AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

The Kerala Story: ಉತ್ತರಪ್ರದೇಶದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ತೆರಿಗೆ ಮುಕ್ತ: ಸಿಎಂ ಯೋಗಿ ಆದಿತ್ಯನಾಥ್

ದೇಶದಲ್ಲಿ ಭಾರೀ ಸದ್ದು ಮಾಡುತ್ತಿರುವ 'ದಿ ಕೇರಳ ಸ್ಟೋರಿ' ಸಿನಿಮಾಕ್ಕೆ ಉತ್ತರ ಪ್ರದೇಶದಲ್ಲಿ ತೆರಿಗೆ ಮುಕ್ತ ಮಾಡಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

The Kerala Story: ಉತ್ತರಪ್ರದೇಶದಲ್ಲಿ 'ದಿ ಕೇರಳ ಸ್ಟೋರಿ' ಸಿನಿಮಾ ತೆರಿಗೆ ಮುಕ್ತ: ಸಿಎಂ ಯೋಗಿ ಆದಿತ್ಯನಾಥ್
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:May 09, 2023 | 10:25 AM

Share

ಲಕ್ನೋ: ದೇಶದಲ್ಲಿ ಭಾರೀ ಸದ್ದು ಮಾಡುತ್ತಿರುವ ‘ದಿ ಕೇರಳ ಸ್ಟೋರಿ‘ ಸಿನಿಮಾಕ್ಕೆ ಉತ್ತರಪ್ರದೇಶದಲ್ಲಿ ತೆರಿಗೆ ಮುಕ್ತ ಮಾಡಲಿದೆ ಎಂದು ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಯುಪಿಯಲ್ಲಿ ‘ದಿ ಕೇರಳ ಸ್ಟೋರಿ’ಯನ್ನು ತೆರಿಗೆ ಮುಕ್ತಗೊಳಿಸಲಾಗುವುದು ಎಂದು ಸಿಎಂ ಯೋಗಿ ಟ್ವೀಟ್ ಮಾಡಿದ್ದಾರೆ. ಯೋಗಿ ಆದಿತ್ಯನಾಥ್ ಅವರು ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಲೋಕಭವನದಲ್ಲಿ ಆಯೋಜಿಸಲಾಗಿರುವ ವಿಶೇಷ ಪ್ರದರ್ಶನದಲ್ಲಿ ಚಲನಚಿತ್ರವನ್ನು ವೀಕ್ಷಿಸಲಿದ್ದಾರೆ ಎಂದು ಮುಖ್ಯಮಂತ್ರಿಗಳ ಸಚಿವಾಲಯ ತಿಳಿಸಿದೆ. ಕಳೆದ ವರ್ಷ, ಅಕ್ಷಯ್ ಕುಮಾರ್ ಅಭಿನಯದ ‘ಸಾಮ್ರಾಟ್ ಪೃಥ್ವಿರಾಜ್’ ಸಿನಿಮಾಕ್ಕೆ ರಾಜ್ಯದಲ್ಲಿ ಚಲನಚಿತ್ರವನ್ನು ತೆರಿಗೆ ಮುಕ್ತ ಎಂದು ಘೋಷಿಸಿದ್ದರು, ಇದೀಗ ದಿ ಕೇರಳ ಸ್ಟೋರಿಗೆ ತೆಇಗೆ ಮುಕ್ತ ಎಂದು ಘೋಷಣೆ ಮಾಡಿದೆ.

ಯುಪಿ ಬಿಜೆಪಿ ಕಾರ್ಯದರ್ಶಿ ರಾಘವೇಂದ್ರ ಮಿಶ್ರಾ ಅವರು ಇತ್ತೀಚೆಗೆ ಲಕ್ನೋದಲ್ಲಿ 100 ವಿದ್ಯಾರ್ಥಿನಿಯರಿಗೆ ಚಿತ್ರವನ್ನು ತೋರಿಸಿದ್ದರು. ಮಧ್ಯಪ್ರದೇಶದಲ್ಲೂ ಸಿನಿಮಾಕ್ಕೆ ತೆರಿಗೆ ವಿನಾಯಿತಿ ನೀಡಿದ ನಂತರ ‘ತೆರಿಗೆ ಮುಕ್ತ’ ಮಾಡಿದ ಎರಡನೇ ರಾಜ್ಯ ಉತ್ತರ ಪ್ರದೇಶವಾಗಿದೆ .

ಇದನ್ನೂ ಓದಿ: The Kerala Story: ಪಶ್ಚಿಮ ಬಂಗಾಳದಲ್ಲಿ ‘ದಿ ಕೇರಳ ಸ್ಟೋರಿ’ ಸಿನಿಮಾ ಬ್ಯಾನ್​; ನಿರ್ಧಾರಕ್ಕೆ ಕಾರಣ ತಿಳಿಸಿದ ಮಮತಾ ಬ್ಯಾನರ್ಜಿ

ಲವ್ ಜಿಹಾದ್‌ನ ಬಲೆಯಲ್ಲಿ ಸಿಕ್ಕಿಹಾಕಿಕೊಳ್ಳುವ ಹೆಣ್ಣುಮಕ್ಕಳ (ಜೀವನ) ಹೇಗೆ ನಾಶವಾಗುತ್ತದೆ ಎಂಬುದನ್ನು ಚಿತ್ರ ತೋರಿಸುತ್ತದೆ. ಇದು ಭಯೋತ್ಪಾದನೆಗೆ ಹೇಗೆ ಅವಕಾಶ ನೀಡುತ್ತದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

ನಾವು ಈಗಾಗಲೇ (ಬಲವಂತದ) ಮತಾಂತರದ ವಿರುದ್ಧ ಕಾನೂನನ್ನು ತಂದಿದ್ದರೂ, ಈ ಚಲನಚಿತ್ರವು ಒಂದು ರೀತಿಯಲ್ಲಿ ಜಾಗೃತಿ ಮೂಡಿಸುತ್ತದೆ. ಈ ಚಿತ್ರವನ್ನು ಎಲ್ಲರೂ ವೀಕ್ಷಿಸಬೇಕು ಮತ್ತು ಅದಕ್ಕಾಗಿಯೇ ಮಧ್ಯಪ್ರದೇಶ ಸರ್ಕಾರವು ಚಲನಚಿತ್ರವನ್ನು ತೆರಿಗೆ ಮುಕ್ತ ಎಂದು ಘೋಷಿಸುತ್ತಿದೆ, ಎಂದು ಅವರು ಹೇಳಿದರು.

ಭಯೋತ್ಪಾದಕ ಗುಂಪು ಇಸ್ಲಾಮಿಕ್ ಸ್ಟೇಟ್‌ನಿಂದ ನೇಮಕಗೊಳ್ಳುವ ಮೊದಲು ಹುಡುಗಿಯರ ಬಲವಂತದ ಮತಾಂತರವನ್ನು ಚಿತ್ರಿಸುವ ಚಿತ್ರವು ಈಗಾಗಲೇ ದೇಶಾದ್ಯಂತ ರಾಜಕೀಯ ಬಿರುಗಾಳಿಯನ್ನು ಎಬ್ಬಿಸಿದೆ. ಆದರೆ ಪಶ್ಚಿಮ ಬಂಗಾಳ ಸರ್ಕಾರ ಸೋಮವಾರ ಇದನ್ನೂ ತಮ್ಮ ರಾಜ್ಯದಲ್ಲಿ ಪ್ರದರ್ಶನ ಮಾಡದಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿಷೇಧಿಸಿದ್ದಾರೆ.

Published On - 10:07 am, Tue, 9 May 23