ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ವಂಚನೆ: ನಟಿ ಉಷಾ ಬಂಧನ
Actress Arrest: ಕಿರುತೆರೆ ನಟನೊಬ್ಬನನ್ನು ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚನೆ ಮಾಡಿದ ಆರೋಪದಲ್ಲಿ ನಟಿ ಉಷಾ ಅವರನ್ನು ಬಂಧಿಸಲಾಗಿದೆ.
ಮದುವೆಯಾಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣವನ್ನು ವಸೂಲಿ ಮಾಡಿದ್ದ ಆರೋಪದಲ್ಲಿ ನಟಿ ಉಷಾ ರವಿಶಂಕರ್ (Usha R) ಎಂಬುವರನ್ನು ಶಿವಮೊಗ್ಗ (Shimoga) ಪೊಲೀಸರು (Police) ಬಂಧಿಸಿದ್ದಾರೆ. ಕಿರುತೆರೆ ನಟ ಶರವಣನ್ ಅವರನ್ನು ಮದುವೆಯಾಗುವುದಾಗಿ ನಂಬಿಸಿದ್ದ ನಟಿ ಉಷಾ ಶರವಣನ್ ಅವರಿಂದ ಲಕ್ಷಾಂತರ ರೂಪಾಯಿ ಹಣ ಪಡೆದಿದ್ದರಿಂದ. ಈ ಬಗ್ಗೆ ನ್ಯಾಯಾಲಯದಲ್ಲಿ ಶರವಣನ್ ದೂರು ದಾಖಲಿಸಿದ್ದರು. ಆದರೆ ನಟಿ ಉಷಾ, ವಿಚಾರಣೆಗೆ ಬಾರದ ಕಾರಣ ಅವರ ವಿರುದ್ಧ ವಾರೆಂಟ್ ಹೊರಡಿಸಲಾಗಿತ್ತು. ಇದೀಗ ಅವರ ಬಂಧನವಾಗಿದೆ.
ಶಿವಮೊಗ್ಗದ ವಿನೋಬಾ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳು ನ್ಯಾಯಾಲಯದ ಆದೇಶದಂತೆ ನಟಿ ಉಷಾ ರವಿಶಂಕರ್ ಅವರನ್ನು ಬಂಧಿಸಿದ್ದು ಶಿವಮೊಗ್ಗ ಮೆಗ್ಗಾನ್ ಜಿಲ್ಲಾ ಆಸ್ಪತ್ರೆಯಲ್ಲಿ ನಟಿಗೆ ವೈದ್ಯಕೀಯ ಪರೀಕ್ಷೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನಟಿ ಉಷಾ ರವಿಶಂಕರ್, ಕನ್ನಡದ ಒಂದಲ್ಲ ಎರಡು, ಸಲಗ ಸಿನಿಮಾಗಳು ಹಾಗೂ ಕೆಲವು ಕನ್ನಡ ಧಾರಾವಾಹಿಗಳಲ್ಲಿ ನಟಿಸಿದ್ದಾರೆ.
ಇದನ್ನೂ ಓದಿ:ಜಾಕ್ವೆಲಿನ್ ಫರ್ನಾಂಡಿಸ್ಗೂ ವಂಚನೆ? 36 ಲಕ್ಷ ರೂ ಬೆಕ್ಕು, 52 ಲಕ್ಷ ರೂ. ಬೆಲೆಯ ಕುದುರೆ ಬಗ್ಗೆ ಬಾಯ್ಬಿಟ್ಟ ನಟಿ
ಶರವಣ್ ಸಹ ಕೆಲವು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಶರವಣನ್, ಉಷಾರನ್ನು ಪ್ರೀತಿಸುತ್ತಿದ್ದು ಮದುವೆಯಾಗುವುದಾಗಿ ಕೇಳಿದ್ದರು. ಅದಕ್ಕೆ ಒಪ್ಪಿದ್ದ ಉಷಾ, ಶರವಣನ್ನಿಂದ ಲಕ್ಷಾಂತರ ರೂಪಾಯಿ ಹಣ ಪಡೆದಿದ್ದರಂತೆ. ಆದರೆ ಮದುವೆ ಆಗೆಂದು ಕೇಳಿದಾಗ ಹಿಂದೇಟು ಹಾಕಿದ್ದಾರೆ. ಇದೇ ಕಾರಣಕ್ಕೆ ಶರವಣನ್ ನ್ಯಾಯಾಲಯದಲ್ಲಿ ಉಷಾ ವಿರುದ್ಧ ದೂರು ದಾಖಲಿಸಿದ್ದರು. ಈ ಪ್ರಕರಣ ಕುರಿತಂತೆ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:49 pm, Fri, 16 June 23