ಟಿಆರ್​ಪಿ ರೇಸ್​ನಿಂದ ‘ಪುಟ್ಟಕ್ಕ’ ಔಟ್; ಹೊಸ ಧಾರಾವಾಹಿ ‘ಅಣ್ಣಯ್ಯ’ಗೆ ಭರ್ಜರಿ ರೇಟಿಂಗ್

‘ಅಣ್ಣಯ್ಯ’ ಧಾರಾವಾಹಿ ಟಿಆರ್​ಪಿಯಲ್ಲಿ ಎರಡನೇ ಸ್ಥಾನದಲ್ಲಿ ಇದೆ. ಈ ಧಾರಾವಾಹಿಯನ್ನು ಪ್ರಮೋದ್ ಶೆಟ್ಟಿ ಅವರು ನಿರ್ಮಾಣ ಮಾಡಿದ್ದಾರೆ. ನಿರ್ಮಾಣದಲ್ಲಿ ಅವರಿಗೆ ಇದು ಮೊದಲ ಅನುಭವ. ಉತ್ತಮ್ ಮಧು ಈ ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ.

ಟಿಆರ್​ಪಿ ರೇಸ್​ನಿಂದ ‘ಪುಟ್ಟಕ್ಕ’ ಔಟ್; ಹೊಸ ಧಾರಾವಾಹಿ ‘ಅಣ್ಣಯ್ಯ’ಗೆ ಭರ್ಜರಿ ರೇಟಿಂಗ್
ಅಣ್ಣಯ್ಯ-ಪುಟ್ಟಕ್ಕನ ಮಕ್ಕಳು
Follow us
|

Updated on: Aug 22, 2024 | 2:09 PM

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ‘ಅಣ್ಣಯ್ಯ’ ಧಾರಾವಾಹಿ ಬರುತ್ತಿದೆ ಎಂಬ ಕಾರಣಕ್ಕೆ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯನ್ನು ಸಂಜೆ 7:30ರ ಬದಲು 6.30ಕ್ಕೆ ಶಿಫ್ಟ್ ಮಾಡಲಾಗಿತ್ತು. ಮೊದಲ ಸ್ಥಾನದಲ್ಲಿ ಇರುತ್ತಿದ್ದ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಈಗ ರೇಸ್​ನಿಂದಲೇ ಔಟ್ ಆಗಿದೆ. ಹೊಸ ಧಾರಾವಾಹಿಗೆ ಭರ್ಜರಿ ಟಿಆರ್​ಪಿ ಸಿಗುತ್ತಿದೆ. ಆ ಬಗ್ಗೆ ಇಲ್ಲಿದೆ ವಿವರ.

ಮೊದಲ ಸ್ಥಾನದಲ್ಲಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ. ಕಳೆದ ಬಾರಿ ಈ ಧಾರಾವಾಹಿ ಎರಡನೇ ಸ್ಥಾನದಲ್ಲಿ ಇರುತ್ತಿತ್ತು. ಈಗ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಟಿಆರ್​ಪಿಯಲ್ಲಿ ಕುಸಿತ ಕಂಡಿರುವುದರಿಂದ ಮೊದಲ ಸ್ಥಾನ ‘ಲಕ್ಷ್ಮೀ ನಿವಾಸ’ದ ಪಾಲಾಗಿದೆ. ಈ ಧಾರಾವಾಹಿ ಮುಂದಿನ ಕೆಲ ವಾರ ಮೊದಲ ಸ್ಥಾನದಲ್ಲಿ ಮುಂದುವರಿಯುವ ಸಾಧ್ಯತೆ ಇದೆ.

‘ಅಣ್ಣಯ್ಯ’ ಧಾರಾವಾಹಿ ಇತ್ತೀಚೆಗಷ್ಟೇ ಆರಂಭ ಆಯಿತು. ವಿಕಾಸ್ ಉತ್ತಯ್ಯ, ನಿಶಾ ರವಿ ಕೃಷ್ಣನ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸಿದ್ದಾರೆ. ಮೊದಲ ವಾರವೇ ಚಿತ್ರಕ್ಕೆ ಭರ್ಜರಿ ಟಿಆರ್​ಪಿ ಸಿಕ್ಕಿದೆ. ಈ ಧಾರಾವಾಹಿ ಈಗ ರೇಸ್​ನಲ್ಲಿ ಎರಡನೇ ಸ್ಥಾನದಲ್ಲಿ ಇದೆ. ಮುಂದೆ ಈ ಧಾರಾವಾಹಿ ‘ಲಕ್ಷ್ಮೀ ನಿವಾಸ’ ಧಾರಾವಾಹಿಯನ್ನು ಹಿಂದಿಕ್ಕಲಿದೆಯೇ ಎನ್ನುವ ಕುತೂಹಲ ಇದೆ.

ಮೂರನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಧಾರಾವಾಹಿ ಇದೆ. ಈ ಧಾರಾವಾಹಿ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆಯುತ್ತಿದೆ. ಇದು ಕೂಡ ಹೊಸ ಧಾರಾವಾಹಿಗಳ ಸಾಲಿನಲ್ಲಿ ನಿಲ್ಲುತ್ತದೆ. ನಾಲ್ಕನೇ ಸ್ಥಾನದಲ್ಲಿ ‘ಸೀತಾ ರಾಮ’ ಧಾರಾವಾಹಿ ಇದೆ. ಸೀತಾ ಹಾಗೂ ರಾಮ್ ವಿವಾಹ ಆಗಿದೆ. ಸೀತಾಳಿಂದ ಮಗುವನ್ನು ದೂರ ಮಾಡುವ ಪ್ರಯತ್ನ ನಡೆಯುತ್ತಿದೆ.

ಇದನ್ನೂ ಓದಿ: ‘ಅಣ್ಣಯ್ಯ’ ಮೂಲಕ ಮತ್ತೆ ಕಿರುತೆರೆ ಪ್ರೇಕ್ಷಕರ ಎದುರು ರೌಡಿ ಬೇಬಿ; ಇಲ್ಲಿದೆ ಪ್ರಸಾರ ದಿನಾಂಕ, ಸಮಯ

ಐದನೇ ಸ್ಥಾನದಲ್ಲಿ ‘ಅಮೃತಧಾರೆ’ ಧಾರಾವಾಹಿ ಇದೆ. ಹಲವು ಡ್ರಾಮಾಗಳೊಂದಿಗೆ ಈ ಧಾರಾವಾಹಿ ಸಾಗುತ್ತಿದೆ. ಟಾಪ್ ಐದರ ರೇಸ್​ನಿಂದ ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಹೊರಕ್ಕೆ ಹೋಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಟ್ರಾವಿಸ್ ಹೆಡ್: ವಿಡಿಯೋ ವೀಕ್ಷಿಸಿ
ಒಂದೇ ಓವರ್​ನಲ್ಲಿ 30 ರನ್ ಚಚ್ಚಿದ ಟ್ರಾವಿಸ್ ಹೆಡ್: ವಿಡಿಯೋ ವೀಕ್ಷಿಸಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
ಸಾವಿನ ಮನೆಯಲ್ಲಿ ಪಾಲಿಸಬೇಕಾದ ಶಿಷ್ಟಾಚಾರ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ ಗುರುವಾರದ ದಿನಭವಿಷ್ಯ ತಿಳಿಯಿರಿ
ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ
ಚಿತ್ರರಂಗದಲ್ಲಿ ನಟಿಯರ ನಡುವೆ ತಾರತಮ್ಯ: ಅಸಲಿ ವಿಚಾರ ತಿಳಿಸಿದ ಸಾಕ್ಷಿ ಮೇಘನ
ಸಿನಿಮಾ ಬಿಡುಗಡೆ ಸಮಯದಲ್ಲಿ ನಟ ಕಿರಣ್ ರಾಜ್​ ಕಾರು ಅಪಘಾತ ಆಗಿದ್ದು ನಿಜವೇ?
ಸಿನಿಮಾ ಬಿಡುಗಡೆ ಸಮಯದಲ್ಲಿ ನಟ ಕಿರಣ್ ರಾಜ್​ ಕಾರು ಅಪಘಾತ ಆಗಿದ್ದು ನಿಜವೇ?
ಸಿಎಂ ಕುರ್ಚಿ ಖಾಲಿ ಇಲ್ಲ: ನಾನೇ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ
ಸಿಎಂ ಕುರ್ಚಿ ಖಾಲಿ ಇಲ್ಲ: ನಾನೇ ಮುಂದುವರಿಯುತ್ತೇನೆ ಎಂದ ಸಿದ್ದರಾಮಯ್ಯ
ವಿಡಿಯೋ: ಊರಿನ ಗಣೇಶೋತ್ಸವದಲ್ಲಿ ಭಾಗಿಯಾದ ರಕ್ಷಿತ್ ಶೆಟ್ಟಿ
ವಿಡಿಯೋ: ಊರಿನ ಗಣೇಶೋತ್ಸವದಲ್ಲಿ ಭಾಗಿಯಾದ ರಕ್ಷಿತ್ ಶೆಟ್ಟಿ