ವಿರಾಟ್ ಶತಕದ ಬಳಿಕ ರಿಷಬ್ ಶೆಟ್ಟಿ ಸಂಭ್ರಮ ಹೇಗಿತ್ತು ನೋಡಿ..

ವಿರಾಟ್ ಅವರ ಹಿಂಬಾಲಕರ ಸಂಖ್ಯೆ ದೊಡ್ಡದಿದೆ. ಅವರ ಆಟವನ್ನು ಇಷ್ಟಪಡುವವರು ಸಾಕಷ್ಟು ಮಂದಿ ಇದ್ದಾರೆ. ರಿಷಬ್ ಕೂಡ ವಿರಾಟ್ ಅವರ ಅಭಿಮಾನಿ. ವಿರಾಟ್ ಶತಕ ಸಿಡಿಸಿದ ನಂತರ ವಿರಾಟ್ ಕೊಹ್ಲಿ ಫೋಟೋ ಅನ್ನು ಅವರು ಪೋಸ್ಟ್ ಮಾಡಿದ್ದಾರೆ.

ವಿರಾಟ್ ಶತಕದ ಬಳಿಕ ರಿಷಬ್ ಶೆಟ್ಟಿ ಸಂಭ್ರಮ ಹೇಗಿತ್ತು ನೋಡಿ..
ರಿಷಬ್-ವಿರಾಟ್
Follow us
ರಾಜೇಶ್ ದುಗ್ಗುಮನೆ
|

Updated on: Oct 20, 2023 | 7:12 AM

ಭಾರತ ಹಾಗೂ ಬಾಂಗ್ಲಾದೇಶ್ ನಡುವಿನ ವಿಶ್ವಕಪ್ ಮ್ಯಾಚ್​ನಲ್ಲಿ ವಿರಾಟ್ ಕೊಹ್ಲಿ (Virat Kohli) ಅವರು ಶತಕ ಸಿಡಿಸಿ ಸಂಭ್ರಮಿಸಿದ್ದಾರೆ. 100 ರನ್ ಗಳಿಸಲು ಅವರು ಮಾಡಿದ ಸರ್ಕಸ್ ಒಂದೆರಡಲ್ಲ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ. ಹಲವರು ಹಲವು ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಅನೇಕರು ಕೊಹ್ಲಿಯನ್ನು ಹಾಡಿ ಹೊಗಳುತ್ತಿದ್ದಾರೆ. ಅವರ ಅಭಿಮಾನಿಗಳಿಗಂತೂ ಈ ಶತಕ ಸಾಕಷ್ಟು ಖುಷಿ ನೀಡಿದೆ. ನಿರ್ದೇಶಕ ರಿಷಬ್ ಶೆಟ್ಟಿಗೂ ಕೊಹ್ಲಿ ಶತಕ ಖುಷಿ ನೀಡಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಅವರು ಬರೆದುಕೊಂಡಿದ್ದಾರೆ.

ವಿರಾಟ್ ಅವರ ಹಿಂಬಾಲಕರ ಸಂಖ್ಯೆ ದೊಡ್ಡದಿದೆ. ಅವರ ಆಟವನ್ನು ಇಷ್ಟಪಡುವವರು ಸಾಕಷ್ಟು ಮಂದಿ ಇದ್ದಾರೆ. ರಿಷಬ್ ಕೂಡ ವಿರಾಟ್ ಅವರ ಅಭಿಮಾನಿ. ವಿರಾಟ್ ಶತಕ ಸಿಡಿಸಿದ ನಂತರ ವಿರಾಟ್ ಕೊಹ್ಲಿ ಫೋಟೋ ಅನ್ನು ಅವರು ಪೋಸ್ಟ್ ಮಾಡಿದ್ದಾರೆ. ‘ಐ ಲವ್ ದಿಸ್ ಮ್ಯಾನ್. ಅಭಿನಂದನೆಗಳು ವಿರಾಟ್ ಕೊಹ್ಲಿ’ ಎಂದು ಟ್ವೀಟ್ ಮಾಡಿದ್ದಾರೆ ರಿಷಬ್. ರಿಷಬ್ ಟ್ವೀಟ್​ನ ಅನೇಕರು ರೀಟ್ವೀಟ್ ಮಾಡಿಕೊಂಡಿದ್ದಾರೆ.

ಅನುಷ್ಕಾ ಶರ್ಮಾ ಕೂಡ ಪತಿಯ ಫೋಟೋನ ಪೋಸ್ಟ್ ಮಾಡಿ ಹಾರ್ಟ್ ಎಮೋಜಿ ಹಾಕಿದ್ದಾರೆ. ಇನ್ನೂ ಅನೇಕ ಸೆಲೆಬ್ರಿಟಿಗಳು ಕೊಹ್ಲಿಗೆ ವಿಶ್ ಮಾಡುತ್ತಿದ್ದಾರೆ. ಕೊಹ್ಲಿ ಶತಕಕ್ಕೆ ಕಾರಣರಾದ ಕೆಎಲ್​ ರಾಹುಲ್ ಅವರನ್ನು ಎಲ್ಲರೂ ಅಭಿನಂದಿಸಿದ್ದಾರೆ.

ಇದನ್ನೂ ಓದಿ: ಮುಂಬೈ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಿಷಬ್ ಶೆಟ್ಟಿಯ ಸಿನಿಮಾ, ಕಾಂತಾರ ಅಲ್ಲ

ಸಿನಿಮಾ ವಿಚಾರಕ್ಕೆ ಬರೋದಾದರೆ ರಿಷಬ್ ಶೆಟ್ಟಿ ಅವರು ‘ಕಾಂತಾರ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಈ ಚಿತ್ರದ ಶೂಟಿಂಗ್ ಇನ್ನಷ್ಟೇ ಆರಂಭ ಆಗಬೇಕಿದೆ. ‘ಕಾಂತಾರ’ ರಿಲೀಸ್ ಆಗಿ ವರ್ಷ ಕಳೆದಿದೆ. ಈ ಚಿತ್ರ ಸೃಷ್ಟಿ ಮಾಡಿರುವ ಹೈಪ್ ತುಂಬಾನೇ ದೊಡ್ಡದು. ಈ ಕಾರಣದಿಂದ ಎಲ್ಲರೂ ಪಾರ್ಟ್​ 2ಗಾಗಿ ಕಾದಿದ್ದಾರೆ. ಇದು ಪ್ರೀಕ್ವೆಲ್ ಎಂದು ರಿಷಬ್ ಶೆಟ್ಟಿ ಮೊದಲೇ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ