AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಧಾರಾವಾಹಿಯಲ್ಲಿ ಅಮೃತಾ ರಾಮಮೂರ್ತಿ ಹಾಗೂ ಅಮೂಲ್ಯ ಗೌಡ

ಕಿರುತೆರೆಯ ಜನಪ್ರಿಯ ನಟಿಯರಾದ ಅಮೃತಾ ರಾಮಮೂರ್ತಿ ಮತ್ತು ಅಮೂಲ್ಯ ಗೌಡ ಇದೀಗ ಒಂದೇ ಧಾರಾವಾಹಿಯಲ್ಲಿ ಕಾಣಿಸಿಕೊಳ್ಳಲು ಸಿದ್ಧರಾಗಿದ್ದಾರೆ. ಉದಯ ಟಿವಿಯಲ್ಲಿ ಪ್ರಸಾರವಾಗಲಿರುವ 'ಮಹಾಲಕ್ಷ್ಮೀ ಮದುವೆ' ಧಾರಾವಾಹಿಯಲ್ಲಿ ಈ ಇಬ್ಬರು ಪ್ರತಿಭಾನ್ವಿತ ನಟಿಯರು ಜೊತೆಯಾಗಿ ನಟಿಸಲಿದ್ದಾರೆ. ಈ ಸುದ್ದಿ ಅಭಿಮಾನಿಗಳಲ್ಲಿ ಅತೀವ ಸಂತಸ ಮೂಡಿಸಿದೆ.

ಒಂದೇ ಧಾರಾವಾಹಿಯಲ್ಲಿ ಅಮೃತಾ ರಾಮಮೂರ್ತಿ ಹಾಗೂ ಅಮೂಲ್ಯ ಗೌಡ
ಅಮೂಲ್ಯ-ಅಮೃತಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Mar 25, 2026 | 8:06 AM

Share

ಕಿರುತೆರೆ ನಟಿ ಅಮೂಲ್ಯ ಗೌಡ ಅವರು ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಅದೇ ರೀತಿ ಅಮೃತಾ ರಾಮಮೂರ್ತಿ (Amrutha Ramamoorthi) ಕೂಡ ಸಾಕಷ್ಟು ಹೆಸರು ಮಾಡಿದ್ದಾರೆ. ಇಬ್ಬರಿಗೂ ದೊಡ್ಡ ಫ್ಯಾನ್ ಬೇಸ್​ ಇದೆ. ಈಗ ಇಬ್ಬರೂ ಒಂದೇ ಧಾರಾವಾಹಿ ಮೂಲಕ ಬರಲು ರೆಡಿ ಆಗಿದ್ದಾರೆ ಎಂಬುದು ವಿಶೇಷ. ಉದಯ ಟಿವಿಯಲ್ಲಿ ಪ್ರಸಾರ ಆಗಲಿರುವ ಸೀರಿಯಲ್​​ನ ಭಾಗವಾಗಿ ಅಮೂಲ್ಯ ಗೌಡ ಹಾಗೂ ಅಮೃತಾ ರಾಮಮೂರ್ತಿ ಕಾಣಿಸಿಕೊಳ್ಳಲಿದ್ದಾರೆ. ಇದು ಅಭಿಮಾನಿಗಳ ಪಾಲಿಗೆ ಖುಷಿಯ ವಿಷಯ.

ಅಮೂಲ್ಯ ಗೌಡ ಕನ್ನಡ ಕಿರುತೆರೆ ಲೋಕದಲ್ಲಿ ಸಕ್ರಿಯ ಆಗಿರೋ ಉದಯೋನ್ಮುಖ ನಟಿಯರಲ್ಲಿ ಒಬ್ಬರು. ಅಮೃತಾ ಕೂಡ ಕಿರುತೆರೆಯಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಉದಯದಲ್ಲಿ ಪ್ರಸಾರ ಆಗಲಿರುವ ‘ಮಹಾಲಕ್ಷ್ಮೀ ಮದುವೆ’ ಧಾರಾವಾಹಿಯಲ್ಲಿ ನಟಿಸಲಿದ್ದಾರೆ. ಇದು ಅಭಿಮಾನಿಗಳಿಗೆ ಖುಷಿ ನೀಡಿದೆ. ಶೀಘ್ರವೇ ಧಾರಾವಾಹಿ ಬಗ್ಗೆ ಮತ್ತಷ್ಟು ಅಪ್ಡೇಟ್ ಸಿಗಲಿದೆ.

ಅಮೂಲ್ಯ ಗೌಡ ಅವರು ಕಿರುತೆರೆ ಲೋಕಕ್ಕೆ ಬಂದು 12 ವರ್ಷಗಳೇ ಕಳೆದಿವೆ! ಅಮೂಲ್ಯ ಗೌಡ ಅವರು ಮೊದಲು ನಟಿಸಿದ್ದು ಸ್ವಾತಿ ಮುತ್ತು ಧಾರಾವಾಹಿಯಲ್ಲಿ. ‘ಸ್ಟಾರ್ ಸುವರ್ಣದಲ್ಲಿ’ ಧಾರಾವಾಹಿ ಪ್ರಸಾರ ಕಂಡಿತು. ಈ ಧಾರಾವಾಹಿಯಲ್ಲಿ ಪಾರು ಹೆಸರಿನ ಪಾತ್ರ ಮಾಡಿದರು. ಅವರಿಗೆ ಭರ್ಜರಿ ಜನಪ್ರಿಯತೆ ತಂದುಕೊಟ್ಟ ಸೀರಿಯಲ್ ಎಂದರೆ ‘ಕಮಲಿ’. ಈ ಸೀರಿಯಲ್ 2018ರಿಂದ 2022ರವರೆಗೆ ಪ್ರಸಾರ ಆಯಿತು. ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ಅಮೂಲ್ಯ ಮಿಂಚಿದರು.

ಇದನ್ನೂ ಓದಿ: ಅರ್ಧಕ್ಕೆ ಧಾರಾವಾಹಿ ತೊರೆದ ಅಮೃತಾ ರಾಮಮೂರ್ತಿ

ಇನ್ನು, ಅಮೃತಾ ಅವರು ‘ಕುಲವಧು’, ಮಿಸ್ಟರ್ ಆಂಡ್ ಮಿಸಸ್ ರಂಗೇಗೌಡ ಮೊದಲಾದ ಸೀರಿಯಲ್​​​ನಲ್ಲಿ ನಟಿಸಿದರು. ಕೆಲ ಸಮಯ ‘ಆಸೆ’ ಧಾರಾವಾಹಿಯಲ್ಲಿ ರೋಹಿಣಿ ಹೆಸರಿನ ಪಾತ್ರ ಮಾಡಿದರು. ಇದು ನೆಗೆಟಿವ್ ಶೇಡ್ ಹೊಂದಿದ್ದ ಪಾತ್ರ ಆಗಿತ್ತು. ಅವರ ವೃತ್ತಿ ಜೀವನಕ್ಕೆ ಈ ಧಾರಾವಾಹಿ ಸಾಕಷ್ಟು ಮೈಲೇಜ್ ನೀಡಿತು ಎಂದರೂ ತಪ್ಪಾಗಲಾರದು. ಈಗ ಅವರು ಉದಯ ಟಿವಿ ಮೂಲಕ ಕಂಬ್ಯಾಕ್ ಮಾಡೋಕೆ ರೆಡಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ದೇವಿಮನೆ ಘಟ್ಟದ ಬಳಿ ಕಂದಕಕ್ಕೆ ಉರುಳಿಬಿದ್ದ KSRTC ಬಸ್: 12 ಮಂದಿಗೆ ಗಾಯ
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಇಂದು ಚಂದನ ಷಷ್ಠಿ; ಈ ರಾಶಿಗಳಿಗೆ ಕೂಡಿಬರಲಿದೆ ಅದೃಷ್ಟ!
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ಸೌಜನ್ಯ ಕೇಸ್​​ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್​ ಸೈಡ್​ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?