ಅಮಿತ್​ ಶಾ ಭೇಟಿ ಮಾಡಿದ ‘ಹನುಮಾನ್​’ ತಂಡ; ಸಿಕ್ತು ಗೃಹ ಸಚಿವರ ಮೆಚ್ಚುಗೆ

ಇಂಡಿಯನ್​ ಸೂಪರ್​ ಹೀರೋ ಕಥೆ ಹೊಂದಿರುವ ‘ಹನುಮಾನ್​’ ಸಿನಿಮಾ 50ಕ್ಕೂ ಹೆಚ್ಚು ದಿನಗಳ ಕಾಲ ಪ್ರದರ್ಶನ ಕಂಡು ಬ್ಲಾಕ್​ ಬಸ್ಟರ್​ ಆಗಿದೆ. ಈ ಚಿತ್ರತಂಡದವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ. ನಟ ತೇಜ ಸಜ್ಜಾ, ನಿರ್ದೇಶಕ ಪ್ರಶಾಂತ್​ ವರ್ಮಾ ಸೇರಿದಂತೆ ಇಡೀ ತಂಡದ ಮುಂದಿನ ಪ್ರಾಜೆಕ್ಟ್​ಗೆ ಅಮಿತ್​ ಶಾ ಶುಭ ಹಾರೈಸಿದ್ದಾರೆ.

ಅಮಿತ್​ ಶಾ ಭೇಟಿ ಮಾಡಿದ ‘ಹನುಮಾನ್​’ ತಂಡ; ಸಿಕ್ತು ಗೃಹ ಸಚಿವರ ಮೆಚ್ಚುಗೆ
ಅಮಿತ್​ ಶಾ ಭೇಟಿ ಮಾಡಿದ ಹನುಮಾನ್​ ಚಿತ್ರತಂಡ
Follow us
ಮದನ್​ ಕುಮಾರ್​
|

Updated on: Mar 13, 2024 | 3:18 PM

ಬಾಕ್ಸ್​ ಆಫೀಸ್​ನಲ್ಲಿ ‘ಹನುಮಾನ್​’ ಸಿನಿಮಾ (HanuMan Movie) ದಾಖಲೆ ಬರೆದಿದೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ರಿಲೀಸ್​ ಆದ ಈ ಸಿನಿಮಾವನ್ನು ಜನರು ಗೆಲ್ಲಿಸಿದ್ದಾರೆ. ವಿಶ್ವಾದ್ಯಂತ 300 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದ ಹನುಮಾನ್​’ (HanuMan) ಸಿನಿಮಾ ಬಗ್ಗೆ ಈಗಾಗಲೇ ಅನೇಕ ಸೆಲೆಬ್ರಿಟಿಗಳು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಈಗ ಕೇಂದ್ರ ಗೃಹ ಸಚಿವ ಅಮಿತ್​ ಶಾ (Amit Shah) ಕೂಡ ಈ ಸಿನಿಮಾವನ್ನು ಹೊಗಳಿದ್ದಾರೆ. ಹೈದರಾಬಾದ್​​ನಲ್ಲಿ ಅಮಿತ್​ ಶಾ ಅವರನ್ನು ‘ಹನುಮಾನ್​’ ತಂಡದವರು ಭೇಟಿ ಮಾಡಿದ್ದಾರೆ. ಆ ಸಂದರ್ಭದ ಫೋಟೋ ವೈರಲ್​ ಆಗಿದೆ.

ಪಕ್ಷದ ಮೀಟಿಂಗ್​ ಸಲುವಾಗಿ ಅಮಿತ್​ ಶಾ ಅವರು ಹೈದರಾಬಾದ್​ಗೆ ಆಗಮಿಸಿದ್ದರು. ಈ ವೇಳೆ ಅವರನ್ನು ಭೇಟಿ ಆಗುವ ಅವಕಾಶ ‘ಹನುಮಾನ್​’ ತಂಡಕ್ಕೆ ಸಿಕ್ಕಿದೆ. ಗೃಹ ಸಚಿವರಿಗೆ ಆಂಜನೇಯನ ಮೂರ್ತಿ ಇರುವ ಸ್ಮರಣಿಕೆಯನ್ನು ನೀಡಲಾಗಿದೆ. ಚಿತ್ರಮಂದಿರದಲ್ಲಿ ಈ ಸಿನಿಮಾ 50 ದಿನಗಳ ಕಾಲ ಯಶಸ್ವಿಯಾಗಿ ಪ್ರದರ್ಶನ ಕಂಡಿದೆ. ಈಗ ಗೃಹ ಸಚಿವ ಅಮಿತ್​ ಶಾ ಅವರಿಂದ ಮೆಚ್ಚುಗೆ ಸಿಕ್ಕಿರುವುದಕ್ಕೆ ಚಿತ್ರತಂಡ ಖುಷಿಯಲ್ಲಿದೆ.

‘ಹನುಮಾನ್​’ ತಂಡದ ಭೇಟಿಯ ಬಳಿಕ ಅಮಿತ್​ ಶಾ ಅವರು ‘ಎಕ್ಸ್​’ (ಟ್ವಿಟರ್​) ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ‘ಇತ್ತೀಚೆಗೆ ಸೂಪರ್​ ಹಿಟ್​ ಆದ ಹನುಮಾನ್​ ಸಿನಿಮಾದ ನಿರ್ದೇಶಕ ಪ್ರಶಾಂತ್​ ವರ್ಮಾ, ಪ್ರತಿಭಾವಂತ ನಟ ತೇಜ ಸಜ್ಜಾ ಅವರನ್ನು ಭೇಟಿ ಮಾಡಿದೆ. ಭಾರತದ ಧಾರ್ಮಿಕ ಪರಂಪರೆಯನ್ನು ತೋರಿಸುವಲ್ಲಿ ಈ ಚಿತ್ರತಂಡದವರು ಉತ್ತಮವಾದ ಕೆಲಸ ಮಾಡಿದ್ದಾರೆ. ಅವರ ಮುಂದಿನ ಸಿನಿಮಾಗಳಿಗೆ ಶುಭವಾಗಲಿ’ ಎಂದು ಅಮಿತ್ ಶಾ ಪೋಸ್ಟ್​ ಮಾಡಿದ್ದಾರೆ. ತಂಡದ ಜೊತೆಗಿನ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಹಿಂದಿಯಲ್ಲಿ ‘ಕೆಜಿಎಫ್​’ ಮಾಡಿದ್ದ ದಾಖಲೆ ಮುರಿದ ‘ಹನುಮಾನ್​’ ಸಿನಿಮಾ

ಈ ಭೇಟಿಯ ಸಂದರ್ಭದಲ್ಲಿ ನಿರ್ಮಾಪಕ ಕೆ. ನಿರಂಜನ್​ ರೆಡ್ಡಿ, ಕೇಂದ್ರ ಸಚಿವ ಜಿ. ಕೃಷ್ಣ ರೆಡ್ಡಿ ಕೂಡ ಜೊತೆಯಲ್ಲಿ ಇದ್ದರು. ‘ಅಮಿತ್​ ಶಾ ಅವರನ್ನು ಭೇಟಿಯಾಗಿದ್ದು ಒಂದು ಹೆಮ್ಮೆ. ನಿಮ್ಮ ಪ್ರೋತ್ಸಾಹದ ಮಾತುಗಳಿಗೆ ಧನ್ಯವಾದಗಳು’ ಎಂದು ನಟ ತೇಜ ಸಜ್ಜಾ ಪೋಸ್ಟ್​ ಮಾಡಿದ್ದಾರೆ. ಚಿತ್ರಮಂದಿರದಲ್ಲಿ ಬ್ಲಾಕ್​ ಬಸ್ಟರ್​ ಹಿಟ್​ ಆಗಿರುವ ಈ ಸಿನಿಮಾ ಶೀಘ್ರದಲ್ಲೇ ಒಟಿಟಿಗೆ ಬರಲಿದೆ. ಅಲ್ಲದೇ, ಈ ಚಿತ್ರಕ್ಕೆ ಸೀಕ್ವೆಲ್​ ಸಿದ್ಧವಾಗುತ್ತಿದೆ. ಎರಡನೇ ಪಾರ್ಟ್​ಗೆ ‘ಜೈ ಹನುಮಾನ್​’ ಎಂದು ಶೀರ್ಷಿಕೆ ಇಡಲಾಗಿದೆ. ಆ ಸಿನಿಮಾಗಾಗಿ ಅಭಿಮಾನಿಗಳು ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ಈ ಕೋತಿ ಚಪಾತಿಯನ್ನೂ ಮಾಡುತ್ತೆ, ಪಾತ್ರೆಯನ್ನೂ ತೊಳೆಯುತ್ತೆ!
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ರಜೆಗೆ ಮನೆಗೆ ಹೊರಟಿದ್ದ ಸೈನಿಕ ಕಾಲು ಜಾರಿ ರೈಲಿನಡಿ ಬಿದ್ದು ಸಾವು
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ಹೊಸ ವರ್ಷದಂದು ಬೆಂಗಳೂರಿನ ಅಧಿಕಾರಿಗಳಿಗೆ ರಜೆ ಇಲ್ಲ: ಡಿಕೆ ಶಿವಕುಮಾರ್
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ದೋಸೆ ಜೊತೆ ಅವರೇ ಕಾಳಿನ ಹಲವಾರು ತಿಂಡಿಗಳು ಮೇಳದಲ್ಲಿ ಲಭ್ಯ
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಹೊಲಗಳಿಗೆ ಕುಟುಂಬವಾಗಿ ತೆರಳಿ ಒಟ್ಟಿಗೆ ಕೂತು ಉಣ್ಣುವುದೇ ಒಂದು ಸಂಭ್ರಮ!
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಬೆಂಗಳೂರು ನಗರದಲ್ಲಿ ಒತ್ತುವರಿ ಮಾಡಿಕೊಳ್ಳುವ ಕಾಯಕ ಎಗ್ಗಿಲ್ಲದೆ ಸಾಗುತ್ತಿದೆ
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಹಿಮಪಾತದಿಂದ ಮನಾಲಿಯಲ್ಲಿ ಟ್ರಾಫಿಕ್ ಜಾಮ್; ಹಿಮದಲ್ಲೇ ಮುಚ್ಚಿಹೋದ ಕಾರುಗಳು
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮುನಿರತ್ನಗೆ ಒಂದು ನೋಟೀಸ್ ನೀಡುವ ಯೋಗ್ಯತೆ ಬಿಜೆಪಿಗಿಲ್ಲ: ಪ್ರಿಯಾಂಕ್ ಖರ್ಗೆ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಮಹಿಳೆಯರ ವಿಷಯದಲ್ಲಿ ಅವಾಚ್ಯ ಪದಬಳಕೆ ಸಲ್ಲದು: ಬಸವರಾಜ ಹೊರಟ್ಟಿ, ಸಭಾಪತಿ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ
ಕೇರಳವನ್ನು ಮಿನಿ ಪಾಕಿಸ್ತಾನ ಎಂದು ಕರೆದ ಸಚಿವ ನಿತೇಶ್​ ರಾಣೆ