AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮೃತಧಾರೆ’ ಧಾರಾವಾಹಿ ನಟಿಗೆ ಪತಿಯಿಂದ ಚಾಕು ಇರಿತ

Amruthadhare serial: ಕನ್ನಡದ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾಗಿರುವ ‘ಅಮೃತಧಾರೆ’ ಧಾರಾವಾಹಿಯ ನಟಿ ಶ್ರುತಿ ಚಾಕು ಇರಿತಕ್ಕೆ ಒಳಗಾಗಿದ್ದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ರುತಿ ಅವರ ಪತಿ ಅಮರೇಶ್ ಅವರೇ ಪತ್ನಿಗೆ ಚಾಕು ಇರಿದಿದ್ದಾರೆ ಎನ್ನಲಾಗಿದ್ದು, ಪೊಲೀಸರು ಅಮರೇಶ್ ಅನ್ನು ಬಂಧಿಸಿದ್ದಾರೆ.

‘ಅಮೃತಧಾರೆ’ ಧಾರಾವಾಹಿ ನಟಿಗೆ ಪತಿಯಿಂದ ಚಾಕು ಇರಿತ
Shruti
ಮಂಜುನಾಥ ಸಿ.
| Updated By: ರಾಜೇಶ್ ದುಗ್ಗುಮನೆ|

Updated on:Jul 11, 2025 | 12:20 PM

Share

ಕನ್ನಡದ ಜನಪ್ರಿಯ ಧಾರಾವಾಹಿಗಳಲ್ಲಿ (Serial) ಒಂದಾಗಿರುವ ‘ಅಮೃತಧಾರೆ’ ಧಾರಾವಾಹಿ ನಟಿ ಶ್ರುತಿ ಅವರು ಚಾಕು ಇರಿತಕ್ಕೆ ಒಳಗಾಗಿದ್ದಾರೆ. ನಟಿ ಶ್ರುತಿ ಅವರ ಪತಿಯೇ ಅವರಿಗೆ ಚಾಕು ಇರಿದಿದ್ದಾರೆ ಎನ್ನಲಾಗುತ್ತಿದೆ. ಪತ್ನಿಯ ಶೀಲ ಶಂಕಿಸಿ ಪತಿ ಅಮರೇಶ್ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದ್ದು, ಇದೀಗ ಶ್ರುತಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶ್ರುತಿ ಅವರ ಪತಿ ಅಮರೇಶ್ ಅವರನ್ನು ಬಂಧಿಸಿದ್ದಾರೆ.

‘ಅಮೃತಧಾರೆ’ ಸೇರಿದಂತೆ ಕನ್ನಡದ ಇನ್ನೂ ಕೆಲವು ಧಾರಾವಾಹಿಗಳಲ್ಲಿ ನಟಿ ಶ್ರುತಿ ನಟಿಸಿದ್ದಾರೆ. ಶ್ರುತಿ ಮತ್ತು ಅಮರೇಶ್ ನಡುವೆ ಮೊದಲಿನಿಂದಲೂ ಮನಸ್ಥಾಪಗಳಿದ್ದವು. ಶ್ರುತಿ ಹಾಗೂ ಅಮರೇಶ್ ಪರಸ್ಪರ ಪ್ರೀತಿಸಿ ಮದುವೆ ಆಗಿದ್ದರು. ಇಬ್ಬರು ಮಕ್ಕಳು ಸಹ ಈ ದಂಪತಿಗೆ ಇವೆ. ಹನುಮಂತ ನಗರದಲ್ಲಿ ಲೀಸ್​ಗೆ ಮನೆ ಪಡೆದು ದಂಪತಿ ವಾಸವಿದ್ದರು. ಆದರೆ ಪತ್ನಿಯ ಬಗ್ಗೆ ಅಮರೇಶ್​ಗೆ ಅನುಮಾನಗಳಿದ್ದು, ಇದೇ ಕಾರಣಕ್ಕೆ ಪದೇ-ಪದೇ ಜಗಳಗಳು ನಡೆಯುತ್ತಿದ್ದವು.

ಇದೇ ಏಪ್ರಿಲ್ ತಿಂಗಳಲ್ಲಿ ಶ್ರುತಿ, ಅಮರೇಶ್ ಇಂದ ದೂರಾಗಿ ತಮ್ಮ ಅಣ್ಣನ ಮನೆಗೆ ಬಂದಿದ್ದರು. ಅಲ್ಲಿಯೇ ವಾಸವಿದ್ದರು. ಆದರೆ ಅದಾದ ಬಳಿಕವೂ ಸಹ ಮನೆಯ ಲೀಸ್ ಹಣದ ಕುರಿತಾಗಿ ಜಗಳ ನಡೆದಿತ್ತು. ಇದರ ಕುರಿತಾಗಿ ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಶ್ರುತಿ ದೂರು ನೀಡಿದ್ದರು. ಬಳಿಕ ರಾಜಿ-ಸಂಧಾನ ನಡೆದು ನಿನ್ನೆಯಷ್ಟೆ (ಗುರುವಾರ) ಇಬ್ಬರೂ ಮತ್ತೆ ಒಟ್ಟಿಗೆ ನೆಲೆಸಲು ಒಪ್ಪಿದ್ದರು. ಮುನೇಶ್ವರ ಲೇಔಟ್​ನ ಮನೆಯಲ್ಲಿ ಇಬ್ಬರೂ ವಾಸವಿದ್ದರು. ಆದರೆ ರಾಜಿ-ಸಂಧಾನ ನಡೆದ ಮಾರನೇಯ ದಿನವೇ ಅಂದರೆ ಇಂದು ಅಮರೇಶ್, ಶ್ರುತಿಗೆ ಚಾಕು ಇರಿದಿದ್ದಾನೆ.

ಇದನ್ನೂ ಓದಿ:‘ಅಮೃತಧಾರೆ’ ಧಾರಾವಾಹಿಯಲ್ಲಿ ದೊಡ್ಡ ತಿರುವು; ಭೂಮಿಕಾಗೆ ಅವಳಿ ಮಕ್ಕಳು

ಮೊದಲು ಶ್ರುತಿ ಕಣ್ಣಿಗೆ ಪೆಪ್ಪರ್ ಸ್ಪ್ರೇ ಹೊಡೆದ ಅಮರೇಶ್ ಆ ನಂತರ ಚಾಕುವಿನಿಂದ ಶ್ರುತಿಯ ಹೊಟ್ಟೆ, ಪಕ್ಕೆಲುಬು, ತೊಡೆ ಹಾಗೂ ಕುತ್ತಿಗೆಗೆ ಚಾಕು ಹಾಕಿದ್ದಾನೆ. ಶ್ರುತಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಮರೇಶ್ ಅನ್ನು ಪೊಲೀಸರು ಬಂಧಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:05 pm, Fri, 11 July 25