್ತಿಕ ಜೀವನದ ಬಗ್ಗೆ ಹಲವರು ಪ್ರಶ್ನೆ ಕೇಳುತ್ತಿದ್ದರು ಎಂದು ಅವರು ಹೇಳಿದ್ದಾರೆ. ಸಾಕಷ್ಟು ಆಲೋಚನೆ ಮಾಡಿದ ನಂತರ ತಾವಿಬ್ಬರೂ ಬೇರೆಯಾಗುವ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ. ಇದು ತಮ್ಮ ಜೀವನದ ಅತ್ಯಂತ ಕಠಿಣ ನಿರ್ಧಾರ ಎಂದು ತನ್ವಿ ಹೇಳಿದ್ದಾರೆ.

ಪರಸ್ಪರ ಗೌರವದಿಂದ ಬೇರ್ಪಡೆ

ನಮ್ಮ ನಡುವೆ ಯಾವುದೇ ಜಗಳ ಅಥವಾ ದ್ವೇಷ ಇಲ್ಲ ಎಂದು ತನ್ವಿ ಸ್ಪಷ್ಟಪಡಿಸಿದ್ದಾರೆ. ಇಬ್ಬರ ಕುಟುಂಬಗಳ ಹಿತದೃಷ್ಟಿಯಿಂದ ಪರಸ್ಪರ ಗೌರವ ನೀಡಿ ಈ ನಿರ್ಧಾರ ಕೈಗೊಳ್ಳಲಾಗಿದೆ. ನಮ್ಮಿಬ್ಬರ ಮುಂದಿನ ಜೀವನದ ಶಾಂತಿ ಮತ್ತು ನೆಮ್ಮದಿಗಾಗಿ ಈ ಹೆಜ್ಜೆ ಇಟ್ಟಿದ್ದೇವೆ. ಈ ಸಮಯದಲ್ಲಿ ಮಾಧ್ಯಮಗಳು ಮತ್ತು ಅಭಿಮಾನಿಗಳು ನಮ್ಮ ಖಾಸಗಿತನವನ್ನು ಗೌರವಿಸಬೇಕು. ಈ ವಿಷಯವಾಗಿ ಯಾರೂ ಪ್ರಶ್ನೆಗಳನ್ನು ಕೇಳಬೇಡಿ ಎಂದು ತನ್ವಿ ವಿನಂತಿಸಿದ್ದಾರೆ.

ಪ್ರೀತಿ ಮತ್ತು ಮದುವೆಯ ಜರ್ನಿ

‘ಏಕ್ ದೂಸ್ರೆ ಸೆ ಕರ್ತೆ ಹೈ ಪ್ಯಾರ್ ಹಮ್’ ಧಾರಾವಾಹಿಯ ಶೂಟಿಂಗ್ ಸೆಟ್‌ನಲ್ಲಿ ಇವರಿಬ್ಬರ ಪರಿಚಯವಾಗಿತ್ತು. 2013 ರಲ್ಲಿ ಇವರ ನಿಶ್ಚಿತಾರ್ಥ ನಡೆದಿತ್ತು. ದೀರ್ಘಕಾಲದ ಪ್ರೀತಿಯ ನಂತರ ಫೆಬ್ರವರಿ 16, 2021 ರಂದು ಇವರು ಮದುವೆಯಾಗಿದ್ದರು. ರಿಜಿಸ್ಟರ್ ಮದುವೆಯಾದ ಬಳಿಕ ಮನೆಯಲ್ಲೇ ಸರಳವಾಗಿ ಸಂಭ್ರಮಿಸಿದ್ದರು. ಇತ್ತೀಚೆಗಷ್ಟೇ ಜೂನ್ 19 ರಂದು ಇವರು ತಮ್ಮ ಮಗನ 3ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿದ್ದರು.

ಇದನ್ನೂ ಓದಿ:

ಕಿರುತೆರೆಯಲ್ಲಿ ಇಬ್ಬರ ಪಯಣ

ತನ್ವಿ ಠಕ್ಕರ್ ಅವರು ‘ಬಾಹು ಹಮಾರಿ ರಜನೀಕಾಂತ್’ ಮತ್ತು ‘ಘುಮ್ ಹೈ ಕಿಸಿಕೇ ಪ್ಯಾರ್ ಮೇಯಿನ್’ ಧಾರಾವಾಹಿಗಳ ಮೂಲಕ ಜನಪ್ರಿಯರಾಗಿದ್ದಾರೆ. ಪತಿ ಆದಿತ್ಯ ಕಪಾಡಿಯಾ ಅವರು ಬಾಲ ನಟನಾಗಿ ಚಿತ್ರರಂಗಕ್ಕೆ ಬಂದವರು. ಪ್ರಸಿದ್ಧ ಮಕ್ಕಳ ಸರಣಿ ‘ಜಸ್ಟ್ ಮೊಹಬ್ಬತ್’ ಮತ್ತು ‘ಶಾಕಾ ಲಾಕಾ ಬೂಮ್ ಬೂಮ್’ ನಲ್ಲಿ ಅವರು ನಟಿಸಿದ್ದರು. ಇದರೊಂದಿಗೆ ‘ಬಡೇ ಅಚ್ಚೆ ಲಗ್ತೇ ಹೈ’ ಸೇರಿದಂತೆ ಹಲವು ಹಿಂದಿ ಹಾಗೂ ಗುಜರಾತಿ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ