ಜೀ ಕನ್ನಡದಲ್ಲಿ ಮೇ 29ರಿಂದ ‘ಅಮೃತಧಾರೆ’ ಧಾರಾವಾಹಿ ಆರಂಭ; ಯಾವ ಸೀರಿಯಲ್ ಅಂತ್ಯ?

Amruthadhaare Serial: ಛಾಯಾ ಸಿಂಗ್ ಹಾಗೂ ರಾಜೇಶ್ ನಟರಂಗ ಅವರು ‘ಅಮೃತಧಾರೆ’ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಹಲವು ಪ್ರೋಮೋಗಳು ರಿಲೀಸ್ ಆಗಿದ್ದು ಎಲ್ಲರ ಗಮನ ಸೆಳೆದಿದೆ.

ಜೀ ಕನ್ನಡದಲ್ಲಿ ಮೇ 29ರಿಂದ ‘ಅಮೃತಧಾರೆ’ ಧಾರಾವಾಹಿ ಆರಂಭ; ಯಾವ ಸೀರಿಯಲ್ ಅಂತ್ಯ?
ರಾಜೇಶ್-ಛಾಯಾ ಸಿಂಗ್
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:May 17, 2023 | 9:04 AM

ಜೀ ಕನ್ನಡದಲ್ಲಿ ಹೊಸಹೊಸ ಧಾರಾವಾಹಿಗಳು ಪ್ರಸಾರ ಕಾಣುತ್ತಿವೆ. ಸಾವಿರಾರು ಎಪಿಸೋಡ್ ಕಂಡ ಧಾರಾವಾಹಿಗಳು ಶೀಘ್ರವೇ ಪೂರ್ಣಗೊಳ್ಳುವ ಸೂಚನೆ ಸಿಕ್ಕಿದೆ. ಈ ಬೆನ್ನಲ್ಲೆ ಹೊಸ ಧಾರಾವಾಹಿ ಆರಂಭ ಆಗಿದೆ. ಇತ್ತೀಚೆಗಷ್ಟೇ ‘ಭೂಮಿಗೆ ಬಂದ ಭಗವಂತ’ ಧಾರಾವಾಹಿ ಪ್ರಸಾರ ಆರಂಭ ಕಂಡಿದೆ. ಈಗ ‘ಅಮೃತಧಾರೆ’ (Amruthadhaare) ಧಾರಾವಾಹಿ ಆರಂಭಕ್ಕೆ ದಿನಾಂಕ ಫಿಕ್ಸ್ ಆಗಿದೆ. ಪ್ರೋಮೋ ಮೂಲಕ ಗಮನ ಸೆಳೆದ ಈ ಧಾರಾವಾಹಿ ಮೇ 29ರಿಂದ ಆರಂಭ ಆಗಲಿದೆ.

ಛಾಯಾ ಸಿಂಗ್ ಹಾಗೂ ರಾಜೇಶ್ ನಟರಂಗ ಅವರು ‘ಅಮೃತಧಾರೆ’ ಧಾರಾವಾಹಿಯಲ್ಲಿ ಮುಖ್ಯಭೂಮಿಕೆ ನಿರ್ವಹಿಸುತ್ತಿದ್ದಾರೆ. ಹಲವು ಪ್ರೋಮೋಗಳು ರಿಲೀಸ್ ಆಗಿದ್ದು ಎಲ್ಲರ ಗಮನ ಸೆಳೆದಿದೆ. ‘ಜೊತೆ ಜೊತೆಯಲಿ’ ಧಾರಾವಾಹಿ ಅಂತಿಮಘಟ್ಟ ತಲುಪಿದೆ. ಈ ಧಾರಾವಾಹಿ ಪೂರ್ಣಗೊಂಡ ಬಳಿಕ ‘ಅಮೃತಧಾರೆ’ ಪ್ರಸಾರ ಕಾಣಲಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ವಾಹಿನಿ ಕಡೆಯಿಂದ ಇನ್ನಷ್ಟೇ ಅಧಿಕೃತ ಮಾಹಿತಿ ಸಿಗಬೇಕಿದೆ.

‘ಹುಡುಗ-ಹುಡುಗಿ ಹೊಂದ್ಕೊಂಡಿದ್ರೆ ಅದೊಂದು ಚೆಂದದ ಕಥೆ. ಅವರಿಬ್ರೂ ಕಿತ್ತಾಡ್ಕೊಂಡಿದ್ರೆ ಅದು ಬೇರೇನೇ ಕಥೆ. ಬರ್ತಿದೆ ಒಂದು ಬೊಂಬಾಟ್ ಕಥೆ. ಅಮೃತಧಾರೆ, ಮೇ 29ರಿಂದ’ ಎಂದು ಹೊಸ ಪ್ರೋಮೋಗೆ ಕ್ಯಾಪ್ಶನ್ ನೀಡಲಾಗಿದೆ.  ಈ ಧಾರಾವಾಹಿ ಯಾವ ರೀತಿಯಲ್ಲಿ ಮೂಡಿ ಬರಲಿದೆ ಎನ್ನುವ ಕುತೂಹಲ ವೀಕ್ಷಕರಲ್ಲಿ ಮೂಡಿದೆ.

ರಾಜೇಶ್ ನಟರಂಗ ಅವರು ಉದ್ಯಮಿ ಆಗಿ ಕಾಣಿಸಿಕೊಂಡರೆ, ಛಾಯಾ ಸಿಂಗ್ ಮಧ್ಯಮ ವರ್ಗದ ಹುಡುಗಿ ಆಗಿ ಕಾಣಿಸಿಕೊಂಡಿದ್ದಾರೆ. ‘ಬಡೇ ಅಚ್ಚೆ ಲಗ್ತೇ ಹೈ’ ಹೆಸರಿನ ಹಿಂದಿ ಧಾರಾವಾಹಿಯ ರಿಮೇಕ್ ಇದಾಗಿದೆ. ‘ಅಮೃತಧಾರೆ’ ಪ್ರೋಮೋ ನೋಡಿದವರಿಗೆ ‘ಜೊತೆ ಜೊತೆಯಲಿ’ ಧಾರಾವಾಹಿ ನೆನಪಾಗಿದೆ. ವಯಸ್ಸಿನ ಅಂತರ ಹೆಚ್ಚಿರುವ ಹುಡುಗ-ಹುಡುಗಿಯ ಪ್ರೇಮ್ ಕಹಾನಿ ಈ ಧಾರಾವಾಹಿಯಲ್ಲಿತ್ತು. ‘ಅಮೃತಧಾರೆ’ ಕೂಡ ಇದೇ ರೀತಿ ಇರಲಿದೆಯೇ ಎನ್ನುವ ಪ್ರಶ್ನೆ ಮೂಡಿದೆ.

View this post on Instagram

A post shared by Zee Kannada (@zeekannada)

ಇದನ್ನೂ ಓದಿ: ಜೀ ಕನ್ನಡದಲ್ಲಿ ಬರ್ತಿದೆ ಹೊಸ ಧಾರಾವಾಹಿ ‘ಅಮೃತಧಾರೆ’; ಇದರ ಕಥೆ ಏನು?

ಛಾಯಾ ಸಿಂಗ್ ಅವರು 2000ನೇ ಇಸವಿಯಲ್ಲೇ ಚಿತ್ರರಂಗಕ್ಕೆ ಕಾಲಿಟ್ಟರು. ‘ಮುನ್ನುಡಿ’ ಅವರ ಮೊದಲ ಸಿನಿಮಾ. ಹಲವು ಕನ್ನಡ ಸಿನಿಮಾಗಳಲ್ಲಿ ಅವರು ಅಭಿನಯಿಸಿದ್ದಾರೆ. ಸದ್ಯ ಅವರು ‘ಅನು ಅನೆ ನೇನು’ ಹೆಸರಿನ ತೆಲುಗು ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ರಾಜೇಶ್ ನಟರಂಗ ಕೂಡ ಹಲವು ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದಾರೆ. ಈಗ ಛಾಯಾ ಸಿಂಗ್ ಹಾಗೂ ರಾಜೇಶ್ ಒಟ್ಟಾಗಿ ತೆರೆಹಂಚಿಕೊಳ್ಳುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:55 am, Wed, 17 May 23

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಅಯ್ಯೋ.. ಸಿಸಿಟಿವಿ ರಿಪೇರಿ ಮಾಡಲು ಬಂದಿದ್ದವನ ವಜ್ರದ ಉಂಗುರ ಬಿಡದ ಖದೀಮರು
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್
ಗಾಂಧಿ ಭಾರತ ಒಂದು ಸರ್ಕಾರೀ ಕಾರ್ಯಕ್ರಮ, ಎಲ್ಲರೂ ಭಾಗವಹಿಸಬಹುದು: ಶಿವಕುಮಾರ್