AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೌಕ್ತೆ ಚಂಡಮಾರುತದಿಂದ ಸಲ್ಮಾನ್​ ಖಾನ್​ಗೆ ಉಂಟಾಯ್ತು ದೊಡ್ಡ ನಷ್ಟ

ಮುಂಬೈನಲ್ಲಿ ಸಹ ತೌಕ್ತೆ ಅಬ್ಬರ ಹೆಚ್ಚಿತ್ತು. ಈ ಚಂಡಮಾರುತಕ್ಕೆ ಮಹಾರಾಷ್ಟ್ರದಲ್ಲಿ ಈಗಾಗಲೇ 6 ಮಂದಿ ಸಾವನ್ನಪ್ಪಿದ್ದು, 9 ಜನರು ಗಾಯಗೊಂಡಿದ್ದಾರೆ.

ತೌಕ್ತೆ ಚಂಡಮಾರುತದಿಂದ ಸಲ್ಮಾನ್​ ಖಾನ್​ಗೆ ಉಂಟಾಯ್ತು ದೊಡ್ಡ ನಷ್ಟ
ಸಲ್ಮಾನ್ ಖಾನ್
ರಾಜೇಶ್ ದುಗ್ಗುಮನೆ
| Edited By: |

Updated on: May 20, 2021 | 5:25 PM

Share

ಭಾರತದ ಹಲವು ರಾಜ್ಯಗಳು ತೌಕ್ತೆ ಚಂಡಮಾರುತದ ಅಬ್ಬರಕ್ಕೆ ಭಾರೀ ತೊಂದರೆ ಅನುಭವಿಸಿವೆ. ಆರಂಭದಲ್ಲಿ ಕರ್ನಾಟಕ, ಕೇರಳ ಹಾಗೂ ತಮಿಳುನಾಡಿನಲ್ಲಿ ಅಬ್ಬರ ತೋರಿದ್ದ ಈ ಚಂಡಮಾರುತ ನಂತರ ಮಹಾರಾಷ್ಟ್ರದತ್ತ ತಿರುಗಿತ್ತು. ಅಲ್ಲಿ ಈ ಚಂಡಮಾರುತ ಸಾಕಷ್ಟು ಹಾನಿ ಉಂಟು ಮಾಡಿದೆ. ಈ ವೇಳೆ ಸಲ್ಮಾನ್​ ಖಾನ್​ ನಟನೆಯ ಟೈಗರ್ 3 ಸಿನಿಮಾ ಸೆಟ್​ ಕೂಡ ಹಾನಿಗೆ ಒಳಗಾಗಿದೆ.

ಮುಂಬೈನಲ್ಲಿ ಸಹ ತೌಕ್ತೆ ಅಬ್ಬರ ಹೆಚ್ಚಿತ್ತು. ಈ ಚಂಡಮಾರುತಕ್ಕೆ ಮಹಾರಾಷ್ಟ್ರದಲ್ಲಿ ಈಗಾಗಲೇ 6 ಮಂದಿ ಸಾವನ್ನಪ್ಪಿದ್ದು, 9 ಜನರು ಗಾಯಗೊಂಡಿದ್ದಾರೆ. ಅನೇಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡುವ ಕೆಲಸವನ್ನು ಸರ್ಕಾರ ಮಾಡಿದೆ. ಟೈಗರ್​-3 ಸೆಟ್​ ಕೂಡ ಈ ಚಂಡಮಾರುತದ ಅಬ್ಬರಕ್ಕೆ ಸಿಲುಕಿದೆ.

ಗೋರೆಗಾಂವ್​ನಲ್ಲಿರುವ ಸ್ಟುಡಿಯೋದಲ್ಲಿ ದುಬೈ ಮಾರುಕಟ್ಟೆಯ ಸೆಟ್​ ಒಂದನ್ನು ಹಾಕಲಾಗಿತ್ತು. ಕೆಲವು ದೃಶ್ಯಗಳನ್ನು ಇಲ್ಲಿ ಶೂಟ್​ ಕೂಡ ಮಾಡಲಾಗಿತ್ತು. ಆದರೆ, ಕೊವಿಡ್​ನಿಂದಾಗಿ ಶೂಟಿಂಗ್​ ಅರ್ಧಕ್ಕೆ ನಿಂತಿದೆ. ಆದರೆ, ಈಗ ಚಂಡಮಾರುತದ ಅಬ್ಬರಕ್ಕೆ ಸೆಟ್​ ಕುಸಿದಿದೆ. ಈ ವೇಳೆ ಯಾವುದೇ ಪ್ರಾಣ ಹಾನಿ ಉಂಟಾಗಿಲ್ಲ ಎಂದು ತಿಳಿದು ಬಂದಿದೆ.

ಅಜಯ್​ ದೇವಗನ್​ ನಟನೆಯ ಮೈದಾನ್​ ಸಿನಿಮಾದ ಸೆಟ್​ ಮುಂಬೈನ ಹೊರಭಾಗದಲ್ಲಿ ನಿರ್ಮಾಣ ಮಾಡಲಾಗಿತ್ತು. ಇದು ಕೂಡ ತೌಕ್ತೆ ಚಂಡಮಾರುತದ ಅಬ್ಬರಕ್ಕೆ ಸಿಕ್ಕು ನಾಶವಾಗಿದೆ. ಇದರ ಜತೆಗೆ ಗಂಗೂಬಾಯಿ ಕಾಠಿಯಾವಾಡಿ ಸಿನಿಮಾದ ಸೆಟ್​ ಸ್ವಲ್ಪವೇ ಹಾನಿಗೆ ಒಳಗಾಗಿದೆ. ಚಿತ್ರದ ನಿರ್ದೇಶಕ ಸಂಜಯ್​ ಲೀಲಾ ಬನ್ಸಾಲಿ ಕಳೆದ ವರ್ಷ ಸೆಟ್​ ಅನ್ನು ಸಂಪೂರ್ಣವಾಗಿ ಮುಚ್ಚಿದ್ದರು. ಈ ಮೂಲಕ ಚಂಡಮಾರುತದಂತೆ ಸಮಸ್ಯೆ ಎದುರಾದರೆ ಅದನ್ನು ರಕ್ಷಿಸಬಹುದು ಎಂಬುದು ಅವರ ಪ್ಲ್ಯಾನ್​ ಆಗಿತ್ತು.

ಕೊವಿಡ್​ ಕಾರಣದಿಂದ ಮಹಾರಾಷ್ಟ್ರದಲ್ಲಿ ಶೂಟಿಂಗ್​ ಸಂಪೂರ್ಣವಾಗಿ ನಿಂತಿದೆ. ಜೂನ್​ ವೇಳೆಗೆ ಮತ್ತೆ ಶೂಟಿಂಗ್​ ಆರಂಭಿಸುವ ಆಲೋಚನೆ ಚಿತ್ರತಂಡದ್ದಾಗಿತ್ತು. ಆದರೆ, ಈಗ ಸೈಕ್ಲೋನ್​ ಕಾರಣದಿಂದ ಸಾಕಷ್ಟು ಸೆಟ್​ಗಳು ಹಾನಿಗೆ ಒಳಗಾಗಿದ್ದು, ಶೂಟಿಂಗ್​ ಮತ್ತೆ ವಿಳಂಬವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Salman Khan: ಕಳಪೆ ವಿಮರ್ಶೆ ಸಿಕ್ಕರೂ ದಾಖಲೆ ಬರೆದ ‘ರಾಧೆ’; ಒಟಿಟಿಯಲ್ಲಿ ಸಲ್ಮಾನ್​ ಖಾನ್​ ಹೊಸ ರೆಕಾರ್ಡ್​

Radhe: ಸಲ್ಮಾನ್ ಖಾನ್​ ಬಾಡಿ ಡಬಲ್ ಕಲಾವಿದನ ಫೋಟೋ ವೈರಲ್; ಫ್ಯಾನ್ಸ್​​ಗೆ ಅಚ್ಚರಿಯೋ ಅಚ್ಚರಿ

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್