AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮೃತಧಾರೆ’ ಧಾರಾವಾಹಿ: ಮಗಳು ಮಿಂಚು ಕಿಡ್ನ್ಯಾಪ್, ಭದ್ರಕಾಳಿ ಅವತಾರ ತಾಳಿದ ಭೂಮಿಕಾ

ಜೀ ಕನ್ನಡದ 'ಅಮೃತಧಾರೆ' ಧಾರಾವಾಹಿಯಲ್ಲಿ ಮಿಂಚು ಅಪಹರಣ ಪ್ರೇಕ್ಷಕರನ್ನು ಆತಂಕಕ್ಕೆ ದೂಡಿದೆ. ಮಗಳ ರಕ್ಷಣೆಗಾಗಿ ಸೌಮ್ಯ ಸ್ವಭಾವದ ಭೂಮಿಕಾ, ಭದ್ರಕಾಳಿ ಅವತಾರ ತಾಳಿ ರೌಡಿಗಳ ಹೆಡೆಮುರಿ ಕಟ್ಟುತ್ತಿದ್ದಾಳೆ. ಕಡ್ಡಿ, ರಾಡ್‌ಗಳನ್ನೇ ಆಯುಧವಾಗಿಸಿಕೊಂಡು ರೌಡಿಗಳ ವಿರುದ್ಧ ಹೋರಾಡುವ ಭೂಮಿಕಾಳ ಸಾಹಸ ಮುಂದಿನ ಸಂಚಿಕೆಗಳ ಬಗ್ಗೆ ಕುತೂಹಲ ಮೂಡಿಸಿದೆ.

'ಅಮೃತಧಾರೆ' ಧಾರಾವಾಹಿ: ಮಗಳು ಮಿಂಚು ಕಿಡ್ನ್ಯಾಪ್, ಭದ್ರಕಾಳಿ ಅವತಾರ ತಾಳಿದ ಭೂಮಿಕಾ
ಅಮೃತಧಾರೆ
 ಶ್ರೀಲಕ್ಷ್ಮೀ ಎಚ್
| Edited By: |

Updated on: Jun 06, 2026 | 8:03 AM

Share

ಜೀ ಕನ್ನಡ ವಾಹಿನಿಯ ಜನಪ್ರಿಯ ‘ಅಮೃತಧಾರೆ’ ಧಾರಾವಾಹಿಯು (Amruthadhare Serial) ದಿನದಿಂದ ದಿನಕ್ಕೆ ತಿರುವಿನೊಂದಿಗೆ ಸಾಗುತ್ತಿದೆ. ಈಗ ಕಥೆ ಅತ್ಯಂತ ಕುತೂಹಲಕಾರಿ ಘಟ್ಟಕ್ಕೆ ಬಂದು ತಲುಪಿದೆ. ಇತ್ತೀಚಿನ ಸಂಚಿಕೆಗಳಲ್ಲಿ ಭೂಮಿಕಾಳ ಸಾಕು ಮಗಳು ಮಿಂಚು ನಿಗೂಢವಾಗಿ ನಾಪತ್ತೆಯಾಗಿದ್ದು, ಆಕೆಯನ್ನು ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿರುವುದು ಬೆಳಕಿಗೆ ಬಂದಿದೆ. ಮಗಳನ್ನು ಹೇಗಾದರೂ ಮಾಡಿ ಉಳಿಸಿಕೊಳ್ಳಲೇಬೇಕು ಎಂದು ಪಣತೊಟ್ಟಿರುವ ಭೂಮಿಕಾ, ಈಗ ರೌಡಿಗಳ ಹೆಡೆಮುರಿ ಕಟ್ಟಲು ಭದ್ರಕಾಳಿ ಅವತಾರ ತಾಳಿದ್ದಾಳೆ.

ಮಗಳು ಕಾಣೆಯಾದ ಸುದ್ದಿ ತಿಳಿಯುತ್ತಿದ್ದಂತೆ ಆತಂಕಕ್ಕೊಳಗಾಗುವ ಭೂಮಿಕಾ ಹಳೆ ರೌಡಿಗಳ ಸಹಾಯದೊಂದಿಗೆ ಕಿಡ್ನ್ಯಾಪರ್‌ಗಳ ಅಡಗುದಾಣವನ್ನು ಪತ್ತೆಹಚ್ಚಲು ಮುಂದಾಗುತ್ತಾಳೆ. ಒಂದು ಹಳೆಯ ಗೋದಾಮಿನಲ್ಲಿ ಮಿಂಚನ್ನು ಕೂಡಿಹಾಕಿರುವುದು ಗೊತ್ತಾದ ತಕ್ಷಣ ಅಲ್ಲಿಗೆ ಧಾವಿಸುತ್ತಾಳೆ. ಆದರೆ, ಪೊಲೀಸರು ಮತ್ತು ಭೂಮಿಕಾ ಕಣ್ಣು ತಪ್ಪಿಸಿ ಕಿಡ್ನ್ಯಾಪರ್‌ಗಳು ಮಿಂಚನ್ನು ಮತ್ತೊಂದು ವಾಹನದಲ್ಲಿ ಬೇರೆಡೆಗೆ ಸಾಗಿಸಲು ಯತ್ನಿಸುತ್ತಾರೆ.

View this post on Instagram

A post shared by Zee Kannada (@zeekannada)

ನಂತರ ಆಕೆಯನ್ನು ಕಿಡ್ನ್ಯಾಪ್ ಮಾಡಿದವರ ಬಳಿ ಭೂಮಿಕಾ ತೆರಳುತ್ತಾಳೆ. ತಾಯಿಯ ಮಮತೆಯ ಜೊತೆಗೆ ರೌಡಿಗಳನ್ನು ಸಂಹರಿಸುವ ಉಗ್ರ ರೂಪ ತಳೆಯುತ್ತಾಳೆ. ಮಗಳನ್ನು ಕಾಪಾಡಲು ಮುಂದಾಗುವ ಭೂಮಿಕಾ ಎದುರು ಬರುವ ಪ್ರತಿಯೊಬ್ಬ ಗೂಂಡಾಗೂ ತಕ್ಕ ಶಾಸ್ತಿ ಮಾಡುತ್ತಾಳೆ. ಕೈಗೆ ಸಿಕ್ಕ ಕಡ್ಡಿ, ಕಬ್ಬಿಣದ ರಾಡ್‌ಗಳನ್ನೇ ಆಯುಧವಾಗಿಸಿಕೊಂಡು ರೌಡಿಗಳ ಮೇಲೆ ಮುಗಿಬೀಳುತ್ತಾಳೆ. ಭೂಮಿಕಾಳ ಈ ಅನಿರೀಕ್ಷಿತ ಸಾಹಸ ನೋಡಿ ಎಲ್ಲರೂ ಬೆಚ್ಚಿಬೀಳುತ್ತಾರೆ.

ಇದನ್ನೂ ಓದಿ: ಅಮೃತಧಾರೆ: ಆ ಒಂದು ವಿಷಯಕ್ಕೆ ದಿಯಾಳನ್ನು ಕೊಂದೇ ಬಿಟ್ಟ ಜೆಡಿ

ಸಾಮಾನ್ಯವಾಗಿ ಸೌಮ್ಯ ಸ್ವಭಾವದ ಗೃಹಿಣಿಯಾಗಿ ಕಾಣಿಸಿಕೊಳ್ಳುತ್ತಿದ್ದ ಭೂಮಿಕಾ, ಮಗಳ ರಕ್ಷಣೆಗಾಗಿ ಇಷ್ಟು ದೊಡ್ಡ ಸಾಹಸಕ್ಕೆ ಕೈ ಹಾಕಿರುವುದು ಪ್ರೇಕ್ಷಕರಲ್ಲಿ ರೋಮಾಂಚನ ಉಂಟುಮಾಡಿದೆ. ಈ ರೋಚಕ ಸಂಚಿಕೆಯು ಪ್ರೇಕ್ಷಕರಿಗೆ ಭರಪೂರ ಮನರಂಜನೆ ನೀಡುತ್ತಿದ್ದು, ಭೂಮಿಕಾ ತನ್ನ ಮಗಳು ಮಿಂಚನ್ನು ಕಿಡ್ನ್ಯಾಪರ್‌ಗಳಿಂದ ಸುರಕ್ಷಿತವಾಗಿ ಹೇಗೆ ಬಿಡಿಸಿಕೊಂಡು ಬರುತ್ತಾಳೆ ಎಂಬುದು ಮುಂದಿನ ಸಂಚಿಕೆಗಳಲ್ಲಿ ತೀವ್ರ ಕುತೂಹಲ ಮೂಡಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ