AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲ ಬಾರಿ ಟಿವಿಯಲ್ಲಿ ಪ್ರಸಾರ ಆಗಲಿದೆ ‘ಅನಿಮಲ್​’; ದಿನಾಂಕ, ವಾಹಿನಿ ಬಗ್ಗೆ ಇಲ್ಲಿದೆ ಮಾಹಿತಿ..

ರಣಬೀರ್​ ಕಪೂರ್​, ರಶ್ಮಿಕಾ ಮಂದಣ್ಣ, ಬಾಬಿ ಡಿಯೋಲ್​, ತೃಪ್ತಿ ದಿಮ್ರಿ, ಅನಿಲ್​ ಕಪೂರ್​ ಮುಂತಾದವರು ‘ಅನಿಮಲ್​’ ಸಿನಿಮಾದಲ್ಲಿ ನಟಿಸಿದ್ದಾರೆ. ಸಂದೀಪ್​ ರೆಡ್ಡಿ ವಂಗಾ ನಿರ್ದೇಶನದ ಈ ಸಿನಿಮಾ ಇದೇ ಮೊದಲ ಬಾರಿಗೆ ಕಿರುತೆರೆಯಲ್ಲಿ ಪ್ರಸಾರ ಆಗಲಿದೆ. ಯಾವ ವಾಹಿನಿಯಲ್ಲಿ ಪ್ರಸಾರ ಆಗಲಿದೆ? ಸಮಯ ಮತ್ತು ದಿನಾಂಕ ಯಾವುದು ಎಂಬ ಬಗ್ಗೆ ಈ ಲೇಖನದಲ್ಲಿದೆ ಮಾಹಿತಿ.

ಮೊದಲ ಬಾರಿ ಟಿವಿಯಲ್ಲಿ ಪ್ರಸಾರ ಆಗಲಿದೆ ‘ಅನಿಮಲ್​’; ದಿನಾಂಕ, ವಾಹಿನಿ ಬಗ್ಗೆ ಇಲ್ಲಿದೆ ಮಾಹಿತಿ..
ರಣಬೀರ್​ ಕಪೂರ್​
ಮದನ್​ ಕುಮಾರ್​
|

Updated on: Mar 12, 2024 | 1:05 PM

Share

ನಟ ರಣಬೀರ್​ ಕಪೂರ್​ (Ranbir Kapoor) ವೃತ್ತಿಜೀವನದ ಅತಿ ದೊಡ್ಡ ಸಿನಿಮಾವಾಗಿ ‘ಅನಿಮಲ್​’ ಹೊರಹೊಮ್ಮಿದೆ. ವಿಶ್ವಾದ್ಯಂತ ಈ ಸಿನಿಮಾ 900 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿದೆ. ಭಾರತದ ಬಾಕ್ಸ್​ ಆಫೀಸ್​ನಲ್ಲಿ ‘ಅನಿಮಲ್​’ ಗಳಿಸಿದ್ದು ಬರೋಬ್ಬರಿ 556 ಕೋಟಿ ರೂಪಾಯಿ. ನಿರ್ದೇಶಕ ಸಂದೀಪ್​ ರೆಡ್ಡಿ ವಂಗ ಅವರು ಈ ಸಿನಿಮಾದಿಂದ ಸಖತ್ ಸುದ್ದಿಯಾದರು. ಚಿತ್ರಮಂದಿರದಲ್ಲಿ ಅಬ್ಬರಿಸಿದ ಅನಿಮಲ್​’ ಸಿನಿಮಾ (Animal Movie) ನಂತರ ಒಟಿಟಿಗೂ ಕಾಲಿಟ್ಟು ಧೂಳೆಬ್ಬಿಸಿತು. ಈಗ ಇದೇ ಮೊದಲ ಬಾರಿಗೆ ಟಿವಿಯಲ್ಲಿ ಪ್ರಸಾರ ಕಾಣಲು ಸಜ್ಜಾಗಿದೆ. ಮಾರ್ಚ್​ 17ರಂದು ಈ ಸಿನಿಮಾದ ಟಿಲಿವಿಷನ್​ ಪ್ರೀಮಿಯರ್ (Animal television Premiere)​ ಆಗಲಿದೆ.

ಬ್ಲಾಕ್​ ಬಸ್ಟರ್​ ಸಿನಿಮಾಗಳಿಗೆ ಎಲ್ಲ ವೇದಿಕೆಯಲ್ಲೂ ಬೇಡಿಕೆ ಇರುತ್ತದೆ. ಚಿತ್ರಮಂದಿರ ಮತ್ತು ಒಟಿಟಿಯಲ್ಲಿ ಭಾರಿ ಸದ್ದು ಮಾಡಿದ ‘ಅನಿಮಲ್​’ ಸಿನಿಮಾದ ಹಿಂದಿ ವರ್ಷನ್​ ಅನ್ನು ಟಿವಿಯಲ್ಲಿ ಪ್ರಸಾರ ಮಾಡಲು ‘ಸೋನಿ ಮ್ಯಾಕ್ಸ್​’ ಮಾಹಿನಿ ಸಿದ್ಧವಾಗಿದೆ. ಮಾರ್ಚ್​ 17ರಂದು ಸಂಜೆ 7 ಗಂಟೆಗೆ ಈ ಸಿನಿಮಾ ಪ್ರಸಾರ ಆಗಲಿದೆ. ಕಿರುತೆರೆಯ ಪ್ರೇಕ್ಷಕರು ‘ಅನಿಮಲ್​’ ಸಿನಿಮಾ ನೋಡಿ ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

ಟಿವಿಯಲ್ಲಿ ಮೊದಲ ಬಾರಿ ಪ್ರಸಾರ ಆಗುತ್ತಿರುವುದರಿಂದ ‘ಅನಿಮಲ್​’ ಸಿನಿಮಾ ದಾಖಲೆ ಪ್ರಮಾಣದಲ್ಲಿ ಟಿಆರ್​ಪಿ ಪಡೆದುಕೊಳ್ಳುವ ನಿರೀಕ್ಷೆ ಇದೆ. ಮಾರ್ಚ್​ 17 ಭಾನುವಾರ ಆದ್ದರಿಂದ ಹೆಚ್ಚಿನ ಜನರು ಈ ಸಿನಿಮಾವನ್ನು ವೀಕ್ಷಿಸುವ ಸಾಧ್ಯತೆ ಇದೆ. ಚಿತ್ರಮಂದಿರದಲ್ಲಿ ಬಿಡುಗಡೆ ಆದಾಗ ಕೆಲವರು ‘ಅನಿಮಲ್​’ ಸಿನಿಮಾವನ್ನು ಕಟುವಾಗಿ ಟೀಕಿಸಿದ್ದರು. ಅನೇಕ ಸೆಲೆಬ್ರಿಟಿಗಳು ಕೂಡ ಅಪಸ್ವರ ತೆಗೆದಿದ್ದರು. ಈಗ ಟಿವಿ ಪ್ರೇಕ್ಷಕರು ಏನು ಹೇಳುತ್ತಾರೆ ಎಂಬುದನ್ನು ತಿಳಿಯುವ ಸಮಯ ಹತ್ತಿರ ಆಗಿದೆ.

ಇದನ್ನೂ ಓದಿ: ಬಾಕ್ಸ್ ಆಫೀಸ್​ನಲ್ಲಿ ಮಾತ್ರವಲ್ಲ ಒಟಿಟಿ ವೀಕ್ಷಣೆಯಲ್ಲೂ ದಾಖಲೆ ಬರೆದ ‘ಅನಿಮಲ್’ ಸಿನಿಮಾ

‘ಅನಿಮಲ್​’ ಸಿನಿಮಾದಲ್ಲಿ ರಣಬೀರ್​ ಕಪೂರ್​ ಅವರಿಗೆ ಜೋಡಿಯಾಗಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ತೃಪ್ತಿ ದಿಮ್ರಿ ಅವರಿಗೆ ಒಂದು ಚಿಕ್ಕ ಪಾತ್ರವಿದೆ. ಆ ಪಾತ್ರ ಸಣ್ಣದಾದರೂ ಅದರಿಂದ ಅವರಿಗೆ ಸಿಕ್ಕಿರುವ ಜನಪ್ರಿಯತೆ ತುಂಬ ದೊಡ್ಡದು. ಹಾಗೆಯೇ, ಬಾಬಿ ಡಿಯೋಲ್​ ಅವರಿಗೂ ‘ಅನಿಮಲ್​’ ಸಿನಿಮಾದಿಂದ ಜನಪ್ರಿಯತೆ ಹೆಚ್ಚಾಗಿದೆ. ಅನಿಲ್​ ಕಪೂರ್​ ನಟನೆಗೆ ಜನರಿಂದ ಮೆಚ್ಚುಗೆ ಸಿಕ್ಕಿದೆ.

ಈ ಸಿನಿಮಾದಲ್ಲಿ ಮಹಿಳೆಯರನ್ನು ಕೀಳಾಗಿ ತೋರಿಸಲಾಗಿದೆ. ಕೆಲವು ಅವಹೇಳನಕಾರಿ ದೃಶ್ಯ ಮತ್ತು ಸಂಭಾಷಣೆಗಳು ಇವೆ ಎಂದು ನಿರ್ದೇಶಕ ಸಂದೀಪ್​ ರೆಡ್ಡಿ ವಂಗಾ ವಿರುದ್ಧ ಅನೇಕರು ಕಿಡಿಕಾರಿದ್ದಾರೆ. ಆ ರೀತಿಯ ಟೀಕೆಗಳಿಗೆ ಸಂದೀಪ್​ ತಲೆ ಕೆಡಿಸಿಕೊಂಡಿಲ್ಲ. ಸದ್ಯಕ್ಕೆ ಅವರು ಪ್ರಭಾಸ್​ ಜೊತೆಗಿನ ಹೊಸ ಸಿನಿಮಾದ ಕೆಲಸಗಳ ತಯಾರಿಯಲ್ಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ